ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲ್ಲೂಕು, ಮಹದೇಶ್ವರಬೆಟ್ಟ:-
ದಿನಾಂಕ:31-10-2017ರಂದು ಬೆಳಿಗ್ಗೆ 7.00 ಗಂಟೆಗೆ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಎಂ.ಜೆ.ರೂಪಾ,ಕೆ.ಎ.ಎಸ್.(ಕಿರಿಯ ಶ್ರೇಣಿ) ರವರ ಅಧ್ಯಕ್ಷತೆಯಲ್ಲಿ ಹಾಗೂ ಶ್ರೀ ಸಾಲೂರು ಬೃಹನ್ಮಠದ ಶ್ರೀ ಶ್ರೀ ಪಟ್ಟದ ಗುರುಸ್ವಾಮಿಗಳವರ ಉಪಸ್ಥಿತಿಯಲ್ಲಿ ಹುಂಡಿಗಳನ್ನು ತೆರೆಯಲಾಗಿದ್ದು, ಸದರಿ ಹುಂಡಿಗಳ ಪರ್ಕಾವಣೆಯಲ್ಲಿ ಪ್ರಾಧಿಕಾರದ ಸದಸ್ಯರುಗಳಾದ ಶ್ರೀ ಬಿ.ಮಹದೇವಪ್ಪ, ಶ್ರೀ ಕೊಪಾಳಿ ಮಾದೇವನಾಯ್ಕ, ಶ್ರೀ ಜವರೇಗೌಡ, ಡಿ.ದೇವರಾಜುರವರು ಉಪಸ್ಥಿತರಿದ್ದರು ಹಾಗೂ ಪ್ರಾಧಿಕಾರದ ಪ್ರಭಾರ ಉಪ ಕಾರ್ಯದರ್ಶಿಗಳಾದ ಶ್ರೀ ಎಂ.ಬಸವರಾಜು ರವರು, ಸಹಾಯಕ ಅಭಿಯಂತರರಾದ
ಶ್ರೀ ಆರ್.ಎಸ್.ಮನುವಾಚಾರ್ಯ, ಲೆಕ್ಕಾಧೀಕ್ಷಕರಾದ ಮಹದೇವಸ್ವಾಮಿ, ಕಛೇರಿಯ ಅಧೀಕ್ಷಕರಾದ ಶ್ರೀಬಿ.ಮಾದರಾಜು, ಆರೋಗ್ಯ ನಿರೀಕ್ಷಕರಾದ ಶ್ರೀಕಾಂತ್ ವಿಭೂತಿ ಹಾಗೂ ದೇವಸ್ಥಾನದ ಎಲ್ಲಾ ನೌಕರರುಗಳು, ಚಾಮರಾಜನಗರ ಜಿಲ್ಲಾಧಿಕಾರಿಯವರ ಕಛೇರಿಯ ಪ್ರಥಮ ದರ್ಜೆ ಸಹಾಯಕರಾದ ಶ್ರೀ ಮೋಹನ್ ಕುಮಾರ್ ಮತ್ತು ಮಹದೇಶ್ವರಬೆಟ್ಟ ಆರಕ್ಷಕ ಸಿಬ್ಬಂದಿ ವರ್ಗ, ಎಸ್.ಬಿ.ಎಂ. ವ್ಯವಸ್ಥಾಪಕರಾದ ಸೆಂದಿಲ್ ನಾಥನ್ & ಸಿಬ್ಬಂದಿ ವರ್ಗದವರು ಹಾಜರಿದ್ದರು.ಇವರೆಲ್ಲರ ಸಹಕಾರದಿಂದ ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮವಾಗಿ ಜರುಗಿತು ಸದರಿ ದಿವಸದಂದು ಹುಂಡಿ ಪರ್ಕಾವಣೆಯಿಂದ ಒಟ್ಟು ರೂ.1,09,10,190/- ( ಒಂದು ಕೋಟಿ ಒಂಭತ್ತು ಲಕ್ಷದ ಹತ್ತು ಸಾವಿರದ ನೂರತೊಂಭತ್ತು ರೂಪಾಯಿಗಳು ಮಾತ್ರ ) ಬಂದಿರುತ್ತದೆ. ಇದಲ್ಲದೇ ಚಿನ್ನದ ಪದಾರ್ಥಗಳು 0. 027( ಇಪ್ಪತ್ತೇಳು ಗ್ರಾಂ) ಮತ್ತು ಬೆಳ್ಳಿ ಪದಾರ್ಥಗಳು 2.805(ಎರಡು ಕೆ.ಜಿ ಎಂಟು ನೂರ ಐದು ಗ್ರಾಂ) ದೊರೆತಿರುತ್ತದೆ.*****************
ಚಾಮರಾಜನಗರ, ಅ. 31- ಜಿಲ್ಲಾಡಳಿತ ಹಾಗೂ ಎಲ್ಲರ ಸಹಕಾರದೊಂದಿಗೆ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ನವೆಂಬರ್ 10ರಂದು ನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಬಿ. ರಾಮು ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಟಿಪ್ಪುಸುಲ್ತಾನ್ ಜಯಂತಿಯನ್ನು ಎಲ್ಲರ ಸಹಕಾರ ಪಡೆದು ಯಶಸ್ವಿಯಾಗಿ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬಿ. ರಾಮು ಅವರು ನವೆಂಬರ್ 10ರಂದು ಮಧ್ಯಾಹ್ನ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ವೇದಿಕೆ ಕಾರ್ಯಕ್ರಮ ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮ ಅಂದು ಇರುವುದಿಲ್ಲ. ಟಿಪ್ಪುಸುಲ್ತಾನ್ ಜಯಂತಿ ಕಾರ್ಯಕ್ರಮದ ಸಿದ್ಧತೆಗೆ ಎಲ್ಲ ವ್ಯವಸ್ಥೆಯನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಮಹಾನ್ ಪುರುಷರು, ನಾಯಕರು ಯಾವುದೇ ಒಂದು ವರ್ಗಕ್ಕೆ ಸೀಮಿತರಾಗಿಲ್ಲ. ಎಲ್ಲರೂ ಸೇರಿ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸೋಣ. ಈ ಹಿಂದೆಯೂ ಎಲ್ಲಾ ಕಾರ್ಯಕ್ರಮಗಳಿಗೂ ಸಹಕಾರ ನೀಡುತ್ತಾ ಬರಲಾಗಿದೆ. ಅದೇರೀತಿ ಈ ಬಾರಿಯೂ ಟಿಪ್ಪುಸುಲ್ತಾನ್ ಜಯಂತಿಯನ್ನು ಅಗತ್ಯ ಸಿದ್ಧತೆಗಳೊಂದಿಗೆ ಆಚರಿಸೋಣ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕಾರ್ಯಕ್ರಮಕ್ಕೆ ಮೊದಲು ಕವಾಲಿಯನ್ನು ಏರ್ಪಡಿಸಲಾಗುವುದು. ಜಯಂತಿ ಸಮಾರಂಭದಂದು ಟಿಪ್ಪುಸುಲ್ತಾನ್ ಅವರ ಕುರಿತು ಉಪನ್ಯಾಸ ನೀಡಲು ಭಾಷಣಕಾರರನ್ನು ಆಹ್ವಾನಿಸಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರ ಅಭಿಪ್ರಾಯ ಪಡೆಯಲಾಗುತ್ತದೆ. ಅಂತಿಮವಾಗಿ ಭಾಷಣಕಾರರನ್ನು ಆಯ್ಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕಾರ್ಯಕ್ರಮಕ್ಕೆ ಅವಶ್ಯವಿರುವ ಎಲ್ಲ ಏರ್ಪಾಡುಗಳನ್ನು ಮಾಡಲು ಈಗಿನಿಂದಲೇ ಸೂಚನೆ ನೀಡಲಾಗುವುದು. ಎಲ್ಲರೂ ಸೇರಿ ಟಿಪ್ಪುಸುಲ್ತಾನ್ ಜಯಂತಿ ಕಾರ್ಯಕ್ರಮವನ್ನು ಫಲಪ್ರದಗೊಳಿಸೋಣವೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ. ನಾಗವೇಣಿ, ನಗರಸಭೆ ಸದಸ್ಯರಾದ ಮಹೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಸೈಯದ್ ರಫಿ, ಮುಖಂಡರಾದ ಸಯ್ಯದ್ ಆರಿಫ್, ರಫೀಕ್ ಅಹಮದ್, ಸುಹೇಬ್ ಅಹಮದ್, ನಾಗರಾಜು, ಆಲೂರು ನಾಗೇಂದ್ರ, ಸೈಯದ್ ಇಮ್ರಾನ್, ಮಹಮದ್ ಜಿಯಾವುಲ್ಲಾ, ಅಬ್ರಾರ್ ಅಹಮದ್, ಸಮೀವುಲ್ಲಾ ಖಾನ್, ಮಹಮದ್ ಅಸ್ಗರ್ ಮುನ್ನಾ, ಇತರರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ನ. 2ರಂದು ವಿಶ್ವ ಉಳಿತಾಯ ದಿನಾಚರಣೆ
ಚಾಮರಾಜನಗರ, ಅ. 31 - ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಹಾಗೂ ಚಂದನ ಮಹಿಳಾ ಅಭಿವೃದ್ಧಿ ಸಂಘ ಇವರ ಸಹಯೋಗದೊಂದಿಗೆ ನವೆಂಬರ್ 2ರಂದು ಬೆಳಿಗ್ಗೆ 11 ಗಂಟೆಗೆ ಯಳಂದೂರಿನÀಲ್ಲಿ ವಿಶ್ವ ಉಳಿತಾಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಯಳಂದೂರಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೋಮಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಚಂದನ ಮಹಿಳಾ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಪುಟ್ಟಲಿಂಗಮ್ಮ ಅಧ್ಯಕ್ಷತೆ ವಹಿಸುವರು.
ಧ್ವನಿ ಮಹಿಳಾ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಲೀನಾಕುಮಾರಿ, ಚಂದನ ಮಹಿಳಾ ಅಭಿವೃದ್ಧಿ ಸಂಘದ ಕಾರ್ಯದರ್ಶಿ ರತ್ನಮ್ಮ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಉದ್ಯೋಗಸ್ಥ ಮಹಿಳೆಯರ ವಸತಿಗೃಹ ನಿರ್ಮಾಣಕ್ಕೆ ಪ್ರಸ್ತಾವನೆ ಆಹ್ವಾನ
ಚಾಮರಾಜನಗರ, ಅ. 31 :- ಉದ್ಯೋಗಸ್ಥ ಮಹಿಳೆಯರ ವಸತಿಗೃಹ ನಿರ್ಮಾಣಕ್ಕಾಗಿ ವಸತಿಗೃಹ ನಿರ್ಮಿಸುವ ಸ್ವಯಂಸೇವಾ ಸಂಸ್ಥೆಗಳಿಗೆ ಕಟ್ಟಡ ನಿರ್ಮಾಣಕ್ಕಾಗಿ ನೆರವು ನೀಡಲಿದ್ದು ಪ್ರಸ್ತಾವನೆ ಆಹ್ವಾನಿಸಲಾಗಿದೆ.
ಶೇ.60ರಷ್ಟು ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುತ್ತಿದ್ದು, ಶೇ. 15ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರವು ಭರಿಸಲಿದ್ದು ಉಳಿದ ಶೇ.25ರಷ್ಟು ವೆಚ್ಚವನ್ನು ಸಂಸ್ಥೆ ಭರಿಸಬೇಕಾಗಿದೆ.
ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಅಗತ್ಯ ದಾಖಲಾತಿಗಳನ್ನು ಒಳಗೊಂಡ ಪ್ರಸ್ತಾವನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ನವೆಂಬರ್ 15ರೊಳಗೆ ಸಲ್ಲಿಸುವಂತೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೈಕ್ಷಣಿಕ ಪ್ರಗತಿಗೆ ಉತ್ತೇಜಿಸಿ : ಉಸ್ತುವಾರಿ ಸಚಿವರಾದ ಡಾ.ಎಂ.ಸಿ. ಮೋಹನಕುಮಾರಿ ಸಲಹೆ
ಚಾಮರಾಜನಗರ, ಅ. 31 - ಜಿಲ್ಲೆಯಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ಪ್ರತಿಯೊಬ್ಬರೂ ಶಿಕ್ಷಣ ಪಡೆಯಲು ಉತ್ತೇಜಿಸಬೇಕೆಂದು ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರ್ (ಗೀತಾ ಮಹದೇವಪ್ರಸಾದ್) ಸಲಹೆ ಮಾಡಿದರು.
ತಾಲೂಕಿನ ಹರವೆ ಗ್ರಾಮದಲ್ಲಿ ಇಂದು ಕುಡಿಯುವ ನೀರಿನ ಘಟಕ ಉದ್ಘಾಟನೆ ಹಾಗೂ ಡಾ. ಬಾಬು ಜಗಜೀವನರಾಂ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಶಿಕ್ಷಣ ಅತ್ಯಂತ ಪ್ರಾಮುಖ್ಯವಾಗಿದೆ. ಗ್ರಾಮೀಣ ಭಾಗದಲ್ಲಿ ಜನರು ಶೈಕ್ಷಣಿಕ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ತಾರತಮ್ಯ ಮಾಡದೆ ಎಲ್ಲಾ ಮಕ್ಕಳಿಗೂ ವಿದ್ಯಾಭ್ಯಾಸ ನೀಡಲು ಪ್ರೋತ್ಸಾಹಿಸಬೇಕು. ವಿಶೇಷವಾಗಿ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ವಿದ್ಯೆ ಕಲಿತ ಹೆಣ್ಣು ಎಲ್ಲರಿಗೂ ಮಾದರಿಯಾಗಬಲ್ಲಳು ಎಂದು ಸಚಿವರು ಅಭಿಪ್ರಾಯಪಟ್ಟರು.
ಜಿಲ್ಲೆಯಲ್ಲಿ ಶಿಕ್ಷಣ ಪಡೆಯಲು ಪೂರಕ ಸೌಕರ್ಯಗಳು ಇವೆ. ಹೋಬಳಿ ಕೇಂದ್ರಗಳಲ್ಲಿ ಮೊರಾರ್ಜಿ ದೇಸಾಯಿ ಸೇರಿದಂತೆ ಇನ್ನಿತರ ವಸತಿಶಾಲೆಗಳಿವೆ. ಕಾಲೇಜುಗಳು ಸಹ ಸಾಕಷ್ಟಿವೆ. ಎಂಜಿನಿಯರಿಂಗ್, ವೈದ್ಯಕೀಯ, ಜಿಟಿಟಿಸಿಯಂತಹ ತರಬೇತಿ ಕೇಂದ್ರಗಳು ಸಹ ಕಾರ್ಯನಿರ್ವಹಿಸುತ್ತಿವೆ. ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲ ಉತ್ತೇಜನ ನೀಡಲಾಗುತ್ತಿದೆ ಎಂದರು.
ಗುಂಡ್ಲುಪೇಟೆ ಕ್ಷೇತ್ರದಲ್ಲಿ 36ಕ್ಕೂ ಹೆಚ್ಚು ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಈ ಪೈಕಿ 6 ಭವನಗಳು ಪೂರ್ಣಗೊಂಡಿವೆ. ಉಳಿದ ಭವನಗಳು ಸಹ ವಿವಿಧ ಹಂತದಲ್ಲಿ ಇದ್ದು ಪೂರ್ಣಗೊಳ್ಳಲಿವೆ ಎಂದು ಸಚಿವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಮಾತನಾಡಿ ಉಸ್ತುವಾರಿ ಸಚಿವರಾಗಿದ್ದ ಮಹದೇವಪ್ರಸಾದ್ ಅವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಬಹುಗ್ರಾಮ ಕುಡಿಯುವ ನೀರು ಯೋಜನೆ, ಕೆರೆಗಳಿಗೆ ನೀರು, ಶಾಲಾ ಕಾಲೇಜುಗಳಿಗೆ ಹೆಚ್ಚು ಅನುದಾನ ನೀಡಿ ವಿಶೇಷವಾಗಿ ಶ್ರಮಿಸಿದ್ದಾರೆ ಎಂದು ಸ್ಮರಿಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು ಮಾತನಾಡಿ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಮಹದೇವಪ್ರಸಾದ್ ಅವರು ನೀಡಿದಷ್ಟು ಮಹತ್ವ ಇನ್ಯಾರೂ ನೀಡಿಲ್ಲ. ಎಲ್ಲಾ ಹಂತದ ಶಿಕ್ಷಣ ಪಡೆಯಲು ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸಿದ್ದಾರೆ. ಅವರ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ ಎಂದರು.
ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳಲ್ಳಿ ನವೀನ್ ಮಾತನಾಡಿ ಹರವೆ ಭಾಗದ ಸರ್ವಾಂಗೀಣ ಅಭಿವೃದ್ಧಿ ಅಪಾರ ಕೆಲಸಗಳು ಮಹದೇವಪ್ರಸಾದ್ ಅವರ ಅವಧಿಯಲ್ಲಿ ಆಗಿದೆ. ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಕಾಮಗಾರಿ ಹೆಚ್ಚು ನಡೆದಿವೆ. ಅಭಿವೃದ್ಧಿ ವಿಷಯದಲ್ಲಿ ಎಲ್ಲರಿಗೂ ಮಹದೇವ ಪ್ರಸಾದ್ ಅವರು ಮಾದರಿಯಾಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಶಿವಮೂರ್ತಿ, ಎಪಿಎಂಸಿ ನಿರ್ದೇಶಕರಾದ ಸುಂದರಮ್ಮ. ಕೈಗಾರಿಕೆ ಅಭಿವೃದ್ಧಿ ನಿಗಮದ ನಿರ್ದೇಶಕರಾದ ರವಿಕುಮಾರ್, ಗ್ರಾಮಪಂಚಾಯಿತಿಯ ಅಧ್ಯಕ್ಷರಾದ ಪುಟ್ಟಮ್ಮ, ಸದಸ್ಯರಾದ ಮಂಗಳಮ್ಮ, ದೇವಮ್ಮ, ರತ್ನಮ್ಮ, ಸುಬ್ಬಶೆಟ್ಟಿ, ಮುಖಂಡರಾದ ಹರವೆ ಆನಂದ್, ಗುರುಸ್ವಾಮಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಎಚ್. ಸತೀಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಿತ್ತೂರು ರಾಣಿ ಚೆÀನ್ನಮ್ಮ ಮಹಿಳೆಯರಿಗೆ ಸ್ಫೂರ್ತಿಯಾಗಲಿ:ಪ್ರೊ ಚಂದ್ರಶೇಖರಯ್ಯ.
ಚಾಮರಾಜನಗರ, ಅ. 31- ಬ್ರಿಟಿಷರ ವಿರುದ್ಧ ದೇಶದ ಸ್ವಾತಂತ್ರ್ಯಕ್ಕಾಗಿ ಕನ್ನಡ ನಾಡಿನ ರಕ್ಷಣೆಗಾಗಿ ಹೋರಾಡಿ ಮಡಿದ ಚೆನ್ನಮ್ಮನ ದಿಟ್ಟತನ ನಮ್ಮ ಮಹಿಳೆಯರಿಗೆ ಸ್ಪೂರ್ತಿಯಾಗಬೇಕು ಎಂದು ಮಾನಸ ಗಂಗೋತ್ರೀಯ ಬಸವೇಶ್ವರ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕ ಡಾ:ಚಂದ್ರಶೇಖರಯ್ಯ ಅಭಿಪ್ರಾಯ ಪಟ್ಟರು.
ಜಿಲ್ಲಾ ಆಡಳಿತ ಜಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾ ಆಡಳಿತ ಭವನದ ಜೆ ಎಚ್ ಪಟೇಲ್ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸ ನೀಡಿದ ಅವರು, ಚೆನ್ನಮ್ಮ ತನ್ನ ಪತಿಯ ಅಕಾಲಿಕ ಮರಣದ ನಂತರ ತನ್ನ 20ನೇ ವಯಸ್ಸಿನಲ್ಲಿ ಸಂಸ್ಥಾನದ ಜಾವಾಬ್ದಾರಿಯನ್ನು ಹೊತ್ತು ಕನ್ನಡ ನಾಡು ನುಡಿ ಗಡಿಯನ್ನು ರಕ್ಷಿಸಲು ದಿಟ್ಟತನದಿಂದ ಹೋರಾಡಿದರು. ಬಹಳ ಚಾಣಾಕ್ಷತನದಿಂದ ಆಡಳಿತ ನಡೆಸಿದ ಚೆನ್ನಮ್ಮನ ಜೀವನ ನಮ್ಮೆಲ್ಲರಿಗೂ ಆದರ್ಶವಾಗಬೇಕು ಎಂದರು.
ಚೆನ್ನಮ್ಮಳಿಗೆ ಮಕ್ಕಳಿಲ್ಲ ಎಂಬುದನ್ನು ಅರಿತ ಬ್ರಿಟಿಷರು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಜಾರಿಗೆ ತರುವುದರ ಮೂಲಕ ತನ್ನ ನಂಬಿಕಸ್ಥ ಸೈನ್ಯಾಧಿಕಾರಿಗಳಿಂದಲೇ ವಂಚನೆಗೆ ಒಳಗಾಗಿ ಯುದ್ದದಲ್ಲಿ ಸೋತು ಬಂದಿಸಲ್ಪಡುತ್ತಾಳೆ.ಇವರ ನಿಸ್ವಾರ್ಥ ಹೋರಾಟ ಎಂದಿಗೂ ಮರೆಯುವಂತಿಲ್ಲ ಎಂದರು .
ಚೆನ್ನಮ್ಮರ ಆಡಳಿತ ಅವಧಿಯಲ್ಲಿ ಬಳಸಿದ್ದ ದಾಖಲೆಗಳು ಹಾಗೂ ಖಡ್ಗವು ಇಂಗ್ಲೆಂಡ್‍ನ ಬ್ರಿಟಿಷ್ ಮ್ಯೂಸಿಯಮ್ ಹಾಗೂ ಇಂಡಿಯನ್ ಆಫೀಸ್ ನಲ್ಲಿರುವ ಬಗ್ಗೆ ಮಾಹಿತಿ ಇದ್ದು ಇವುಗಳನ್ನು ಸಂಗ್ರಹಿಸಿ ಚೆನ್ನಮ್ಮ ಮಡಿದ ಸ್ಥಳದಲ್ಲಿ ವಸ್ತು ಸಂಗ್ರಹಾಲಯ ನಿರ್ಮಿಸಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಬಿ ರಾಮು ಅವರು ಇಂದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಎಲ್ಲ ವಿಜ್ಞಾನಮಯವಾಗಿದ್ದು ಇತಿಹಾಸದÀ ವಿಷಯಗಳಿಗೆ ಹೆಚ್ಚಿನ ಒತ್ತು ನೀಡುವ ಅಗತ್ಯತೆ ಇದೆ. ಸಮಾಜದಲ್ಲಿ ಅವಕಾಶಗಳಿಂದ ವಂಚಿತರಾಗುವ ಮಹಿಳೆಯರಿಗೆ ಉತ್ತಮ ಶಿಕ್ಷಣ ನೀಡುವುದರ ಮೂಲಕ ಅವರನ್ನು ಸಬಲರನ್ನಾಗಿ ಮಾಡಲು ಹೆಚ್ಚು ಅವಕಾಶಗಳನ್ನು ಕಲ್ಪಿಸಿಬೇಕಿದೆ. ಈ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಬೇಕು. ಚೆನ್ನಮ್ಮಳ ವೀರ ಗುಣ ಯುವ ಪೀಳಿಗೆಗೆ ಮಾದರಿಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಗರ ಸಭೆ ಅಧ್ಯಕ್ಷರಾದ ಶೋಭ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಚೆನ್ನಮ್ಮಳ ಜೀವನ ನಮಗೆಲ್ಲ ಮಾದರಿಯಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕರಾದ ಕೆ.ಪಿ.ಸದಾಶಿವ ಮೂರ್ತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ ನಾಗವೇಣಿ ಕಾರ್ಯಕ್ರವiದಲ್ಲಿ ಉಪಸ್ಥಿತರಿದ್ದರು.
No comments:
Post a Comment