Sunday, 1 October 2017

ಪ್ರಕೃತಿ, ಪರಿಸರದ ಜತೆ ಹೊಂದಾಣಿಕೆ ಜೀವನ ನಮ್ಮದಾಗಬೇಕು: ಯು.ಟಿ. ಖಾದರ್ಅ,ಕ್ಟೋಬರ್ 2ರಂದು ಪ್ರಾಣಿವಧೆ, ಮಾಂಸ ಮತ್ತು ಮೀನು ಮಾರಾಟ ನಿಷೇಧ(30-09-2017)

         

ಪ್ರಕೃತಿ, ಪರಿಸರದ ಜತೆ ಹೊಂದಾಣಿಕೆ ಜೀವನ ನಮ್ಮದಾಗಬೇಕು: ಯು.ಟಿ. ಖಾದರ್

ಚಾಮರಾಜನಗರ, ಅ. 01 - ಮಾನವ, ಪ್ರಾಣಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಪ್ರಕೃತಿ ಮತ್ತು ಪರಿಸರದ ಜತೆ ಹೊಂದಿಕೊಳ್ಳುವ ಜೀವನ ನಮ್ಮದಾಗಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ತಿಳಿಸಿದರು.
ಕೊಳ್ಳೇಗಾಲದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕ್ರೀಡಾಂಗಣದಲ್ಲಿಂದು ಚಾಮರಾಜನಗರ ವೃತ್ತದ ಮಲೈ ಮಹದೇಶ್ವರ ವನ್ಯಜೀವಿ ವಿಭಾಗ ಮತ್ತು ಕಾವೇರಿ ವನ್ಯಜೀವಿ ವಿಭಾಗದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ 63ನೇ ವನ್ಯಜೀವಿ ಸಪ್ತಾಹ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದೆ ಮೋಜಿಗಾಗಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದರು. ಆದರೆ ಈಗ ಅದು ಶಿಕ್ಷಾರ್ಹ ಅಪರಾಧವಾಗಿದೆ. ಅರಣ್ಯದಲ್ಲಿರುವ ಪ್ರಕೃತಿ ಸಂಪತ್ತು ಮತ್ತು ಪ್ರಾಣಿಸಂಕುಲವನ್ನು ಕಾಪಾಡುವ ಜವಾಬ್ದಾರಿ ನಮ್ಮ ಮೇಲಿದೆ. ಪರಿಸರದ ಬಗ್ಗೆ ಗೌರವ ಹಾಗೂ ಕಾಳಜಿ ಹೊಂದುವುದು ಅನಿವಾರ್ಯ. ಸ್ವಚ್ಚ ಪರಿಸರದಿಂದ ಉತ್ತಮ ಆರೋಗ್ಯದ ಕುರಿತು ಪ್ರತಿಯೊಬ್ಬರಲ್ಲೂ ಅರಿವು ಮೂಡಬೇಕು ಎಂದರು.
ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪರಿಸರದ ಜಾಗೃತಿ ಹೊಂದಬೇಕು. ವನ್ಯಜೀವಿಗಳನ್ನು ಅರಿಯಬೇಕು. ಅವುಗಳನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಲು ವಿಶೇಷ ಕಾಳಜಿ ವಹಿಸಬೇಕು. ಶಿಕ್ಷಣಕ್ಕೆ ನಿಡುವ ಆದ್ಯತೆಯನ್ನು ಪರಿಸರಕ್ಕೂ ನೀಡಿ ಮುಂದಿನ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು. ಅದ್ದರಿಂದಲೇ ಇಂದು ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ರಾಜ್ಯದೆಲ್ಲಡೆ ಆಚರಿಸಲಾಗುತ್ತಿದೆ ಎಂದು ಖಾದರ್ ಅವರು ತಿಳಿಸಿದರು.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಬಿ. ರಮಾನಾಥ ರೈ ಅವರು ಮಾತನಾಡಿ ಅರಣ್ಯ ಸಂರಕ್ಷÀಣೆ ಮಹತ್ವದ ವಿಷಯ. ಹವಾಮಾನ ಬದಲಾವಣೆ ಹಾಗೂ ಪ್ರಾಕೃತಿಕ ಸಮತೋಲನದ ಬಗ್ಗೆ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಕಾಲಕಾಲಕ್ಕೆ ನಿಗಧಿತ ಹವಾಮಾನ ದಾಖಲಾಗದಿದ್ದರೆ ಅದು ಜನ, ವನ್ಯಜೀವಿಗಳ ಮೇಲೆ ಪರಿಣಾಮ ಬೀರುತ್ತದೆ. ಪರಿಸರ ಸಂರಕ್ಷಣೆ ಅರಣ್ಯ ಇಲಾಖೆ ಶ್ರಮಿಸಿದರೆ ಸಾಲದು. ನಾಗರಿಕರು, ಸಂಘಸಂಸ್ಥೆಗಳು ಕೈಜೋಡಿಸಬೇಕು ಎಂದರು.
ರಾಜ್ಯದಲ್ಲಿರುವ ಶೇ.22 ರಷ್ಟು ಅರಣ್ಯ ಪ್ರದೇಶದಲ್ಲಿ ಉತ್ತರ ಕನ್ನಡ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಅರಣ್ಯ ಭೂಭಾಗವಿದೆ. 6 ಸಾವಿರ ಆನೆಗಳು, 406 ಹುಲಿಗಳು ಸೇರಿದಂತೆ ಚಿರತೆ ಹಾಗೂ ಸಿಂಗಳಿಕ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಏಕೈಕ ರಾಜ್ಯವಾಗಿದೆ. ಡೆಹ್ರಾಡೂನ್ ಸಂಶೋಧನಾ ಕೇಂದ್ರ ನೀಡಿದ ವರದಿಯನ್ವಯ ಇತ್ತೀಚೆಗೆ ಅರಣ್ಯಪ್ರದೇಶ ಶೇ. 28ರಷ್ಟು ಅರಣ್ಯ ಪ್ರದೇಶ ಅಭಿವೃದ್ಧಿಗೊಂಡಿದೆ ಎಂದರು.
ಅರಣ್ಯ ಸಂರಕ್ಷಣೆ ಕಾಯ್ದೆ ಹಾಗೂ ವನ್ಯಜೀವಿ ಸಂರಕ್ಷಣೆ ಕಾಯ್ದೆ ಜಾರಿಯಾದ ನಂತರ ಪರಿಸರದ ಕುರಿತು ಜನರಲ್ಲಿ ಅರಿವು ಹೆಚ್ಚಾಗಿದೆ. ಸರ್ಕಾರವು ಸಹ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಹಲವಾರು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಪ್ರತಿ ತಾಲೂಕಿನಲ್ಲಿ ಟ್ರೀ ಪಾರ್ಕ್, ಕೋಟಿವೃಕ್ಷ ಆಂದೋಲನ, ಸಿರಿಚಂದನವನ, ದೈವಿವನ, ಔಷಧಿಸಸ್ಯ ವನ, ಚಿಣ್ಣರವನ ದರ್ಶನದಂತಹ ಪ್ರಮುಖ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದರು.
ಮಾನವ, ಪ್ರಾಣಿ ಸಂಘರ್ಷ ತಡೆಯಲು ಸರ್ಕಾರ ಬದ್ಧವಾಗಿದೆ. ಆನೆಗಳ ನಿಯಂತ್ರನಕ್ಕೆ ರೈಲ್ವೆಪಟ್ಟಿ ಹಾಕಿ ಬ್ಯಾರಿಕೇಡ್ ಹಾಕಲು 200 ಕೋಟಿ ರೂ. ಮಂಜೂರಾಗಿದೆ. ವನ್ಯಜೀವಿಗಳಿಂದ ಅಂಗ ಊನರಾದವರಿಗೆ ಪರಿಹಾರಧನವನ್ನು 50 ಸಾವಿರದಿಂದ 5 ಲಕ್ಷ ರೂ. ಗೆ ಹೆಚ್ಚಿಸಿದೆ. ಕೃಷಿ ಬೆಳೆ ಹಾನಿಗೆ ಪರಿಹಾರವು ಸಹ ದುಪ್ಪಾಟ್ಟಾಗಿದೆ. ಮುಖ್ಯವಾಗಿ ಅರಣ್ಯ ಒತ್ತುವರಿ ತೆರವುಗೊಳಿಸಬೇಕು ಎಂದರು.
ಅರಣ್ಯ ಇಲಾಖೆಯಲ್ಲಿ ಇದುವರೆಗೆ 43 ಮಂದಿ ಹುತಾತ್ಮರಾಗಿದ್ದು, ಹುತಾತ್ಮರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದ ರಮಾನಾಥ ರೈ ಅವರು ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಪೊಲೀಸ್ ಇಲಾಖೆಯ ಪೊಲೀಸ್ ಪದಕ ಮಾದರಿಯಂತೆ ಮುಂದಿನ ದಿನಗಳಲ್ಲಿ ಅರಣ್ಯ ಪದಕ ನೀಡಲಾಗುವುದು ಎಂದು ತಿಳಿಸಿದರು.
ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಖಾತೆ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಅವರು ಮಾತನಾಡಿ ಪರಿಸರದ ಅರಿವು ಮೂಡಿಸುವುದೇ ಅರಣ್ಯ, ವನ್ಯಜೀವಿ ಸಪ್ತಾಹದ ಉದ್ದೇಶವಾಗಿದೆ. ನಾಗರಿಕರು, ವಿದ್ಯಾರ್ಥಿಗಳು ಇದರ ಪ್ರಾಮುಖ್ಯತೆ ತಿಳಿಯಬೇಕು. ಪರಿಸರದಲ್ಲಿ ಸಮತೋಲನ ಕಾಪಾಡಬೇಕು. ಮಕ್ಕಳಲ್ಲಿ ಅರಣ್ಯ ಸಂರಕ್ಷಣೆ ಕುರಿತು ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಚಿಕ್ಕ ವಯಸ್ಸಿನಲ್ಲಿಯೆ ಅರಿವು ಮೂಡಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಳ್ಳೇಗಾಲ ಶಾಸಕರಾದ ಎಸ್. ಜಯಣ್ಣ ಮಾತನಾಡಿ ಅರಣ್ಯ ನಮಗೆ ಎಲ್ಲವನ್ನು ದೊರಕಿಸಿಕೊಟ್ಟಿದೆ. ಕಾಡಿದ್ದರೆ ನಾಡು ಸಮೃದ್ಧವಾಗಿರುತ್ತದೆ. ಅರಣ್ಯದೊಳಗಿರುವ ಜಲಮೂಲಗಳನ್ನು ಗುರುತಿಸಿ ನೀರು ಒಂದೆಡೆ ಸಂಗ್ರಹವಾಗುಂತೆ ನೋಡಿಕೊಳ್ಳಬೇಕು. ಅರಣ್ಯ ಸಂಪತ್ತನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಹನೂರು ಶಾಸಕರಾದ ಆರ್, ನರೇಂದ್ರ ಅವರು ಅರಣ್ಯ, ವನ್ಯಜೀವಿ ಸಂರಕ್ಷಣೆ ಕುರಿತು ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಾವೇರಿ ವನ್ಯಜೀವಿ ವಲಯ ಹಾಗೂ ಮಲೆ ಮಹದೇಶ್ವರ ವನ್ಯಜೀವಿ ವಲಯದಲ್ಲಿರುವ ಮರಗಳ ಬಗ್ಗೆ ಭಿತ್ತಿಪತ್ರಗಳನ್ನು ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು. ಕಾವೇರಿ ವನ್ಯಜೀವಿ ತಾಣದ ವೆಬ್‍ಸೈಟ್‍ಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಬಿ. ರಮಾನಾಥ ರೈ ಅವರು ಚಾಲನೆ ನೀಡಿದರು.
ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪಲಾನುಭವಿಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕಮತ್ತು ಸಲಕರಣೆಗಳನ್ನು ಇದೇ ವೇಳೆ ವಿತರಿಸಲಾಯಿತು. ಅಲ್ಲದೆ ವನ್ಯಜೀವಿ ಸಪ್ತಾಹ ಕುರಿತು ವಿದ್ಯಾಥಿಗಳಿಗೆ ಅಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ, ಸ್ಮರಣಿಕೆಗಳನ್ನು ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ಕೊಳ್ಳೇಗಾಲ ನಗರಸಭೆ ಅಧ್ಯಕ್ಷರಾದ ಶಾಂತರಾಜು, ಉಪಾಧ್ಯಕ್ಷರಾದ ನಂಜುಂಡ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಲತಾರಾಜಣ್ಣ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಿವಮ್ಮ, ಮರುಗದಮಣಿ, ಜಯಂತಿ, ಜಿಲ್ಲಾಧಿಕಾರಿ ಬಿ. ರಾಮು, ಉಪ ವಿಭಾಗಾಧಿಕಾರಿ ರೂಪ, ತಹಶೀಲ್ದಾರ್ ಕಾಮಾಕ್ಷಮ್ಮ, ಮಾಲಿನ್ಯ ನಿಯಂತ್ರಣ ಮಂಡಳಿಯ ರೋಡ್ರಿಗಸ್, ಕಾವೇರಿ ವನ್ಯಜೀವಿ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಪಿ. ರಮೇಶ್‍ಕುಮಾರ್, ಮಲೆ ಮಹದೇಶ್ವರ ವನ್ಯಜೀವಿ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಎಂ. ಮಾಲತಿಪ್ರಿಯ, ಕನಕಪುರ ವನ್ಯಜೀವಿ ವಲಯದ ಶ್ರೀನಿವಾಸಯ್ಯ ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅಕ್ಟೋಬರ್ 2ರಂದು ಪ್ರಾಣಿವಧೆ, ಮಾಂಸ ಮತ್ತು ಮೀನು ಮಾರಾಟ ನಿಷೇಧ
ಚಾಮರಾಜನಗರ, ಅ. 01:- ಅಕ್ಟೋಬರ್ 2 ರಂದು ಮಹಾತ್ಮ ಗಾಂಧಿ ಜಯಂತಿ ಆಚರಣೆ ಹಿನ್ನಲೆಯಲ್ಲಿ ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಣಿವಧೆ, ಮಾಂಸ ಹಾಗೂ ಮೀನು ಮಾರಾಟವನ್ನು ನಿಷೇಧಿಸಲಾಗಿದೆ.
ಅಂದು ಪ್ರಾಣಿವಧೆ, ಮಾಂಸ ಮತ್ತು ಮೀನು ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ಉದ್ದಿಮೆಯನ್ನು ಬಂದ್ ಮಾಡಿಸಿ, ಪರವಾನಗಿ ರದ್ದುಪಡಿಸುವುದಲ್ಲದೆ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅಕ್ಟೋಬರ್ 2ರಂದು ಗುಂಡ್ಲುಪೇಟೆಯಲ್ಲಿ ಮಾತೃಪೂರ್ಣ ಯೋಜನೆಗೆ ಚಾಲನೆ
ಚಾಮರಾಜನಗರ, ಅ. 01 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಗರ್ಭೀಣಿ ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಠಿಕ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಯ ಉದ್ಘಾಟನಾ ಸಮಾರಂಭವನ್ನು ಗುಂಡ್ಲುಪೇಟೆಯ ಶಿಕ್ಷಕರ ಭವನದಲ್ಲಿ ಅಕ್ಟೋಬರ್ 2ರಂದು ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಖಾತೆ ರಾಜ್ಯ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಎಸ್.ಜಯಣ್ಣ, ಆರ್.ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾದ ಪಿ. ಗಿರೀಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ಎನ್. ನಟೇಶ್, ಪುರಸಭೆ ಉಪಾಧ್ಯಕ್ಷರಾದ ಟಿ. ರಂಗಸ್ವಾಮಿ, ತಾ.ಪಂ. ಉಪಾಧ್ಯಕ್ಷರಾದ ರೂಪ ಅವರುಗಳು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರುಗಳು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆವ ತಿಳಿಸಿದೆ.

ಅಕ್ಟೋಬರ್ 3ರಂದು ವಿಷನ್ ಡಾಕ್ಯುಮೆಂಟ್ ಕುರಿತ ನೀಲನಕ್ಷೆ ತಯಾರಿ ಪೂರ್ವಭಾವಿ ಸಭೆ:ಆಹ್ವಾನ
ಚಾಮರಾಜನಗರ, ಅ. 01- ಮುಂದಿನ ಏಳು ವರ್ಷಗಳಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ದೃಷ್ಠಿಯಲ್ಲಿರಿಸಿಕೊಂಡು ರಾಜ್ಯ ಸರ್ಕಾರವು ವಿಷನ್-2025 ಡಾಕ್ಯುಮೆಂಟ್ ನೀಲನಕ್ಷೆ ತಯಾರಿಸುವ ಸಂಬಂಧ ಸಾಮಾಜಿಕ ನ್ಯಾಯ, ಆರೋಗ್ಯ ಮತ್ತು ಶಿಕ್ಷಣ ಕುರಿತು ಅಭಿಪ್ರಾಯ ಮಂಡಿಸಲು ಅಕ್ಟೋಬರ್ 3ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಕೆ.ಡಿ.ಪಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಶಿಕ್ಷಣ ತಜ್ಞರು, ಧಾರ್ಮಿಕ ನಾಯಕರು, ಬುದ್ದಿಜೀವಿಗಳು, ಪ್ರಜ್ಞಾವಂತ ನಾಗರಿಕರು, ವಿವಿಧ ಸಂಘಸಂಸ್ಥೆಯ ಮುಖಂಡರು, ಪದಾಧಿಕಾರಿಗಳು ಸಭೆಗೆ ಹಾಜರಾಗಿ ಸೂಕ್ತ ಅಭಿಪ್ರಾಯ, ಸಲಹೆಗಳನ್ನು ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕೆ. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಅಕ್ಟೋಬರ್ 4ರಂದು ಕೃಷಿ, ಗ್ರಾಮೀಣಾಭಿವೃದ್ಧಿ ಸಂಬಂಧ ವಿಷನ್ ಡಾಕ್ಯುಮೆಂಟ್ ಕುರಿತ ನೀಲನಕ್ಷೆ ತಯಾರಿ ಪೂರ್ವಭಾವಿ ಸಭೆ: ಆಹ್ವಾನ
ಚಾಮರಾಜನಗರ, ಅ. 01- ಮುಂದಿನ ಏಳು ವರ್ಷಗಳಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ದೃಷ್ಠಿಯಲ್ಲಿರಿಸಿಕೊಂಡು ರಾಜ್ಯ ಸರ್ಕಾರವು ವಿಷನ್-2025 ಡಾಕ್ಯುಮೆಂಟ್ ನೀಲನಕ್ಷೆ ತಯಾರಿಸುವ ಸಂಬಂಧ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶು ಸಂಗೋಪನೆ, ಸಾಮಾಜಿಕ ಅರಣ್ಯ, ಕೃಷಿ ಮಾರುಕಟ್ಟೆ, ಕೆ.ಎಂ.ಎಫ್ ಸೇರಿದಂತೆ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳ ಕುರಿತು ಚರ್ಚಿಸಲು ಅಕ್ಟೋಬರ್ 4ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೆ.ಡಿ.ಪಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ರೈತ ಭಾಂದವರು, ವಿವಿಧ ರೈತ ಸಂಘಟನೆಗಳ ಮುಖಂಡರು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು, ಬುದ್ದಿಜೀವಿಗಳು ಸಭೆಗೆ ಹಾಜರಾಗಿ ಸಲಹೆಗಳನ್ನು ನೀಡುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ತಿರುಮಲೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.


   

ಅಕ್ಟೋಬರ್ 2ರಂದು ಪ್ರಾಣಿವಧೆ, ಮಾಂಸ ಮತ್ತು ಮೀನು ಮಾರಾಟ ನಿಷೇಧ

ಚಾಮರಾಜನಗರ, ಸೆ. 30 :- ಅಕ್ಟೋಬರ್ 2 ರಂದು ಮಹಾತ್ಮ ಗಾಂಧಿ ಜಯಂತಿ ಆಚರಣೆ ಹಿನ್ನಲೆಯಲ್ಲಿ ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಣಿವಧೆ, ಮಾಂಸ ಹಾಗೂ ಮೀನು ಮಾರಾಟವನ್ನು ನಿಷೇಧಿಸಲಾಗಿದೆ.
ಅಂದು ಪ್ರಾಣಿವಧೆ, ಮಾಂಸ ಮತ್ತು ಮೀನು ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ಉದ್ದಿಮೆಯನ್ನು ಬಂದ್ ಮಾಡಿಸಿ, ಪರವಾನಗಿ ರದ್ದುಪಡಿಸುವುದಲ್ಲದೆ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ 2ರಂದು ಗಾಂಧಿ ಜಯಂತಿ ಕಾರ್ಯಕ್ರಮ

ಚಾಮರಾಜನಗರ, ಸೆ. 30 - ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿವತಿಯಿಂದ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮವನ್ನು ನಗರದ ಜಿಲ್ಲಾಡಳಿತ ಭವನದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಅಕ್ಟೋಬರ್ 2 ರಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಭಜನೆ, 10.30 ಗಂಟೆಗೆ ಸರ್ವಧರ್ಮ ಪ್ರಾರ್ಥನೆ ಮತ್ತು 10.40 ಗಂಟೆಗೆ ಶಾಲಾ ಮಕ್ಕಳಿಂದ ಗಾಂಧಿ ವೇಷಭೂಷಣ ಕಾರ್ಯಕ್ರಮಗಳನ್ನು ಏಪರ್Àಡಿಸಲಾಗಿದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಬಿ. ರಾಮು ಅವರು ತಿಳಿಸಿದ್ದಾರೆ.

ಅಕ್ಟೋಬರ್ 1ರಂದು ಕೊಳ್ಳೇಗಾಲದಲ್ಲಿ 63ನೇ ವನ್ಯಜೀವಿ ಸಪ್ತಾಹ ಆಚರಣೆ ಕಾರ್ಯಕ್ರಮ

ಚಾಮರಾಜನಗರ, ಸೆ. 30 - ಚಾಮರಾಜನಗರ ವೃತ್ತದ ಮಲೈ ಮಹದೇಶ್ವರ ವನ್ಯಜೀವಿ ವಿಭಾಗ ಮತ್ತು ಕಾವೇರಿ ವನ್ಯಜೀವಿ ವಿಭಾಗದ ಸಂಯುಕ್ತಾಶ್ರಯದಲ್ಲಿ 63ನೇ ವನ್ಯಜೀವಿ ಸಪ್ತಾಹ ಆಚರಣೆ ಕಾರ್ಯಕ್ರಮವನ್ನು ಕೊಳ್ಳೇಗಾಲದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕ್ರೀಡಾಂಗಣದಲ್ಲಿ ಅಕ್ಟೋಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಬಿ. ರಮಾನಾಥ ರೈ ಅವರು ಜ್ಯೋತಿ ಬೆಳಗಿಸುವರು. ಕೊಳ್ಳೇಗಾಲ ಶಾಸಕರಾದ ಎಸ್.ಜಯಣ್ಣ ಅಧ್ಯಕ್ಷತೆ ವಹಿಸುವರು.
ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಖಾತೆ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಆರ್.ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ಕೊಳ್ಳೇಗಾಲ ನಗರಸಭೆ ಅಧ್ಯಕ್ಷರಾದ ಎಸ್. ಶಾಂತರಾಜು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಕೊಳ್ಳೇಗಾಲ ತಾಲೂಕು ಪಂಚಾಯತ್ ಅಧ್ಯಕ್ಷರಾದ ಆರ್. ರಾಜು, ನಗರಸಭೆ ಉಪಾಧ್ಯಕ್ಷರಾದ ನಂಜುಂಡ, ತಾ.ಪಂ ಉಪಾಧ್ಯಕ್ಷರಾದ ಲತಾ ರಾಜಣ್ಣ, ಪ್ರಧಾನ ಮುಖ್ಯ ಅರಣ್ಯ (ಅರಣ್ಯ ಪಡೆ ಮುಖ್ಯಸ್ಥರು) ಸಂರಕ್ಷಣಾಧಿಕಾರಿ ಕೆ.ಎಸ್. ಸುಗಾರ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಾದ ಪುನಾಟಿ ಶ್ರೀಧರ್,  ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವನ್ಯಜೀವಿ ಪರಿಪಾಲಕರಾದ ಸಿ. ಜಯರಾಮ್, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಅಭಿವೃದ್ಧಿ) ಹಾಗೂ ಚಾಮರಾಜನಗರ ವೃತ್ತದ ನೋಡೆಲ್ ಅಧಿಕಾರಿ ಅಜಯ್ ಮಿಶ್ರಾ,  ಪ್ರಾದೇಶಿಕ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್‍ಲಾಲ್ ಮೀನಾ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ಅಂಬಾಡಿ ಮಾಧವ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಬಿ.ಅರ್.ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ಡಾ. ಪಿ. ಶಂಕರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆರ್. ಎಚ್. ನಾಗರಾಜು, ಸಾಮಾಜಿಕ ಅರಣ್ಯ ವಿಭಾಗ ಮತ್ತು ವನ್ಯಜೀವಿ ಪರಿಪಾಲಕರಾದ ಚೋಳರಾಜ್ ಮತ್ತು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಬಿ. ಮಲ್ಲೇಶಪ್ಪ ಅವರುಗಳು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು