ನವಕರ್ನಾಟಕ-2025 ಉತ್ತಮ ಯೋಜನೆ: ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ
ಚಾಮರಾಜನಗರ, ಅ. 30 - ಜನರ ಅಗತ್ಯ ಹಾಗೂ ಆಶೋತ್ತರಗಳಿಗೆ ತಕ್ಕಂತೆ ಪ್ರಸ್ತುತ ಯೋಜನೆಗಳನ್ನು ವಿಮರ್ಶಿಸಿ, ಪರಾಮರ್ಶಿಸಿ ರೂಪಿಸಲು ಜನರಿಂದಲೇ ಅಭಿಪ್ರಾಯ, ನಿರೀಕ್ಷೆ ಮತ್ತು ಸಲಹೆಗಳನ್ನು ಪಡೆಯಲು ನವಕರ್ನಾಟಕ-2025(ವಿಷನ್ ಡಾಕ್ಯುಮೆಂಟ್) ಉತ್ತಮ ಯೋಜನೆಯಾಗಿದೆ ಎಂದು ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ(ಗೀತಾಮಹದೇವಪ್ರಸಾದ್) ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಮುಂದಿನ ಏಳು ವರ್ಷಗಳ ಅವಧಿಯಲ್ಲಿ ರಾಜ್ಯ ಸಮಗ್ರ ಅಭಿವೃದ್ಧಿಯನ್ನು ದೃಷ್ಠಿಯಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ವಿಷನ್ ಡಾಕ್ಯುಮೆಂಟ್ ನೀಲನಕ್ಷೆ ಹಾಗೂ ಅನುಷ್ಠಾನ ಕಾರ್ಯಯೋಜನೆ ಸಿದ್ದಪಡಿಸುವ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಮುಖ್ಯ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜೆಗಳಿಂದ ಅಧಿಕಾರಕ್ಕೆ ಬಂದ ಸರ್ಕಾರ ತನ್ನ ಶ್ರೇಯೋಭಿವೃದ್ಧಿಗಾಗಿ ಪ್ರಜೆಗಳಿಂದಲೇ ಅಭಿಪ್ರಾಯ ಸಂಗ್ರಹಿಸುವುದು ಅಗತ್ಯ. ಸರ್ಕಾರ ಜಾರಿಗೆ vರುವ ಯೋಜನೆ, ಕಾರ್ಯಕ್ರಮಗಳು ಹೇಗಿರಬೇಕು, ಯಾವ ರೀತಿ ಜನತೆಯನ್ನು ತಲುಪಬೇಕು ಎನ್ನುವುದರಲ್ಲಿ ಜನತೆಯ ಅಭಿಪ್ರಾಯಗಳಿಗೆ ಪ್ರಾಮುಖ್ಯತೆ ಇದೆ. ಜನಸಾಮಾನ್ಯರು ಸೇರಿದಂತೆ ಎಲ್ಲರ ಅಹವಾಲು, ಆಶಯಗಳನ್ನು ಮನಗಂಡು ನವಕರ್ನಾಟಕ-2015 ಕಾರ್ಯಕ್ರಮ ರೂಪಿಸಿ ಜನರಿಂದಲೇ ಅಭಿಪ್ರಾಯ ಸಂಗ್ರಹಿಸುತ್ತಿದೆ ಎಂದರು.ಜಿಲ್ಲೆಯಾಗಿ 20 ವರ್ಷವಾಗಿದ್ದರೂ ಅಭಿವೃದ್ಧಿಯಲ್ಲಿ ಸಾಗಬೇಕಿದೆ. ಜಿಲ್ಲೆಯ ಪ್ರಗತಿಗೆ ಅಗತ್ಯ ಮೂಲಸೌಕರ್ಯ, ಸಾಮಾಜಿಕ ನ್ಯಾಯ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸುಧಾರಣೆ, ಕೌಶಲ್ಯಾಧಾರಿತ ಉದ್ಯೋಗ, ಸ್ಮಾರ್ಟ್‍ಸಿಟಿ, ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ಕೈಗಾರಿಕಾಭಿವೃದ್ಧಿ ಕುರಿತು ಜನರ ನಿರೀಕ್ಷೆಗಳು ಸಾಕಷ್ಟಿವೆ, ಅವುಗಳನ್ನು ಅಭಿವ್ಯಕ್ತಗೊಳಿಸಲು ನವಕರ್ನಾಟಕ-2015 ಉತ್ತಮ ವೇದಿಕೆಯಾಗಿದೆ ಎಂದು ಸಚಿವರಾದ ಮೋಹನಕುಮಾರಿ ಅವರು ತಿಳಿಸಿದರು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ವಿಷನ್ ಡಾಕ್ಯುಮೆಂಟ್ ಪ್ರಾಜೆಕ್ಟ್‍ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರೇಣುಕಾಚಿದಂಬರಂ ಅವರು ಮಾತನಾಡಿ ಬದಲಾವಣೆ ನಿರಂತರ ಪ್ರಕ್ರಿಯೆ. 2025ರೊಳಗೆ ಕರ್ನಾಟಕ ಹೇಗಿರಬೇಕು. ಸರ್ಕಾರದ ಯೋಜನೆಗಳು ಯಾವ ರೀತಿ ಫಲಪ್ರಧವಾಗಿರಬೇಕು ಎನ್ನುವ ನೀಲನಕ್ಷೆ ತಯಾರಿಸಲು ಈ ವಿಷನ್ ಡಾಕ್ಯುಮೆಂಟ್ ಮಾದರಿ(ರೋಡ್‍ಮ್ಯಾಪ್)ಯಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.
ನವಕರ್ನಾಟಕ ಕಾರ್ಯಕ್ರಮದಡಿ ಈಗಾಗಲೇ 26 ಜಿಲ್ಲೆಗಳಲ್ಲಿ ಕಾರ್ಯಾಗಾರ ನಡೆಸಲಾಗಿದೆ. ಅಗತ್ಯ ಹಾಗೂ ಅಪೇಕ್ಷೇಗಳೇನು, ಮುಂದಿನ ಯೋಜನೆಗಳು ಹೇಗಿರಬೇಕು ಎಂಬ ಬಗ್ಗೆ ಜನರಿಂದಲೇ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳುವ ವಿಷನ್ ಡಾಕ್ಯುಮೆಂಟ್ ಕಾರ್ಯಕ್ರಮ ದೇಶದಲ್ಲೇ ಮೊದಲು. ನವಕರ್ನಾಟಕ ಕಾರ್ಯಕ್ರಮವೊಂದು ವಿಶಿಷ್ಟ ಪ್ರಯೋಗವಾಗಿದೆ. ವಿವಿಧ ವಲಯಗಳಿಗೆ ಸಂಬಂಧಿಸಿದಂತೆ ಸಾಮಾನ್ಯ ವರ್ಗದವರು, ವಿಷಯ ಪರಿಣಿತರು, ಅಧಿಕಾರಿಗಳು ಸೇರಿದಂತೆ ಎಲ್ಲರ ಅಭಿಪ್ರಾಯ, ಸಲಹೆ ಪಡೆಯಲಾಗುತ್ತಿದೆ ಎಂದರು.
ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಚರ್ಚೆಯಾಗಬೇಕಿದೆ. ಜಿಲ್ಲೆಗಷ್ಟೇ ಸೀಮಿತವಾಗದೇ ಇಡೀ ರಾಜ್ಯಕ್ಕೂ ಅನುಕೂಲವಾಗುವ ಅನುಭವದ ಸಲಹೆಗಳು ಚರ್ಚೆ ಬಂದರೆ ಅನುಕೂಲವಾಗಲಿದೆ ಎಂದು ರೇಣುಕಾಚಿದಂಬರಂ ಆಶಿಸಿದರು.
ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ರೈತರು, ಸರ್ವ ಕ್ಷೇತ್ರಗಳ ಮುಖಂಡರು, ಪರಿಣಿತರು ಹಾಗೂ ಬುದ್ಧಿಜೀವಿಗಳು ಸೇರಿದಂತೆ ಎಲ್ಲ ವರ್ಗದವರ ಅಭಿಪ್ರಾಯಗಳು ಪಡೆದು ಅಭಿವೃದ್ಧಿಯ ನೀಲನಕ್ಷೆ ತಯಾರಿಕೆಗೆ ಪೂರ್ವಸಿದ್ದತೆ ಮಾಡಿಕೊಳ್ಳಬೇಕಿದೆ ಎಂದರು.
ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಾಸ್ತಾವಿಕವಾಗಿ ಮಾತನಾಡಿ ನವಕರ್ನಾಟಕ 2025ಕ್ಕೆ ಜಿಲ್ಲೆಯಿಂದ ನಡೆಸಲಾಗಿರುವ ಸಿದ್ದತೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ಎಲ್ಲರ ಸಹಕಾರದೊಂದಿಗೆ ಮಾಡಿದ್ದೇವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಶ್ರಮವೂ ಇದೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ನಗರಸಭೆ ಅಧ್ಯಕ್ಷರಾದ ಶೋಭಾಪುಟ್ಟಸ್ವಾಮಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಉಮೇಶ್, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಯಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಅ. 30 - ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ಅವರು ಅಕ್ಟೋಬರ್ 31 ಹಾಗೂ ನವೆಂಬರ್ 1ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಅಕ್ಟೋಬರ್ 31ರಂದು ಬೆಳಿಗ್ಗೆ 10 ಗಂಟೆಗೆ ಗುಂಡ್ಲುಪೇಟೆಗೆ ಆಗಮಿಸಿ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡುವರು.
ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2.30 ಗಂಟೆಗೆ ಗುಂಡ್ಲುಪೇಟೆಗೆ ತೆರಳಿ ಸ್ಥಳೀಯ ಕಾರ್ಯುಕ್ರಮದಲ್ಲಿ ಭಾಗವಹಿಸುವರು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡುವರು ಎಂದು ಸಚಿವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಸೆಂಬರ್ ವೇಳೆಗೆ ನವಕರ್ನಾಟಕ-2025 ಕರಡು ಸಿದ್ಧ: ರೇಣುಕಾಚಿದಂಬರಂ
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ನವಕರ್ನಾಟಕ-2025 ಕುರಿತ ಜಿಲ್ಲಾಮಟ್ಟದ ಕಾರ್ಯಾಗಾರ ಉದ್ಘಾಟನೆ ಸಮಾರಂಭದ ಬಳಿಕ ನಡೆದ ಪತ್ರಿಕಾಗೊಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಸಮಗ್ರ ಪ್ರಗತಿ ಉದ್ದೇಶದೊಂದಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅಭಿಪ್ರಾಯ, ಸಲಹೆ ಸಂಗ್ರಹಣೆ ಮಾಡಲಾಗುತ್ತಿದೆ. ಅಂತಿಮವಾಗಿ ಡಿಸೆಂಬರ್ ವೇಳೆಗೆ ಕರಡು ಸಿದ್ದವಾಗಲಿದೆ. ಎರಡು ಹಂತಗಳಲ್ಲಿ ಈ ಯೋಜನೆ ಪರಾಮರ್ಶೆ ನಡೆಯಲಿದೆ. ಮೊದಲು ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆಯಾಗಲಿದೆ. ಬಳಿಕ ಮುಖ್ಯಮಂತ್ರಿಯವರ ನೇತೃತ್ವದ ಉನ್ನತಾಧಿಕಾರಿ ಸಮಿತಿ ಇದರ ಪರಾಮರ್ಶೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ. ಅದಾದ ಬಳಿಕ ಸಾರ್ವಜನಿಕವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದರು.
ಸರ್ಕಾರದ ಪ್ರಮುಖ ಇಲಾಖೆಗಳನ್ನೊಳಗೊಂಡ 13 ವಲಯಗಳನ್ನು ಗುರುತಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ 5 ಸಮಾನಾಂತರ ವಿಷಯಗಳಾಗಿ ವಿಂಗಡಣೆ ಮಾಡಿದ್ದು, ಆ ಮೂಲಕ ಎಲ್ಲರನ್ನು ಒಳಗೊಂಡಂತೆ ಸಲಹೆ, ಅಭಿಪ್ರಾಯಗಳನ್ನು ಚರ್ಚೆಯ ಮುಖಾಂತರ ಪಡೆದು ಪ್ರತ್ಯೇಕವಾಗಿ ವಿಷಯ ಸಂಗ್ರಹಣೆ ಮಾಡಲಾಗುತ್ತಿದೆ. ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶವಾಗದೇ ಇರುವವರು ಸಾಮಾಜಿಕ ಜಾಲತಾಣಗಳ ಮೂಲಕವು ಅಭಿಪ್ರಾಯ ಸಲಹೆ ನೀಡಲು ಅವಕಾಶ ಮಾಡಿಕೊಡಲಾಗಿದೆ ಎಂದರು.
ಅಭಿವೃದ್ಧಿಗೆ ಪೂರಕವಾಗಿರುವ ಸಲಹೆ, ಅಭಿಪ್ರಾಯಗಳನ್ನು ಜನರಿಂದಲೇ ಪಡೆಯಲಾಗುತ್ತಿದೆ. ಸ್ಪಷ್ಟ ಗುರಿ ಹಾಗೂ ಸಾಧನೆ ಅಂಶಗಳು ಅಡಕವಾಗಲಿವೆ. ಈಗಾಗಲೇ 26 ಜಿಲ್ಲೆಗಳಲ್ಲೂ ಜಿಲ್ಲಾಮಟ್ಟದ ಕಾರ್ಯಾಗಾರ ನಡೆದಿದ್ದು, ಪ್ರತಿ ಜಿಲ್ಲೆಯಲ್ಲೂ ಪ್ರಸ್ತಾಪಿಸಿರುವ ಹಾಗೂ ಮಂಡನೆ ಮಾಡಿರುವ ವಿಚಾರ, ಅಂಶಗಳನ್ನು ಸ್ವೀಕರಿಸಲಾಗಿದೆ ಎಂದು ರೇಣುಕಾ ಚಿದಂಬರಂ ತಿಳಿಸಿದರು.
ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಉಪವಿಭಾಗಾಧಿಕಾರಿ ಫೌಜಿಯಾ ತರನಂ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಅ. 31ರಂದು ಟಿಪ್ಪುಸುಲ್ತಾನ್ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ
ಚಾಮರಾಜನಗರ, ಅ. 30 - ಚಾಮರಾಜನಗರ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವ ಸಲುವಾಗಿ ಅಕ್ಟೋಬರ್ 31ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.ಈ ಸಭೆಗೆ ಎಲ್ಲ ಸಮುದಾಯ, ಸಂಘಸಂಸ್ಥೆಗಳ ಮುಖಂಡರು, ನಾಗರಿಕರು ಹಾಜರಾಗಿ ಸಲಹೆ, ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಅ. 31ರಂದು ಜಿಲ್ಲಾಡಳಿತದ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ಚಾಮರಾಜನಗರ, ಅ. 30 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಿತ್ತೂರುರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಕಿತ್ತೂರುರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೈಸೂರಿನ ಮಾನಸ ಗಂಗೋತ್ರಿಯ ಶ್ರೀ ಬಸವೇಶ್ವರ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರಯ್ಯ ಮುಖ್ಯ ಭಾಷಣ ಮಾಡುವರು.
ಜಯಂತಿ ಅಂಗವಾಗಿ ವೇದಿಕೆಯಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿಯ ಎಸ್.ಬಿ. ನಾಗರಾಜು ಮತ್ತು ತಂಡದವರು ಕನ್ನಡ ಗೀತೆಗಳ ಗಾಯನ ಪ್ರಸ್ತುತಪಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಅ. 31ರಂದು ನಗರದಲ್ಲಿ ರಾಷ್ಟ್ರೀಯ ಸಂಕಲ್ಪ ಹಾಗೂ ಏಕತಾ ದಿವಸ
ಚಾಮರಾಜನಗರ, ಅ. 30 - ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ನಗರದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಹಾಗೂ ಸಂಯುಕ್ತ ಯುವಜನ ಸಂಘ ಇವರ ಸಹಯೋಗದೊಂದಿಗೆ ಅಕ್ಟೋಬರ್ 31ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಪುಣ್ಯತಿಥಿ ಅಂಗವಾಗಿ ರಾಷ್ಟ್ರೀಯ ಸಂಕಲ್ಪ ದಿವಸ ಹಾಗೂ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮಜಯಂತಿಯ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸವನ್ನು ಆಚರಿಸಲಾಗುತ್ತಿದೆ.ಗೊರುಕನ ದಿನಪತ್ರಿಕೆ ಸಂಪಾದಕರಾದ ಸಿ. ಮಹÉೀಂದ್ರ ಕಾರ್ಯಕ್ರಮ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲರಾದ ಎಂ. ಮರಿಸ್ವಾಮಿ ಅಧ್ಯಕ್ಷತೆ ವಹಿಸುವರು.
ಭಾರತೀಯ ಯುವ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಎಲ್. ಸುರೇಶ್, ನಗರದ ನವಸಂವೃದ್ಧಿ ಸಂಸ್ಥೆಯ ತರಬೇತಿ ಸಂಪನ್ಮೂಲ ವ್ಯಕ್ತಿ ಕಾಳಿಂಗಸ್ವಾಮಿ ಸಿದ್ಧಾರ್ಥ, ಯುವಜನ ಮತ್ತು ಕ್ರೀಡಾ ಇಲಾಖೆಯ ಯುವ ಪರಿವರ್ತಕರಾದ ರವಿಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ರಂಗವಾಹಿನಿ ಅಧ್ಯಕ್ಷರಾದ ಸಿ.ಎಂ. ನರಸಿಂಹಮೂರ್ತಿ ಅತಿಥಿ ಉಪನ್ಯಾಸಕರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ನ. 2ರಂದು ನಗರದಲ್ಲಿ ವಿಭಾಗಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟನೆ
ಚಾಮರಾಜನಗರ, ಅ. 30 - ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 2ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜೆ.ಎಸ್.ಎಸ್. ವಿದ್ಯಾಸಂಸ್ಥೆಯ ಆವರಣದಲ್ಲಿ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ವಿಭಾಗಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ.
ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಕ್ರೀಡಾಜ್ಯೋತಿ ಸ್ವೀಕರಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ನ. 5ರಂದು ನಗರದಲ್ಲಿ ಎನ್‍ಟಿಎಸ್‍ಇ, ಎನ್‍ಎಂಎಂಎಸ್ ಪರೀಕ್ಷೆ
ಚಾಮರಾಜನಗರ, ಅ. 30 :- ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2017-18ನೇ ಸಾಲಿನಲ್ಲಿ ಎನ್‍ಟಿಎಸ್‍ಇ ಮತ್ತು ಎನ್‍ಎಂಎಂಎಸ್ ಪರೀಕ್ಷೆಯನ್ನು 8 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ನಡೆಸಲಿದೆ.10ನೇ ತರಗತಿ ಮಕ್ಕಳಿಗೆÉ ಎನ್‍ಟಿಎಸ್‍ಇ ಪರೀಕ್ಷೆಯು ನಗರದ ಸತ್ಯಮಂಗಲ ರಸ್ತೆಯಲ್ಲಿರುವ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
8ನೇ ತರಗತಿ ಮಕ್ಕಳಿಗೆ ಎನ್‍ಎಂಎಂಎಸ್ ಪರೀಕ್ಷೆಯು ನಗರದ ಜೆಎಸ್‍ಎಸ್ ಬಾಲಕಿಯರ ಪ್ರೌಢಶಾಲೆ, ಜೆಎಸ್‍ಎಸ್ ಬಾಲಕರ ಪ್ರಾಢಶಾಲೆ ಹಾಗೂ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲÁಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರಸಭೆ : ಸಾಕು ಪ್ರಾಣಿ ಮಾಲೀಕರಿಗೆ ಸೂಚನೆ
ಚಾಮರಾಜನಗರ, ಅ. 30 (ಕರ್ನಾಟಕ ವಾರ್ತೆ):- ಚಾಮರಾಜನಗರ ನಗರಸಭೆಯು ಪಟ್ಟಣ ವ್ಯಾಪ್ತಿಯ ಪ್ರಮುಖ ಬೀದಿಗಳಲ್ಲಿ ಬೀಡಾಡಿ ದನಗಳು, ಮೇಕೆಗಳು, ಬೀದಿ ನಾಯಿಗಳು, ಕುದುರೆಗಳು ಹಾಗೂ ಇತರೆ ಸಾಕು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರು, ಶಾಲಾಮಕ್ಕಳು ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.
ಪಟ್ಟಣದ ಪ್ರಮುಖ ರಸ್ತೆಗಳಾದ ಬಿ. ರಾಚಯ್ಯ ಜೋಡಿ ರಸ್ತೆ, ನ್ಯಾಯಾಲಯದ ರಸ್ತೆ, ಅಂಗಡಿ ಬೀದಿ, ಸಂತೆಮರಳ್ಳಿ ರಸ್ತೆ, ಸತ್ತಿ ರಸ್ತೆ, ಗುಂಡ್ಲುಪೇಟೆ ರಸ್ತೆ ಹಾಗೂ ಕರಿನಂಜನಪುರ ರಸ್ತೆ ಮತ್ತು ಪ್ರಮುಖ ವೃತ್ತಗಳಲ್ಲಿ ತಿರÀುಗಾಡುತ್ತಾ ಎಲ್ಲೆಂದರಲ್ಲಿ ಬಿದ್ದುಕೊಂಡು ಜನಸಾಮಾನ್ಯರ ತಿರುಗಾಟಕ್ಕೆ, ವಾಹನಗಳ ಸಂಚಾರಕ್ಕೆ ತೊಂದರೆ ಕೊಡುತ್ತಿವೆ. ತಿರುಗಾಡುವ ಶಾಲಾ ಮಕ್ಕಳಿಗೆ ತಿವಿದು ತೊಂದರೆ ಕೊಡುವ ಸಾಧ್ಯತೆಗಳಿರುತ್ತದೆ.
ಆದಕಾರಣ ಸಾಕುಪ್ರಾಣಿಗಳ ಮಾಲೀಕರು ತಮ್ಮ ಪ್ರಾಣಿಗಳನ್ನು ಸಾರ್ವಜನಿಕ ರಸ್ತೆಗೆ ಬಿಡದಂತೆ ಸೂಚಿಸಿದೆ. ಪ್ರಮುಖ ರಸ್ತೆಗಳಲ್ಲಿ ಸಾಕುಪ್ರಾಣಿಗಳು ಕಂಡುಬಂದರೆ ನಗರಸಭೆ ವತಿಯಿಂದ ಸೆರೆಹಿಡಿದು, ಮೈಸೂರಿನ ಪಿಂಜರಾಪೋಲ್‍ಗೆ ಕಳುಹಿಸಲಾಗುವುದು. ಪ್ರಾಣಿಗಳ ಮಾಲೀಕರಿಗೆ ಯಾವುದೇ ಪರಿಹಾರ ನೀಡದೇ ಕರ್ನಾಟಕ ಮುನಿಸಿಪಲ್ ಕಾಯ್ದೆ 1964ರ ಪ್ರಕಾರ ಕಾನೂನು ರೀತಿಯಂತೆ ಕ್ರಮ ವಹಿಸಲಾಗುವುದು ಎಂದು ನಗರಸಭಾ ಪ್ರಕಟಣೆಯಲ್ಲಿ ತಿಳಿಸಿದÉ.
ನ. 6ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ
ಚಾಮರಾಜನಗರ, ಅ. 30 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 6ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಕನಕದಾಸರ ಭಾವಚಿತ್ರ ಮೆರವಣಿಗೆಗೆ ಚಾಲನೆ ದೊರೆಯಲಿದೆ.
ಬೆಳಿಗ್ಗೆ 11 ಗಂಟೆಗೆ ಹಳೇ ಖಾಸಗಿ ಬಸ್ ನಿಲ್ದಾಣದ ಮಾರಿಗುಡಿ ದೇವಸ್ಥಾನದ ಆವರಣದ ಬಳಿ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಸಕ್ಕರೆ, ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಭಕ್ತ ಶ್ರೇಷ್ಠ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆಯ ಅಧ್ಯಕ್ಷರಾದ ಶೋಭ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನÀಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಗುಂಡ್ಲುಪೇಟೆ ವಿಶ್ರಾಂತ ಪ್ರಾಂಶುಪಾಲರಾದ ಕೆಂಪರಾಜು ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಅಂದು ಬೆಳಿಗ್ಗೆ 9.30 ಗಂಟೆಗೆ ಮುಖ್ಯ ವೇದಿಕೆಯಲ್ಲಿ ಗದಗಿನ ವೀರೇಶ್ವರ ಪುಣ್ಯಾಶ್ರಮದ ಏಕನಾಥ್ ಮತ್ತು ತಂಡದವರಿಂದ ಕನಕದಾಸರ ಕೀರ್ತನೆ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
No comments:
Post a Comment