ಶಾಸಕರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ : ಹೈಮಾಸ್ಟ್ ದೀಪ ಸೇವೆಗೆ ವ್ಯವಸ್ಥೆ ಸಮರ್ಪಣೆ
ಚಾಮರಾಜನಗರ, ಅ. 26 - ನಗರದ ಗಾಳಿಪುರ ಬಡಾವಣೆಯ ವಿವಿಧ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ಹಾಗೂ ವಿವಿದ ಬೀದಿಗಳಲ್ಲಿ ಅಳವಡಿಸÀಲಾಗಿರುವ ಹೈಮಾಸ್ಟ್ ಬೀದಿ ದೀಪ ವ್ಯವಸ್ಥೆಗೆ ಇಂದು ಚಾಲನೆ ನೀಡಲಾಯಿತು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು 1.5 ಕೋಟಿ ರೂ. ವೆಚ್ಚದ ಹಾಗೂ 8 ಲಕ್ಷ ರೂ. ವೆಚ್ಚದ ಪ್ರತ್ಯೇಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.ಇದೇವೇಳೆ ಪ್ರಮುಖ ರಸ್ತೆ ಹಾಗೂ ಬಡಾವಣೆ ಬೀದಿಗಳಲ್ಲಿ ಅಳವಡಿಸಿರುವ ಹೈಮಾಸ್ಟ್ ಬೀದಿ ದೀಪವನ್ನು ಗುಂಡಿ ಒತ್ತುವ ಮೂಲಕ ಸೇವೆಗೆ ಶಾಸಕರು ಸಮರ್ಪಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿಯವರು ಜಿಲ್ಲಾ ಕೇಂದ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆಯಾಗಿದೆ. ಈ ಅನುದಾನ ಬಳಕೆ ಮಾಡಿಕೊಂಡು ನಗರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಮುಂದಾಗಿದ್ದೇವೆ ಎಂದರು.
ಎಸ್‍ಎಫ್‍ಸಿ ಅನುದಾನದಡಿ ಅತ್ಯಾಧುನಿಕವಾಗಿ ರಸ್ತೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. ನಗರೋತ್ಥಾನದಡಿಯೂ ರಸ್ತೆ ಕಾಮಗಾರಿಗೆ ಹಣ ನಿಗದಿಯಾಗಿದೆ. 10.5 ಕೋಟಿ ರೂ. ವೆಚ್ಚದಲ್ಲಿ ರಾಮಸಮುದ್ರ, ಸಂಪಿಗೆ ರಸ್ತೆ, ಪಿಕಾಡೋ ಆಸ್ಪತ್ರೆ ರಸ್ತೆ ಸೇರಿದಂತೆ ಇತರೆಡೆ ರಸ್ತೆ ಅಭಿವೃದ್ಧಿ ಕೆಲಸವನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕರು ವಿವರಿಸಿದರು.
ನಗರಸಭೆ ಅಧ್ಯಕ್ಷರಾದ ಶೋಭ ಪುಟ್ಟಸ್ವಾಮಿ, ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಹಾಲಿ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರೂ ಆದ ನಂಜುಂಡಸ್ವಾಮಿ, ಸದಸ್ಯರಾದ ಸೈಯದ್ ಆರಿಫ್, ಮಹೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಉಮೇಶ್, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಮುಖಂಡರಾದ ಸುರೇಶ್ ನಾಯಕ, ಮಹಮದ್ ಅಸ್ಗರ್ ಮುನ್ನ, ನಗರಸಭೆ ಆಯುಕ್ತರಾದ ರಾಜಣ್ಣ, ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಅ. 29ರಂದು ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ
ಚಾಮರಾಜನಗರ, ಅ. 26 (:- ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ (ಸಿಎಆರ್, ಡಿಎಆರ್) ಹುದ್ದೆಗÀಳಿಗೆ ಅರ್ಹರಾದ ಒಟ್ಟು 1400 ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯು ಅಕ್ಟೋಬರ್ 29ರಂದು ಬೆಳಿಗ್ಗೆ 11 ರಿಂದ 12.30 ಗಂಟೆಯವರೆಗೆ ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.ನಗರದ ಸತ್ಯಮಂಗಲ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮದರ್ಜೆ ಕಾಲೇಜು, ಮಹರ್ಷಿ ಭಗೀರಥ ರಸ್ತೆಯಲ್ಲಿರುವ ಸೇವಾಭಾರತಿ ಶಿಕ್ಷಣ ಸಂಸ್ಥೆ, ನಂಜನಗೂಡು ರಸ್ತೆಯ ಸರ್ಕಾರಿ ಪಾಲಿಟೆಕ್ನಿಕ್, ಡಾ.ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿವೆ.
ಅರ್ಹ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ಕರೆಪತ್ರಗಳನ್ನು ಪೊಲೀಸ್ ಇಲಾಖೆಯ ವೆಬ್ ಸೈಟ್ ತಿತಿತಿ.ಞsಠಿ.gov.iಟಿ ನಿಂದ ಪಡೆದುಕೊಳ್ಳಬಹುದು.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮೊಬೈಲ್, ಲ್ಯಾಪ್ ಟಾಪ್, ಕ್ಯಾಲ್ಕÀ್ಯುಲೇಟರ್, ಪೇಜರ್, ಚಿಟ್ಸ್, ನೋಟ್ ಬುಕ್, ಎಲೆಕ್ಟ್ರಾನಿಕ್ ಉಪಕರಣಗಳು ಇತರೆ ಸಾಮಗ್ರಿಗಳನ್ನು ಪರೀಕ್ಷಾ ಕೊಠಡಿಗೆ ತರುವಂತಿಲ್ಲ. ನೇಮಕಾತಿಯು ಪಾರದರ್ಶಕ ಗಣಕೀಕೃತ ವಸ್ತುನಿಷ್ಟ, ಅರ್ಹತೆ ಹಾಗೂ ಮೀಸಲಾತಿ ಆಧಾರದ ಮೇಲೆ ನಡೆಯಲಿದೆ. ಯಾವುದೇ ಅಭ್ಯರ್ಥಿ ಉದ್ಯೋಗ ಪಡೆಯುವ ಸಲುವಾಗಿ ಇಲಾಖೆಯ ಹೊರಗೆ ಅಥವಾ ಒಳಗೆ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಥವಾ ಪಾರತೋಷಕ ನೀಡುವುದನ್ನು ಮಾಡಬಾರದು. ಯಾವುದೇ ವಿಧವಾದ ಹಣ ವಸೂಲಾತಿಗೆ ಯಾರಿಗೂ ಅಧಿಕಾರ ನೀಡಿರುವುದಿಲ್ಲ. ಮಧ್ಯವರ್ತಿಗಳ ಭರವಸೆಗಳಿಗೆ ಅಭ್ಯರ್ಥಿಗಳು ಮಾರುಹೋಗದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 28ರಂದು ಉಚಿತ ರೇಬಿಸ್ ಲಸಿಕೆ ಕಾರ್ಯಕ್ರಮ
ಚಾಮರಾಜನಗರ, ಅ. 26 - ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪ್ರಾಣಿದಯಾ ಸಂಘ ಆಶ್ರಯದಲ್ಲಿ ಪ್ರಾಣಿಗಳಿಗೆ ಉಚಿತ ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮವನ್ನು ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದೆ.ಪ್ರಾಣಿಪ್ರಿಯರು, ನಾಗರಿಕರು ತಮ್ಮ ಸಾಕು ನಾಯಿ, ಬೆಕ್ಕುಗಳನ್ನು ಆಸ್ಪತ್ರೆಗೆ ಕರೆತಂದು ಉಚಿತ ಲಸಿಕೆ ಹಾಕಿಸುವಂತೆ ಪಶುಪಾಲನಾ ಇಲಾಖೆ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ನ. 3, 4ರಂದು ಸಿಎಸ್‍ಎಎಸ್ ಮೌಲ್ಯಂಕನ ಪರೀಕ್ಷೆ
ಚಾಮರಾಜನಗರ, ಅ.:– ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲೆಯಲ್ಲಿ ನವೆಂಬರ್ 3 ಹಾಗೂ 4ರಂದು 2017-18ನೇ ಸಾಲಿನ ಸಿಎಸ್‍ಎಎಸ್ ಮೌಲ್ಯಂಕನ ಪರೀಕ್ಷೆಯನ್ನು 4 ರಿಂದ 9ನೇ ತರಗತಿಯವರಿಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ನಡೆಸಲಿದೆ.ಪರೀಕ್ಷಾ ದಿನಗಳಂದು ಮಕ್ಕಳು ಶಾಲೆಗೆ ಗೈರುಹಾಜರಾಗದಂತೆ ಶಿಕ್ಷಕರು ಕ್ರಮ ವಹಿಸಲು ತಿಳಿಸಿದ್ದು, ಶಾಲಾಭಿವೃದ್ಧಿ (ಎಸ್‍ಡಿಎಂಸಿ) ಅಧ್ಯಕ್ಷರು ಶಾಲೆಯಲ್ಲಿ ಹಾಜರಿರುವಂತೆ ತಿಳಿಸಲಾಗಿದೆ.
ಎಲ್ಲ ಶಿಕ್ಷಕರು ಕಡ್ಡಾಯವಾಗಿ ಶಾಲಾ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಅ. 27ರಂದು ಉಸ್ತುವಾರಿ ಜಿಲ್ಲಾ ಸಚಿವರ ಪ್ರವಾಸ
ಚಾಮರಾಜನಗರ, ಅ. - ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಸಚಿವರಾದ ಡಾ.ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವ ಪ್ರಸಾದ್) ಅವರು ಅಕ್ಟೋಬರ್ 27ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 9.30 ಗಂಟೆಗೆ ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿಯಲ್ಲಿ ಹಾಗೂ ಮಧ್ಯಾಹ್ನ 3 ಗಂಟೆಗೆ ಗುಂಡ್ಲುಪೇಟೆ ಪಟ್ಟಣದಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಸಂಜೆ 6 ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಶಾಲೆಗಳ ವಿರುದ್ಧ ದೂರು ನೀಡಲು ಮನವಿ
ಚಾಮರಾಜನಗರ, ಅ. 26 - ಚಾಮರಾಜನಗರ ತಾಲೂಕು ವ್ಯಾಪ್ತಿಯಲ್ಲಿ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚುವರಿಯಾಗಿ ವಸೂಲು ಮಾಡುತ್ತಿದ್ದಲ್ಲಿ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಾಲೆಗಳ ವಿರುದ್ಧ ಪೋಷಕರು ನಾಗರಿಕರು ಲಿಖಿತವಾಗಿ ದೂರು ನೀಡುವಂತೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.ವಿವಿಧ ತರಬೇತಿ : ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಅ. 26- ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2007-18ನೇ ಸಾಲಿಗೆ ವಿವಿಧ ಕೌಶಲ್ಯ ತರಬೇತಿ ನೀಡಲಿದ್ದು ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ ಯುವತಿಯರು ವಿವಿಧ ಟ್ರೇಡ್‍ಗಳಲ್ಲಿ ತರಬೇತಿ ಪಡೆಯಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ನವೆಂಬರ್ 31ರ ಒಳಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ನಿಗಮದ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-224133 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಅ. 27ರಂದು ವಿವಿದೆಡೆ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಅ. 26 - ತಾಲೂಕಿನ ಚಂದಕವಾಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಕ್ಟೋಬರ್ 27ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹಿರಿಕೆರೆ, ಕಾಳಿಕಾಂಬ, ಚಂದಕವಾಡಿ, ರೇಚಂಬಳ್ಳಿ, ಮಲ್ಲೆದೇವನಹಳ್ಳಿ, ನವೋದಯ, ಹೊಂಡರಬಾಳು, ಜ್ಯೋತಿಗೌಡನಪುರ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 28ರಂದು ಜಿಲ್ಲಾ ಪ. ಜಾತಿ, ಪ. ವರ್ಗಗಳ ಹಿತರಕ್ಷಣಾ ಸಮಿತಿ ಸಭೆ : ಮನವಿ ಸಮಸ್ಯೆ ಸಲ್ಲಿಕೆಗೆ ಅವಕಾಶ
ಚಾಮರಾಜನಗರ, ಅ. 26– ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ (ಕ್ಷೇಮಾಭಿವೃದ್ಧಿ) ಸಮಿತಿ ಸಭೆಯು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.ಹಿತರಕ್ಷಣಾ ಸಮಿತಿ ಸಭೆಗೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ತಾಲ್ಲೂಕಿನ ರಾಮಕೃಷ್ಣಯ್ಯ (ಮೊಬೈಲ್ ಸಂಖ್ಯೆ: 9986938573) ಹಾಗೂ ಚಾಮರಾಜನಗರ ತಾಲ್ಲೂಕು ನಾಗವಳ್ಳಿ ಗ್ರಾಮದ ಎಂ.ಚಿಕ್ಕಮಹದೇವ (ಮೊಬೈಲ್ ಸಂಖ್ಯೆ: 9902039341) ಅವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿರುತ್ತದೆ. ನಾಗರೀಕರು, ಸಂಘ ಸಂಸ್ಥೆ ಪದಾಧಿಕಾರಿಗಳು, ಮುಖಂಡರು ವೈಯಕ್ತಿಕ ವಿಷಯ ಹೊರತುಪಡಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆ, ತೊಂದರೆಗಳು ಇದ್ದಲ್ಲಿ ಸಮಿತಿಯ ಸದಸ್ಯರ ಮುಖಾಂತರ ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು (ಕೊಠಡಿ ಸಂಖ್ಯೆ 120) ಅಥವಾ ಆಯಾಯ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿ ಮೂಲಕ ಮನವಿ ಸಲ್ಲಿಸಬಹುದಾಗಿದೆ ಎಂದು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯ ಸದಸ್ಯ ಕಾರ್ಯದರ್ಶಿ ಹಾಗೂ ಉಪನಿರ್ದೇಶಕರಾದ ಕೆ.ಹೆಚ್. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment