Friday, 27 October 2017

27-10-2017 ಚಾಮರಾಜನಗರ ಸುದ್ದಿಗಳು

     

ಅ. 31ರಂದು ಜಿಲ್ಲಾಡಳಿತದ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ


ಚಾಮರಾಜನಗರ, ಅ. 27 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಿತ್ತೂರುರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಉದ್ಘಾಟನೆ ನೆರವೇರಿಸುವರು. ಕರ್ನಾಟಕ  ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಕಿತ್ತೂರುರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೈಸೂರಿನ ಮಾನಸ ಗಂಗೋತ್ರಿಯ ಶ್ರೀ ಬಸವೇಶ್ವರ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರಯ್ಯ ಮುಖ್ಯ ಭಾಷಣ ಮಾಡುವರು.
ಜಯಂತಿ ಅಂಗವಾಗಿ ವೇದಿಕೆಯಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿಯ ಎಸ್.ಬಿ. ನಾಗರಾಜು ಮತ್ತು ತಂಡದವರು ಕನ್ನಡ ಗೀತೆಗಳ ಗಾಯನ ಪ್ರಸ್ತುತಪಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಅ. 30ರಂದು ವಿಶ್ವ ಅಯೋಡಿನ್ ಕೊರತೆಯ ನ್ಯೂನತೆಗಳ ನಿಯಂತ್ರಣ ದಿನಾಚರಣೆ

ಚಾಮರಾಜನಗರ, ಅ. 27 :- ತಾಲೂಕಿನ ಆರೋಗ್ಯ ಇಲಾಖೆ ವತಿಯಿಂದ ವಿಶ್ವ ಅಯೋಡಿನ್ ಕೊರತೆಯ ನ್ಯೂನತೆಗಳ ನಿಯಂತ್ರಣ ದಿನಾಚರಣೆಯನ್ನು ಅಕ್ಟೋಬರ್ 30ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆಯ ಸರ್ಕಾರಿ ಶುಶ್ರೂಷ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜವಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ : ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಚಾಮರಾಜನಗರ, ಅ. 27 :- ಜವಹರ್ ನವೋದಯ ವಿದ್ಯಾಲಯದ 2018ನೇ ಸಾಲಿನ ಪ್ರವೇಶಕ್ಕೆ  ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ.
ಜಿಲ್ಲೆಯಾದ್ಯಂತ 5ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ಎಲ್ಲಾ ಶಾಲೆಗಳ (ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ) ಮುಖ್ಯಸ್ಥರು ತರಗತಿಯ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ನೀಡಿ ಸೈಬರ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ತಿಳಿಸಬೇಕÀು.
ಹೆಚ್ಚಿನ ಮಾಹಿತಿಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಸಾರ್ವಜನಿಕ  ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




 ಕೊಳ್ಳೇಗಾಲ : ವಿವಿಧ ತರಬೇತಿಗೆ ಪ.ವರ್ಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಚಾಮರಾಜನಗರ, ಅ. 27 (ಕರ್ನಾಟಕ ವಾರ್ತೆ):- ತಾಲೂಕಿನ ಪರಿಶಿಷ್ಟ ವರ್ಗಗಳ  ಕಲ್ಯಾಣ ಇಲಾಖೆಯು 2017-18ನೇ ಸಾಲಿಗೆ ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ ಯುವತಿಯರಿಗೆ ಲಘು ಹಾಗೂ ಭಾರಿ ವಾಹನ ಚಾಲನಾ ತರಬೇತಿ, ಕಂಪ್ಯೂಟರ್, ಗೃಹೋಪಯೋಗಿ ವಿದ್ಯುತ್ ಉಪಕರಣ, ಮೊಬೈಲ್ ದುರಸ್ತಿ, ಹೊಲಿಗೆ (ಯುವತಿಯರಿಗೆ) ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.
ವಾಹನ ಚಾಲನಾ ಹಾಗೂ ಹೊಲಿಗೆ ತರಬೇತಿಗೆ ಕನಿಷ್ಟ ವಿದ್ಯಾರ್ಹತೆ 10ನೇ ತರಗತಿ ಪಾಸಾಗಿರಬೇಕು. ಉಳಿದ ಎಲ್ಲ ತರಬೇತಿಗೆ ಕನಿಷ್ಟ 8ನೇ ತರಗತಿ ತೇರ್ಗಡೆಯಾಗಿರಬೇಕು. 18 ರಿಂದ 35ರ ವಯೋಮಿತಿಯ ನಿರುದ್ಯೋಗಿಗಳು ಅರ್ಹರು. ಯಾವುದೇ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಅಥವಾ ತರಬೇತಿ ಪಡೆಯುತ್ತಿರಬಾರದು. ಕುಟುಂಬದ ಆದಾಯ 2 ಲಕ್ಷ ರೂ. ಮೀರಿರಬಾರದು.
ಅರ್ಜಿಯನ್ನು ಕೊಳ್ಳೇಗಾಲ ಪಟ್ಟಣದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಜಾತಿ ಪ್ರಮಾಣ ಪತ್ರ ಹಾಗೂ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ,  ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 8ರ ಒಳಗೆ ಸಲ್ಲಿಸಬೇಕು. ಸಂಪೂರ್ಣ ವಿವರಗಳಿಗೆ ತಾಲೂಕು ಪರಿಶಿಷ್ಟ ವರ್ಗಗಳ  ಕಲ್ಯಾಣ ಅಧಿಕಾರಿ ಕಚೇರಿ ಅಥವಾ ದೂರವಾಣಿ ಸಂಖ್ಯೆ 08224-255060 ಸಂಪರ್ಕಿಸುವಂತೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಲ್. ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ಅ. 28ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಅ. 27 :- ಜಿಲ್ಲೆಯನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಅಕೋಬರ್ 28ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ. 28ರಂದು ಜಿಲ್ಲಾ ಪ. ಜಾತಿ, ಪ. ವರ್ಗಗಳ ಹಿತರಕ್ಷಣಾ ಸಮಿತಿ ಸಭೆ : ಮನವಿ ಸಮಸ್ಯೆ ಸಲ್ಲಿಕೆಗೆ ಅವಕಾಶ

ಚಾಮರಾಜನಗರ, ಅ. 27 – ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ (ಕ್ಷೇಮಾಭಿವೃದ್ಧಿ) ಸಮಿತಿ ಸಭೆಯು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.
ಹಿತರಕ್ಷಣಾ ಸಮಿತಿ ಸಭೆಗೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ತಾಲ್ಲೂಕಿನ ರಾಮಕೃಷ್ಣಯ್ಯ (ಮೊಬೈಲ್ ಸಂಖ್ಯೆ: 9986938573) ಹಾಗೂ ಚಾಮರಾಜನಗರ ತಾಲ್ಲೂಕು ನಾಗವಳ್ಳಿ ಗ್ರಾಮದ ಎಂ.ಚಿಕ್ಕಮಹದೇವ (ಮೊಬೈಲ್ ಸಂಖ್ಯೆ: 9902039341) ಅವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿರುತ್ತದೆ. ನಾಗರೀಕರು, ಸಂಘ ಸಂಸ್ಥೆ ಪದಾಧಿಕಾರಿಗಳು, ಮುಖಂಡರು ವೈಯಕ್ತಿಕ ವಿಷಯ ಹೊರತುಪಡಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆ, ತೊಂದರೆಗಳು ಇದ್ದಲ್ಲಿ ಸಮಿತಿಯ ಸದಸ್ಯರ ಮುಖಾಂತರ ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು (ಕೊಠಡಿ ಸಂಖ್ಯೆ 120) ಅಥವಾ ಆಯಾಯ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿ ಮೂಲಕ ಮನವಿ ಸಲ್ಲಿಸಬಹುದಾಗಿದೆ ಎಂದು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯ ಸದಸ್ಯ ಕಾರ್ಯದರ್ಶಿ ಹಾಗೂ ಉಪನಿರ್ದೇಶಕರಾದ ಕೆ.ಹೆಚ್. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ನ. 10,11ರಂದು ನಗರದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ : ವಿವಿಧ ಸ್ಪರ್ಧೆಗಳ ಆಯೋಜನೆ

ಚಾಮರಾಜನಗರ, ಅ. 27 :– ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 10 ಹಾಗೂ 11ರಂದು ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ನೊಂದಾಯಿತ ಯುವಕ ಯುವತಿ ಸಂಘದ ಸ್ಪರ್ಧಾಳುಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಯುವಕ ಯುವತಿಯರು ಯುವಜನೋತ್ಸವಕ್ಕೆ ಭಾಗವಹಿಸಬಹುದಾಗಿದೆ.
ಜಾನಪದ ನೃತ್ಯ (20 ಮಂದಿಗೆ ಸೀಮಿತ), ಜಾನಪದ ಗೀತೆ (10 ಮಂದಿಗೆ ಸೀಮಿತ), ಏಕಾಂಕ ನಾಟಕ (ಹಿಂದಿ ಅಥವಾ ಇಂಗ್ಲೀಷ್) (12 ಮಂದಿಗೆ ಸೀಮಿತ), ಆಶು ಭಾಷಣ (ಹಿಂದಿ ಅಥವಾ ಇಂಗ್ಲೀಷ್), ಗಿಟಾರ್, ಹಾರ್ಮೋನಿಯಂ, ಶಾಸ್ತ್ರೀಯ ವಾದ್ಯಗಳು - ಸಿತಾರ್, ತಬಲ, ಕೊಳಲು, ವೀಣೆ, ಮೃದಂಗ (5 ಮಂದಿಗೆ), ಶಾಸ್ತ್ರೀಯ ಗಾಯನ - ಹಿಂದೂಸ್ತಾನಿ ಹಾಗೂ ಕರ್ನಾಟಕ, ಶಾಸ್ತ್ರೀಯ ನೃತ್ಯ – ಮಣಿಪುರಿ, ಒರಿಸ್ಸಾ, ಭರತ ನಾಟ್ಯಂ, ಕಥಕ್, ಕುಚಿಪುಡಿ (5 ಮಂದಿಗೆ ಸೀಮಿತ) ಸ್ಪರ್ಧೆಗಳು ಇರಲಿವೆ.
ವಯೋಮಿತಿ 15 ರಿಂದ 29 ವರ್ಷದೊಳಗೆ ಇರಬೇಕು. ವಯಸ್ಸಿನ ದೃಢೀಕರಣಕ್ಕೆ ಆಧಾರ್ ಕಾರ್ಡ್, ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಇತರೆ ದಾಖಲಾತಿಗಳನ್ನು ಕಡ್ಡಾಯವಾಗಿ ತರಬೇಕು.
ಆಸಕ್ತರು ಪೂರ್ಣ ವಿಳಾಸ, ದೂರವಾಣಿ ಸಂಖ್ಯೆಯೊಂದಿಗೆ ಪಟ್ಟಿಯನ್ನು ಕಚೇರಿಗೆ ಕಳುಹಿಸಬೇಕು. ಭಾಗವಹಿಸುವ ಸ್ಪರ್ಧಾಳುಗÀಳಿಗೆ ಪ್ರಯಾಣ ಭತ್ಯೆ ನೀಡಲಾಗುವುದು.
ಜಿಲ್ಲಾ ಮಟ್ಟದಲ್ಲಿ ವಿಜೇತರಾದವರು ಉಡುಪಿ ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 9482718278 ಯನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರÀು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು