Tuesday, 24 October 2017

ನ.4ರಂದು ಕೊಳ್ಳೇಗಾಲಕ್ಕೆ ಮುಖ್ಯಮಂತ್ರಿಯವರಿಂದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ : ಅಗತ್ಯ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ....VSS (24-10-2017)

  ನ.4ರಂದು ಕೊಳ್ಳೇಗಾಲಕ್ಕೆ ಮುಖ್ಯಮಂತ್ರಿಯವರಿಂದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ : ಅಗತ್ಯ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ....VSS


ಚಾಮರಾಜನಗರ, ಅ. 24 – ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ನವೆಂಬರ್ 4ರಂದು ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಕೊಳ್ಳೇಗಾಲ ಪಟ್ಟಣಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಎಲ್ಲಾ ಅಗತ್ಯ ಸಿದ್ದತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಣ್ಣ ಕೈಗಾರಿಕೆ ಹಾಗೂ ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ. ಮೋಹನ್‍ಕುಮಾರಿ (ಡಾ. ಗೀತಾ ಮಹದೇವ ಪ್ರಸಾದ್) ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಳ್ಳೇಗಾಲ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿಯವರ ಭೇಟಿಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
      ಮುಖ್ಯಮಂತ್ರಿಯವರು ಕೊಳ್ಳೇಗಾಲ ಪಟ್ಟಣಕ್ಕೆ ಆಗಮಿಸಿ ವಿವಿಧ ಅಭಿವೃದ್ದಿ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದಕ್ಕೆ ಪೂರಕವಾಗಿ ಆಗಬೇಕಿರುವ ಎಲ್ಲಾ ಕಾರ್ಯಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಬೇಕು. ಯಾವುದೇ ಲೋಪಕ್ಕೆ ಅವಕಾಶವಾಗದಂತೆ ಸಕಲ ಸಿದ್ದತೆ ಕೆಲಸವನ್ನು ಸಕಾಲಕ್ಕೆ ಅಧಿಕಾರಿಗಳು ಪೂರ್ಣಗೊಳಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
      ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಕೊಳ್ಳೇಗಾಲ ಪಟ್ಟಣದ ಎಂಜಿಎಸ್‍ವಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ಜರುಗಲಿದ್ದು, ಕಾಲೇಜಿನ ಮುಂಭಾಗ ರಾಷ್ಟ್ರೀಯ ಹೆದ್ದಾರಿ 209 ನಾಲ್ಕು ಪಥದ ರಸ್ತೆಯನ್ನು ಬಿರುಸಿನಿಂದ ಪೂರ್ಣಗೊಳಿಸಿ ಕಾರ್ಯಕ್ರಮಕ್ಕೆ ಅನುಕೂಲ ಕಲ್ಪಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕು. ಅಭಿವೃದ್ಧಿ ಹಿನ್ನಡೆಗೆ ಕಾರಣರಾಗುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ  ಸಚಿವರು ಎಲ್ಲಾ ಇಲಾಖೆಯ ಅಧಿಕಾರಿಗಳು ಕಾಮಗಾರಿಯನ್ನು ಚುರುಕುಗೊಳಿಸಿ, ಸರ್ಕಾರದ ಅನುದಾನ ಸಮರ್ಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳಬೇಕೆಂದರು.
ಸರ್ಕಾರ ವಿವಿಧ ಯೋಜನೆಯಡಿಯಲ್ಲಿ ಫಲಾನುಭವಿಗಳನ್ನು ಗುರುತಿಸಿ ಸವಲತ್ತುಗಳನ್ನು ನೀಡುವಂತೆ ಸೂಚಿಸಲಾಗಿದ್ದು, ಎಲ್ಲಾ ವರ್ಗದ ಬಡವರಿಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ದೊರೆಯುವಂತೆ ಮಾಡಬೇಕು, ಜಿಲ್ಲೆಯನ್ನು ಮಾದರಿ ಯನ್ನಾಗಿ ಮಾಡುವ ಹೊಣೆ ಎಲ್ಲಾ ಅಧಿಕಾರಿಗಳ ಮೇಲೆ ಇದೆ ಎಂದು ಉಸ್ತುವಾರಿ ಸಚಿವರು ಹೇಳಿದರು.

      ಇತ್ತೀಚಿಗೆ ಸುರಿದ ಧಾರಾಕಾರ ಮಳೆಗೆ ತಾಲೂಕಿನಲ್ಲಿ ಸಿಡಿಲು ಬಡಿದು ಜಾನುವಾರು, ಮನೆ ಮತ್ತು ಆಸ್ತಿಗಳನ್ನು ಕಳೆದುಕೊಂಡವರಿಗೆ ಪ್ರಕೃತಿ ವಿಕೋಪದ ಅಡಿಯಲ್ಲಿ ತುರ್ತಾಗಿ ಪರಿಹಾರ ನೀಡಬೇಕೆಂದು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಉಸ್ತುವಾರಿ ಸಚಿವರು ಸೂಚಿಸಿದರು.

      ಶಾಸಕರಾದ ಎಸ್.ಜಯಣ್ಣ ಹಾಗೂ ಆರ್.ನರೇಂದ್ರರವರು ಮಾತನಾಡಿ ಮುಖ್ಯಮಂತ್ರಿಗಳು ಆಗಮಿಸುವ ಹಿನ್ನಲೆಯಲ್ಲಿ ಅಧಿಕಾರಿಗಳು ಯಾವುದೇ ವಿಳಂಬ ಧೋರಣೇ ಮಾಡದೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ, ಕ್ಷೇತ್ರಗಳ ಅಭಿವೃದ್ಧಿಗೆ ಸಹಕಾರಿಯಾಗಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿ ಬಿ.ರಾಮು ಮಾತನಾಡಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾಮಗಾರಿ ವಿವರಗÀಳನ್ನು ಸಂಪೂರ್ಣ ಸಿದ್ಧಪಡಿಸಿಕೊಂಡು ಅಕ್ಟೋಬರ್ 30ರ ಒಳಗಾಗಿ ಎಲ್ಲಾ ಕಾಮಗಾರಿಗಳ ಆದೇಶ ಪತ್ರವನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಸೂಚಿಸಿದರು.
ಜಿಪಂ ಸಿಇಒ ಡಾ. ಹರೀಶ್‍ಕುಮಾರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ತಾಪಂ ಅಧ್ಯಕ್ಷ ರಾಜು, ನಗರಸಭೆ ಅಧ್ಯಕ್ಷ ಶಾಂತರಾಜು, ಉಪಾಧ್ಯಕ್ಷ ನಂಜುಂಡ, ಉಪ ವಿಭಾಗಾಧಿಕಾರಿ ಪೌಜಿಯ ತರನಮ್, ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ರೂಪ ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಅ. 25ರಂದು ವಿಶ್ವ ಶೌಚಾಲಯ ದಿನಾಚರಣೆ

ಚಾಮರಾಜನಗರ, ಅ. 24 – ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ನಗರದ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು ಹಾಗೂ ಕೆಂಪನಪುರ ಶ್ರೀ ಮಹರ್ಷಿ ವಾಲ್ಮೀಕಿ ಯುವಕರ ಸಂಘದ ಆಶ್ರಯದಲ್ಲಿ ಅಕ್ಟೋಬರ್ 25ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಸ್. ಸಿದ್ದರಾಮಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲರಾದ ಎನ್. ಮಹದೇವಸ್ವಾಮಿ ಅಧ್ಯಕ್ಷತೆ ವಹಿಸುವರು. ಬಾಲಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕರಾದ ಎಂ. ಮಹೇಶ್, ಶ್ರೀ ಮಹರ್ಷಿ ವಾಲ್ಮೀಕಿ ಯುವಕರ ಸಂಘದ ಅಧ್ಯಕ್ಷರಾದ ಕೆ.ಎನ್. ನಾಗೇಶ್ ನಾಯಕ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಎಲ್. ಸುರೇಶ್ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
 ಆರ್‍ಟಿಇ : ಮಾಹಿತಿ ವಿವರ ಪ್ರದರ್ಶನ ಕಡ್ಡಾಯ
ಚಾಮರಾಜನಗರ, ಅ. 24 - ಜಿಲ್ಲೆಯ ಎಲ್ಲಾ ಖಾಸಗಿ ಅನುದಾನರಹಿತ ಶಾಲೆಗಳು ಇಲಾಖಾ ಹಾಗೂ ಆರ್‍ಟಿಇ ನಿಯಮಗಳನ್ವಯ ಶುಲ್ಕ ನಿಗದಿಪಡಿಸಿ ಕಾನೂನಿನ ಮಾಹಿತಿಗಳನ್ನು ಒಳಗೊಂಡ ವಿವರವನ್ನು ಶಾಲಾ ಆವರಣದ ಸೂಚನಾ ಫಲಕದಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಜಿಲ್ಲೆಯ ಖಾಸಗಿ ಅನುದಾನ ರಹಿತ ಶಾಲೆಗಳು ಹೆಚ್ಚುವರಿ ಡೊನೇಷನ್ ಮತ್ತು ಶುಲ್ಕವನ್ನು ವಸೂಲಿ ಮಾಡುತ್ತಿದ್ದಲ್ಲಿ ಅಂತಹ ಶಾಲೆಗಳ ವಿರುದ್ಧ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರಕ್ಕೆ ಅಗತ್ಯ ಹಾಗೂ ಸೂಕ್ತ ದಾಖಲೆಗಳೊಂದಿಗೆ ಸಂಬಂಧಪಟ್ಟ ಪೋಷಕರು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ದೂರು ಸಲ್ಲಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಅ. 28ರಂದು ನೇರ ಫೋನ್ ಇನ್ ಕಾರ್ಯಕ್ರಮ

ಚಾಮರಾಜನಗರ, ಅ. 24 - ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಅಕೋಬರ್ 28ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ. 2 ಹಾಗೂ 3ರಂದು ವಿಭಾಗ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ಚಾಮರಾಜನಗರ, ಅ. 24:- ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2017-18ನೇ ಸಾಲಿನ 17 ವರ್ಷ ವಯೋಮಿತಿಯ ಶಾಲಾ ಬಾಲಕ ಬಾಲಕಿಯರ ವಿಭಾಗ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಅಕ್ಟೋಬರ್ 2 ಹಾಗೂ 3ರಂದು ನಗರದ ಜೆ ಎಸ್ ಎಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಉಡುಪಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳ ಕ್ರೀಡಾಪಟುಗಳು ಭಾಗÀವಹಿಸಲಿದ್ದಾರೆ.
ನವೆಂಬರ್ 2ರಂದು ಮಧ್ಯಾಹ್ನ 3 ಗಂಟೆಗೆ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳುವಂತೆ ಎಲ್ಲ ಜಿಲ್ಲೆಯ ಮೇಲ್ವಿಚಾರಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಪ್ರಾಥಮಿಕ ಶಿಕ್ಷಕರ ಜಿಲ್ಲಾಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ : ದಿನಾಂಕ ಬದಲು

ಚಾಮರಾಜನಗರ, ಅ. 24- ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ವೃಂದದ ಹುದ್ದೆಗಳ ನೇರ ನೇಮಕಾತಿಯಿಂದ ಆಯ್ಕೆ ಪ್ರಕ್ರಿಯೆಗೆ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕವನ್ನು ಮರುನಿಗದಿಗೊಳಿಸಿದೆ.
ಪರೀಕ್ಷೆ–1 ನವೆಂಬರ್ 11ರಂದು ಹಾಗೂ 12ರಂದು, ಪರೀಕ್ಷೆ–2 ನವೆಂಬರ್ 18 ಹಾಗೂ 19ರÀಂದು, ಪರೀಕ್ಷೆ–3 ನವೆಂಬರ್ 25 ಹಾಗೂ 26ರಂದು ಮತ್ತು ಪರೀಕ್ಷೆ–4 ಡಿಸೆಂಬರ್ 9 ಹಾಗೂ 10ರಂದು ನಡೆಯಲಿದೆ.
ಹೆಚ್ಚಿನ ವಿವರಗಳನ್ನು ಇಲಾಖಾ ವೆಬ್ ಸೈಟ್ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಒದಗಿಸಲಾಗಿರುವ ಸಿಎಸಿ ಲಿಂಕ್ ಮೂಲಕ ಪಡೆಯಬಹುದು. ಅಲ್ಲದೆ ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರಿಗಳಾದ ಸಂಬಂಧಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಇವರ ಕಚೇರಿ (ದೂ.ಸಂ. 08226-222406) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಅ. 28ರಂದು ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆ : ಮನವಿ ಸಮಸ್ಯೆ ಸಲ್ಲಿಕೆಗೆ ಅವಕಾಶ

ಚಾಮರಾಜನಗರ, ಅ. 24– ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ (ಕ್ಷೇಮಾಭಿವೃದ್ಧಿ) ಸಮಿತಿ ಸಭೆಯು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.
ಹಿತರಕ್ಷಣಾ ಸಮಿತಿ ಸಭೆಗೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ತಾಲ್ಲೂಕಿನ ರಾಮಕೃಷ್ಣಯ್ಯ (ಮೊಬೈಲ್ ಸಂಖ್ಯೆ: 9986938573) ಹಾಗೂ ಚಾಮರಾಜನಗರ ತಾಲ್ಲೂಕು ನಾಗವಳ್ಳಿ ಗ್ರಾಮದ ಎಂ.ಚಿಕ್ಕಮಹದೇವ (ಮೊಬೈಲ್ ಸಂಖ್ಯೆ: 9902039341) ಅವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿರುತ್ತದೆ. ನಾಗರೀಕರು ಸಂಘ ಸಂಸ್ಥೆ ಪದಾಧಿಕಾರಿಗಳು, ಮುಖಂಡರು ವೈಯಕ್ತಿಕ ವಿಷಯ ಹೊರತುಪಡಿಸಿ ಪರಿಶಿಷ್ಟಜಾತಿ, ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆ, ತೊಂದರೆಗಳು ಇದ್ದಲ್ಲಿ ಸಮಿತಿಯ ಸದಸ್ಯರ ಮುಖಾಂತರ ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು (ಕೊಠಡಿ ಸಂಖ್ಯೆ 120) ಅಥವಾ ಆಯಾಯ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿ ಮೂಲಕ ಮನವಿ ಸಲ್ಲಿಸಬಹುದಾಗಿದೆ ಎಂದು ಪರಿಶಿಷ್ಟಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯ ಸದಸ್ಯ ಕಾರ್ಯದರ್ಶಿ ಹಾಗೂ ಉಪ ನಿರ್ದೇಶಕರಾದ ಕೆ.ಹೆಚ್. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ಮಾದ್ಯಮದವರೊಂದಿಗೆ ವಿಷನ್ 2025 ರ ಚರ್ಚೆ ನಡೆಸಿದ ಜಿಲ್ಲಾಡಳಿತ


No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು