Tuesday, 10 October 2017

ದೋಷರಹಿತ ಮತದಾರರ ಪಟ್ಟಿ ಸಿದ್ಧತೆಗೆ ಸಹಕರಿಸಿ : ಜಿಲ್ಲಾಧಿಕಾರಿ ಬಿ. ರಾಮು (10-10-2017)

     

ದೋಷರಹಿತ ಮತದಾರರ ಪಟ್ಟಿ ಸಿದ್ಧತೆಗೆ ಸಹಕರಿಸಿ : ಜಿಲ್ಲಾಧಿಕಾರಿ ಬಿ. ರಾಮು 



ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕರಡು ಮತದಾರರ ಪಟ್ಟಿ ಪ್ರಚುರಪಡಿಸುವ ಸಂಬಂಧ ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ಮಾಹಿತಿ ನೀಡಿದ ಜಿಲ್ಲಾಧಿಕಾರಿ ರಾಮು ಅವರು ಶೇ. 100ರಷ್ಟು ದೋಷರಹಿತ ಮತದಾರರ ಪಟ್ಟಿ ಸಿದ್ಧತೆಗೆ ರಾಜಕೀಯ ಪಕ್ಷಗಳು ಸಹಕಾರ ನೀಡಬೇಕಿದೆ. ಪಾರದರ್ಶಕವಾಗಿ ಮತದಾರರ ಪಟ್ಟಿ ಸಿದ್ಧಪಡಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕಿದೆ ಎಂದರು.
ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 25ರಂದು ಪ್ರಕಟಿಸಲಾಗುತ್ತದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಆಯಾ ತಾಲೂಕಿನ ಮತಗಟ್ಟೆಗಳಲ್ಲಿ ಬಿಎಲ್‍ಓ ಮೂಲಕ ಹಾಗೂ ತಾಲೂಕು ಕಚೇರಿಯಲ್ಲಿ ಅಕ್ಟೋಬರ್ 25 ರಿಂದ ನವೆಂಬರ್ 24ರವರೆಗೆ ಸ್ವೀಕರಿಸಲಾಗುತ್ತದೆ. ಭಾವಚಿತ್ರವಿರುವ ಮತದಾರರ ಪಟ್ಟಿಯಲ್ಲಿರುವ ಮತದಾರರ ಹೆಸರನ್ನು ಪರಿಶೀಲಿಸಲು, ಮತದಾರರ ಹೆಸರುಗಳನ್ನು ಗ್ರಾಮಸಭೆ, ಸ್ಥಳೀಯ ಸಂಸ್ಥೆ, ಇತರೆ ಗ್ರಾಮಸಭೆ, ಸಂಘಸಂಸ್ಥೆಗಳಲ್ಲಿ ನವೆಂಬರ್ 3 ಹಾಗೂ 15ರಂದು ಓದಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಮತಗಟ್ಟೆ ಮಟ್ಟದ ಏಜೆಂಟರಿಂದ ಹಕ್ಕು ಆಕ್ಷೇಪಣೆಗಳನ್ನು ಸ್ವೀಕರಿಸಲು ನವೆಂಬರ್ 5 ಹಾಗೂ 19ರಂದು ವಿಶೇಷ ಆಂದೋಲನ ನಡೆಸಲಾಗುತ್ತದೆ. ಡಿಸೆಂಬರ್ 20ರಂದು ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗುವುದು. 2018ರ ಜನವರಿ 11ರಂದು ಮತದಾರರ ಪಟ್ಟಿಗೆ ಹೆಸರುಗಳು, ಭಾವಚಿತ್ರಗಳ ಸೇರ್ಪಡೆ ಮತ್ತು ಪೂರಕ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಜನವರಿ 12ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರು ಸೇರ್ಪಡೆಯಾಗಿದ್ದಲ್ಲಿ ಅದನ್ನು ಕೈಬಿಡಲು ಮತ್ತು ಮೃತದಾರರಾಗಿರುವ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ಕ್ರಮ ವಹಿಸಲಾಗುತ್ತದೆ. ವಿಶೇಷ ಶಿಬಿರ ದಿನಗಳಂದು ಬಿಎಲ್‍ಓಗಳು ಕರಡು ಮತದಾರರ ಪಟ್ಟಿಯೊಂದಿಗೆ ಗ್ರಾಮಗಳಿಗೆ ತೆರಳಿ ಮರದಾರರ ಪಟ್ಟಿಯಲ್ಲಿ ಕಂಡುಬರುವ ತಿದ್ದುಪಡಿ, ಹೆಸರು ಕೈಬಿಡುವುದು ಇನ್ನಿತರ ಅಂಶಗಳನ್ನು ಗುರುತಿಸಿ ಅಂತಿಮ ಮತದಾರರ ಪಟ್ಟಿಯ ಸಿದ್ಧತೆ ಬಗ್ಗೆ ಕ್ರಮ ತೆಗೆದುಕೊಳ್ಳಲಿದ್ದಾರೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸುವ ವ್ಯಕ್ತಿಗಳು ಭಾರತೀಯ ನಾಗರಿಕರೇ ಎಂಬ ಬಗ್ಗೆ ಅನುಮಾನವಿದ್ದರೆ ರಾಜಕೀಯ ಪಕ್ಷಗಳು ಮಾಹಿತಿ ನೀಡಬಹುದೆಂದು ರಾಮು ತಿಳಿಸಿದರು.
ಅರ್ಹರೆಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬೇಕು. ಲಿಂಗತ್ವ ಅಲ್ಪಸಂಖ್ಯಾತರು, ತೃತೀಯ ಲಿಂಗಿಗಳು ಹೆಸರುಗಳು ಸಹ ಮತದಾರರ ಪಟ್ಟಿಗೆ ಸೇರಿಸಬೇಕು. ಲಿಂಗ ತಾರತಮ್ಯರಹಿತ ಮತದಾರರ ಪಟ್ಟಿ ಸಿದ್ಧವಾಗಬೇಕು. ಹೀಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಕೆಲಸ ನಿರ್ವಹಣೆಗೆ ರಾಜಕೀಯ ಪಕ್ಷಗಳು ಅಗತ್ಯವಿರುವ ಸಹಕಾರ ನೀಡಬೇಕು, ರಾಜಕೀಯ ಪಕ್ಷಗಳು ಮತಗಟ್ಟೆ ಮಟ್ಟದ ಏಜೆಂಟರಿಗೆ ಅವರ ವತಿಯಿಂದಲೂ ಗುರುತಿನ ಚೀಟಿ ನೀಡಬೇಕು ಎಂದು ಜಿಲ್ಲಾಧಿಕಾರಿ ಬಿ. ರಾಮು ಇದೇವೇಳೆ ಮನವಿ ಮಾಡಿದರು.
ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಮರಿಸ್ವಾಮಿ, ಬಿ.ಎಂ. ಮುನಿರಾಜು, ಆರ್. ಮಹದೇವು, ಬ್ಯಾಡಮೂಡ್ಲು ಬಸವಣ್ಣ, ಮಹೇಶ್ ಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಚುನಾವಣಾ ಪ್ರಭಾರ ತಹಸೀಲ್ದಾರ್ ಎಸ್. ಬಸವಣ್ಣ, ಇತರರು ಸಭೆಯಲ್ಲಿ ಹಾಜರಿದ್ದರು.

ವಿವಿಧ ಯೋಜನೆಗಳಡಿ ಸಾಲಸೌಲಭ್ಯಕ್ಕೆ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಾಮರಾಜನಗರ, ಅ. 10 - ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2017-18ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿಯಲ್ಲಿ ಸಾಲಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ ಅಂದರೆ ಮುಸಲ್ಮಾನರು, ಕ್ರೈಸರು, ಜೈನರು, ಬೌದ್ಧ ಧರ್ಮೀಯರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಂದ ಅರ್ಜಿ ಆಹ್ವಾನಿಸಿದೆ.
ಎನ್‍ಎಂಡಿಎಫ್‍ಸಿ ವಿದ್ಯಾಭ್ಯಾಸ ಸಾಲ ಯೋಜನೆ (ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ), ರೇಷ್ಮೆ ಉದ್ಯಮ, ಅಲ್ಪಸಂಖ್ಯಾತರ ರೈತರ ಕಲ್ಯಾಣ ಯೋಜನೆ (ಕೃಷಿ ಯಂತ್ರೋಪಕರಣ ಕೊಳ್ಳಲು), ಆಟೋಮೊಬೈಲ್ ಸರ್ವೀಸ್, ಬಿದರಿ ಮತ್ತು ರೇಷ್ಮೆ ಚಟುವಟಿಕೆಗಳಿಗೆ ತರಬೇತಿ ಮತ್ತು ಸಾಲ ಯೋಜನೆ, ಟ್ಯಾಕ್ಸಿ, ಗೂಡ್ಸ್ ವಾಹನ ಖರೀದಿಗಾಗಿ ಸಹಾಯಧನ, ಕೃಷಿ ಭೂಮಿ ಖರೀದಿ ಯೋಜನೆ, ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಹಿಂತಿರುಗಿರುವ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಮನೆ ಮಳಿಗೆ ಯೋಜನೆ, ಗೃಹ ನಿರ್ಮಾಣ ಮಾರ್ಜಿನ್ ಹಣ ಸಾಲ ಯೋಜನೆ, ಗೃಹ ನಿವೇಶನ ಖರೀದಿ ಮತ್ತು ಮನೆ ನಿರ್ಮಾಣಕ್ಕೆ ಪಡೆದ ಸಾಲದ ಮೇಲಿನ ಬಡ್ಡಿ ಸಹಾಯಧನ ಯೋಜನೆಯಡಿ (ಕ್ರಿಶ್ಚಿಯನ್ ಸಮುದಾಯದವರಿಗೆ ಮಾತ್ರ) ಸಾಲಸೌಲಭ್ಯ ಪಡೆಯಬಹುದು.
 ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ ರೂ. 81 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ. 1 ಲಕ್ಷದ 3 ಸಾವಿರ ಮೀರಿರಬÁರದು (ಅರಿವು ಯೋಜನೆ ಹೊರತುಪಡಿಸಿ). ಅರ್ಜಿದಾರರ ವಯಸ್ಸು ಕನಿಷ್ಟ 18 ವರ್ಷಗಳು ಮತ್ತು ಗರಿಷ್ಟ 45 ವರ್ಷಗಳು. ಮಹಿಳೆಯರಿಗೆ, ಅಂಗವಿಕಲರಿಗೆ ಮೀಸಲಾತಿ ಇರುತ್ತದೆ. ಅರ್ಜಿದಾರರು ತಮ್ಮ ವಿಳಾಸದ ದೃಢೀಕರಣಕ್ಕಾಗಿ ಆಧಾರ್ (ಯುಐಡಿ) ಪ್ರತಿಯನ್ನು ಸಲ್ಲಿಸಬೇಕು. ಅದನ್ನು ಅವರ ಬ್ಯಾಂಕಿನ ಉಳಿತಾಯ ಖಾತೆಗೆ ಹೊಂದಾಣಿಕೆ ಮಾಡಬೇಕು. ಈ ಹಿಂದೆ ನಿಗಮದ ಸೌಲಭ್ಯವನ್ನು ಪಡೆದವರು ಮತ್ತೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ.
ಅರ್ಜಿಯನ್ನು ನಿಗಮದ ವೆಬ್ ಸೈಟ್ ತಿತಿತಿ.ಞmಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 25ರ ಒಳಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಠಡಿ ಸಂಖ್ಯೆ 305, 3ನೇ ಮಹಡಿ, ಜಿಲ್ಲಾಡಳಿತ ಭವನ,  ಬಿ. ರಾಚಯ್ಯ ಜೋಡಿ ರಸ್ತೆ, ಚಾಮರಾಜನಗರ (ದೂರವಾಣಿ ಸಂಖ್ಯೆ 08226-222332) ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಅ. 25ರಂದು ತಾಲೂಕಿನ ದೊಡ್ಡಮೋಳೆ ಗ್ರಾಮದಲ್ಲಿ ಅಂಚೆ ಸಂತೆ

ಚಾಮರಾಜನಗರ, ಅ. 10 :– ಅಂಚೆ ಇಲಾಖೆಯು ಚಾಮರಾಜನಗರ ತಾಲೂಕಿನ ಹರದನಹಳ್ಳಿ ಹೋಬಳಿಯ ದೊಡ್ಡಮೋಳೆ ಗ್ರಾಮದಲ್ಲಿ ಅಕ್ಟೋಬರ್ 25ರಂದು ಅಂಚೆ ಸಂತೆ ಹಮ್ಮಿಕೊಂಡಿದೆ.
ಈ ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವವಿಮೆ ಇನ್ನಿತರ ಅಂಚೆ ಯೋಜನೆಗಳನ್ನು ಸ್ವೀಕರಿಸಲಾಗುತ್ತದೆ.
ದೊಡ್ಡಮೋಳೆ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾರಾದ ಜಿ.ಸಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ಕೋರಿದ್ದಾರೆ.


ಕೃಷಿ ಭಾಗ್ಯ ಯೋಜನೆಯÀಡಿ ತೋಟಗಾರಿಕೆ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ


ಚಾಮರಾಜನಗರ, ಅ. 10 - 2017-18ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ಪಾಲಿಮನೆ, ನೆರಳು ಮನೆ, ಕೃಷಿ ಹೊಂಡ ಮತ್ತು ಡೀಸಲ್, ಸೋಲರ್ ಮೋಟಾರ್ ಘಟಕಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ರೈತರು ಸಂಬಂಧಪಟ್ಟ ತಾಲೂಕು ತೋಟಗಾರಿಕೆ ಕಚೇರಿಯಿಂದ ಅರ್ಜಿ ಪಡೆದು ಎಲ್ಲಾ ದಾಖಲಾತಿಗಳೊಡನೆ ಅಕ್ಟೋಬರ್ 24ರ ಒಳಗೆ ಸಲ್ಲಿಸಬೇಕು.
ಇಲಾಖಾ ಮಾರ್ಗಸೂಚಿಯನ್ವಯ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಫಲಾನುಭವಿಗಳ ಘಟಕಗಳನ್ನು ಸರ್ಕಾರದಿಂದ ಅನುಮೋದಿತ ಕಂಪನಿಗಳ ಮೂಲಕ ಅನುಷ್ಠಾನಗೊಳಿಸುವುದು,
ನಿಗದಿತ ಗುರಿಗಿಂತ ಹೆಚ್ಚಿನ ಅರ್ಜಿಗಳು ಬಂದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲೂಕು ತೋಟಗಾರಿಕೆ ಕಚೇರಿ ಮತ್ತು ತೋಟಗಾರಿಕೆ ಉಪನಿರ್ದೇಶಕರು, ತಾಂತ್ರಿಕ ಅಧಿಕಾರಿ ಅವರಿಂದ ಪಡೆಯುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅಂಚೆ ಇಲಾಖೆಯಿಂದ ವಿಶೇಷ ಕಾರ್ಯಕ್ರಮ


ಚಾಮರಾಜನಗರ, ಅ. 10 - ಅಂಚೆ ಇಲಾಖೆಯು ಪೋಸ್ಟ್ ಆಫೀಸ್ ಸೇವಿಂಗ್ಸ್ ಬ್ಯಾಂಕ್ ಖಾತೆಗಳಿಗೆ ಆಧಾರ್, ಮೊಬೈಲ್, ಪ್ಯಾನ್ ಸಂಖ್ಯೆಗಳನ್ನು ಜೋಡಿಸಲು ಒಪ್ಪಿಗೆ ಪತ್ರ ಪಡೆಯುವ ಪ್ರಕ್ರಿಯೆಯಲ್ಲಿ ತೊಡಗಿದೆ. ಆಧಾರ್, ಮೊಬೈಲ್, ಪ್ಯಾನ್ ಸಂಖ್ಯೆಗಳನ್ನು ಪೋಸ್ಟ್ ಆಫೀಸ್ ಸೇವಿಂಗ್ಸ್ ಬ್ಯಾಂಕ್ ಖಾತೆಗಳಿಗೆ ಜೋಡಿಸುವ ಕಾರ್ಯವನ್ನು ಪೂರ್ಣಗೊಳಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.
ಪೋಸ್ಟ್ ಆಫೀಸ್ ಸೇವಿಂಗ್ಸ್ ಬ್ಯಾಂಕಿನ ಎಲ್ಲಾ ಗ್ರಾಹಕರು ತಮ್ಮ ಖಾತೆಗಳನ್ನು ತೆರೆದಿರುವ ಪೋಸ್ಟ್ ಆಫೀಸುಗಳಿಗೆ ಆಧಾರ್ ಪ್ರತಿಯೊಂದಿಗೆ ಭೇಟಿ ನೀಡಿ ಆಧಾರ್, ಮೊಬೈಲ್, ಪ್ಯಾನ್ ಸಂಖ್ಯೆಗಳ ಮಾಹಿತಿಯನ್ನು ನಿಗದಿತ ಒಪ್ಪಿಗೆ ಪತ್ರದಲ್ಲಿ ನೀಡಲು ಕೋರಲಾಗಿದೆ. ಇದರ ಜತೆ ಆಧಾರ್ ಸಂಪರ್ಕಿತ ಖಾತೆಯೊಂದಿಗೆ ಅಥವಾ ಗ್ರಾಹಕ ಮಾಹಿತಿ ಫಾರಂನಲ್ಲಿ (ಸಿಐಎಫ್) ತಮ್ಮ ಹೆಸರಿನಲ್ಲಿರುವ ಅಂಚೆ ಇಲಾಖೆಯ ಇತರೆ ಉಳಿತಾಯ ಖಾತೆಗಳನ್ನು ಸಹ ಜೋಡಿಸಲು ಅಂಚೆ ಇಲಾಖೆಯ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಯುವ ವೈಯಕ್ತಿಕ ಹಾಗೂ ಸಂಘ ಪ್ರಶಸ್ತಿಗೆ ಅರ್ಜಿ ಆಹ್ವಾನ


ಚಾಮರಾಜನಗರ, ಅ. 10- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ 2016-17ನೇ ಸಾಲಿನಲ್ಲಿ ಉತ್ತಮ ಕಾರ್ಯ ನಿರ್ವಹಿಸಿರುವ ಯುವಕ ಯುವತಿ ಸಂಘಕ್ಕೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.
ಯುವಕ ಯುವತಿ ಸಂಘಕ್ಕೆ ತಲಾ 10 ಸಾವಿರ ರೂ.ಗಳ ನಗದು ಪ್ರಶಸ್ತಿಯೊಂದಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಜಿಲ್ಲೆಯಲ್ಲಿ ಸಂಘದ ಸದಸ್ಯರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಯುವಕ ಯುವತಿ ಸಂಘದ ಐವರು ಸದಸ್ಯರಿಗೆ ತಲಾ 5 ಸಾವಿರ ರೂ. ವೈಯಕ್ತಿಕ ನಗದು ಪ್ರಶಸ್ತಿ ನೀಡಿ ಗೌರವಿಸಲಾಗುವುದು.
2016-17ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಸಂಘಗಳು ಹಾಗೂ ಸಂಘದ ಸದಸ್ಯರು ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 21ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ 08226-224932 ಅಥವಾ ಮೊಬೈಲ್ 9482718278ನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ. ಚಲುವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ. 11ರಂದು ವಿವಿದೆಡೆ ವಿದ್ಯುತ್ ವ್ಯತ್ಯಯ


ಚಾಮರಾಜನಗರ, ಅ. 10- ತಾಲೂಕಿನ ಹೊನ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಕ್ಟೋಬರ್ 11ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅರÀಕಲವಾಡಿ, ಯರಗನಹಳ್ಳಿ, ಸುವರ್ಣನಗರ, ಫ್ಯಾಕ್ಟರಿ, ಡೊಳ್ಳಿಪುರ, ಪುಣಜನೂರು, ಬಿಸಲವಾಡಿ, ಅಮಚವಾಡಿ, ಎನ್ ಜೆ ವೈ ಮಾದಲವಾಡಿ, ಎನ್ ಜೆ ವೈ ಚನ್ನಪ್ಪನಪುರ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರಾಭಿವೃದ್ಧಿ ಸ್ಥಳೀಯ ಸಂಸ್ಥೆ ಅಭಿವೃದ್ಧಿ ಕುರಿತು ಜನಪ್ರತಿನಿಧಿಗಳಿಂದ ಪೂರ್ವಭಾವಿ ಸಭೆಯಲ್ಲಿ ಅಭಿಪ್ರಾಯ ಮಂಡನೆ


ಚಾಮರಾಜನಗರ, ಅ. 10 - ಮುಂದಿನ 7 ವರ್ಷಗಳಲ್ಲಿ ಜಿಲ್ಲೆಯ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಸಮಗ್ರ ಪ್ರಗತಿ ಸಂಬಂಧ ವಿಷನ್ 2025ರ ಡಾಕ್ಯುಮೆಂಟರಿ ತಯಾರಿ ಕುರಿತು ನಗರದಲ್ಲಿ ಇಂದು ಜನಪ್ರತಿನಿಧಿಗಳು ಹಾಗೂ ಸಂಘಸಂಸ್ಥೆಗಳ ಪ್ರತಿನಿಧಿಗಳ ಪೂರ್ವಭಾವಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಸಭೆಯಲ್ಲಿ ಶಾಸಕರಾದ ಸಿ. ಪಟ್ಟರಂಗಶೆಟ್ಟಿ, ಎಸ್. ಜಯಣ್ಣ ಸೇರಿದಂತೆ ಜಿಲ್ಲೆಯ ಎಲ್ಲ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಪ್ರತಿನಿಧಿಗಳು ಪಾಲ್ಗೊಂಡು ನಗರ ಹಾಗೂ ಸ್ಥಳೀಯ ಸಂಸ್ಥೆಗಳು ಮುಂದಿನ ಅವಧಿಯಲ್ಲಿ ಹೇಗಿರಬೇಕು ಎಂಬ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಸಮಗ್ರ ಕುಡಿಯುವ ನೀರಿನ ಯೋಜನೆ, ನಿರಂತರ ವಿದ್ಯುತ್, ನೈರ್ಮಲೀಕರಣ, ಘನತ್ಯಾಜ್ಯ ವಸ್ತುಗಳ ನಿರ್ವಹಣೆ, ಸಾರ್ವಜನಿಕ ಸಾರಿಗೆ ವ್ಯವಸ್ಥೆ, ವಸತಿರಹಿತರಿಗೆ ಮನೆ ನಿರ್ಮಾಣ, ಸುಸ್ಥಿರ ಪರಿಸರ, ಆರೋಗ್ಯ ಮತ್ತು ಶಿಕ್ಷಣ, ಹಿರಿಯರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಭದ್ರತೆ, ಈ ಗೌರ್ನೆನ್ಸ್ ಮತ್ತು ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇನ್ನಿತರ ವಿಚಾರಗಳಿಗೆ ಸಂಬಂಧಿಸಿದಂತೆ ಅಭಿಪ್ರಾಯ ಸಲಹೆಗಳು ಪೂರ್ವಭಾವಿ ಸಭೆಯಲ್ಲಿ ಕೇಳಿಬಂದವು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಜಿಲ್ಲಾ ಕೇಂದ್ರದಲ್ಲಿ ಕುಡಿಯುವ ನೀರು, ರಸ್ತೆ, ಒಳಚರಂಡಿ ಸಂಬಂಧ ಯೋಜನೆಗಳು ಇವೆ. ಈ ಯೋಜನೆಗಳು ಸಂಪೂರ್ಣವಾದರೆ ಅನುಕೂಲವಾಗುತ್ತದೆ. ಮುಂದಿನ 7 ವರ್ಷಗಳ ಅಭಿವೃದ್ಧಿ ಹಿತದೃಷ್ಠಿಯಿಂದ ಯೋಜನೆ ತಯಾರಿಕೆಗೆ ಜನಪ್ರತಿನಿಧಿಗಳೂ ಹಾಗೂ ಜನರ ಅಭಿಪ್ರಾಯ ಸಲಹೆ ಪಡೆದು ಕರಡು ಸಿದ್ಧಪಡಿಸುವ ಕಾರ್ಯಕ್ಕೆ ಎಲ್ಲರೂ ಸಹಕರಿಸಬೇಕಿದೆ ಎಂದರು.
ಜಿಲ್ಲಾ ಕೇಂದ್ರದಲ್ಲಿ ಎಲ್ಲ ಸೌಲಭ್ಯಗಳನ್ನು ಒಳಗೊಂಡ ಆಸ್ಪತ್ರೆ ಸೇರಿದಂತೆ ಇತರೆ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಮುಂದಾಗಬೇಕಿದೆ. ನಗರದ ಜನತೆಗೆ ಒದಗಿಸಬೇಕಿರುವ ಸೌಲಭ್ಯಗಳನ್ನು ಪಟ್ಟಿ ಮಾಡಿ ಏನೆಲ್ಲಾ ಯೋಜನೆಗಳು ಅನುಷ್ಠಾನವಾದರೆ ನಗರ ಅಭಿವೃದ್ಧಿಯಾಗಲಿದೆ ಎಂಬ ಉದ್ದೇಶವನ್ನಿಟ್ಟುಕೊಂಡು ಯೋಜನೆ ತಯಾರಿಯಾಗಬೇಕಿದೆ ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು.
ಶಾಸಕರಾದ ಎಸ್. ಜಯಣ್ಣ ಮಾತನಾಡಿ ಕೊಳ್ಳೇಗಾಲ, ಯಳಂದೂರು ಪಟ್ಟಣ ಅಭಿವೃದ್ಧಿಗೆ ಸಮಗ್ರ ಚಿಂತನೆಯೊಂದಿಗೆ ಕರಡು ಸಿದ್ಧವಾಗಬೇಕಿದೆ. ಪಟ್ಟಣ ವಿಸ್ತಾರವಾಗಬೇಕಿದ್ದು ಪಟ್ಟಣ ಪ್ರದೇಶ ವ್ಯಾಪ್ತಿಯನ್ನು ಮೊದಲು ಗುರುತಿಸುವ ಕೆಲಸ ಆಗಬೇಕು. ಒಳಚರಂಡಿ, 24*7 ಅವಧಿಯಲ್ಲೂ ಕುಡಿಯುವ ನೀರು ಪೂರೈಕೆಯಾಗಬೇಕು. ಪಟ್ಟಣ ಪ್ರದೇಶಗಳಲ್ಲಿಯೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಪ್ರಾರಂಭವಾಗಬೇಕು. ಈ ಎಲ್ಲಾ ಅಂಶಗಳೂ ಸೇರಿದಂತೆ ಸರ್ವಾಂಗೀಣ ಪ್ರಗತಿಗೆ ಪೂರಕವಾದ ವಿಷಯಗಳು ವಿಷನ್ 2025ರಲ್ಲಿ ಸೇರ್ಪಡೆಯಾಗಬೇಕು. ಅಭಿವೃದ್ಧಿ ಆಶಯದೊಂದಿಗೆ ಅಭಿಪ್ರಾಯಗಳು ಎಲ್ಲರಿಂದಲೂ ಬರಬೇಕು ಎಂದರು.
ಚಾಮರಾಜನಗರ ನಗರಸಭೆ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಎಸ್. ನಂಜುಂಡಸ್ವಾಮಿ ಅವರು ಮಾತನಾಡಿ ನಗರಸಭೆ ಸ್ಥಳೀಯ ಸಂಸ್ಥೆಗಳು ಸ್ವಂತ ಆದಾಯವನ್ನು ಕ್ರೋಢೀಕರಿಸುವಂತಾಗಬೇಕು. ನೀರು ಇನ್ನಿತರ ತೆರಿಗೆ ವಸೂಲಾತಿ ಸಮರ್ಪಕವಾಗಿ ನಡೆಯಬೇಕು. ಪಟ್ಟಣ ಪ್ರದೇಶದಲ್ಲಿ ನಿಯಮಾನುಸಾರ  ಬಡಾವಣೆಗಳು ನಿರ್ಮಾÀಣವಾಗಿ ನಿರ್ವಹಣೆ ಕಾರ್ಯ ನಡೆಯಬೇಕು. ಇಂಥಹ ಅಂಶಗಳಿಗೆ ಒತ್ತು ನೀಡಬೇಕಿದೆ ಎಂದರು.
ಚಾಮರಾಜನಗರ ನಗರಸಭೆ ಅಧ್ಯಕ್ಷರಾದ ಶೋಭ ಪುಟ್ಟಸ್ವಾಮಿ, ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾದ ಗಿರೀಶ್, ಕೊಳ್ಳೇಗಾಲ ನಗರಸಭೆ ಅಧ್ಯಕ್ಷರಾದ ಶಾಂತರಾಜು, ಹನೂರು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಮಮತ, ಉಪಾಧ್ಯಕ್ಷರಾದ ಬಸವರಾಜು, ಯಳಂದೂರು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಲಿಂಗರಾಜು, ವಿವಿಧ ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಸದಸ್ಯರಾದ ಬಾಲರಾಜು, ಬಾಲರಾಜು ನಾಯ್ಡು, ಮಹೇಶ್ ಉಪ್ಪಾರ್, ಚಿನ್ನಸ್ವಾಮಿ, ಆರ್.ಪಿ. ನಂಜುಂಡಸ್ವಾಮಿ, ಇತರರು ಸಭೆಯಲ್ಲಿ ಹಾಜರಿದ್ದರು.
ಇದೇ ಸಂದರ್ಭದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರೂ ಆದ ರಾಜೇಂದ್ರ ಕುಮಾರ್ ಕಠಾರಿಯಾ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರು ಸಹ ಹಲಹೊತ್ತು ಸಭೆಯಲ್ಲಿ ಪಾಲ್ಗೊಂಡು ಜನಪ್ರತಿನಿಧಿಗಳು, ಮುಖಂಡರ ಅಭಿಪ್ರಾಯಗಳನ್ನು ಆಲಿಸಿದರು.











No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು