Tuesday, 7 November 2017

ಟಿಪ್ಪು ಜಯಂತಿ ಪಿಕ್ಸ್: (07-11-2017)

ಟಿಪ್ಪು ಜಯಂತಿ : ಸಮಯ ಬದಲು

ಚಾಮರಾಜನಗರ, ನ. 07:- ಜಿಲ್ಲಾ ಹಾಗೂ ತಾಲೂಕು ಆಡಳಿತದ ವತಿಯಿಂದ ನವೆಂಬರ್ 10ರಂದು ಟಿಪ್ಪು ಜಯಂತಿಯನ್ನು ಆಚರಿಸಲಾಗುತ್ತಿದ್ದು ಅಂದು ಮಧ್ಯಾಹ್ನದ ಬದಲು ಬೆಳಿಗ್ಗೆ 10 ಗಂಟೆಗೆ ಆಚರಣೆ ಕಾರ್ಯಕ್ರಮ ಪೂರ್ವನಿಗದಿ ಮಾಡಲಾಗಿದೆ.
ಈ ಹಿಂದೆ ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ ನವೆಂಬರ್ 10ರಂದೇ ಬೆಳಿಗ್ಗೆ 10 ಗಂಟೆಗೆ ಟಿಪ್ಪು ಜಯಂತಿ ಆಚರಣೆ ಪೂರ್ವನಿಗದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಹಣ್ಣು ಮಾಗಿಸುವ ಕೇಂದ್ರಕ್ಕೆ ಸಹಾಯಧನ : ಪ್ರಸ್ತಾವನೆ ಆಹ್ವಾನ

ಚಾಮರಾಜನಗರ, ನ. 07- ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಹಣ್ಣು ಮಾಗಿಸುವ ಕೇಂದ್ರ (ಬಾಳೆ, ಮಾವು, ಪಪ್ಪಾಯ, ಕಿತ್ತಳೆ, ಮೋಸಂಬಿ ಇತ್ಯಾದಿ ಹಣ್ಣುಗಳನ್ನು ವೈಜ್ಞಾನಿಕವಾಗಿ ಮಾಗಿಸುವ ಘಟಕ) ನಿರ್ಮಾಣ ಮಾಡಲು ಸಹಾಯಧನ ಲಭ್ಯವಿದೆ.
ಆಸಕ್ತ ರೈತರು, ಹಣ್ಣಿನ ವ್ಯಾಪಾರಿಗಳು ಪ್ರಸ್ತಾವನೆಯನ್ನು ಸೂಕ್ತ ದಾಖಲೆಗಳೊಂದಿಗೆ ಹಾಗೂ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ತೋಟಗಾರಿಕಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ.ವರ್ಗ, ಪಂಗಡದ ರೈತರಿಗೆ ಹನಿ ನೀರಾವರಿ ಯೋಜನೆಯಡಿ ಸಹಾಯಧನ : ಹೆಸರು ನೊಂದಾಯಿಸಿ 

ಚಾಮರಾಜನಗರ, ನ. 07 :- ತೋಟಗಾರಿಕೆ ಇಲಾಖೆಯು ಪ್ರಸಕ್ತ ಸಾಲಿಗೆ ಸೂಕ್ಷ್ಮ ಹನಿ ನೀರಾವರಿ ಯೋಜನೆಯಡಿ (ಡ್ರಿಪ್ ಇರಿಗೇಷನ್) ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಪರಿಶಿಷ್ಟ ವರ್ಗ, ಪಂಗಡದ ರೈತರಿಗೆ ಶೇ. 90ರಷ್ಟು ಸಹಾಯಧನವನ್ನು ಪರಿಷ್ಕøತ ದರದಂತೆ ನೀಡಲಿದೆ.
ಕೊಳವೆ ಬಾವಿ, ನೀರಾವರಿ ಮೂಲ ಹೊಂದಿರುವ ಆಸಕ್ತ ರೈತರು ತಮ್ಮ ಹೆಸರನ್ನು ತೋಟಗಾರಿಕೆ ಇಲಾಖೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ನೊಂದಾಯಿಸಿಕೊಂಡು ಯೋಜನೆಯ ಸದುಪಯೋಗ ಪಡೆಯಲು ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರಸಭೆ, ಪಟ್ಟಣ ಪಂಚಾಯಿತಿಯಿಂದ ಸ್ವಚ್ಚತೆ ಕುರಿತು ಸಮೀಕ್ಷೆ
ಚಾಮರಾಜನಗರ, ನ. 07 - ಚಾಮರಾಜನÀಗರ ನಗರಸಭೆಯ ವ್ಯಾಪ್ತಿಯ ಎಲ್ಲಾ 31 ವಾರ್ಡುಗಳಲ್ಲಿ ಹಾಗೂ ಯಳಂದೂರು ಪಟ್ಟಣ ಪಂಚಾಯಿತಿಯ 11 ವಾರ್ಡುಗಳಲ್ಲಿ ಸ್ವಚ್ಚತಾ ಸರ್ವೇಕ್ಷಣಾ ಕಾರ್ಯಕ್ರಮದಡಿ ಸ್ವಚ್ಚತೆ ಬಗ್ಗೆ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
ವಾರ್ಡುಗಳಲ್ಲಿ ಕಸ ಸಂಗ್ರಹಣೆ, ಶೌಚಾಲಯ ನಿರ್ವಹಣೆ, ಸ್ವಚ್ಚತೆ ಕಾರ್ಯ ನಿರ್ವಸಹಿಲಾಗುತ್ತಿದ್ದು ಈ ಸಂಬಂಧ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣೆ ಮಾಡಲಾಗುತ್ತಿದೆ. ನಿಮ್ಮ ನಗರ ಸ್ವಚ್ಚ ಸರ್ವೇಕ್ಷಣೆಯಲ್ಲಿ ಭಾಗವಹಿಸುತ್ತಿರುವುದು ನಿಮಗೆ ಗೊತ್ತೇ? ನಿಮ್ಮ ಪ್ರದೇಶ ಕಳೆದ ವರ್ಷಕ್ಕಿಂತ ಸ್ವಚ್ಚವಾಗಿದೆಯೇ? ಸಾರ್ವಜನಿಕ ಪ್ರದೇಶದಲ್ಲಿರುವ ಬಿನ್‍ಗಳನ್ನು ಈ ವರ್ಷ ಬಳಸಲು ಪ್ರಾರಂಭಿಸಿದ್ದೀರಾ? ಮನೆಮನೆಯಿಂದ ಬೇರ್ಪಡಿಸಿದ ತ್ಯಾಜ್ಯ ಸಂಗ್ರಹಣೆ ಈ ವರ್ಷ ಉತ್ತಮವಾಗಿದೆಯೇ? ಕಳೆದ ವರ್ಷಕ್ಕೆ ಹೋಲಿಸಿದರೆ ಮೂತ್ರಾಲಯಗಳು ಈಗ ಹೆಚ್ಚಿದೆಯೇ? ಸಾರ್ವಜನಿಕ ಮತ್ತು ಸಮುದಾಯ ಶೌಚಾಲಯಗಳು ಈಗ ಸ್ವಚ್ಚ ಹಾಗೂ ಉಪಯೋಗಕ್ಕೆ ಯೋಗ್ಯವೇ ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅಭಿಪ್ರಾಯ ಸಂಗ್ರಹಣೆಗಾಗಿ ಮೂರು ವಿಭಾಗಗಳಾಗಿ ವಿಂಗಡಿಸಿ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ.
ಸಾರ್ವಜನಿಕರಿಂದ ನಿಗದಿತ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಿ ಯಾವ ವಾರ್ಡಿನಲ್ಲಿ ಯಾವ ಸೌಕರ್ಯ ಸಮರ್ಪಕವಾಗಿಲ್ಲ ಎಂಬ ಬಗ್ಗೆ ತಿಳಿದು ಅದಕ್ಕೆ ಹೆಚ್ಚಿನ ಒತ್ತು ನೀಡಿ ಕೆಲಸ ನಿರ್ವಹಿಸಬೇಕಿದೆ. ನಾಗರಿಕರು ತಮ್ಮ ವಾರ್ಡಿನ ಸಮಸ್ಯೆಗಳನ್ನು ನಗರಸಭೆ ಹಾಗೂ ಪಟ್ಟಣ ಪಂಚಾಯಿತಿ ನೀಡಿರುವ ನಮೂನೆಯಲ್ಲಿ ಅಂಕಗಳನ್ನು ನೀಡುವ ಮುಖಾಂತರ ತಿಳಿಸಬಹುದು.
ಹೆಚ್ಚಿನ ಮಾಹಿತಿ ಹಾಗೂ ನಮೂನೆ ಪ್ರತಿಯನ್ನು ತಿತಿತಿ.ಛಿhಚಿmಡಿಚಿರಿಚಿಟಿಚಿgಚಿಡಿ.iಣsಣಚಿಜಿಜಿ.gov.iಟಿ, ತಿತಿತಿ.ಥಿಚಿಟಚಿಟಿಜuಡಿಣoತಿಟಿ.mಡಿಛಿ.gov.iಟಿ/ಟಿoಣiಜಿiಛಿಚಿಣioಟಿ ಮತ್ತು ಸ್ವಚ್ಚತಾ ಆಪ್‍ನಲ್ಲಿ ಪಡೆಯಬಹುದಾಗಿದೆ ಎಂದು  ಪ್ರಕಟಣೆ ತಿಳಿಸಿದೆ.

ನ. 21ರಂದು ಅಂಕನಶೆಟ್ಟಿಪುರ ಗ್ರಾಮದಲ್ಲಿ ಅಂಚೆ ಸಂತೆ

ಚಾಮರಾಜನಗರ, ನ. 07:- ಅಂಚೆ ಇಲಾಖೆಯು ತಾಲೂಕಿನ ಹರದನಹಳ್ಳಿ ಹೋಬಳಿಯ ಅಂಕನಶೆಟ್ಟಿಪುರ ಗ್ರಾಮದಲ್ಲಿ ನವೆಂಬರ್ 21ರಂದು ಅಂಚೆ ಸಂತೆ ಏರ್ಪಡಿಸಿದೆ.
ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವವಿಮೆ ಇನ್ನಿತರ ಅಂಚೆ ಯೋಜನೆಗಳನ್ನು ಸ್ವೀಕರಿಸಲಾಗುತ್ತದೆ.
ಅಂಕನಶೆಟ್ಟಿಪುರ ಗ್ರಾಮ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳುವಂತೆ ಅಂಚೆ ಅಧೀಕ್ಷಕರಾದ ಜಿ.ಸಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಇಲಾಖಾ ಪರೀಕ್ಷೆ : ನಿಷೇದಾಜ್ಞೆ

ಚಾಮರಾಜನಗರ, ನ. 07 -  ಕರ್ನಾಟಕ ಲೋಕಸೇವಾ ಆಯೋಗ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಯನ್ನು ನವೆಂಬರ್ 11 ರಿಂದ 13ರವರೆಗೆ ನಗರದ ಜೆ ಎಸ್ ಎಸ್ ಬಾಲಕರ ಪ್ರೌಢಶಾಲೆಯಲ್ಲಿ ನಡೆಸಲಿದೆ.
ಪರೀಕ್ಷಾ ಕಾರ್ಯವು ಶಾಂತಿ ಸುವ್ಯವಸ್ಥೆಯಿಂದ ನಡೆಯಲೆಂಬ ಉದ್ದೇಶದಿಂದ ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 5.30 ಗಂಟೆಯವರೆಗೆ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ. ರಾಮು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಪರೀಕ್ಷಾ ದಿನಗಳಂದು ಬೆಳಿಗ್ಗೆ 8 ರಿಂದ ಸಂಜೆ 5.30 ಗಂಟೆಯವರೆಗೆ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆಯೂ ಆದೇಶದಲ್ಲಿ ತಿಳಿಸಿದ್ದಾರೆ. ಈ ಆದೇಶವು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿಗೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಶಿಕ್ಷಕರ ನೇಮಕಾತಿ ಪರೀಕ್ಷೆ : ನಿಷೇದಾಜ್ಞೆ

ಚಾಮರಾಜನಗರ, ನ. 07 -  ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯು ನಗರದ 3 ಪರೀಕ್ಷಾ ಕೇಂದ್ರಗಳಲ್ಲಿ  ನವೆಂಬರ್ 11 ಹಾಗೂ 12ರಂದು ನಡೆಯಲಿರುವ ಹಿನ್ನೆಲೆಯಲ್ಲಿ  ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ. ರಾಮು ಆದೇಶ ಹೊರಡಿಸಿದ್ದಾರೆ.
ನಗರದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು, ಜೆ ಎಸ್ ಎಸ್ ಬಾಲಕಿಯರ ಪ್ರೌಢಶಾಲೆ ಹಾಗೂ ರಾಮಸಮುದ್ರದ ಸಿ ಆರ್ ಬಾಲರಪಟ್ಟಣ ಪ್ರೌಢಶಾಲೆ ಪರೀಕ್ಷಾ ಕೇಂದ್ರಗಳಾಗಿವೆ.
ಪರೀಕ್ಷಾ ಅಕ್ರಮ ತಡೆಗಟ್ಟಲು ಹಾಗೂ ಪರೀಕ್ಷಾ ಕಾರ್ಯ ಶಾಂತಿ ಹಾಗೂ ಸುವ್ಯವಸ್ಥೆಯಿಂದ ನಡೆಯಲೆಂಬ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ವಿಧಿಸಲಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 8 ರಿಂದ ಸಂಜೆ 5.30 ಗಂಟೆಯವರೆಗೂ ಮುಚ್ಚುವಂತೆಯೂ ಆದೇಶದಲ್ಲಿ ತಿಳಿಸಿದ್ದಾರೆ.
ನಿಷೇದಾಜ್ಞೆಯು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿಗೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ತಂಬಾಕು ನಿಯಂತ್ರಣ ಸಾಮಾಜಿಕ ಜವಾಬ್ದಾರಿ : ಹೆಚ್ಚುವರಿ ಜಿಲ್ಲಾಧಿಕಾರಿ 

ಕೆ.ಎಂ. ಗಾಯತ್ರಿ

ಚಾಮರಾಜನಗರ, ನ. 07:- ಜಿಲ್ಲೆಯ ಎಲ್ಲಾ ಸರ್ಕಾರಿ ಇಲಾಖೆ, ಕಚೇರಿಗಳು, ಶೈಕಣಿಕ ಸಂಸ್ಥೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧದ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ತಂಬಾಕು ನಿಯಂತ್ರಣ ಘಟಕದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾಲೇಜು ವಿದ್ಯಾರ್ಥಿಗಳು ಧೂಮಪಾನದಂತಹ ದುಷ್ಚÀಟಗಳಿಗೆ ಬಲಿಯಾಗುತ್ತಿದ್ದು, ಅವರಿಗೆ ಅರಿವು ಮೂಡಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿಯೂ ತಂಬಾಕು ಸೇವನೆಯಿಂದ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಪರಿಣಾಮಕಾರಿಯಾಗಿ ತಿಳಿವಳಿಕೆ ನೀಡುವಂತಹ ಕಾರ್ಯವು ನಡೆಯಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.
ತಂಬಾಕು ನಿಯಂತ್ರಣ ಮಾಡುವುದು ಸಾಮಾಜಿಕ ಜವಾಬ್ದಾರಿಯೂ ಆಗಿದೆ. ಅಲ್ಲದೆ ಜೀವನದ ಬಹುಮುಖ್ಯ ಹೊಣೆಗಾರಿಕೆಯೂ ಅಗತ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.
ಈಗಾಗಲೇ ತಹಸೀಲ್ದಾರ್ ನೇತೃತ್ವದಲ್ಲಿ ತಾಲೂಕುಗಳಲ್ಲಿ ತಂಬಾಕು ನಿಯಂತ್ರಣಕ್ಕಾಗಿ ತಂಡ ರಚಿಸಲಾಗಿದೆ. ಪೋಲೀಸ್ ಇಲಾಖೆ ಕೂಡ ಈ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು ಉಳಿದ ಶಿಕ್ಷಣ, ಆರೋಗ್ಯ ಇಲಾಖೆಗಳು  ಪ್ರಕರಣ ದಾಖಲಿಸಿ ವರದಿ ಮಾಡಬೇಕು ಎಂದರು. 
ಜಿಲ್ಲೆಯಲ್ಲಿ ತಂಬಾಕು ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಪ್ರಸಕ್ತ ಮಾಹೆಯಿಂದಲೇ ವ್ಯಾಪಕವಾಗಿ ಎಲ್ಲ ಕಡೆ ಭೇಟಿ ನೀಡಿ ಪ್ರಕರಣ ದಾಖಲಿಸಬೇಕು. ತಾಲೂಕು ಹಾಗೂ ಗ್ರಾಮೀಣ ಭಾಗದಲ್ಲೂ ಕಾರ್ಯಾಚರಣೆ ನಡೆಸಬೇಕು ಎಂದು ಗಾಯತ್ರಿ ತಿಳಿಸಿದರು.
ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಂಗಡಿ ಮುಂಗಟ್ಟುಗಳು ಪರವಾನಗಿ ಹಾಗೂ ನವೀಕರಣ ನೀಡಿರುವ ಬಗ್ಗೆ ಪರಿಶೀಲನೆ ನಡೆಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಕುರಿತ ಎಲ್ಲಾ ಜಾಹಿರಾತುಗಳನ್ನು ತೆರವುಗೊಳಿಸಿ, ತಂಬಾಕು ನಿಯಂತ್ರಣ ನಾಮಫಲಕ ಅಳವಡಿಸಿಕೊಂಡಿರುವುದನ್ನು ಧೃಢಿಕರಿಸಿರಬೇಕು. ಈ ಕುರಿತು ಜಿಲ್ಲೆಯ ಸಮಗ್ರ ವರದಿಯನ್ನು ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಕಚೇರಿಗೆ ಸಲ್ಲಿಸಬೇಕೆಂದು ರಾಜ್ಯಮಟ್ಟದ ಅಧಿಕಾರಿ ಹನುಮಂತಪ್ಪ ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಎಸ್. ಗೀತಾ ಪ್ರಸನ್ನ, ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷರಾದ ಸುರೇಶ್, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

 

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು