ಜೆ.ಎಸ್.ಎಸ್ ರುಡ್‍ಸೆಟ್ ಸಂಸ್ಥೆ ಮರಿಯಾಲದಲ್ಲಿ ಆಯುಷ್ ಇಲಾಖೆಯವರ ಮನೆ-ಮದ್ದು ಕಾರ್ಯಕ್ರಮದ ಉದ್ಘಾಟನೆ
ಆಯುಷ್ ಇಲಾಖೆ, ಚಾಮರಾಜನಗರ ಜಿಲ್ಲೆ ವತಿಯಿಂದ ಜೆಎಸ್‍ಎಸ್ ರುಡ್‍ಸೆಟ್ ಸಂಸ್ಥೆ, ಮರಿಯಾಲದಲ್ಲಿ ಜಿಲ್ಲೆಯ ಆಶಾಕಾರ್ಯಕರ್ತರು ಹಾಗೂ ಸ್ವ-ಸಹಾಯ ಸಂಘದ ಒಟ್ಟು 40 ಮಹಿಳೆಯರಿಗೆ ಮನೆ ಮದ್ದು ಕಾರ್ಯಕ್ರಮದ ಜಾಗೃತಿ ಶಿಬಿರವನ್ನು ಏರ್ಪಡಿಸಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಮಂಜುನಾಥ್, ಹಿರಿಯ ಉಪನ್ಯಾಸಕರು, ಡಯಟ್ ಸಂಸೆ,್ಥ ಚಾಮರಾಜನಗರ, ಇವರು ಜ್ಯೋತಿ ಬೆಳಗಿಸಿ ಮಾತನಾಡುತ್ತಾ ಕಾರ್ಯಕ್ರಮವು ಅತ್ಯುತ್ತಮವಾಗಿದ್ದು, ನಮ್ಮ ಶರೀರ & ಮನಸ್ಸು ಒಂದಾಗಿ ಯೋಗದಿಂದ ಇರಲು ಪತಂಜಲಿ ಮಹರ್ಷಿಗಳ ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು. ಆಹಾರ ಪದ್ಧತಿ ಕ್ರಮವಾಗಿರಬೇಕು, ಆಯಾ ಋತುವಿಗೆ ತಕ್ಕಂತೆ ಸಿಗುವ ಆಹಾರವನ್ನು ಬಳಸಬೇಕು, ಇಲಾಖೆಗಳಲ್ಲಿ ಶಿಕ್ಷಣವು ಎಷ್ಟು ಮುಖ್ಯವೋ ಹಾಗೆಯೇ ಆರೋಗ್ಯವು ಮುಖ್ಯವಾದಗ ಮಾತ್ರ ಸರ್ವತೋಮುಖ ಬೆಳವಣಿಗೆ ಕಾಣಲು ಸಾಧ್ಯ ಎಂದರು.ಅಲ್ಲದೆ ಆಶಾಕಾರ್ಯಕ್ರರ್ತರಿಗೆ ಅನೇಕ ತರಬೇತಿಗಳನ್ನು ನೀಡಿದೆ. ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಅನುಭವವು ನಿಮಗಿರುತ್ತದೆ. ಇದರ ಜೊತೆಗೆ ಪದ್ಧತಿಗಳ ಬೆಳವಣಿಗೆಗಳನ್ನು ತಜ್ಞರಿಂದ ತಿಳಿದುಕೊಂಡು ನಿಮ್ಮ ಕುಟುಂಬದಿಂದ, ಸಮಾಜಕ್ಕೆ ಒಳ್ಳೆಯ ವಿಚಾರಗಳನ್ನು ಧಾರೆಯರೆಯಬೇಕೆಂದು ಶುಭ ಕೋರಿದರು.
ನಂತರ ಅಧ್ಯಕ್ಷತೆ ವಹಿಸಿದ ಡಾ// ಪುನೀತ್ ಬಾಬು, ಜಿಲ್ಲಾ ಆಯುಷ್ ಇಲಾಖೆ, ಚಾಮರಾಜನಗರ ಇವರು ಜಿಲ್ಲೆಯಲ್ಲಿ ಆಯುಷ್ ಇಲಾಖೆಯಿಂದ ನಡೆಯುತ್ತಿರುವ ಕಾರ್ಯಕ್ರಮಗಳ ಬಗ್ಗೆ, ಆಸ್ಪತ್ರೆಗಳಲ್ಲಿ ಇರುವ ಸೌಲಭ್ಯಗಳ ಬಗ್ಗೆ ತಿಳಿಸುತ್ತ, ಸ್ಥಳಿಯವಾಗಿ ಮನೆಯಲ್ಲಿ ಸಿಗುವ ಜೀರಿಗೆ, ಮೆಣಸು, ಕರಿಬೇವು, ಶುಂಠಿ, ಸೊಪ್ಪು, ತರಕಾಗಿ, ಹಾಲು, ಮಜ್ಜಿಗೆ ಹಾಗೂ ಇತ್ಯಾದಿ ಉಪಯುಕ್ತ ವಸ್ತುಗಳನ್ನು ಬಳಸಬೇಕು, ಇವುಗಳನ್ನ ಆರೋಗ್ಯಕ್ಕೆ ಮನೆ-ಮದ್ದಾಗಿ ಬಳಸುವ ವಿಧಾನಗಳನ್ನು ತಿಳಿಸಿದರು. ಒಟ್ಟಾರೆ ಈ ದಿನ 4 ಅಧಿವೇಶಗಳಲ್ಲಿ ವಿಷಯ ತಜ್ಞರಿಂದ, ಕಾರ್ಯಗಾರ ಏರ್ಪಡಿಸಿದ್ದು ಡಾ// ಪ್ರಪುಲ್ಲ, ಯಳಂದೂರ ತಾಲ್ಲೂಕು, ಡಾ// ಶ್ರೀನಿವಾಸ್, ಡಾ// ರಜಿನಿ, ಗುಂಡ್ಲುಪೇಟೆ ತಾಲ್ಲೂಕು, ಡಾ// ಶೋಭ, ಯಳಂದೂರು, ಇವರುಗಳನ್ನು ಪರಿಚಯಿಸಿದರು.
ಕಾರ್ಯಕ್ರಮವನ್ನು ಶ್ರೀಮತಿ ಸಿದ್ದನಾಗಮ್ಮ, ಆಶಾ ಕಾರ್ಯಕರ್ತೆ, ಕೆಸ್ತೂರು ಇವರು ಪ್ರಾರ್ಥನೆ ಮಾಡಿದರು, ನಿರೂಪಣೆಯನ್ನು ಶ್ರೀಯುತ ಬಿ.ಚಿನ್ನಸ್ವಾಮಿ, ಸಂಯೋಜಕರು, ಜೆಎಸ್‍ಎಸ್ ರುಡ್‍ಸೆಟ್, ಮರಿಯಾಲ ಇವರು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆ ಹಾಗೂ ಜೆಎಸ್‍ಎಸ್ ರುಡ್‍ಸೆಟ್ ಸಂಸ್ಥೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ನಿಷೇಧ
ಚಾಮರಾಜನಗರ, ನ. 09 - ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲೆ ತಂಬಾಕು ನಿಯಂತ್ರಣ ಕಾಯಿದೆ 2003ರ ಸೆಕ್ಷನ್ 4ರ ಪ್ರಕಾರ ಸಾರ್ವಜನಿಕ ಸ್ಥಳ, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಸಾರಿಗೆ, ಹೋಟೆಲ್ ಬಾರ್ ಅಂಡ್ ರೆಸ್ಟೋರೆಂಟï, ಉದ್ಯಾನವನ, ಆಸ್ಪತ್ರೆ, ಶಾಲಾಕಾಲೇಜು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ನಿಷೇಧವಿದೆ.ಸೆಕ್ಷನ್ 6(ಎ) ಮತ್ತು ಸೆಕ್ಷನ್ 6(ಬಿ) ಪ್ರಕಾರ 18 ವರ್ಷದ ಒಳಗಿನವರಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವಂತಿಲ್ಲ. ಮತ್ತು ಶಾಲಾಕಾಲೇಜುಗಳ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ರದ್ದುಗೊಳಿಸಲಾಗಿರುತ್ತದೆ.
ಸೆಕ್ಷನ್ 7ರ ಪ್ರಕಾರ ತಂಬಾಕು ಉತ್ಪನ್ನಗಳ ಪ್ಯಾಕೆಟ್‍ಗಳ ಮೇಲೆ ನಿರ್ಧಿಷ್ಟ ಎಚ್ಚರಿಕೆಗಳ ಚಿತ್ರಣವಿರಬೇಕು ಮತ್ತು ಸೆಕ್ಷನ್ 8ರ ಪ್ರಕಾರ ಎಲ್ಲಾ ರೂಪಗಳ ನೇರ ಅಥವಾ ಪರೋಕ್ಷ ತಂಬಾಕು ಜಾಹಿರಾತು ನಿಷೇಧ ಮಾಡಲಾಗಿರುತ್ತದೆ.
ನಿಯಮ ಪಾಲನೆ ಮಾಡಲು ತಪ್ಪಿದಲ್ಲಿ 200 ರೂ.ಗಳ ದಂಡ ಹಾಗೂ ಸೆರೆವಾಸ ವಿಧಿಸಲಾಗುವುದು. ತಂಬಾಕು ಉತ್ಪನ್ನಗಳ ಮಾರಾಟಗಾರರಿಗೆ ನಗರಸಭೆ ವತಿಯಿಂದ ನೀಡಲಾಗಿರುವ ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಿ ಕಾನೂನಿನಂತೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಟಿಪ್ಪು ಜಯಂತಿ ಹಿನ್ನಲೆ : ಮದ್ಯ ಮಾರಾಟ ನಿಷೇಧÀ
ಚಾಮರಾಜನಗರ, ನ. 09 - ಚಾಮರಾಜನಗರ ಪಟ್ಟಣದಲ್ಲಿ ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆ ಹಿನ್ನಲೆಯಲ್ಲಿ ನವೆಂಬರ್ 9ರ ಮಧ್ಯರಾತ್ರಿಯಿಂದ ನವೆಂಬರ್ 10ರ ಮದ್ಯರಾತ್ರಿಯವರೆಗೆ ಚಾಮರಾಜನಗರ ಪಟ್ಟಣದ 5 ಕಿ. ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ರಾಮು ಅವರು ಆದೇಶ ಹೊರಡಿಸಿದ್ದಾರೆ.
ಸೂಚಿತ ಅವಧಿಯಲ್ಲಿ (ಕೆ.ಎಸ್.ಬಿ.ಸಿ.ಎಲ್ ಡಿಪೋ ಹೊರತುಪಡಿಸಿ) ಅಕ್ರಮ ಮದ್ಯ ಮಾರಾಟ, ಸಾಗಾಣಿಕೆ ಹಾಗೂ ಮದ್ಯ ದಾಸ್ತಾನು ಮಾಡಬಾರದೆಂದು ಜಿಲ್ಲಾಧಿಕಾರಿಯವರ ಆದೇಶದಲ್ಲಿ ತಿಳಿಸಲಾಗಿದೆ.
ನ. 10ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ
ಚಾಮರಾಜನಗರ, ನ. 09 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 10ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವ ಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಹಜರತ್ ಟಿಪ್ಪು ಸುಲ್ತಾನರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆಯ ಅಧ್ಯಕ್ಷರಾದ ಶೋಭ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬೆಂಗಳೂರಿನ ರಾಷ್ಟ್ರೀಯ ನಾಟಕ ಶಾಲೆ ನಿರ್ದೇಶಕರು ಹಾಗೂ ಮೈಸೂರು ರಂಗಾಯಣದ ನಿವೃತ್ತ ನಿರ್ದೇಶಕರಾದ ಸಿ. ಬಸವಲಿಂಗಯ್ಯ ಮುಖ್ಯ ಭಾಷಣಕಾರರಾಗಿ ಆಗಮಿಸುವರು. ಅಂದು ಬೆಳಿಗ್ಗೆ 9 ಗಂಟೆಗೆ ಮುಖ್ಯ ವೇದಿಕೆಯಲ್ಲಿ ಬೆಂಗಳೂರಿನ ಜನಾಬ್ ಜಿಕ್ರುಲ್ಲಾ ಷಾ ದರ್ವೇಷ್ ಹಾಗೂ ಸೈಯದ್ ಕಲಾಂವ್ಹಿದಾ ಷಾ ಸೂಫಿ ತಂಡದವರಿಂದ ಕವಾಲಿ ಕಾರ್ಯಕ್ರಮ ಸಹ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ
ನ.10ರಂದು ಜಿಲ್ಲಾಮಟ್ಟದ ಯುವಜನೋತ್ಸವ ಉದ್ಘಾಟನೆ
ಚಾಮರಾಜನಗರ, ನ. 09 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಯುವನೋತ್ಸವ, ಯುವ ಸಮ್ಮೇಳನ, ಯುವ ಕಾರ್ಯಾಗಾರ ಹಾಗೂ ಯುವ ತರಬೇತಿ ಶಿಬಿರದ ಉದ್ಘಾಟನೆ ನಗರದ ಸತ್ಯಮಂಗಲ ರಸ್ತೆಯಲ್ಲಿರುವ ಡಿ. ದೇವರಾಜ ಅರಸು ಭವನದಲ್ಲಿ ನವೆಂಬರ್ 10ರಂದು ಬೆಳಿಗ್ಗೆ 11.30 ಗಂಟೆಗೆ ನಡೆಯಲಿದೆ.
ಸಕ್ಕರೆ, ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ನಗರಸಭೆಯ ಅಧ್ಯಕ್ಷರಾದ ಶೋಭ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನÀಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಸಭೆ ಸದಸ್ಯರಾದ ಸೆಲ್ವಿಬಾಬು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಎರಡು ದಿನಗಳು ನಡೆಯಲಿರುವ ಕಾರ್ಯಕ್ರಮದಲ್ಲಿ ನವೆಂಬರ್ 10ರಂದು ಜಾನಪದ ನೃತ್ಯ, ಜಾನಪದ ಗೀತೆ, ಏಕಾಂಕ ನಾಟಕ, ಆಶುಭಾಷಣ, ಗಿಟಾರ್, ಹಾರ್ಮೋನಿಯಂ, ಶಾಸ್ತ್ರೀಯ ವಾದ್ಯಗಳು, ಶಾಸ್ತ್ರೀಯ ಗಾಯನ (ಹಿಂದೂಸ್ಥಾನಿ, ಕರ್ನಾಟಕ), ಶಾಸ್ತ್ರೀಯ ನೃತ್ಯ (ಮಣಿಪುರಿ, ಒಡಿಸ್ಸಿ. ಭರತನಾಟ್ಯಂ, ಕಥಕ್, ಕುಚಿಪುಡಿ) ನಡೆಯಲಿದೆ.
ನವೆಂಬರ್ 11ರಂದು ಯುವ ಸಮ್ಮೇಳನ, ಯುವ ಕಾರ್ಯಾಗಾರ ಹಾಗೂ ಯುವ ತರಬೇತಿ ಶಿಬಿರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ನ. 10ರಂದು ರ್ಯಾಲಿ, ಜಾಥಾ, ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ, ಖಾಸಗಿ ಸಮಾರಂಭ ನಿಷೇಧ: ಜಿಲ್ಲಾಧಿಕಾರಿ ಆದೇಶ
ಚಾಮರಾಜನಗರ, ನ. 09 - ಜಿಲ್ಲೆಯಾದ್ಯಂತ ನವೆಂಬರ್ 10 ರಂದು ಜಿಲ್ಲಾಡಳಿದ ಹಾಗೂ ತಾಲೂಕು ಆಡಳಿತದಿಂದ ಅಧಿಕೃತವಾಗಿ ಏರ್ಪಡಿಸಿರುವ ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮ ಹೊರತುಪಡಿಸಿ ಇನ್ಯಾವುದೇ ಸಾರ್ವಜನಿಕ ಸಭೆ, ಖಾಸಗಿ ಸಮಾರಂಭ, ವಾಹನ ರ್ಯಾಲಿ, ಬಾವುಟ ಜಾಥಾ. ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಇಂದು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಾದ್ಯಂತ ನವೆಂಬರ್ 10ರಂದು ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಯಾವುದೇ ಸಂಘಟನೆಗಳ ಆಯೋಜಕರು, ಕಾರ್ಯಕರ್ತರು, ಸದಸ್ಯರು ಯಾವುದೇ ವ್ಯಕ್ತಿಗಳು ಯಾವುದೇ ರೀತಿಯ ದ್ವಿಚಕ್ರ ವಾಹನ, ಬೈಕ್, ಇತ್ಯಾದಿ ಹಾಗೂ ಇತರೆ ಯಾವುದೇ ವಾಹನಗಳ ಮೂಲಕ ರ್ಯಾಲಿ, ಬಾವುಟ ಜಾಥಾ, ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ, ಖಾಸಗಿ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿರುವ ಪ್ರಸ್ತಾವನೆ ಹಾಗೂ ಶಿಫಾರಸ್ಸಿನ ಮೇರೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಮತ್ತು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗರೂಕತೆ ಕ್ರಮ ವಹಿಸಲು ನಿಷೇದಾಜ್ಞೆ ಹೊರಡಿಸುವುದು ಸೂಕ್ತವೆಂದು ತಮಗೆ ಮನವರಿಕೆಯಾಗಿರುವುದರಿಂದ ಕರ್ನಾಟಕ ಪೊಲೀಸ್ ಕಾಯಿದೆ 1963ರ ಕಲಂ 35(3)ರ ಅಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರ ಚಲಾಯಿಸಿ ನಿಷೇದಾಜ್ಞೆ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ನ. 10ರಂದು ಯನಗನಹಳ್ಳಿಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ನ. 09 :- ತಾಲೂಕಿನ ಹರದನಹಳ್ಳಿ ಹೋಬಳಿ ಯನಗನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನವೆಂಬರ್ 10ರಂದು ಮಧ್ಯಾಹ್ನ 2 ಗಂಟೆಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ನಡೆಯಲಿದೆ.ಸಾರ್ವಜನಿಕರು ಜನಸಂಪರ್ಕ ಸಭೆಯ ಸದುಪಯೋಗ ಪಡೆದುಕೊಳ್ಳಲು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 10ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಚಾಮರಾಜನಗರ, ನ. 09 - ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವ ಪ್ರಸಾದ್ ಅವರು ನವೆಂಬರ್ 10ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 9.30 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುವರು. ಬಳಿಕ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ತದನಂತರ ನಗರದ ಡಿ. ದೇವರಾಜ ಅರಸು ಭವನದಲ್ಲಿ ನಡೆಯಲಿರುವ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2.30 ಗಂಟೆಗೆ ಗುಂಡ್ಲುಪೇಟೆಗೆ ಆಗಮಿಸಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಸಂಜೆ 5 ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ವಿಶೇಷಾಧಿಕಾರಿ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವ್ಯಾಸಂಗ ವೇತನ, ಫೆಲೋಶಿಪ್, ಶುಲ್ಕ ವಿನಾಯಿತಿ ಮಂಜೂರಾತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 09:- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪೂರ್ಣಾವಧಿ ಪಿಹೆÀಚ್‍ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವ್ಯಾಸಂಗ ವೇತನ, ಫೆಲೋಶಿಪ್, ಶುಲ್ಕ ವಿನಾಯಿತಿ ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಇತರೆ ಓಬಿಸಿಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಸಿಕ 5 ಸಾವಿರ ರೂ. ನೀಡಲಾಗುವುದು.
ಇಲಾಖೆಯಿಂದ ಈ ಹಿಂದೆ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್‍ಗೆ ಆಯ್ಕೆಯಾಗಿದ್ದು ಪ್ರಸ್ತುತ ಸಾಲಿನಲ್ಲಿ ಮುಂದುವರಿಯುತ್ತಿರುವ ಅರ್ಹ ನವೀಕರಣ ವಿದ್ಯಾರ್ಥಿಗಳು ಹಾಗೂ ಹೊಸ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಡಿಸೆಂಬರ್ 7 ಕÉೂನೆಯ ದಿನ. ಹೆಚ್ಚಿನ ವಿವರಗಳನ್ನು ಸಹಾಯವಾಣಿ ಸಂಖೆÀ್ಯ 080-65970004 ಅಥವಾ ಇಲಾಖಾ ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಸಂಪರ್ಕಿಸಿಯೂ ಪಡೆಯಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 11 ರಿಂದ ನಗರದಲ್ಲಿ 3 ದಿನ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ನ. 09- ಮೈಸೂರು - ಚಾಮರಾಜನಗರ ವ್ಯಾಪ್ತಿಯಲ್ಲಿ ಹೊಸದಾಗಿ ವಿದ್ಯುತ್ ಮಾರ್ಗ ನಿರ್ಮಿಸುವ ಕಾಮಗಾರಿ ನವೆಂಬರ್ 11 ರಿಂದ 13ರವರೆಗೆ ನಡೆಯಲಿದೆ.
ಈ ಸಂಬಂಧ ಚಾಮರಾಜನಗರ ವಿಭಾಗ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಲೋಡ್ ರಿಸ್ಟ್ರಿಕ್ಷನ್ ಇರುವುದರಿಂದ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಸರಬರಾಜಾಗದೆ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 23ರಂದು ಗೋಪಿನಾಥಂ ಗ್ರಾಮದಲ್ಲಿ ಅಂಚೆ ಸಂತೆ
ಚಾಮರಾಜನಗರ, ನ. 09 - ಅಂಚೆ ಇಲಾಖೆಯು ಕೊಳ್ಳೇಗಾಲ ತಾಲೂಕಿನ ಮಲೈಮಹದೇಶ್ವರ ಬೆಟ್ಟ ಹೋಬಳಿಯ ಗೋಪಿನಾಥಂ ಗ್ರಾಮದಲ್ಲಿ ನವೆಂಬರ್ 23ರಂದು ಅಂಚೆ ಸಂತೆ ಏರ್ಪಡಿಸಿದೆ.ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವವಿಮೆ ಇನ್ನಿತರ ಅಂಚೆ ಯೋಜನೆಗಳನ್ನು ಸ್ವೀಕರಿಸಲಾಗುತ್ತದೆ.
ಗೋಪಿನಾಥಂ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳುವಂತೆ ಅಂಚೆ ಅಧೀಕ್ಷಕರಾದ ಜಿ.ಸಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಕ್ರೀಡಾ ಪ್ರತಿಭಾ ಯೋಜನೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 09 - ಜಿಲ್ಲೆಯಲ್ಲಿ ವಿವಿಧ ಕ್ರೀಡೆಗಳಲ್ಲಿ ರಾಷ್ಟ್ರ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ 19 ವರ್ಷಕ್ಕೆ ಒಳಪಟ್ಟ ಕ್ರೀಡಾಪಟುಗಳಿಗೆ ತಲಾ ಒಂದು ಲಕ್ಷ ರೂ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ನಮೂನೆಯನ್ನು ಕ್ರೀಡಾ ಇಲಾಖೆ ವೆಬ್ ಸೈಟ್ ತಿತಿತಿ.ಜಥಿes.ಞಚಿಡಿ.ಟಿiಛಿ.iಟಿ ನಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08226-224902 ಅಥವಾ ಮೊಬೈಲ್ 9482718278 ಅನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಣೆ ತಿಳಿಸಿದೆ.
No comments:
Post a Comment