ಡಿ. 1 ರಿಂದ ಜಿಲ್ಲೆಯಲ್ಲಿ ಜಾನಪದ ಕಲಾಪ್ರದರ್ಶನ
ಚಾಮರಾಜನಗರ, ನ. 29 (vss):- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಡಿಸೆಂಬರ್ 1 ರಿಂದ 10ರವರೆಗೆ ಜಿಲ್ಲೆಯ ತಾಲೂಕುಗಳ ಆಯ್ದ ಗ್ರಾಮಗಳಲ್ಲಿ ಜನಪದ ಕಲಾತಂಡದವರಿಂದ ಕಲಾಪ್ರದರ್ಶನ ಏರ್ಪಡಿಸಲಾಗಿದೆ.ಸಾರ್ವಜನಿಕರು ಕಲಾಪ್ರದರ್ಶನದ ಸದುಪಯೋಗ ಮಾಡಿಕೊಳ್ಳುವಂತೆ ಇಲಾಖೆ ಪ್ರಕಟಣೆ ತಿಳಿಸಿದೆ.
ನ. 30ರಂದು ನಗರದಲ್ಲಿ ಮಾಹಿತಿ ಆಯುಕ್ತರಿಂದ ಪ್ರಕರಣಗಳ ವಿಚಾರಣೆ
ಚಾಮರಾಜನಗರ, ನ. 29 (vss):- ರಾಜ್ಯ ಮಾಹಿತಿ ಆಯುಕ್ತರಾದ ಕೆ.ಎಂ. ಚಂದ್ರೇಗೌಡ ಅವರು ಜಿಲ್ಲೆಗೆ ಸಂಬಂಧಿಸಿದ ಮಾಹಿತಿ ಹಕ್ಕು ಪ್ರಕರಣಗಳ ವಿಚಾರಣೆಯನ್ನು ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ನಡೆಸುವರು.ಒಟ್ಟು 65 ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಆಯುಕ್ತರು ವಿಚಾರಣೆ ನಡೆಸುವರೆಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.
ಸೀವಿಂಗ್ ಮಿಷನ್ ಆಪರೇಟರ್ ತರಬೇತಿ : ಅಭ್ಯರ್ಥಿಗಳಿಗೆ ನೇರ ಸಂದರ್ಶನ
ಚಾಮರಾಜನಗರ, ನ. 29 (vss):- ಕೈಮಗ್ಗ ಮತ್ತು ಜವಳಿ ಇಲಾಖೆಯು ನೂತನ ಜವಳಿ ನೀತಿಯಡಿ 45 ದಿನಗಳ ಅವಧಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳ ಸೀವಿಂಗ್ ಮಿಷನ್ ಆಪರೇಟರ್ ತರಬೇತಿಯನ್ನು ನಿರುದ್ಯೋಗಿ ಯುವ ಅಭ್ಯರ್ಥಿಗಳಿಗೆ ನೀಡುವ ಸಲುವಾಗಿ ನೇರ ಸಂದರ್ಶನ ನಡೆಸÀಲಿದೆ.
ಅಭ್ಯರ್ಥಿಗಳು 18 ರಿಂದ 35ರ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಾಗಿದ್ದಲ್ಲಿ 18 ರಿಂದ 40ರ ವಯೋಮಿತಿಯೊಳಗಿರಬೇಕು. ಕನಿಷ್ಟ 5ನೇ ತರಗತಿ ವ್ಯಾಸಂಗ ಮಾಡಿರಬೇಕು.
ಚಾಮರಾಜನಗರ ತಾಲೂಕಿಗೆ ಸಂಬಂಧಿಸಿದಂತೆ ನಗರದ ದೇವಾಂಗ ಬೀದಿಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ಸಂಸ್ಥೆಯಲ್ಲಿ (ದೂ.ಸಂ.08226-222454) ಡಿಸೆಂಬರ್ 5ರಂದು ಬೆಳಿಗ್ಗೆ 10 ರಿಂದ 11.30 ಗಂಟೆಯವರೆಗೆ, ಮರಿಯಾಲದ ಜೆಎಸ್‍ಎಸ್ ನೈಪುಣ್ಯತಾ ತರಬೇತಿ ಕೇಂದ್ರದಲ್ಲಿ (ದೂ.ಸಂ. 08226-230170) ಮಧ್ಯಾಹ್ನ 12.30 ರಿಂದ 1.30 ಗಂಟೆಯವರೆಗೆ ಸಂದರ್ಶನ ನಡೆಸಲಾಗುವುದು.
ಗುಂಡ್ಲುಪೇಟೆ ತಾಲೂಕಿಗೆ ಸಂಬಂಧಿಸಿದಂತೆ ಗುಂಡ್ಲುಪೇಟೆ ಪಟ್ಟಣದ ಜೆ ಎಸ್ ಎಸ್ ಕಾಲೇಜು ಎದುರು ಇರುವ ಉದಯರವಿ ಸೇವಾ ಸಂಸ್ಥೆ (ಮೊ. 9632786586) ಯಲ್ಲಿ ಡಿಸೆಂಬರ್ 5ರಂದು ಮಧ್ಯಾಹ್ನ 3 ರಿಂದ 4 ಗಂಟೆಯವರೆಗೆ, ಹಳೇ ಆಸ್ಪತ್ರೆ ರಸ್ತೆಯ ಮುದ್ದು ಬಸಪ್ಪ ಬಿಲ್ಡಿಂಗ್‍ನಲ್ಲಿರುವ ಕಲ್ಪತರು ಗಾರ್ಮೆಂಟ್ಸ್‍ನಲ್ಲಿ ಮಧ್ಯಾಹ್ನ 4 ರಿಂದ 5 ಗಂಟೆಯವರೆಗೆ ಸಂದರ್ಶನ ನಡೆಯಲಿದೆ.
ಯಳಂದೂರು ತಾಲೂಕಿಗೆ ಸಂಬಂಧಿಸಿದಂತೆ ಯಳಂದೂರು ಪಟ್ಟಣದ ಬಳೇಪೇಟೆ ಶಿವಪ್ಪ ಬಿಲ್ಡಿಂಗ್‍ನಲ್ಲಿರುವ ಕಲ್ಪತರು ಗಾರ್ಮೆಂಟï್ಸನಲ್ಲಿ ಡಿಸೆಂಬರ್ 6ರಂದು ಬೆಳಿಗ್ಗೆ 10 ರಿಂದ 11.30 ಗಂಟೆಯವರೆಗೆ ಸಂದರ್ಶನ ನಡೆಯಲಿದೆ.
ಕೊಳ್ಳೇಗಾಲ ತಾಲೂಕಿಗೆ ಸಂಬಂಧಿಸಿದಂತೆ ಕೊಳ್ಳೇಗಾಲ ಪಟ್ಟಣದ ಬಸ್ತೀಪುರ ರಸ್ತೆಯ ರಾಜೀವ್ ನಗರದ ಕಾವ್ಯಶ್ರೀ ಗಾರ್ಮೆಂಟ್ಸ್‍ನಲ್ಲಿ ಡಿಸೆಂಬರ್ 6ರಂದು ಮಧ್ಯಾಹ್ನ 12 ರಿಂದ 1.30ರವರೆಗೆ ಸಂದರ್ಶನ ನಡೆಯಲಿದೆ.
ಹನೂರು ಭಾಗಕ್ಕೆ ಸಂಬಂಧಿಸಿದಂತೆ ಹನೂರು ಪಟ್ಟಣದ ಕ್ರಿಸ್ತರಾಜ ಕಾನ್ವೆಂಟ್ ಹತ್ತಿರದ ಮಿಲ್ ರಸ್ತೆಯಲ್ಲಿರುವ ಮಾತೃಶ್ರೀ ಗಾರ್ಮೆಂಟ್ಸ್‍ನಲ್ಲಿ (ಮೊ. 9986912896) ಡಿಸೆಂಬರ್ 6ರಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಸಂದರ್ಶನ ನಡೆಯಲಿದೆ.
ಅಭ್ಯರ್ಥಿಗಳು ಶೇ. 80ರಷ್ಟು ಹಾಜರಾತಿ ಪಡೆದಲ್ಲಿ ಶಿಷ್ಯ ವೇತನ ಹಾಗೂ ಪ್ರಮಾಣ ಪತ್ರ ನೀಡಲಾಗುವುದು.
ಆಯಾ ನಿಗದಿತ ದಿನಾಂಕದಂದು ಅರ್ಜಿ ಹಾಗೂ ವಿದ್ಯಾಭ್ಯಾಸ ಪ್ರಮಾಣಪತ್ರ, ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರ, ವಯಸ್ಸಿನ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ (ಬೇರೆ ತಾಲೂಕಿನಲ್ಲಿ ವ್ಯಾಸಂಗ ಮಾಡಿದ ಅಬ್ಯರ್ಥಿಗಳಿಗೆ) ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
ಸಂಪೂರ್ಣ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.ಸಂ. 08226-222883 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಯಳಂದೂರÀು : ವಾಜಪೇಯಿ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ ನ. 29 (vss):- ಯಳಂದೂರು ಪಟ್ಟಣ ಪಂಚಾಯಿತಿ ವ್ಯಾಪ್ರಿಯಲ್ಲಿ 2017-18ನೇ ಸಾಲಿನಲ್ಲಿ ವಾಜಪೇಯಿ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ರಾಜ್ಯ ಸರ್ಕಾರದಿಂದ 1 ಲಕ್ಷದ 20 ಸಾವಿರ ರೂ. ಹಾಗೂ ಕೇಂದ್ರ ಸರ್ಕಾರದಿಂದ 1 ಲಕ್ಷದ 50 ಸಾವಿರ ರೂ ಸೇರಿ ಒಟ್ಟು 2 ಲಕ್ಷದ 70 ಸಾವಿರ ರೂ. ಮನೆ ನಿರ್ಮಾಣದ ವೆಚ್ಚ ಲಭ್ಯವಿದೆ. ಸಾಮಾನ್ಯ ವರ್ಗಗಳಿಗೆ ಹೆಚ್ಚುವರಿಯಾಗಿ 102 ಗುರಿಗಳನ್ನು ನೀಡಲಾಗಿದೆ.
ಅರ್ಹ ಫಲಾನುಭವಿಗಳು ಸ್ವಂತ ಹೆಸರಿನಲ್ಲಿರುವ ನಿವೇಶನ ಪತ್ರ, ಜಾತಿ ಪ್ರಮಾಣ ಪತ್ರ, 2 ಭಾವಚಿತ್ರ, 87600 ರೂ.ಗಿಂತ ಕಡಿಮೆ ಇರುವ ಆದಾಯ ಪತ್ರ, ಸರ್ಕಾರಿ ಯೋಜನೆಯಲ್ಲಿ ಮನೆ ಕಟ್ಟಲು ಸಹಾಯಧನ ಪಡೆದಿಲ್ಲವೆಂಬ ನೋಟರಿಯಿಂದ ದೃಢೀಕರಿಸಿದ ಪ್ರಮಾಣ ಪತ್ರ, ಬಿಪಿಎಲ್ ಕಾರ್ಡ್, ವಾಸಸ್ಥಳ ದೃಢೀಕರಣ, ಮನೆ ಕಟ್ಟಲು ಲೈಸೆನ್ಸ್, ಕುಟುಂಬ ಸದಸ್ಯರ ಆಧಾರ್ ಕಾರ್ಡ್ ಪ್ರತಿಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಡಿಸೆಂಬರ್ 29ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಪಟ್ಟಣ ಪಂಚಾಯಿತಿ ಕಾರ್ಯಾಲಯ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
No comments:
Post a Comment