ನ. 10ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ
ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವ ಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಹಜರತ್ ಟಿಪ್ಪು ಸುಲ್ತಾನರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆಯ ಅಧ್ಯಕ್ಷರಾದ ಶೋಭ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬೆಂಗಳೂರಿನ ರಾಷ್ಟ್ರೀಯ ನಾಟಕ ಶಾಲೆ ನಿರ್ದೇಶಕರು ಹಾಗೂ ಮೈಸೂರು ರಂಗಾಯಣದ ನಿವೃತ್ತ ನಿರ್ದೇಶಕರಾದ ಸಿ. ಬಸವಲಿಂಗಯ್ಯ ಮುಖ್ಯ ಭಾಷಣಕಾರರಾಗಿ ಆಗಮಿಸುವರು. ಅಂದು ಬೆಳಿಗ್ಗೆ 9 ಗಂಟೆಗೆ ಮುಖ್ಯ ವೇದಿಕೆಯಲ್ಲಿ ಬೆಂಗಳೂರಿನ ಜನಾಬ್ ಜಿಕ್ರುಲ್ಲಾ ಷಾ ದರ್ವೇಷ್ ಹಾಗೂ ಸೈಯದ್ ಕಲಾಂವ್ಹಿದಾ ಷಾ ಸೂಫಿ ತಂಡದವರಿಂದ ಕವಾಲಿ ಕಾರ್ಯಕ್ರಮ ಸಹ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ
ನ. 10ರಂದು ರ್ಯಾಲಿ, ಜಾಥಾ, ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ, ಖಾಸಗಿ ಸಮಾರಂಭ ನಿಷೇಧ: ಜಿಲ್ಲಾಧಿಕಾರಿ ಆದೇಶ
ಚಾಮರಾಜನಗರ, ನ. 08 - ಜಿಲ್ಲೆಯಾದ್ಯಂತ ನವೆಂಬರ್ 10 ರಂದು ಜಿಲ್ಲಾಡಳಿದ ಹಾಗೂ ತಾಲೂಕು ಆಡಳಿತದಿಂದ ಅಧಿಕೃತವಾಗಿ ಏರ್ಪಡಿಸಿರುವ ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮ ಹೊರತುಪಡಿಸಿ ಇನ್ಯಾವುದೇ ಸಾರ್ವಜನಿಕ ಸಭೆ, ಖಾಸಗಿ ಸಮಾರಂಭ, ವಾಹನ ರ್ಯಾಲಿ, ಬಾವುಟ ಜಾಥಾ. ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಇಂದು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಾದ್ಯಂತ ನವೆಂಬರ್ 10ರಂದು ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಯಾವುದೇ ಸಂಘಟನೆಗಳ ಆಯೋಜಕರು, ಕಾರ್ಯಕರ್ತರು, ಸದಸ್ಯರು ಯಾವುದೇ ವ್ಯಕ್ತಿಗಳು ಯಾವುದೇ ರೀತಿಯ ದ್ವಿಚಕ್ರ ವಾಹನ, ಬೈಕ್, ಇತ್ಯಾದಿ ಹಾಗೂ ಇತರೆ ಯಾವುದೇ ವಾಹನಗಳ ಮೂಲಕ ರ್ಯಾಲಿ, ಬಾವುಟ ಜಾಥಾ, ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ, ಖಾಸಗಿ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿರುವ ಪ್ರಸ್ತಾವನೆ ಹಾಗೂ ಶಿಫಾರಸ್ಸಿನ ಮೇರೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಮತ್ತು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗರೂಕತೆ ಕ್ರಮ ವಹಿಸಲು ನಿಷೇದಾಜ್ಞೆ ಹೊರಡಿಸುವುದು ಸೂಕ್ತವೆಂದು ತಮಗೆ ಮನವರಿಕೆಯಾಗಿರುವುದರಿಂದ ಕರ್ನಾಟಕ ಪೊಲೀಸ್ ಕಾಯಿದೆ 1963ರ ಕಲಂ 35(3)ರ ಅಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರ ಚಲಾಯಿಸಿ ನಿಷೇದಾಜ್ಞೆ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಟಿಪ್ಪು ಜಯಂತಿ ಹಿನ್ನಲೆ : ಮದ್ಯ ಮಾರಾಟ ನಿಷೇಧÀ
ಚಾಮರಾಜನಗರ, ನ. 08 :- ಚಾಮರಾಜನಗರ ಪಟ್ಟಣದಲ್ಲಿ ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆ ಹಿನ್ನಲೆಯಲ್ಲಿ ನವೆಂಬರ್ 9ರ ಮಧ್ಯರಾತ್ರಿಯಿಂದ ನವೆಂಬರ್ 10ರ ಮದ್ಯರಾತ್ರಿಯವರೆಗೆ ಚಾಮರಾಜನಗರ ಪಟ್ಟಣದ 5 ಕಿ. ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ರಾಮು ಅವರು ಆದೇಶ ಹೊರಡಿಸಿದ್ದಾರೆ.ಸೂಚಿತ ಅವಧಿಯಲ್ಲಿ (ಕೆ.ಎಸ್.ಬಿ.ಸಿ.ಎಲ್ ಡಿಪೋ ಹೊರತುಪಡಿಸಿ) ಅಕ್ರಮ ಮದ್ಯ ಮಾರಾಟ, ಸಾಗಾಣಿಕೆ ಹಾಗೂ ಮದ್ಯ ದಾಸ್ತಾನು ಮಾಡಬಾರದೆಂದು ಜಿಲ್ಲಾಧಿಕಾರಿಯವರ ಆದೇಶದಲ್ಲಿ ತಿಳಿಸಿಲಾಗಿದೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ :ಶ್ರೀ ಮಹದೇವಪ್ಪ ಅವರಿಗೆ ಕಂಠವಸ್ತ್ರ ಧರಿಸುವುದರ ಮೂಲಕ ಸ್ವಾಗತ
ಚಾಮರಾಜನಗರ ಜಿಲ್ಲೆಯಲ್ಲಿ ಆಆPI ಮಂಜುಳರವರಿಂದ ತೆರವಾಗಿದ್ದ ಸ್ಥಾನಕ್ಕೆ ಹನೂರ ತಾಲ್ಲೂಕಿನಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ (ಃಇಔ)ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ಮಹದೇವಪ್ಪನವರು ಚಾಮರಾಜನಗರ ಜಿಲ್ಲೆಗೆ ಉಪನಿರ್ದೇಶಕರಾಗಿ (ಆಡಳಿತ) ಅಧಿಕಾರ ಸ್ವೀಕರಿಸಿದ ಇವರಿಗೆ ಇಂದು 8/11/2017 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಾಮರಾಜನಗರ ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳು ಕಂಠವಸ್ತ್ರ ಧರಿಸುವುದರ ಮೂಲಕ ಸ್ವಾಗತ ಕೋರಿ ಅಭಿನಂದನೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ವಿ.ಎಂ ರಾಮಚಂದ್ರ ಜಿಲ್ಲಾ ಕಾರ್ಯದರ್ಶಿ, ಜಿಲ್ಲಾ ಸಂಘಟಿಕರು ಪಿ.ಕಮಲಮ್ಮ, (ಗೈಡ್), ಎನ್.ಅಶೋಕ್ ಕುಮಾರ್ (ಸ್ಕೌಟ್) ಯತೀಶ್ ಸ್ಕೌಟ್ ಮಾಸ್ಟರ್ ರವರುಗಳು ಹಾಜರಿದ್ದರು.
ನ. 9ರಂದು ಯೋಜನೆ ಸಾಂಖ್ಯಿಕ ವಿಜ್ಞಾನ ತಂತ್ರಜ್ಞಾನ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ನ. 08 - ಯೋಜನೆ, ಸಾಂಖ್ಯಿಕ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎಂ.ಆರ್. ಸೀತಾರಾಂ ಅವರು ನವೆಂಬರ್ 9ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಬೆಳಿಗ್ಗೆ 11 ಗಂಟೆಗೆ ಕೊಳ್ಳೇಗಾಲ ತಾಲೂಕಿನ ಕುರಟ್ಟಿ ಹೊಸೂರಿಗೆ ಆಗಮಿಸಿ ಅಲ್ಲಿ ನಡೆಯಲಿರುವ ಸಮುದಾಯ ಭವನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳುವರೆಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ನ.10ರಂದು ಜಿಲ್ಲಾಮಟ್ಟದ ಯುವಜನೋತ್ಸವ ಉದ್ಘಾಟನೆ
ಚಾಮರಾಜನಗರ, ನ. 08 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಯುವನೋತ್ಸವ, ಯುವ ಸಮ್ಮೇಳನ, ಯುವ ಕಾರ್ಯಾಗಾರ ಹಾಗೂ ಯುವ ತರಬೇತಿ ಶಿಬಿರದ ಉದ್ಘಾಟನೆ ನಗರದ ಸತ್ಯಮಂಗಲ ರಸ್ತೆಯಲ್ಲಿರುವ ಡಿ. ದೇವರಾಜ ಅರಸು ಭವನದಲ್ಲಿ ನವೆಂಬರ್ 10ರಂದು ಬೆಳಿಗ್ಗೆ 11.30 ಗಂಟೆಗೆ ನಡೆಯಲಿದೆ.
ಸಕ್ಕರೆ, ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ನಗರಸಭೆಯ ಅಧ್ಯಕ್ಷರಾದ ಶೋಭ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನÀಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಸಭೆ ಸದಸ್ಯರಾದ ಸೆಲ್ವಿಬಾಬು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಎರಡು ದಿನಗಳು ನಡೆಯಲಿರುವ ಕಾರ್ಯಕ್ರಮದಲ್ಲಿ ನವೆಂಬರ್ 10ರಂದು ಜಾನಪದ ನೃತ್ಯ, ಜಾನಪದ ಗೀತೆ, ಏಕಾಂಕ ನಾಟಕ, ಆಶುಭಾಷಣ, ಗಿಟಾರ್, ಹಾರ್ಮೋನಿಯಂ, ಶಾಸ್ತ್ರೀಯ ವಾದ್ಯಗಳು, ಶಾಸ್ತ್ರೀಯ ಗಾಯನ (ಹಿಂದೂಸ್ಥಾನಿ, ಕರ್ನಾಟಕ), ಶಾಸ್ತ್ರೀಯ ನೃತ್ಯ (ಮಣಿಪುರಿ, ಒಡಿಸ್ಸಿ. ಭರತನಾಟ್ಯಂ, ಕಥಕ್, ಕುಚಿಪುಡಿ) ನಡೆಯಲಿದೆ.
ನವೆಂಬರ್ 11ರಂದು ಯುವ ಸಮ್ಮೇಳನ, ಯುವ ಕಾರ್ಯಾಗಾರ ಹಾಗೂ ಯುವ ತರಬೇತಿ ಶಿಬಿರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ನ. 11ರಂದು ಕೈಗಾರಿಕಾ ಶೃಂಗಸಭೆ : ಪೂರ್ವಭಾವಿ ರೋಡ್ ಶೋ
ಚಾಮರಾಜನಗರ, ನ. 08 :- ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ನವೆಂಬರ್ 23 ಹಾಗೂ 24ರಂದು ಇಂಟರ್ ನ್ಯಾಷನಲ್ ಟ್ರೇಡ್ ಸೆಂಟರ್‍ನಲ್ಲಿ ಮಾರಾಟಗಾರರ ಅಭಿವೃದ್ಧಿ ಮತ್ತು ಹೂಡಿಕೆದಾರರ ಶೃಂಗ ಸಭೆ ನಡೆಯಲಿದೆ.ಶೃಂಗ ಸಭೆಯ ಪೂರ್ವಭಾವಿಯಾಗಿ ನವೆಂಬರ್ 11ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀ ಅವರ ಮಳಿಗೆಯಲ್ಲಿ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವನ್ನು ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಯ ಬಂಡವಾಳ ಹೂಡಿಕೆದಾರರ ಅನುಕೂಲಕ್ಕಾಗಿ ಆಯೋಜಿಸಲಾಗಿದೆ. ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಿಳಿಸಿದೆ.
ಹೆಚ್ಚಿನ ವಿವರಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ದೂರವಾಣಿ ಸಂಖೆÀ್ಯ 08226-224915 ಅಥವಾ 08226-224916 ಹಾಗೂ ತಿತಿತಿ.iಟಿvesಣಞಚಿಡಿಟಿಚಿಣಚಿಞಚಿ.ಛಿo.iಟಿ ವೆಬ್ ಸೈಟ್ ಸಂಪರ್ಕಿಸಿಯೂ ಪಡೆಯಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಳಂದೂರು : ವಿವಿಧ ತರಬೇತಿಗೆ ಪ.ವರ್ಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ನ. 08 - ಯಳಂದೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯು 2017-18ನೇ ಸಾಲಿಗೆ ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ ಯುವತಿಯರಿಗೆ ಲಘು ಹಾಗೂ ಭಾರಿ ವಾಹನ ಚಾಲನಾ ತರಬೇತಿ, ಕಂಪ್ಯೂಟರ್, ಗೃಹೋಪಯೋಗಿ ವಿದ್ಯುತ್ ಉಪಕರಣ, ಮೊಬೈಲ್ ದುರಸ್ತಿ, ಹೊಲಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.ವಾಹನ ಚಾಲನಾ ಹಾಗೂ ಹೊಲಿಗೆ ತರಬೇತಿಗೆ ಕನಿಷ್ಟ ವಿದ್ಯಾರ್ಹತೆ 10ನೇ ತರಗತಿ ಪಾಸಾಗಿರಬೇಕು. ಉಳಿದ ಎಲ್ಲ ತರಬೇತಿಗೆ ಕನಿಷ್ಟ 8ನೇ ತರಗತಿ ತೇರ್ಗಡೆಯಾಗಿರಬೇಕು. 18 ರಿಂದ 35ರ ವಯೋಮಿತಿಯ ನಿರುದ್ಯೋಗಿಗಳು ಅರ್ಹರು. ಯಾವುದೇ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಅಥವಾ ತರಬೇತಿ ಪಡೆಯುತ್ತಿರಬಾರದು. ಕುಟುಂಬದ ಆದಾಯ 2 ಲಕ್ಷ ರೂ. ಮೀರಿರಬಾರದು.
ಅರ್ಜಿಯನ್ನು ಯಳಂದೂರು ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಜಾತಿ ಪ್ರಮಾಣ ಪತ್ರ ಹಾಗೂ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 30ರ ಒಳಗೆ ಸಲ್ಲಿಸಬೇಕು. ಸಂಪೂರ್ಣ ವಿವರಗಳಿಗೆ ತಾಲೂಕು ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ನವೋದಯ ಪ್ರವೇಶ ಪರೀಕ್ಷೆ : ಅರ್ಜಿ ಆಹ್ವಾನ
ಚಾಮರಾಜನಗರ, ನ. 08 - ನವೋದಯ ಪ್ರವೇಶ ಪರೀಕ್ಷೆ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪ್ರಾಚಾರ್ಯರು, ಹೊಂಡರಬಾಳು ನವೋದಯ ಶಾಲೆಗೆ ತಲುಪಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕನ್ನಡ ಪುಸ್ತಕ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 08 - ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ಕಲಾವಿದರು, ಲೇಖಕರು, ಪ್ರಕಾಶಕರಿಗೆ ಕನ್ನಡ ಪುಸ್ತಕ ಸೊಗಸು-2016ರ ಬಹುಮಾನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಜನವರಿ 2016 ರಿಂದ ಡಿಸೆಂಬರ್ 2016ರ ಅವಧಿಯಲ್ಲಿ ಪ್ರಕಟವಾದ (ಮಕ್ಕಳ ಪುಸ್ತಕ, ಮುಖಪುಟ ಚಿತ್ರ ವಿನ್ಯಾಸ) ಕೃತಿಗಳಿಗೆ ಬಹುಮಾನಗಳನ್ನು ನೀಡಲಾಗುತ್ತದೆ.
ಆಸಕ್ತರು ಸ್ವಯಂ ಅರ್ಜಿ ಸಲ್ಲಿಸಬಹುದು. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರಕಲಾವಿದರ ಪೂರ್ಣ ವಿಳಾಸ, ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಲಗತ್ತಿಸಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು – 560002 ಇಲ್ಲಿಗೆ ನವೆಂಬರ್ 20ರೊಳಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿ ಅಥವಾ ವೆಬ್ ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ದೂರವಾಣಿ ಸಂಖ್ಯೆ 080-22484516/22107704 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
No comments:
Post a Comment