ಜಿಲ್ಲಾಡಳಿತ ಭವನದಲ್ಲಿ ಹೈ ಅಲರ್ಟ್ ಆದ ಪೊಲೀಸರು : (9480030980 ) ...VSS
ಚಾಮರಾಜನಗರ: ವ್ಯಾಪಕವಾಗಿ ಟಿಪ್ಪು ಜಯಂತಿ ವಿರೋದಿಸುತ್ತಿದ್ದ ಹಿನ್ನಲೆಯಲ್ಲಿ ಇಂದು ಯಾವುದೆ ಅಹಿತಕರ ಘಟನೆ ನಡೆಯದಂತೆ ವ್ಯಾಪಕ ಭದ್ರತೆ ಮಾಡಲಾಗಿತ್ತು. *ಜಿಲ್ಲಾಡಳಿತ ಭವನದ ಸುತ್ತಲೂ ಪೊಲೀಸ್ ಬಂದೂಬಸ್ತ್ ನಿಯೋಜಿಸಲಾಗಿತ್ತು.
ಮುಖ್ಯದ್ವಾರದಲ್ಲೆ ವಾಹನ ತಪಾಸಣೆ, ಅವರ ಬ್ಯಾಗ್ ತಪಾಸಣೆ ಮಾಡಿ ಒಳಗಡೆ ಕಳಿಸಿಕೊಡಲಾಗಿತ್ತು. *ಜಿಲ್ಲಾ ಎಸ್ಪಿ ಧರ್ಮೆಂದ್ರ ಕುಮಾರ್ ಮೀನಾ ಭದ್ರೆತೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದು ಡಿವೈಸ್ಪಿ ಗಂಗಾದರಸ್ವಾಮಿ ಅವರು ಖುದ್ದು ಹಾಜರಿದ್ದು ಯಾವುದೆ ಅಹಿತಕರ ಘಟನೆ ನಡೆಯದಂತೆ ನೋಡಿ ಕೊಂಡರು.
ದಕ್ಷಿಣ ಪೊಲೀಸ್ ಮಹಾನಿರ್ದೇಶಕರಾದ ವಿಪುಲ್ ಕುಮಾರ್ ಅವರು ಕಳೆದ ಹಿಂದಿನ ದಿನ ಬೇಟಿ ನೀಡಿ ಮುಂಜಾಗ್ರತವಾಗಿ ಪರಿಶೀಲಿಸಿದರು
*************************************************
ಟಿಪ್ಪು ಕಾಲದಲ್ಲಿ ಕೈಗಾರಿಕಾ ಅಭಿವೃದ್ಧಿ : ಉಸ್ತುವಾರಿ ಸಚಿವರಾದ ಗೀತಾ ಮಹದೇವಪ್ರಸಾದ್
ಚಾಮರಾಜನಗರ, ನ. 10 - ರಾಜ್ಯದಲ್ಲಿ ಕೈಗಾರೀಕರಣದ ಹೊಸ ಶಖೆ ಆರಂಭವಾಗಲು ಟಿಪ್ಪು ಸುಲ್ತಾನ್ ಅವರು ಕಾರಣರಾಗಿದ್ದು ಅವರ ಅವಧಿಯಲ್ಲಿಯೇ ಹತ್ತಿ, ರೇಷ್ಮೆ ನೇಯ್ಗೆ, ಜವಳಿ, ಚಿನ್ನ, ತಾಮ್ರ, ಕಬ್ಬಿಣ ಮೊದಲಾದ ಉತ್ಪಾದನಾ ಕೇಂದ್ರಗಳು ಇದ್ದವು ಎಂದು ಸಣ್ಣ ಕೈಗಾರಿಕೆ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ತಿಳಿಸಿದರು.ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಜರತ್ ಟಿಪ್ಪುಸುಲ್ತಾನ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಾಗತಿಕ ವಾಣಿಜ್ಯ ವಹಿವಾಟಿನಲ್ಲಿ ಸಾಂಬಾರ ಪದಾರ್ಥಗಳು, ಶ್ರೀಗಂಧಕ್ಕೆ ವಿದೇಶೀ ಮಾರುಕಟ್ಟೆ ಒದಗಿಸಲು ಹೆಚ್ಚಿನ ಮಹತ್ವ ನೀಡಿದರು. ಕರಾವಳಿಯ ಬೈಂದೂರಿನಲ್ಲಿ ಶಸ್ತ್ರಾಸ್ತ್ರ ಕಾರ್ಖಾನೆ ಸ್ಥಾಪನೆ, ಕ್ಷಿಪಣಿ ತಂತ್ರಜ್ಞಾನ ಮೊಟ್ಟಮೊದಲ ಬಾರಿಗೆ ಜಗತ್ತಿಗೆ ಪರಿಚಯಿಸಲು ಟಿಪ್ಪುಸುಲ್ತಾನರೇ ಕಾರಣರಾದರು ಎಂದು ಸಚಿವರು ತಿಳಿಸಿದರು.
ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಮಾಡುವ ಮೂಲಕ ರೈತರನ್ನು ಸ್ವಾವಲಂಬಿಗಳನ್ನಾಗಿಸಬೇಕೆಂಬ ಮಹತ್ತರ ಚಿಂತನೆ ಹೊಂದಿದ್ದ ಟಿಪ್ಪು ರಾಜ್ಯದಲ್ಲಿ ಮೊದಲ ಬಾರಿಗೆ ರೇಷ್ಮೆಯನ್ನು ಪರಿಚಯಿಸಿದರು. ವಾಣಿಜ್ಯ ಬೆಳೆಯಾದ ಅಡಿಕೆ, ತಂಬಾಕು, ಮಾವು, ಹುಣಸೆ ಬೆಳೆಗೆ ಪ್ರೋತ್ಸಾಹ ನೀಡಿದರು. ರೈತರು ಮತ್ತು ವ್ಯಾಪಾರಿಗಳು ಪಾಲುದಾರರಾಗಿರುವ ವಾಣಿಜ್ಯ ನಿಗಮವನ್ನು ಸ್ಥಾಪಿಸಿದ ಕೀರ್ತಿ ಟಿಪ್ಪು ಅವರದ್ದಾಗಿತ್ತು ಎಂದರು.
ಟಿಪ್ಪು ಅತ್ಯಂತ ಸರಳ ಜೀವಿ. ರಾಜಮಹಾರಾಜರಂತೆ ಟಿಪ್ಪು ಅರಮನೆಗಳು, ಚಿನ್ನ ಅಥವ ವಜ್ರಗಳಿಂದ ತುಂಬಿರಲಿಲ್ಲ. ವೈಭವ ಇರದೆ ಸರಳತೆ ಇತ್ತು. ಟಿಪ್ಪು ಆಡಳಿತದಲ್ಲಿ ಅನೋನ್ಯ ಬಾಳ್ವೆ ನಡೆಯುತ್ತಿತ್ತು. ನಾಡಿನ ಪ್ರಗತಿಗೆ ಕಂಟಕರಾಗಿದ್ದ ಬ್ರಿಟಿಷರು ಮತ್ತು ಅವರ ಜತೆ ಸೇರಿಕೊಂಡಿದ್ದ ದೇಶದ್ರೋಹಿ ಪಾಳೆಗಾರರ ಪಾಲಿಗೆ ಟಿಪ್ಪು ಶತ್ರುವಾಗಿದ್ದರು ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಸಾಮರಸ್ಯ ಸಹಬಾಳ್ವೆಯ ದೀರ್ಘ ಇತಿಹಾಸವನ್ನು ಹೊಂದಿರುವ ನಮ್ಮ ನಾಡಿನಲ್ಲಿ ಹಲವಾರು ಮಹಾಪುರುಷರ ಜಯಂತಿಯನ್ನು ಸಮಾನವಾಗಿ ಆಚರಿಸುತ್ತಿದ್ದೇವೆ ಎಂದು ಉಸ್ತುವಾರಿ ಸಚಿವರು ನುಡಿದರು.
ಟಿಪ್ಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಧ್ರುವನಾರಾಯಣ ಅವರು ಟಿಪ್ಪು ಅಪ್ರತಿಮ ವೀರ ಹಾಗೂ ಉತ್ತಮ ಆಡಳಿತಗಾರರಾಗಿದ್ದರು. ಟಿಪ್ಪು ಅವರ ಆಳ್ವಿಕೆ ಅವಧಿಯಲ್ಲಿ ಕೋಮುಸೌಹೌರ್ಧತೆ ಇತ್ತು. ದಕ್ಷಿಣ ಭಾರತದಲ್ಲಿಯೇ ಟಿಪ್ಪು ಅವರು ಹೋರಾಟ ಹಾಗೂ ಅಭಿವೃದ್ಧಿ ಕಾರ್ಯದಿಂದ ಹೆಸರಾಗಿದ್ದಾರೆ ಎಂದರು.
ಮುಸ್ಲಿಂ ಬಾಂಧವರು ಶೈಕ್ಷಣಿಕವಾಗಿಯೂ ಮುಂದೆ ಬರಬೇಕು. ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 3800 ಕೋಟಿ ರೂ. ಅನುದಾನವನ್ನು ಪ್ರತೀ ವರ್ಷ ವೆಚ್ಚ ಮಾಡುತ್ತಿದೆ. ವಸತಿ ಶಾಲೆಗಳನ್ನು ಸಹ ಸಾಕಷ್ಟು ತೆರೆಯುತ್ತಿದೆ. ಎಲ್ಲ ವರ್ಗದವರು ಸಮಾನವಾಗಿ ಶಿಕ್ಷಣ ಪಡೆದರೆ ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಟಿಪ್ಪು ಸುಲ್ತಾನ್ ಬ್ರಿಟಿಷರ ಪಾಲಿಗೆ ಹುಲಿಯಾಗಿದ್ದ ಅಪ್ಪಟ ದೇಶಪ್ರೇಮಿ. ದೇಶದ ಹಿತಕ್ಕೋಸ್ಕರ ಮಕ್ಕಳನ್ನೇ ಒತ್ತೆ ಇಟ್ಟ ಸೇನಾನಿ. ಒಳ್ಳೆಯ ಆಡಳಿತ ನೀಡಿ ಮಾದರಿಯಾಗಿದ್ದಾರೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮಾತನಾಡಿ ಟಿಪ್ಪು ಪರಧರ್ಮದ ಬಗ್ಗೆ ಸಹಿಷ್ಣುತೆ ಉಳ್ಳವನಾಗಿದ್ದ. ಈ ಬಗ್ಗೆ ಇತಿಹಾಸದಿಂದ ನಾವು ಅರಿಯಬಹುದಾಗಿದೆ. ಟಿಪ್ಪುವಿನ ಕೊಡುಗೆ ಬಗ್ಗೆ ಸಾಕಷ್ಟು ಮಾಹಿತಿಗಳು ಇವೆ ಎಂದರು.
ರಂಗಾಯಣದ ನಿವೃತ್ತ ನಿರ್ದೇಶಕರು, ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರೂ ಆದ ಸಿ. ಬಸವಲಿಂಗಯ್ಯ ಮಾತನಾಡಿ ಸ್ವತಂತ್ರಪೂರ್ವ ಭಾರತದಲ್ಲಿ ಮೊದಲಬಾರಿಗೆ ವಿದೇಶೀಯರ ವಿರುದ್ಧ 3 ಬಾರಿ ಯುದ್ಧದಲ್ಲಿ ಟಿಪ್ಪು ಅವರು ಜಯಶೀಲರಾದರು. ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ರಾಜ್ಯವನ್ನು ಟಿಪ್ಪು ಪ್ರಗತಿಪಥದತ್ತ ಕೊಂಡೊಯ್ದರು ಎಂದರು.
ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಎಂಬ ಕುರಿತ ಕಿರುಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ಬಿಡುಗಡೆ ಮಾಡಿದರು.
ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಆರ್. ಉಮೇಶ್, ನಗರಸಭೆ ಅಧ್ಯಕ್ಷರಾದ ಶೋಭ, ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಸದಸ್ಯರಾದ ಶಶಿಕಲಾ ಸೋಮಲಿಂಗಪ್ಪ, ನಗರಸಭಾ ಸದಸ್ಯರಾದ ಆರಿಫ್, ಇಮ್ರಾನ್, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ. ನಾಗವೇಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅನಿಲಭಾಗ್ಯ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ
ಚಾಮರಾಜನಗರ, ನ. 10 :- ರಾಜ್ಯದ ಎಲ್ಲ ಕುಟುಂಬಗಳಿಗೆ ಅನಿಲ ಸಂಪರ್ಕ ಒದಗಿಸಿ ಪರಿಸರ ಸ್ನೇಹಿ ರಾಜ್ಯವನ್ನಾಗಿಸಲು ಜಾರಿಗೆ ತರಲಾಗಿರುವ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ ಕುರಿತ ಜಿಲ್ಲಾಮಟ್ಟದ ಆಯ್ಕೆ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ ಕಾರ್ಮಿಕ, ಸಮಾಜ ಕಲ್ಯಾಣ, ಅರಣ್ಯ ಹಾಗೂ ಆಹಾರ ಇಲಾಖೆಗಳ ಮೂಲಕ ಗುರುತಿಸಲ್ಪಡುವ ಫಲಾನುಭವಿಗಳಿಗೆ ಯೋಜನೆಯಡಿ ಅಡುಗೆ ಅನಿಲ ಸಿಲಿಂಡರ್, ಸ್ಟವ್ ಇನ್ನಿತರ ಅಗತ್ಯ ಪರಿಕರಗಳನ್ನು ನೀಡಲು ತ್ವರಿತವಾಗಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಯೋಜನೆಗೆ ಅರ್ಹ ಕುಟುಂಬಗಳನ್ನು ಆಯ್ಕೆ ಮಾಡಿ ನಿಯಮಾನುಸಾರ ಸವಲತ್ತು ತಲುಪಿಸುವ ದಿಸೆಯಲ್ಲಿ ಕಾರ್ಯೋನ್ಮುಖರಾಗಬೇಕು. ತಾಲೂಕು ಮಟ್ಟದಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ವಹಿಸಬೇಕಿರುವ ಕ್ರಮಗಳಿಗೆ ಮುಂದಾಗಬೇಕು ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಸೂಚಿಸಿರುವ ಕಾಲಮಿತಿಯೊಳಗೆ ಯೋಜನೆ ಪೂರ್ಣವಾಗಿ ಅನುಷ್ಠಾನವಾಗಬೇಕು. ಪ್ರಥಮ ಹಂತದಲ್ಲಿ ನಿಗಧಿತ ಗುರಿಗೆ ಅನುಗುಣವಾಗಿ ಫಲಾನುಭವಿಗಳ ಆಯ್ಕೆ ಮಾಡಬೇಕು. ಯೋಜನೆ ಫಲಪ್ರದವಾಗಲು ಅಗತ್ಯವಿರುವ ಎಲ್ಲ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ಬಿ. ರಾಮು ಅವರು ಮಾತನಾಡಿ ಕಾರ್ಮಿಕ, ಅರಣ್ಯ, ಸಮಾಜ ಕಲ್ಯಾಣ ಇಲಾಖೆಗಳು ಆಹಾರ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಯೋಜನೆಯನ್ನು ಅನುಷ್ಠಾನ ಮಾಡಬೇಕು. ನಕಲು ಅನಿಲಸಂಪರ್ಕ ತಡೆಯಲು ಫಲಾನುಭವಿಗಳ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿ ಅಭಿವೃದ್ಧಿಪಡಿಸಿರುವ ನೂತನ ನಮೂನೆಯನ್ನು ಬಳಸಿಕೊಳ್ಳಬೇಕು ಎಂದರು.
ಆಹಾರ ಇಲಾಖೆ ಉಪನಿರ್ದೇಶಕರಾದ ಆರ್. ರಾಚಪ್ಪ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಯೋಜನೆಯಡಿ 24111 ಫಲಾನುಭವಿಗಳನ್ನು ಗುರುತಿಸಬೇಕಿದೆ. ಈ ಪೈಕಿ ಚಾಮರಾಜನಗರ ತಾಲೂಕಿನಲ್ಲಿ 9809, ಗುಂಡ್ಲುಪೇಟೆ ತಾಲೂಕಿನಲ್ಲಿ 3985, ಕೊಳ್ಳೇಗಾಲ ತಾಲೂಕಿನಲ್ಲಿ 7828 ಹಾಗೂ ಯಳಂದೂರು ತಾಲೂಕಿನಲ್ಲಿ 2489 ಫಲಾನುಭವಿಗಳನ್ನು ಗುರುತಿಸಬೇಕಾಗುತ್ತದೆ ಎಂದರು.
ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ನ. 14ರಂದು ಡೇನಲ್ಮ್ ಯೋಜನೆ ಕುರಿತು ಕಾರ್ಯಾಗಾರ
ಚಾಮರಾಜನಗರ, ನ. 10 - ಡೇನಲ್ಮ್ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳ ಸಂರಕ್ಷಣೆ, ಜೀವನೋಪಾಯ ಹಾಗೂ ನಿಯಂತ್ರಣ ಅಧಿನಿಯಮ ಕುರಿತ ಜಿಲ್ಲಾಮಟ್ಟದ ಕಾರ್ಯಾಗಾರವು ನವೆಂಬರ್ 14ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾಡಳಿತ ಭವವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಾಗಾರದಲ್ಲಿ ಡೇನಲ್ಮ್ ಯೋಜನೆಯಡಿ ರಚಿಸಲಾಗಿರುವ ಪಟ್ಟಣ ವ್ಯಾಪಾರ ಸಮಿತಿ ಸದಸ್ಯರು, ನಗರ ಸ್ಥಳೀಯ ಸಂಸ್ಥೆ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಯೋಜನೆಯ ಅನುಷ್ಠಾನದ ಪಾಲುದಾರರು ಭಾಗವಹಿಸುವರೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಉಸ್ತುವಾರಿ ಸಚಿವರಿಂದ ವಿದ್ಯುಕ್ತ ಚಾಲನೆ
ನಗರದ ಡಿ. ದೇವರಾಜ ಅರಸು ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವ ಪ್ರಸಾದ್) ಅವರು ದೀಪ ಬೆಳಗಿಸುವ ಮೂಲಕ ಯುವಜನೋತ್ಸವ ಉದ್ಘಾಟಿಸಿದರು.
ಇದೇ ವೇಳೆ ಮಾತನಾಡಿದ ಉಸ್ತುವಾರಿ ಸಚಿವರು ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಜಿಲ್ಲೆಯ ಯುವಪ್ರತಿಭಾವಂತರು ತಮ್ಮ ಕಲಾಪ್ರದರ್ಶನವನ್ನು ಯಶಸ್ವಿಯಾಗಿ ನೀಡಬೇಕು. ಈ ಮೂಲಕ ರಾಜ್ಯ ಮಟ್ಟದ ಯುವನೋತ್ಸವಕ್ಕೆ ಅರ್ಹರಾಗಬೇಕು. ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ನಮ್ಮ ಜಿಲ್ಲೆಯ ಯುವ ಜನರು ಹೆಚ್ಚು ಬಹುಮಾನ ಪಡೆಯುವಂತಾಗಲಿ ಎಂದು ಶುಭ ಕೋರಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಾತನಾಡಿ ಚಾಮರಾಜನಗರ ಜಿಲ್ಲೆÉ ಜಾನಪದ ಕಲೆಗಳ ತವರೂರು. ಜಾನಪದ ಕಲೆ ಪರಂಪರೆ ಪೋಷಿಸುವಲ್ಲಿ ಸಾಕಷ್ಟು ಜನಪದ ಕಲಾವಿದರು ಶ್ರಮಿಸಿದ್ದಾರೆ. ವರನಟ ಡಾ. ರಾಜ್‍ಕುಮಾರ್, ಸುಂದರ್ ಕೃಷ್ಣ ಅರಸ್‍ರಂತಹ ಮೇರು ಕಲಾವಿದರು ನಮ್ಮ ಜಿಲ್ಲೆಯವರೇ ಆಗಿದ್ದಾರೆ. ಯುವಜನರು ಶ್ರೇಷ್ಠ ಕಲಾವಿದರ ಮಾರ್ಗದರ್ಶನದಲ್ಲಿ ಉತ್ತಮ ತರಬೇತಿ ಹೊಂದಿ ಜಿಲ್ಲೆಗೆ ಉತ್ತಮ ಫಲಿತಾಂಶ ನೀಡಬೇಕೆಂದು ತಿಳಿಸಿದರು.
ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರೂ ಆದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಜಾನಪದ ಕಲೆಗೆ ಹೆಸರಾದ ಚಾಮರಾಜನಗರ ಜಿಲ್ಲೆಯಲ್ಲಿ ಸಿದ್ದಪಾಜಿ, ಮಂಟೇಸ್ವಾಮಿ ಕಲಾ ಪರಂಪರೆಯನ್ನು ಸ್ಥಳೀಯರು ಹಿರಿದಾಗಿ ಬೆಳೆಸಿದ್ದಾರೆ. ಇಂಥಹ ಜಿಲ್ಲೆಯಲ್ಲಿ ಹೆಚ್ಚು ಸ್ಪರ್ಧಿಗಳು ಯುವಜನೋತ್ಸವದಲ್ಲಿ ಪಾಲ್ಗೊಳ್ಳುವಂತಾಗಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ 2016- 17ನೇ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿದ ಯುವಜನರು ಹಾಗೂ ವಿವಿಧ ಸಂಘ ಸಂಸ್ಥೆಗಳನ್ನು ಗೌರವಿಸಲಾಯಿತು.
ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ನಗರಸಭೆಯ ಅಧ್ಯಕ್ಷರಾದ ಶೋಭ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನÀಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಲಾ ಸೋಮಲಿಂಗಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಚಲುವಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸರ್ಕಾರದ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ: ಸಿ.ಪುಟ್ಟರಂಗ ಶೆಟ್ಟಿ
ಚಾಮರಾಜನಗರ, ನ. 10 - ಸರ್ಕಾರದ ವಿವಿಧ ಯೋಜನೆ ಸವಲತ್ತುಗಳನ್ನು ತಾರತÀಮ್ಯ ಮಾಡದೆ ಅರ್ಹರಿಗೆ ತಲುಪಿಸುವಲ್ಲಿ ಎಲ್ಲರು ಮುಂದಾಗಬೇಕಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರೂ ಆದ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.
ತಾಲೂಕಿನ ಹರದನಹಳ್ಳಿ ಹೋಬಳಿಯ ಯನಗಹಳ್ಳಿಯಲ್ಲಿ ಹೋಬಳಿ ಮಟ್ಟದ ಜನಸಂಪರ್ಕ ಸಭೆ ಮತ್ತು ಸಾಗುವಳಿ ಚೀಟಿ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಪಂಚಾಯಿತಿ ಅಧಿಕಾರಿಗಳು ಮತ್ತು ಸ್ಫಳಿಯ ಜನಪ್ರತಿನಿಧಿಗಳು ಸರ್ಕಾರದ ಸೌಲಭ್ಯಗಳನ್ನು, ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಯಾವುದೇ ಭೇದ ಬಾವ ಮಾಡಬಾರದು. ತಾರತಮ್ಯ ತೋರದೆ ಅರ್ಹ ಫಲಾನುಭವಿಗಳಿಗೆ ನೆರವು ನೀಡಬೇಂದು ತಿಳಿಸಿದರು.
ಪಂಚಾಯಿತಿ ಅಧಿಕಾರಿಗಳು ಗ್ರಾಮ ಸಭೆಗಳಲ್ಲಿ ಜನಸಾಮಾನ್ಯರ ಕುಂದುಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಹೆಚ್ಚಿನ ಆಸಕ್ತಿಯನ್ನು ವಹಿಸಬೇಕು. ಅನುದಾನ ಅಗತ್ಯತೆ ಇದ್ದರೆ ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹರಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ಭೂಮಿ ಒದಗಿಸುವಂತೆ ಕೆಲವರು ಮನವಿ ಮಾಡಿದರು ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಗ್ರಾಮ ವ್ಯಾಪ್ತಿಯಲ್ಲಿ ಸಾಗುವಳಿ ಭೂಮಿ ಇರುವ ಬಗ್ಗೆ ಮಾಹಿತಿ ಪಡೆದು ಕಾನೂನು ರೀತಿಯಲ್ಲಿ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಶಶಿಕಲಾ ಸೋಮಲಿಂಗಪ್ಪ ಮಾತನಾಡಿ ಸರ್ಕಾರದಿಂದ ಜಾರಿಯಾಗಿರುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇದರಿಂದ ಆರ್ಥಿಕವಾಗಿ ಜೀವನ ಮಟ್ಟ ಸುಧಾರಿಸಲು ಸಾಧ್ಯವಾಗುತ್ತದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮೂಲ ಸೌಲಭ್ಯ ಒದಗಿಸಲು ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದರು.
ಯನಗಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌಡಹಳ್ಳಿ, ಅಜ್ಜಟಿಪುರ ಗ್ರಾಮಗಳ 62 ಫಲಾನುಭವಿಗಳಿಗೆ ಸಾಗುವಳಿ ಹಕ್ಕು ಪತ್ರ ವಿತರಿಸಲಾಯಿತು. ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹೇಶ್ ಎಂಬುವವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂಗಳ ಚೆಕ್ ವಿತರಿಸಲಾಯಿತು. ಇದಲ್ಲದೆ ಮನೆ ಮಂಜೂರಾತಿ ಪತ್ರ, ಟಾರ್‍ಪಲ್, ಮಣ್ಣಿನ ಮಾದರಿ ಪರೀಕ್ಷಾ ಚೀಟಿ, ಸುರಕ್ಷಾ ವಿಮಾ ಪಲಾನುಭವಿ ಪತ್ರ ಹಾಗೂ ಭಾಗ್ಯ ಲಕ್ಷ್ಮಿ ಬಾಂಡ್ ಸಹ ವಿತರಿಸಿದರು.
ಸಾಗುವಳಿ ಸಮಿತಿಯ ಸದಸ್ಯರಾದ ಸೋಮಲಿಂಗಪ್ಪ, ರಂಗಸ್ವಾಮಿ, ತಾಲೂಕು ಪಂಚಾಯತ್ ಸದಸ್ಯರಾದ ದೊಡ್ಡತಾಯಮ್ಮ, ದೊಡ್ಡಮ್ಮ, ತಹಸಿಲ್ದಾರ್ ಕೆ.ಪುರಂದರ, ಗ್ರಾಪಂ ಅದ್ಯಕ್ಷ ಮಹದೇವಯ್ಯ ಇತರರು ಹಾಜರಿದ್ದರು.
No comments:
Post a Comment