Wednesday, 15 November 2017

ಬೈಕ್ ಗೆ ಬಸ್ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು (15-11-2017)

ಬೈಕ್ ಗೆ  ಬಸ್ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು      


 *ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ* ಚಾಮರಾಜನಗರ: ಬೈಕ್ ಗೆ  ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಒಂದೇ ಕುಟುಂಬದ ಮೂವರಹ ಸ್ಥಳದಲ್ಲೇ  ಸಾವನ್ನಪ್ಪಿದ ಘಟನೆ ಜಿಲ್ಲೆಯ ಯಳಂದೂರು ಸರ್ಕಾರಿ ಆಸ್ಪತ್ರೆ ಸಮೀಪದ ರಸ್ತೆಯಲ್ಲಿ ನಡೆದಿದೆ.
*ಯರಿಯೂರು ಗ್ರಾಮದ ಸತೀಶ್ (೨೫) ಪತ್ನಿ ಬಿಂದು (೧೯) ಹಾಗೂ ತಾಯಿ ರಾಜಮ್ಮ (೪೯) ಎಂಬುವವರೆ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. *ಪತ್ನಿ   ಆನಾರೋಗ್ಯ ನಿಮಿತ್ತ ಪತಿ,ತಾಯಿ ಆಸ್ಪತ್ರೆಗೆ ಬಂದಿದ್ದರು ಎನ್ನಲಾಗಿದೆ. *ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿಕೊಂಡು ಬೈಕ್ ನಲ್ಲಿ ತೆರಳುತ್ತಿದ್ದಾಗ ಯಳಂದೂರು ಕಡೆಯಿಂದ ಕೊಳ್ಳೆಗಾಲಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. *ಯಳಂದೂರು ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು