Saturday, 18 November 2017

ವಾಲ್ಮೀಕಿಯವರನ್ನು ಸೀಮಿತಗೊಳಿಸುವುದು ಸಲ್ಲದು: ಗೀತಾಮಹದೇವಪ್ರಸಾದ್ (18-11-2017)

   

ವಾಲ್ಮೀಕಿಯವರನ್ನು ಸೀಮಿತಗೊಳಿಸುವುದು ಸಲ್ಲದು: ಗೀತಾಮಹದೇವಪ್ರಸಾದ್

 ಚಾಮರಾಜನಗರ, ನ. 18 - ಇಡೀ ವಿಶ್ವದ ಗಮನ ಸೆಳೆದ ಸಾಮಾಜಿಕ, ಅರ್ಥಿಕ, ಧಾರ್ಮಿಕ ಮೌಲ್ಯಗಳನ್ನು ಪ್ರತಿಪಾದಿಸುವಂತಹ ರಾಮಾಯಣ ಮಹಾಕಾವ್ಯವನ್ನು ಬರೆದ ವಾಲ್ಮೀಕಿಯವರನ್ನು ಯಾವುದೇ ಒಂದು ಜಾತಿಗೆ, ಧರ್ಮಕ್ಕೆ ಸೀಮಿತಗೊಳಿಸುವುದು ಸಮಂಜಸವಲ್ಲ ಎಂದು ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ಅವರು ಅಭಿಪ್ರಾಯ ಪಟ್ಟರು.



ನಗರದ ಮಾರಿಗುಡಿ ಬಳಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಇಂದು ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಮಾಯಣ ಮಹಾಕಾವ್ಯ ಭಾರತದ ಅದಿಕವಿ ವಾಲ್ಮೀಕಿಯಿಂದ ರಚನೆಗೊಂಡಿದೆ. ಎಲ್ಲಾ ರಾಮಾಯಣ ಕೃತಿಗಳಿಗೆ ವಾಲ್ಮೀಕಿ ರಾಮಾಯಣವೇ ಮೂಲವಾಗಿದೆ. ಇತಿಹಾಸವನ್ನು ನೋಡಲು ಹೊರಟರೆ ಸಂತರು, ಶರಣರು, ದಾಸರು ಮೊದಲಾದವರು ಸರ್ವ ಸಮಾನತೆಯ ಬಗ್ಗೆ ಪ್ರತಿಪಾದಿಸಿರುವುದು ಕಂಡುಬರುತ್ತದೆ ಎಂದರು.
ಬುದ್ಧ, ಬಸವಣ್ಣ, ಅಂಬೇಡ್ಕರ್, ವಾಲ್ಮೀಕಿ ಹೀಗೆ ಎಲ್ಲ ಮಹಾನ್ ಪುರುಷರನ್ನು ಒಂದು ಪಂಗಡ, ಸಮುದಾಯಕಷ್ಟೆ ಮೀಸಲಿರಿಸದೇ ಅವರೆಲ್ಲರನ್ನು ಜಗದೊದ್ಧಾರಕರೆಂದು ಪರಿಗಣಿಸಬೇಕಾದ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ. 24.1ರಷ್ಟು ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಜನರಿದ್ದಾರೆ. ಈ ಜನಸಂಖ್ಯೆಗೆ ಅನುಗುಣವಾಗಿ 19542 ಕೋಟಿ ರೂ. ಗಳನ್ನು ಪರಿಶಿಷ್ಟ ಜಾತಿ, ಪಂಗಡ ಕಲ್ಯಾಣ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರ ಮೀಸಲಿರಿಸಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಲೋಕಸಭಾ ಸದಸ್ಯರಾದ ಅರ್. ಧ್ರುವನಾರಾಯಣ ಅವರು ವಾಲ್ಮೀಕಿ ಬರೆದ ರಾಮಾಯಣದ ರಾಮರಾಜ್ಯದ ಪರಿಕಲ್ಪನೆಯನ್ನು ಗಾಂಧಿಜೀಯವರು ಸಹ ಪ್ರತಿಪಾದಿಸಿದ್ದಾರೆ. ಸುಖ, ಶಾಂತಿ, ಸಹಬಾಳ್ವೆ ನಡೆಸಬೇಕು ಎಂಬುದು ರಾಮರಾಜ್ಯದ ಆದರ್ಶವಾಗಿದೆ ಎಂದರು.
ಪರಿಶಿಷ್ಟರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಎಲ್ಲ ಶೋಷಿತ ವರ್ಗಗಳು ಶಿಕ್ಷಣಕ್ಕೆ ಒತ್ತು ನೀಡಿದಾಗ ಅಭಿವೃದ್ಧಿ ಸಾಧ್ಯವಾಗಲಿದೆ. ರಾಜ್ಯಸರ್ಕಾರ ಮೊರಾರ್ಜಿ ವಸತಿ ಶಾಲೆ ಸೇರಿದಂತೆ ಇತರೆ ಅನುಕೂಲಗಳನ್ನು ಕಲ್ಪಿಸಿದೆ. ಇದರ ಸದುಪಯೋಗವಾಗಬೇಕು ಎಂದು ಧ್ರುವನಾರಾಯಣ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸರ್ಕಾರದ ಸೌಲಭ್ಯಗಳನ್ನು ಪ್ರತಿಯೊಬ್ಬರು ಪಡೆದು ಸಮಾಜದಲ್ಲಿ ಮೇಲೆ ಬರಬೇಕು. ಉನ್ನತ ಆದರ್ಶ ಧ್ಯೇಯಗಳನ್ನು ಪಾಲಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಬಿ. ನಂಜುಂಡಸ್ವಾಮಿ ಮುಖ್ಯ ಭಾಷಣ ಮಾಡಿದರು.
ಇದೇ ವೇಳೆ ಸರ್ಕಾರದ ವಿವಿಧ ಸವಲತ್ತುಗಳನ್ನು ಗಣ್ಯರು ಅರ್ಹ ಫಲಾನುಭವಿಗಳಿಗೆ ವಿತರಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್. ವಿ. ಚಂದ್ರು, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಆರ್. ಉಮೇಶ್, ನಗರಸಭೆ ಅಧ್ಯಕ್ಷರಾದ ಶೋಭಾ, ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಚುಡಾ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಕೆ.ಪಿ. ಸದಾಶಿವಮೂರ್ತಿ, ಕೆ. ನವೀನ್, ಸದಸ್ಯರಾದ ಸಿ.ಎನ್. ಬಾಲರಾಜು, ಶಿವಮ್ಮ, ಶಶಿಕಲಾಸೋಮಲಿಂಗಪ್ಪ, ಎ.ಪಿ.ಎಂ.ಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಜಿಲ್ಲಾಧಿಕಾರಿ ಬಿ. ರಾಮು, ಜಿ.ಪಂ.ಸಿ.ಇ.ಒ. ಡಾ. ಕೆ. ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಎಸ್. ಕೃಷ್ಣಪ್ಪ, ಇತರೆ ಜನಪ್ರತಿನಿಧಿಗಳು ಸಮುದಾಯದ ಮುಖಂಡರು ವೇದಿಕೆಯಲ್ಲಿದ್ದರು.
ವೇದಿಕೆ ಸಮಾರಂಭಕ್ಕೂ ಮೊದಲು ನಡೆದ ವಾಲ್ಮೀಕಿ ಅವರ ಭಾವಚಿತ್ರ ಮೆರವಣಿಗೆಗೆ ಪ್ರವಾಸಿ ಮಂದಿರದ ಬಳಿ ಉಸ್ತುವಾರಿ ಸಚಿವರಾದ ಗೀತಾಮಹದೇವಪ್ರಸಾದ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ,್ರ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಇತರರು ಚಾಲನೆ ನೀಡಿದರು

     
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಶ್ರೀ ಎಂ.ಆರ್.ವೆಂಕಟೇಶ್ ರವರ ಅಧ್ಯಕ್ಷತೆಯಲ್ಲಿ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಕುಂದು ಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಶ್ರೀ ಎಂ.ಆರ್.ವೆಂಕಟೇಶ್ ರವರ ಅಧ್ಯಕ್ಷತೆಯಲ್ಲಿ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಕುಂದು ಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆಯನ್ನು ಕ.ರಾ.ಸ.ಕ.ಆಯೋಗದ ಸದಸ್ಯರುಗಳಾದ ಶ್ರೀ ಗೋಕುಲನಾರಾಯಣಸ್ವಾಮಿ, ಶ್ರೀಮತಿ ಮೀನಾಕ್ಷಮ್ಮ, ಕಾರ್ಯದರ್ಶಿಗಳಾದ ಶ್ರೀ ಮಂಜುನಾಥ್, ಸಫಾಯಿ ಕಾರ್ಮಿಕ ಆಯೋಗ ಹಾಗೂ  ಪ್ರಾಧಿಕಾರದ ಕಾರ್ಯದರ್ಶಿಯವರಾದ ಶ್ರೀಮತಿ ಎಂ.ಜೆ.ರೂಪಾ, ಕೆ.ಎ.ಎಸ್, ಶ್ರೀ ಸತೀಶ್, ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಚಾಮರಾಜನಗರ ರವರ ಉಪಸ್ಥಿತಿಯಲ್ಲಿ ಸಭೆಯನ್ನು ಏರ್ಪಡಿಸಲಾಗಿತ್ತು. ಸಭೆಯಲ್ಲಿ ಪೌರಕಾರ್ಮಿಕರ ಕುಂದು ಕೊರತೆಗಳ ಬಗ್ಗೆ ಚರ್ಚಿಸಲಾಗಿ, ಪೌರಕಾರ್ಮಿಕರಿಗೆ ಖಾಯಂ ವಸತಿ ನೀಡುವ ಬಗ್ಗೆ ಚರ್ಚಿಸಲಾಗಿ, ಸರ್ಕಾರದ ವತಿಯಿಂದ ಜಮೀನನ್ನು ಮಂಜೂರಾತಿ ಪಡೆದು ವಸತಿ ನಿರ್ಮಿಸಲು ನಿರ್ಮಾನಿಸಲಾಯಿತು. ಪೌರಕಾರ್ಮಿಕರಿಗೆ ಪರಿಕರಗಳನ್ನು (ಗ್ಲೌಸ್, ಮಾಸ್ಕ್, ಶೂ ಇತರೆ) ನೀಡಿರುವ ಬಗ್ಗೆ ಚರ್ಚಿಸಲಾಗಿತು. ಹಾಗೂ ಇತರೆ ಕುಂದು ಕೊರತೆಗಳ ಬಗ್ಗೆ ಚರ್ಚಿಸಲಾಯಿತು.
          ಸಭೆಯಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಚಾಮರಾಜನಗರ ಜಿಲ್ಲೆ, ಡಾ|| ಬಿ.ಆರ್,ಅಂಬೇಡ್ಕರ್ ನಿಗಮದ ಅಧಿಕಾರಿಗಳು, ಚಾ|| ನಗರ ಜಿಲ್ಲೆ, ಶ್ರೀಮತಿ ಪುಷ್ಪಲತಾ, ಕಾರ್ಯದರ್ಶಿಗಳು ಹಾಗೂ ಸಂಚಾಲಕರು, ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಸಂಘ ಚಾಮರಾಜನಗರ ಜಿಲ್ಲೆ ಹಾಗೂ ಮಹದೇಶ್ವರಬೆಟ್ಟದ ಪೌರಕಾರ್ಮಿಕರ ಸಂಘದ ಅಧ್ಯಕ್ಷರು, ಸದಸ್ಯರುಗಳು ಹಾಗೂ ಪ್ರಾಧಿಕಾದಿಕಾರದ ಪೌರಕಾರ್ಮಿಕ  ನೌಕರರುಗಳು ಹಾಜರಿದ್ದರು.
 

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು