ಕೃಷಿಯಲ್ಲಿ ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲು ಧ್ರುವನಾರಾಯಣ ಸಲಹೆ
ಚಾಮರಾಜನಗರ, ನ. 20 - ಆಧುನಿಕ ತಂತ್ರಜ್ಞಾನ ಹಾಗೂ ಲಭ್ಯವಿರುವ ನೀರನ್ನು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಕೃಷಿಯಲ್ಲಿ ಹೆಚ್ಚು ಇಳುವರಿ ಪಡೆಯಲು ಸಾಧ್ಯವಿದೆ ಎಂದು ಧ್ರುವನಾರಾಯಣ ತಿಳಿಸಿದರು.
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಇಂದು ರಾಜ್ಯ ಕೃಷಿ ಮಾರಾಟ ಅಧ್ಯಯನ ಸಂಸ್ಥೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ನಡೆದ ಅರಿಶಿನ ಕೊಯ್ಲು, ತಂತ್ರಜ್ಞಾನ ಹಾಗೂ ಮಾರುಕಟ್ಟೆ ವ್ಯವಸ್ಥೆ ಕುರಿತು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕೃಷಿಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರಿಂದ ಇಳುವರಿಯಲ್ಲಿ ಹೆಚ್ಚು ಪಡೆಯಲು ಸಾಧ್ಯವಾಗಲಿದೆ. ಇದಕ್ಕೆ ಇಸ್ರೇಲ್ ರಾಷ್ಟ್ರವು ಮಾದರಿಯಾಗಿದೆ. ಅತಿ ಕಡಿಮೆ ನೀರು ಬಳಸಿ ಇಸ್ರೇಲ್ ದೇಶವು ಕೃಷಿಯಲ್ಲಿ ಅತಿಹೆಚ್ಚು ಲಾಭ ಪಡೆಯುತ್ತಿದೆ. ಈ ತಂತ್ರಜ್ಞಾನವನ್ನು ಇಲ್ಲಿಯೂ ಬಳಸುವುದರಿಂದ ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಇಳುವರಿ ಪಡೆಯಬೇಕಿದೆ ಎಂದರು.
ತುಂತುರು ನೀರಾವರಿ, ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳುವುದರಿಂದ ಕಡಿಮೆ ನೀರಿನಲ್ಲಿ ಬೆಳೆ ಬೆಳೆಯಬಹುದು. ಇದಕ್ಕಾಗಿಯೇ ತೋಟಗಾರಿಕೆ ಇಲಾಖೆ ವತಿಯಿಂದ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಇದರ ಪ್ರಯೋಜನವನ್ನು ಬೆಳೆಗಾರರು, ರೈತರು ಪಡೆದುಕೊಳ್ಳಬೇಕೆಂದು ಧ್ರುವನಾರಾಯಣ ತಿಳಿಸಿದರು.
ಜಿಲ್ಲೆಯಲ್ಲೂ ಅರಿಶಿನ ಬೆಳೆಯುವ ರೈತರು ಸಾಕಷ್ಟು ಮಂದಿ ಇದ್ದಾರೆ. ನಗರದಲ್ಲಿ ಅರಿಶಿನ ಮಾರುಕಟ್ಟೆಯೂ ಲಭ್ಯವಿದೆ. ಹೀಗಾಗಿ ಅರಿಶಿನ ಬೆಳೆಗಾರರಿಗೆ ಅರಿಶಿನ ಕುರಿತ ಕಾರ್ಯಾಗಾರ ನೆರವಾಗಲಿದೆ. ತಜ್ಞರಿಂದ ಅಗತ್ಯ ಸಲಹೆ ಪಡೆದು ಮತ್ತಷ್ಟು ಆರ್ಥಿಕವಾಗಿ ಮುಂದೆ ಬರಲು ಬೆಳೆಗಾರರು ಗಮನ ನೀಡಬೇಕೆಂದು ಧ್ರುವನಾರಾಯಣ ಸಲಹೆ ಮಾಡಿದರು.
ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕೆಲಸವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗಿದೆ. ಕೆರೆ ತುಂಬಿಸುವ ಯೋಜನೆಯಿಂದ ಅಂತರ್ಜಲ ಹೆಚ್ಚಳವಾಗಿ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ. ಅಲ್ಲದೆ ಕುಡಿಯುವ ನೀರಿನ ಸಮಸ್ಯೆಯೂ ಪರಿಹಾರವಾಗುತ್ತಿದೆ. ಒಟ್ಟಾರೆ ಕೃಷಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿರುವ ಎಲ್ಲ ಸೌಲಭ್ಯಗಳಿಗೆ ಅಗತ್ಯ ನೆರವು ನೀಡಲಾಗುತ್ತದೆ ಎಂದು ಧ್ರುವನಾರಾಯಣ ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್ ಅವರು ಜಿಲ್ಲೆಯಲ್ಲಿ 8 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅರಿಶಿನ ಬೆಳೆಯಲಾಗುತ್ತಿದೆ. ಚಾಮರಾಜನಗರ ತಾಲೂಕಿನಲ್ಲಿ 3094 ಹೆಕ್ಟೇರ್ ಪ್ರದೇಶದಲ್ಲಿ ಅರಿಶಿನ ಬೆಳೆಯುತ್ತಿದ್ದು ಆಧುನಿಕ ಪದ್ಧತಿ ಪರಿಚಯಿಸಿದರೆ ಬೆಳೆಗಾರರಿಗೆ ಮತ್ತಷ್ಟು ಲಾಭವಾಗಲಿದೆ. ಈ ಹಿನ್ನೆಲೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕಾರ್ಯಾಗಾರದ ಸದುಪಯೋಗವನ್ನು ರೈತರು, ಬೆಳೆಗಾರರು ಪಡೆದÀುಕೊಳ್ಳಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಕೃಷಿ ವಿಜ್ಞಾನಿ ಶಿವರಾಯ ನಾವಿ, ಎಪಿಎಂಸಿ ಉಪಾಧ್ಯಕ್ಷರಾದ ಮಹದೇವಸ್ವಾಮಿ, ನಿರ್ದೇಶಕರಾದ ಬಿ. ನಾಗೇಂದ್ರ, ಬಸವನಾಯ್ಕ, ಶಂಕರಮೂರ್ತಿ, ನಂಜುಂಡಸ್ವಾಮಿ, ವೆಂಕಟಶೇಷಯ್ಯ, ಸಿದ್ದಶೆಟ್ಟಿ, ನಾಗಮ್ಮ, ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಗುರುಮಲ್ಲಪ್ಪ, ಕೊಳ್ಳೇಗಾಲ ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಜು, ಎಪಿಎಂಸಿ ಸಹಾಯಕ ನಿರ್ದೇಶಕರಾದ ಶಿವಸ್ವಾಮಿ, ಕಾರ್ಯದರ್ಶಿ ರವಿಶಂಕರ್, ಪ್ರಗತಿಪರ ರೈತರಾದ ನಾಸಿರ್ ಅಹಮದ್, ಇತರರು ಸೇರಿದಂತೆ ಇತರೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನ. 22ರಂದು ನಗರದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ
ಚಾಮರಾಜನಗರ, ನ. 20 - ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯನ್ನು ನವೆಂಬರ್ 22ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪೇಟೆ ಪ್ರೈಮರಿ ಶಾಲೆಯಲ್ಲಿ ಆಯೋಜಿಸಿದೆ.
ಸಹÀಪಠ್ಯ ಚಟುವಟಿಕೆಗಳಲ್ಲಿ 5 ಬ್ಲಾಕ್‍ಗಳಿಂದ ಪ್ರಥಮ ಸ್ಥಾನ ಪಡೆದ ಶಿಕ್ಷಕರು ಭಾಗವಹಿಸಲು ತಿಳಿಸಿದೆ.
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶಾಲಾ ಮಕ್ಕಳ ಸುರಕ್ಷತೆ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಸಮೂಹ ಮಾಧ್ಯಮಗಳು ನಾಗರಿಕ ಸಮಾಜದ ಮೇಲೆ ಬೀರುವ ಪ್ರಭಾವಗಳು ಎಂಬ ವಿಷಯಗಳ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷÀಣ ಇಲಾಖೆ ಪ್ರಕಟಣೆ ತಿಳಿಸಿದೆ.
ಪ.ಜಾ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಚಾಮರಾಜನಗರ, ನ. 20- ಸಮಾಜ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಿದೆ.
ಈ ಹಿಂದೆ ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 31 ಕಡೆಯ ದಿನಾಂಕವೆಂದು ತಿಳಿಸಲಾಗಿತ್ತು. ಆದರೆ ವಿವಿಧ ಕಾರಣಗಳಿಂದÀ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲವೆಂಬ ಕೋರಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನವೆಂಬರ್ 30ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿವರಗಳಿಗಾಗಿ ವೆಬ್ ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನೋಡುವಂತೆ ಸಮಾಜ ಕಲ್ಯಾಣ ಇಲÁಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಕ ವ್ಯಕ್ತಿ ಮತ್ತು ಸಮೂಹ ಕಲಾ ಪ್ರದರ್ಶನಗಳಿಗೆ ಧನಸಹಾಯಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 20- ಕರ್ನಾಟಕ ಲಲಿತ ಕಲಾ ಅಕಾಡೆಮಿಯು ರಾಜ್ಯದ ಕಲಾವಿದರಿಗೆ ರಾಜ್ಯದ ಒಳಗೆ ಮತ್ತು ಹÉೂರ ರಾಜ್ಯಗಳಲ್ಲಿ ಏಕವ್ಯಕ್ತಿ ಮತ್ತು ಸಮೂಹ ಕಲಾ ಪ್ರದರ್ಶನ ಏರ್ಪಡಿಸಲು ಧನಸಹಾಯ ನೀಡುವ ಸಲುವಾಗಿ 2017-18ನೇ ಸಾಲಿಗೆ ಅರ್ಜಿ ಆಹ್ವಾನಿಸಿದೆ.
ಪ್ರದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಕಲಾವಿದರು ತಾವು ರಚಿಸಿದ ಕಲಾಕೃತಿಗಳ 5*7 ಅಂಗುಲ ಅಳತೆಯ ಕಳೆದ 2 ವರ್ಷಗಳ ಈಚೆಗೆ ರಚಿಸಿದ ಕಲಾಕೃತಿಗಳ ಛಾಯಾಚಿತ್ರಗಳನ್ನು ಕಳುಹಿಸಬೇಕು. ಯಾವುದೇ ಪ್ರದರ್ಶನದಲ್ಲಿ ಪ್ರದರ್ಶಿಸಿರಬಾರದು.
ಅರ್ಜಿಗಳನ್ನು ಆಯ್ಕೆ ಸಮಿತಿಯು ಪರಿಶೀಲಿಸಿ ತೀರ್ಮಾನ ಕೈಗೊಳ್ಳುವುದು. ರಾಜ್ಯದಲ್ಲಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಕ್ಕೆ 10000 ರೂ, ಹೊರ ರಾಜ್ಯದಲ್ಲಿ 15000 ರೂ. ಧನಸಹಾಯ ಲಭಿಸಲಿದೆ. ಸಮೂಹ ಚಿತ್ರಪ್ರದರ್ಶನಕ್ಕೆ ರಾಜ್ಯದಲ್ಲಿ 7 ಜನರ ತಂಡಕ್ಕೆ 15 ಸಾವಿರ ರೂ. ಹಾಗೂ ಹೊರರಾಜ್ಯದಲ್ಲಿ 5 ಜನರ ತಂಡಕ್ಕೆ 20 ಸಾವಿರ ರೂ. ಗಳಲ್ಲಿ ಸಿಗಲಿದೆ.
ಆಸಕ್ತ ಕಲಾವಿದರು ಅರ್ಜಿಯನ್ನು ಕರ್ನಾಟಕ ಲಲಿತ ಕಲಾ ಅಕಾಡೆಮಿ ಕಚೇರಿ, ಕನ್ನಡ ಭವನ, ಜೆ. ಸಿ. ರಸ್ತೆ, ಬೆಂಗಳೂರು- 560002 ಇಲ್ಲಿ ಖುದ್ದಾಗಿ ಅಥವಾ 5 ರೂ.ಗಳ ಅಂಚೆಚೀಟಿ ಲಗತ್ತಿಸಿದ ಸ್ವವಿಳಾಸ ಹಾಗೂ ದೂರವಾಣಿ ಸಂಖ್ಯೆವುಳ್ಳ ಲಕೋಟೆಯನ್ನು ಕಳುಹಿಸಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ತಮ್ಮ ಕನಿಷ್ಟ 5 ಕಲಾಕೃತಿಗಳ ಛಾಯಾಚಿತ್ರಗಳು ಮತ್ತು ಕಲಾವಿದರ ಭಾವಚಿತ್ರ, ಪರಿಚಯ ಪತ್ರದೊಂದಿಗೆ ಡಿಸೆಂಬರ್ 16ರ ಒಳಗೆ ಅಕಾಡೆಮಿಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-22480297 ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಎಚ್.ವಿ. ಇಂದ್ರಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 24ಕ್ಕೆ ಕೊಳ್ಳೆಗಾಲ ಉಪವಿಭಾಗ ಮಟ್ಟದ ಪ.ಜಾ ಮತ್ತು ಪ.ವರ್ಗದ ಹಿತರಕ್ಷಣೆ, ಜಾಗೃತಿ ಉಸ್ತುವಾರಿ ಸಮಿತಿ ಹಾಗೂ ಸಫಾಯಿ ಕರ್ಮಚಾರಿಗಳ ಉಸ್ತುವಾರಿ ಸಮಿತಿ ಸಭೆ
ಚಾಮರಾಜನಗರ, ನ. 20 :- ಕೊಳ್ಳೆಗಾಲ ಉಪವಿಭಾಗ ಮಟ್ಟದಲ್ಲಿ ನವೆಂಬರ್ 22 ರಂದು ನಿಗದಿಯಾಗಿದ್ದ ಉಪವಿಭಾಗ ಮಟ್ಟದ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗದವರ ಹಿತರಕ್ಷಣಾ ಸಭೆ ಹಾಗೂ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗಳ ಸಭೆ ಮತ್ತು ಸಪಾಯಿ ಕರ್ಮಚಾರಿಗಳ ಉಸ್ತುವಾರಿ ಸಭೆಗಳನ್ನು ನ. 24ಕ್ಕೆ ಮುಂದೂಡಲಾಯಗಿದೆ.
ನ. 24ರಂದು ಬೆಳಿಗ್ಗೆ 9.30 ಗಂಟೆಗೆ ಉಪವಿಭಾಗ ಮಟ್ಟದ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗದವರ ಹಿತರಕ್ಷಣಾ ಸಭೆ ಬೆಳಿಗ್ಗೆ 10.30 ಗಂಟೆಗೆ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗಳ ಸಭೆ 11.30 ಗಂಟೆಗೆ ಹಾಗೂ ಸಫಾಯಿ ಕರ್ಮಚಾರಿಗಳ ಉಸ್ತುವಾರಿ ಸಭೆ ನಿಗಧಿ ಮಾಡಲಾಗಿದೆ. ಉಪವಿಭಾಗಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಸಂಘ - ಸಂಸ್ಥೆಗಳು ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗ ಮತ್ತು ಸಫಾಯಿ ಕರ್ಮಚಾರಿಗಳ ಹಿತರಕ್ಷಣೆಗೆ ಸಂಬಂಧಿಸಿದ್ದಂತೆ ಹಾಗೂ ಕುಂದು ಕೊರತೆಗಳ ಬಗ್ಗೆ ಚರ್ಚಿಸÀಲು ಇಚ್ಚಿಸಿದ್ದಲ್ಲಿ ನವೆಂಬರ್ 22 ರ ಒಳಗೆ ಲಿಖಿತವಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment