Monday, 27 November 2017

ಜಿಲ್ಲಾ ಯೋಜನಾ ಸಮಿತಿ ಅಧ್ಯಕ್ಷರಾಗಿ ಉಸ್ತುವಾರಿ ಸಚಿವರಾದ ಡಾ. ಎಂ.ಸಿ.ಮೋಹನಕುಮಾರಿ (25-11-2017)

ಜಿಲ್ಲಾ ಯೋಜನಾ ಸಮಿತಿ ಅಧ್ಯಕ್ಷರಾಗಿ ಉಸ್ತುವಾರಿ ಸಚಿವರಾದ ಡಾ. ಎಂ.ಸಿ.ಮೋಹನಕುಮಾರಿ
ಚಾಮರಾಜನಗರ, ನ. 25 - ಚಾಮರಾಜನಗರ ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರಾಗಿ ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಚಿವರಾದ ಡಾ. ಎಂ.ಸಿ ಮೋಹನ ಕುಮಾರಿ ಉರುಫ್ ಗೀತಾಮಹದೇವಪ್ರಸಾದ್ ಅವರು ಆಯ್ಕೆಯಾಗಿದ್ದಾರೆ.

ನಗರದ ನೂತನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಚಾಮರಾಜನಗರ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಮೊದಲು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.  ರಾಮಚಂದ್ರ ಅವರು ಡಾ, ಎಂ.ಸಿ ಮೋಹನ ಕುಮಾರಿ ಉರುಫ್ ಗೀತಾ, ಮಾನ್ಯ ಸಕ್ಕರೆ, ಸಣ್ಣ ಕೈಗಾರಿಕೆ ಇಲಾಖೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಹೆಸರು ಸೂಚಿಸುವ ಮೂಲಕ ಆಯ್ಕೆ ಮಾಡುವಂತೆ ಕೋರಿದರು.
ಯೋಜನಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಇವರು ನಿಯಮಾನುಸಾರ ಪತ್ರವನ್ನು ನೀಡಿದವರ ಹೆಸರನ್ನು ಮತ್ತು ಸ್ವೀಕರಿಸಿದ ದಿನಾಂಕ ಮತ್ತು ವೇಳೆಯನ್ನು ಮಾನ್ಯ ಸಮಿತಿ ಸದಸ್ಯರ ಗಮನಕ್ಕೆ ತಂದು ನಂತರ ನಾಮ ಪತ್ರವನ್ನು ಹಿಂಪಡೆಯಲು ಒಂದು ನಿಮಿಷಗಳ ಕಾಲಾವಕಾಶ ನೀಡಿದರು.
ತದನಂತರ ನಾಮ ಪತ್ರವನ್ನು ವಾಪಸ್ಸು ಪಡೆಯದ ಕಾರಣ ಅಂತಿಮವಾಗಿ ಡಾ|| ಎಂ.ಸಿ ಮೋಹನ ಕುಮಾರಿ ಉ|| ಗೀತಾ, ಮಾನ್ಯ ಸಕ್ಕರೆ, ಸಣ್ಣ ಕೈಗಾರಿಕೆ ಇಲಾಖೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಯಿತು.
ಅಧ್ಯಕ್ಷತೆ ವಹಿಸಿಕೊಂಡ ನಂತರ ಮಾತನಾಡಿದ ಮಾನ್ಯ ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರು ಜಿಲ್ಲೆಯ ಅಭಿವೃಧ್ಧಿ ಬಗ್ಗೆ ಜಿಲ್ಲಾ ಯೋಜನಾ ಸಮಿತಿ ಸಭೆ ಪ್ರಮುಖವಾಗಿದ್ದು, ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಮೂಲಕ ಕೈಗೊಳ್ಳಲು ಅನುಕೂಲಕರವಾಗಿದೆ ಎಂದು ತಿಳಿಸಿದರು.
ನಂತರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಾತನಾಡುತ್ತಾ ಸಭೆಯಲ್ಲಿ ಚರ್ಚಿಸಬಹುದಾದ ಎಲ್ಲಾ ವಿಷಯಗಳ ಬಗ್ಗೆ ಸುದೀರ್ಘವಾಗಿ ಮಾಹಿತಿ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ಹಿರಿಯ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ ಬೊಮ್ಮಯ್ಯ ಇವರು ವಹಿಸಿಕೊಂಡಿದ್ದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮುನಿರಾಜಪ್ಪ, ಮುಖ್ಯ ಯೋಜನಾಧಿಕಾರಿ ಎಂ ಮಾದೇಶು ಹಾಗೂ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
     
ನೇರ ಫೋನ್-ಇನ್ ಕಾರ್ಯಕ್ರಮ: 40 ದೂರುಗಳು ದಾಖಲು

ಚಾಮರಾಜನಗರ, ನ. 25 - ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಸಾರ್ವಜನಿಕ ಕುಂದುಕೊರತೆ ಆಲಿಸುವ ನೇರ ಫೋನ್-ಇನ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಮೂಲೆಮೂಲೆಗಳಿಂದ ದೂರವಾಣಿ ಕರೆ ಮಾಡಿದ ಸಾರ್ವಜನಿಕರಿಂದ ತಮ್ಮ ದೂರುಗಳು ದಾಖಲಾದವು.
ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎಚ್. ಹರೀಶ್‍ಕುಮಾರ್, ಹೆಚ್ಚುವರಿ ಪೊಲೀಸ್ ಅಧಿಕಾರಿ ಗೀತಾಪ್ರಸನ್ನ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರ ಸಮ್ಮುಖದಲ್ಲಿ 40ಕ್ಕೂ ಹೆಚ್ಚು ದೂರುಗಳನ್ನು ಆಲಿಸಿದ ಅಧಿಕಾರಿಗಳು ಪರಿಹಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲು ಮುಂದಾದರು.
ಚಾಮರಾಜನಗರ ಪಟ್ಟಣದಲ್ಲಿ ಆಟೋಗಳು ಅಗತ್ಯಕ್ಕಿಂತ ಹೆಚ್ಚಿನ ಜನರನ್ನು ಒಂದೇ ಅಟೋದಲ್ಲಿ ಕರೆದೊಯ್ಯುತ್ತಿದ್ದು, ಇದರಿಂದ ಜನರಿಗೆ ಹಿಂಸೆಯಾಗುತ್ತಿದೆ. ಅಲ್ಲದೆ ಸೋಮವಾರಪೇಟೆ ಬಳಿ ರಾತ್ರಿ ವೇಳೆ ವಾಹನಗಳಧಿಕ ವೇಗದಲ್ಲಿ ಸಂಚರಿಸುತ್ತಿರುವುದರಿಂದ ರಸ್ತೆ ಅಪಘಾತಗಳು ಸಂಭವಿಸುತ್ತಿವೆ ಎಂಬ ದೂರುದಾರರೊಬ್ಬರ ಪ್ರಶ್ನೆಗೆ ಉತ್ತರಿಸಿದ ಡಿ.ವೈ.ಎಸ್.ಪಿ. ಅವರು ಪರಿಹರಿಸುವ ಭsರವÀಸೆ ನೀಡಿದರು.
ತರಕಣಾಂಬಿಯಿಂದ ಕರೆ ಮಾಡಿದ ಮನೋಜ್ ಎಂ.ಎಸ್.ಐ.ಎಲ್ ಗಳಲ್ಲಿ ನಿಗಧಿತ ದರಕ್ಕಿಂತ ಹೆಚ್ಚಿ ಹಣವನ್ನು ವಸೂಲಿ ಮಾಡುತ್ತಿರುವ ಬಗ್ಗೆ ಗಮನ ಸೆಳೆದರು. ಇದನ್ನು ಪರಿಹರಿಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.
ನಗರದ ದೇವಾಂಗ ಬೀದಿಯಿಂದ ಕರೆ ಮಾಡಿದ ರಮೇಶ್ ಅವರು ಕರೆ ಮಾಡಿ ಪಟ್ಟಣದೊಳಗಡೆ ಹೆಚ್ಚಿನ ಮಾಂಸದಂಗಡಿಗಳಿಗೆ ಪರವಾನಗಿ ನೀಡಬಾರದು ಎಂದು ಮನವಿ ಮಾಡಿದರು. ಇದನ್ನು ಪರಿಹರಿಸುವ ಭರವಸೆ ನೀಡಿದರು.
ಇಂದಿನ ನೇರ ಫೊನ್-ಇನ್ ಕಾರ್ಯಕ್ರಮದಲ್ಲಿ ದಾಖಲಾದ ದೂರುಗಳು ಕುಡಿಯುವ ನೀರು, ಅಬಕಾರಿ, ಸ್ವಚ್ಚತೆ, ಬಸ್ ವ್ಯವಸ್ಥೆ ಕುರಿತು ಹೆಚ್ಚಾಗಿ ಕಂಡುಬಂದವು.

ನವೆಂಬರ್ 27ರಂದು ಜಿಲ್ಲಾಮಟ್ಟದ ವಿಕಲಚೇತನರ ಕುಂದುಕೊರತೆ ಸಭೆ

ಚಾಮರಾಜನಗರ, ನ. 25 - ಜಿಲ್ಲಾಮಟ್ಟದ ವಿಕಲಚೇತನರ ಕುಂದುಕೊರತೆ ಸಭೆ ನವೆಂಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲೆಯ ಎಲ್ಲಾ ವಿಕಲಚೇತನರು ಅಂದಿನ ಸಭೆಯಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ

ನವೆಂಬರ್ 25ರಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುವ ಸಚಿವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಲಿರುವ ಜಿಲ್ಲಾ ಖನಿಜ ಪ್ರತಿಷ್ಠಾನ ಸಭೆÀಯಲ್ಲಿ ಭಾಗವಹಿಸುವರು. 12 ಗಂಟೆಗೆ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ಜಿಲ್ಲಾ ಯೋಜನಾ ಸಮಿತಿಗೆ ಅಧ್ಯಕ್ಷರನ್ನು ಆಯ್ಕೆ ಮಾಡುವ ಕುರಿತು ನಡೆಯುವ ಸಭೆಯಲ್ಲಿ ಪಾಲ್ಗೊಳ್ಳುವರು.
ನವೆಂಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ಗುಂಡ್ಲುಪೇಟೆ ತಾಲೂಕಿನ ಮದ್ದಯ್ಯನಹುಂಡಿ ಗ್ರಾಮದಲ್ಲಿ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. 11 ಗಂಟೆಗೆ ಗುಂಡ್ಲುಪೇಟೆ ತಾಲೂಕು ಬಸವಭವನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಮಡಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಲಿದ್ದಾರೆ. 3 ಗಂಟೆಗೆ ಮೂಖಹಳ್ಳಿ ಗ್ರಾಮದಲ್ಲಿ ಪಂಚಾಯತ್ ಕಟ್ಟಡ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸುವರು ಎಂದು ಸಚಿವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
   
ನಗರದ ರಸ್ತೆ ಕಾಮಗಾರಿ: ಉಸ್ತುವಾರಿ ಸಚಿವರಿಂದ ಸ್ಥಳ ಪರಿಶೀಲನೆÉ

ಚಾಮರಾಜನಗರ, ನ. 25 - ಚಾಮರಾಜನಗರ ಪಟ್ಟಣದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳನ್ನು ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ಅವರು ಇಂದು ಸ್ಥಳ ಪರಿಶೀಲನೆ ಮಾಡಿದರು.
ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಹಾಯಕ ಕಾರ್ಯಪಾಲಕ ಅಭಿಯಂತರರು, ನಗರಸಭೆ ಅಧಿಕಾರಿ ಮತ್ತು ರಸ್ತೆ ಕಾಮಗಾರಿ ನಿರ್ವಹಣಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು ಚಾಮರಾಜನಗರ ಜಿಲ್ಲಾಕೇಂದ್ರದ ಸಮಗ್ರ ಅಭಿವೃದ್ಧಿಗಾಗಿ ಅಗತ್ಯ ಮೂಲಸೌಕರ್ಯ ಒದಗಿಸುವ ದೃಷ್ಠಿಯಿಂದ ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ನಗರದಲ್ಲಿ ನಿರ್ಮಾಣವಾಗುತ್ತಿರುವ ಡಿವಿಯೇಷನ್ ರಸ್ತೆ, ಜೋಡಿರಸ್ತೆ, ಕೋರ್ಟ್ ರಸ್ತೆ ಹಾಗೂ ಇತರೆ ರಸ್ತೆಗಳು ಸಂಪೂರ್ಣ ಗುಣಮಟ್ಟದಿಂದ ಕೂಡಿರಬೇಕು. ರಸ್ತೆ ಕಾಮಗಾರಿಗಿಂತ ಮೊದಲು ಒಳಚರಂಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಅಲ್ಲದೆ, ನಿಗದಿತ ಕಾಲಮಿತಿಯಲ್ಲಿ ಎಲ್ಲಾ ಕಾಮಗಾರಿಗಳು ಮುಗಿಸುವಂತೆ ಸೂಚನೆ ನೀಡಿದರು.
ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲ. ಸಣ್ಣಪುಟ್ಟ ಲೋಪದೋಷಗಳಾಗದಂತೆ ನಿಗಾ ವಹಿಸಬೇಕು. ಕಾಮಗಾರಿಯಿಂದ ಜನರಿಗೆ ತೊಂದರೆಯಾಗದಂರೆ ಕ್ರಮವಹಿಸಬೇಕು ಎಂದು ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಬಿ. ರಾಮು. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಉಪವಿಭಾಗಾಧಿಕಾರಿ ಫೌಜಿಯಾ ತರನಂ, ನಗರಸಭೆ ಅಧ್ಯಕ್ಷರಾದ ಶೋಭಾಪುಟ್ಟಸ್ವಾಮಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ನವೆಂಬರ್ 25 ಮತ್ತು 26ರಂದು ವಿದ್ಯುತ್ ವ್ಯತ್ಯಯ

ಚಾಮರಾಜನಗರ, ನ. 24- ನಗರದ ನ್ಯಾಯಾಲಯ ರಸ್ತೆಯನ್ನು ಹಳೇಯ ಡಿ.ವೈಎಸ್.ಪಿ ಪೊಲೀಸ್ ಠಾಣೆಯಿಂದ ಸತ್ತಿ ರಸ್ತೆಯವರೆಗೆ ರಸ್ತೆ ಅಗಲೀಕರಣ ಮಾಡುವ ಸಲುವಾಗಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನಲೆಯಲ್ಲಿ ನ. 25ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಹೌಸಿಂಗ್ ಬೋರ್ಡ್ ಹಾಗೂ ಕೋರ್ಟ್ ರೋಡ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ನವೆಂಬರ್ 26ರಂದು ಪಟ್ಟಣ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಗಾಳಿಪುರ, ಡಿವಿಯೇಷನ್ ರಸ್ತೆ, ಸತ್ತಿ ರಸ್ತೆ, ಗುಂಡ್ಲುಪೇಟೆ ರಸ್ತೆ, ಭ್ರಮರಾಂಭ ಬಡಾವಣೆ, ಸೋಮವಾರಪೇಟೆ, ಚಾಮರಾಜೇಶ್ವರ ದೇವಸ್ಥಾನ, ಮಲ್ಲಯ್ಯನಪುರ, ಮೂಡಲಪುರ ಹಾಗೂ ಶಂಕರಪುರ ಬಡಾವಣೆಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸೆಸ್ಕ್ ಇಂಜಿನಿಯರ್ ಅವರ ಪ್ರಕಟಣೆ ತಿಳಿಸಿದೆ.

ನ. 25 ರಂದು ನೇರ ಫೋನ್ ಇನ್ ಕಾರ್ಯಕ್ರಮ

     ಚಾಮರಾಜನಗರ, ನ. 24  ನಾಗರಿಕರ ಕುಂದು ಕೊರತೆಗಳನ್ನು ಅಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ನವೆಂಬರ್ 25 ರಂದು ಬೆಳಿಗ್ಗೆ 10ರಿಂದ 11ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
    ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿರುತ್ತಾರೆ. ಸಾರ್ವಜನಿಕರು ದೂರವಾಣಿ ಸಂಖ್ಯೆ 08226-224888ಕ್ಕೆ ಕರೆ ಮಾಡಿ ತಮ್ಮ ಕುಂದು ಕೊರತೆಯನ್ನು ತಿಳಿಸಿ ಪರಿಹಾರ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರದ ರಸ್ತೆ ಕಾಮಗಾರಿ: ಉಸ್ತುವಾರಿ ಸಚಿವರಿಂದ ಸ್ಥಳ ಪರಿಶೀಲನೆÉ
ಚಾಮರಾಜನಗರ, ನ. 25 - ಚಾಮರಾಜನಗರ ಪಟ್ಟಣದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳನ್ನು ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ಅವರು ಇಂದು ಸ್ಥಳ ಪರಿಶೀಲನೆ ಮಾಡಿದರು.
ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಹಾಯಕ ಕಾರ್ಯಪಾಲಕ ಅಭಿಯಂತರರು, ನಗರಸಭೆ ಅಧಿಕಾರಿ ಮತ್ತು ರಸ್ತೆ ಕಾಮಗಾರಿ ನಿರ್ವಹಣಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು ಚಾಮರಾಜನಗರ ಜಿಲ್ಲಾಕೇಂದ್ರದ ಸಮಗ್ರ ಅಭಿವೃದ್ಧಿಗಾಗಿ ಅಗತ್ಯ ಮೂಲಸೌಕರ್ಯ ಒದಗಿಸುವ ದೃಷ್ಠಿಯಿಂದ ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ನಗರದಲ್ಲಿ ನಿರ್ಮಾಣವಾಗುತ್ತಿರುವ ಡಿವಿಯೇಷನ್ ರಸ್ತೆ, ಜೋಡಿರಸ್ತೆ, ಕೋರ್ಟ್ ರಸ್ತೆ ಹಾಗೂ ಇತರೆ ರಸ್ತೆಗಳು ಸಂಪೂರ್ಣ ಗುಣಮಟ್ಟದಿಂದ ಕೂಡಿರಬೇಕು. ರಸ್ತೆ ಕಾಮಗಾರಿಗಿಂತ ಮೊದಲು ಒಳಚರಂಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಅಲ್ಲದೆ, ನಿಗದಿತ ಕಾಲಮಿತಿಯಲ್ಲಿ ಎಲ್ಲಾ ಕಾಮಗಾರಿಗಳು ಮುಗಿಸುವಂತೆ ಸೂಚನೆ ನೀಡಿದರು.
ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲ. ಸಣ್ಣಪುಟ್ಟ ಲೋಪದೋಷಗಳಾಗದಂತೆ ನಿಗಾ ವಹಿಸಬೇಕು. ಕಾಮಗಾರಿಯಿಂದ ಜನರಿಗೆ ತೊಂದರೆಯಾಗದಂರೆ ಕ್ರಮವಹಿಸಬೇಕು ಎಂದು ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಬಿ. ರಾಮು. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಉಪವಿಭಾಗಾಧಿಕಾರಿ ಫೌಜಿಯಾ ತರನಂ, ನಗರಸಭೆ ಅಧ್ಯಕ್ಷರಾದ ಶೋಭಾಪುಟ್ಟಸ್ವಾಮಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ಯೋಜನಾ ಸಮಿತಿ ಅಧ್ಯಕ್ಷರಾಗಿ ಉಸ್ತುವಾರಿ ಸಚಿವರಾದ ಡಾ. ಎಂ.ಸಿ.ಮೋಹನಕುಮಾರಿ
ಚಾಮರಾಜನಗರ, ನ. 25 :- ಚಾಮರಾಜನಗರ ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರಾಗಿ ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಚಿವರಾದ ಡಾ. ಎಂ.ಸಿ ಮೋಹನ ಕುಮಾರಿ ಉರುಫ್ ಗೀತಾಮಹದೇವಪ್ರಸಾದ್ ಅವರು ಆಯ್ಕೆಯಾಗಿದ್ದಾರೆ.
ನಗರದ ನೂತನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಚಾಮರಾಜನಗರ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಮೊದಲು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.  ರಾಮಚಂದ್ರ ಅವರು ಡಾ, ಎಂ.ಸಿ ಮೋಹನ ಕುಮಾರಿ ಉರುಫ್ ಗೀತಾ, ಮಾನ್ಯ ಸಕ್ಕರೆ, ಸಣ್ಣ ಕೈಗಾರಿಕೆ ಇಲಾಖೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಹೆಸರು ಸೂಚಿಸುವ ಮೂಲಕ ಆಯ್ಕೆ ಮಾಡುವಂತೆ ಕೋರಿದರು.
ಯೋಜನಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಇವರು ನಿಯಮಾನುಸಾರ ಪತ್ರವನ್ನು ನೀಡಿದವರ ಹೆಸರನ್ನು ಮತ್ತು ಸ್ವೀಕರಿಸಿದ ದಿನಾಂಕ ಮತ್ತು ವೇಳೆಯನ್ನು ಮಾನ್ಯ ಸಮಿತಿ ಸದಸ್ಯರ ಗಮನಕ್ಕೆ ತಂದು ನಂತರ ನಾಮ ಪತ್ರವನ್ನು ಹಿಂಪಡೆಯಲು ಒಂದು ನಿಮಿಷಗಳ ಕಾಲಾವಕಾಶ ನೀಡಿದರು.
ತದನಂತರ ನಾಮ ಪತ್ರವನ್ನು ವಾಪಸ್ಸು ಪಡೆಯದ ಕಾರಣ ಅಂತಿಮವಾಗಿ ಡಾ|| ಎಂ.ಸಿ ಮೋಹನ ಕುಮಾರಿ ಉ|| ಗೀತಾ, ಮಾನ್ಯ ಸಕ್ಕರೆ, ಸಣ್ಣ ಕೈಗಾರಿಕೆ ಇಲಾಖೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಯಿತು.
ಅಧ್ಯಕ್ಷತೆ ವಹಿಸಿಕೊಂಡ ನಂತರ ಮಾತನಾಡಿದ ಮಾನ್ಯ ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರು ಜಿಲ್ಲೆಯ ಅಭಿವೃಧ್ಧಿ ಬಗ್ಗೆ ಜಿಲ್ಲಾ ಯೋಜನಾ ಸಮಿತಿ ಸಭೆ ಪ್ರಮುಖವಾಗಿದ್ದು, ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಮೂಲಕ ಕೈಗೊಳ್ಳಲು ಅನುಕೂಲಕರವಾಗಿದೆ ಎಂದು ತಿಳಿಸಿದರು.
ನಂತರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಾತನಾಡುತ್ತಾ ಸಭೆಯಲ್ಲಿ ಚರ್ಚಿಸಬಹುದಾದ ಎಲ್ಲಾ ವಿಷಯಗಳ ಬಗ್ಗೆ ಸುದೀರ್ಘವಾಗಿ ಮಾಹಿತಿ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ಹಿರಿಯ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ ಬೊಮ್ಮಯ್ಯ ಇವರು ವಹಿಸಿಕೊಂಡಿದ್ದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮುನಿರಾಜಪ್ಪ, ಮುಖ್ಯ ಯೋಜನಾಧಿಕಾರಿ ಎಂ ಮಾದೇಶು ಹಾಗೂ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು