Monday, 27 November 2017

ಗಣಿಗಾರಿಕೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಅಗತ್ಯ ಮೂಲಸೌಲಭ್ಯ: , ತಾ.ಪಂ.ಗ್ರಾ.ಪಂ. ಉಪಚುನಾವಣೆ : ವೇಳಾ ಪಟ್ಟಿ ಪ್ರಕಟ (26-11-2017)

      ಗಣಿಗಾರಿಕೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಅಗತ್ಯ ಮೂಲಸೌಲಭ್ಯ: 

ಡಾ. ಎಂ.ಸಿ. ಮೋಹನಕುಮಾರಿ ಚಾಮರಾಜನಗರ, ನ. 26 :- ಜಿಲ್ಲೆಯ ಗಣಿಗಾರಿಕೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ಗುರುತಿಸಲಾಗಿದ್ದು, ಸದ್ಯದಲ್ಲೆ ಆ ಗ್ರಾಮಗಳಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲಾಗುವುದು ಎಂದು ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಸಮಿತಿ(ಡಿ.ಎಂ.ಎಫ್) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಿರ್ದಿಷ್ಟ ಹಾಗೂ ನಿರ್ದಿಷ್ಟವಲ್ಲದ ಉಪಖನಿಜದ ಮೇಲೆ ರಾಜಧನದ ಶೇ. 30ರಷ್ಟು ಮೊತ್ತವನ್ನು ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಗೆ ಗಣಿ ಗುತ್ತಿಗರದಾರರು ಪಾವತಿಸಬೇಕೆಂದು ವಿಶೇಷ ರಾಜ್ಯಪತ್ರಿಕೆಯಲ್ಲಿ ಸರ್ಕಾರ ಆದೇಶಿಸಿತ್ತು. ಅದರನ್ವಯ ಚಾಮರಾಜನಗರ ತಾಲೂಕಿನ 56, ಗುಂಡ್ಲುಪೇಟೆ ತಾಲೂಕಿನ 2 ಹಾಗೂ ಯಳಂದೂರು ತಾಲೂಕಿನ 6 ನಿರ್ದಿಷ್ಟ ಉಪಖನಿಜ ಗಣಿ ಗುತ್ತಿಗೆಗಳಿಂದ ಮತ್ತು ಚಾ.ನಗರ ತಾಲೂಕಿನ 9, ಗುಂಡ್ಲುಪೇಟೆ ತಾಲೂಕಿನ 14 ನಿರ್ದಿಷ್ಟವಲ್ಲದ ಉಪಖನಿಜ ಗಣಿ ಗುತ್ತಿಗೆಗಳಿಂದ 5 ಕೋಟಿ 93 ಲಕ್ಷ ರೂ. ಗಳನ್ನು ಸಂಗ್ರಹಿಸಲಾಗಿದೆ ಎಂದರು. ನಿಧಿಯಲ್ಲಿ ಸಂಗ್ರಹವಾಗಿರುವ ಮೊತ್ತÀವನ್ನು ಅವಶ್ಯ ಕಾಮಗಾರಿಗಳಿಗೆ ಕ್ರಿಯಾಯೋಜನೆ ರೂಪಿಸಿ ಅನುದಾನ ಹಂಚಿಕೆ ಮಾಡಲಾಗುವುದು. ನಿಧಿ ಮೊತ್ತದ ಶೇ. 80ರಷ್ಟು ಹಣವನ್ನು ಗಣಿಗಾರಿಕೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಅಗತ್ಯವಾ ಕುಡಿಯುವ ನೀರು, ಪರಿಸರ ನಿರ್ವಹಣೆ, ಶಿಕ್ಷಣ, ಆರೋಗ್ಯ, ವಿಕಲಚೇತನರ ಕಲ್ಯಾಣ, ಕೌಶಲ್ಯಾಭಿವೃದ್ಧಿ, ಸ್ವಚ್ಚತೆ ಹಾಗೂ ಇನ್ನಿತರ ಮೂಲ ಸೌಕರ್ಯಗಳನ್ನು ತಲುಪಿಸಬೇಕಾಗಿದೆ ಎಂದು ಸಚಿವರು ತಿಳಿಸಿದರು. ಜಿಲ್ಲಾಧಿಕಾರಿ ಬಿ.ರಾಮು ಮಾತನಾಡಿ ಚಾಮರಾಜನಗರ ತಾಲೂಕಿನ 11, ಗುಂಡ್ಲುಪೇಟೆ ತಾಲೂಕಿನ 6, ಯಳಂದೂರು ತಾಲೂಕಿನ 2 ಮತ್ತು ಕೊಳ್ಳೇಗಾಲ ತಾಲೂಕಿನ 3 ಗ್ರಾಮಗಳನ್ನು ಗಣಿ ಬಾಧಿತ ಪದೇಶÀಗಳೆಂದು ಗುರುತಿಸಲಾಗಿದ್ದು, ಈ ಗ್ರಾಮಗಳಿಗೆ ಶಾಲೆಗಳ ಕೊಠಡಿ ಹಾಗೂ ಕಾಂಪೌಂಡ್ ನಿರ್ಮಾಣ, ಶೌಚಾಲಯ, ಬಯೋಗಾರ್ಡನ್, ಆಟದ ಮೈದಾನ, ಸ್ಮಾರ್ಟ್ ಕ್ಲಾಸ್ ರೂಂ, ಕುಡಿಯುವ ನೀರಿನ ಘಟಕಗಳು, ಸೋಲರ್ ಸಿಸ್ಟಮ್, ಅಸ್ಪತ್ರೆಗಳಿಗೆ ಅಗತ್ಯ ಉಪಕರಣ ಮತ್ತು ಸಲಕರಣೆಗಳು ಮತ್ತು ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲಾಗುವುದು ಎಂದರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಜಿಲ್ಲಾ ಗಣಿ ಇಲಾಖೆ ಉಪನಿರ್ದೇಶಕರಾದ ಎ. ಕುಲಕರ್ಣಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

 ಅರಣ್ಯ ಹಕ್ಕುಪತ್ರ ವಿತರಣೆಯಲ್ಲಿ ಇಲಾಖೆಗಳ ಸಮನ್ವಯತೆಗೆ ಉಸ್ತುವಾರಿ ಸಚಿವರ ಸೂಚನೆ

ಚಾಮರಾಜನಗರ, ನ. 26 - ಅರಣ್ಯವಾಸಿಗಳಿಗೆ ಅಗತ್ಯವಾದ ಹಕ್ಕುಪತ್ರ ವಿತರಿಸಲು ಸಂಬಂಧÀಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ಅವರು ಸೂಚನೆ ನೀಡಿದರು. ನಗರದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಅರಣ್ಯ ಹಕ್ಕು ಪತ್ರ ವಿತರಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಅರಣ್ಯವಾಸಿಗಳು ಹಾಗೂ ಬುಡಕಟ್ಟ ಜನಾಂಗ ಹಿಂದಿನಿಂದಲೂ ಅರಣ್ಯದಲ್ಲಿಯೆ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಅರಣ್ಯದಲ್ಲಿ ವಾಸಿಸುವುದು ಅವರ ಹಕ್ಕು. ಅವರಿಗೆ ಹಕ್ಕುಪತ್ರ ವಿತರಿಸುವಲ್ಲಿ ವಿಳಂಬ ಮಾಡುವುದು ತರವಲ್ಲ. ಅರಣ್ಯವಾಸಿಗಳಿಗೆ ಸಮುದಾಯ ಹಾಗೂ ವ್ಯಯಕ್ತಿಕ ಹಕ್ಕುಪತ್ರಗಳನ್ನು ಯಾವುದೇ ಸಬೂಬು ಹೇಳದೆ ನಿಗಧಿತ ಅವಧಿಯೊಳಗೆ ವಿತರಣೆ ಮಾಡುವಂತೆ ಸಂಬಂಧಪಟ್ಟ ಅದಿಕಾರಿಗಳಿಗೆ ತಾಕೀತು ಮಾಡಿದರು. ಹಕ್ಕುಪತ್ರ ಪಡೆಯಲು ಜಿಲ್ಲೆಯಲ್ಲಿ ಒಟ್ಟು 2171 ವೈಯಕ್ತಿಯ ಅರ್ಜಿಗಳು ಸ್ವೀಕೃತವಾಗಿವೆ. ಅವುಗಳಲ್ಲಿ 1952 ಹಕ್ಕುಪತ್ರಗಳನ್ನು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಮಾನ್ಯ ಮಾಡಲಾಗಿದೆ. 3269.15 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಚಾಮರಾಜನಗರ ಹಾಗೂ ಯಳಂದೂರು ತಾಲೂಕುಗಳ ಒಟ್ಟು 25 ಬುಡಕಟ್ಟು ಜನರಿಗೆ ಸಮುದಾಯ ಹಕ್ಕುಪತ್ರ ವಿತರಣೆ ಮಾಡಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 57 ಅರ್ಜಿಗಳು ಬಾಕಿ ಇವೆ ಎಂದರು. ಕೆಲವು ವೈಯಕ್ತಿಕ ಹಾಗೂ ಸಮುದಾಯ ಅರಣ್ಯ ಹಕ್ಕುಪತ್ರಗಳನ್ನು ಜಿಲ್ಲಾಧಿಕಾರಿ ಕಚೇರಿಯಿಂದ ಅನುಮೋದನೆಯಾಗಿ ಅರಣ್ಯಾಧಿಕಾರಿಗಳ ಸಹಿಗಾಗಿ ಕಳುಹಿಸಿಕೊಡಲಾಗಿದೆ. ಅವು ಸೇರಿದಂತೆ ಉಪವಿಭಾಗಮಟ್ಟದಲ್ಲಿ ಬಾಕಿ ಇರುವ ಅರಣ್ಯ ಹಕ್ಕುಪತ್ರಗಳನ್ನು ಶೀಘÀ್ರದಲ್ಲಿ ವಿಲೇವಾರಿ ಮಾಡಿ ಹಕ್ಕುಪತ್ರ ವಿತರಿಸಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮಾತನಾಡಿ ಅರಣ್ಯ ಹಕ್ಕುಪತ್ರ ವಿತರಣೆಯನ್ನು ಕಂದಾಯ, ಅರಣ್ಯ ಮತ್ತು ಪರಿಶಿಷ್ಟ ವರ್ಗಗಳ ಇಲಾಖೆಗಳು ಒಟ್ಟಿಗೆ ಸೇರಿ ಚರ್ಚಿಸಿ ಯಾವುದೇ ಲೋಪ ಬಾರದಂತೆ ವಿತರಿಸಬೇಕು. ಡಿಸೆಂಬರ್ 5 ರೊಳಗೆ ಬಾಕಿ ಇರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಡಿ. 20ರಂದು ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಹಕ್ಕುಪತ್ರ ವಿತರಣಾ ಸಮಾರಂಭ ಹಮ್ಮಿಕೊಳ್ಳಲು ಸಲಹೆ ಮಾಡಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಜಿಲ್ಲಾಧಿಕಾರಿ ಬಿ. ರಾಮು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಉಪವಿಭಾಗಾಧಿಕಾರಿ ಫೌಜಿಯಾ ತರನಂ, ಮಲೆ ಮಹದೇಶ್ವರ ವನ್ಯಜೀವಿ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್, ಮಾಲತಿಪ್ರಿಯ, ಜಿಲ್ಲಾ ಪರಿಶಿಷ್ಟ ವರ್ಗಗಳ ಇಲಾಖೆ ಕಲ್ಯಾಣಾಧಿಕಾರಿ ಕೃಷ್ಣಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಬುಡಕಟ್ಟು ಜನಾಂಗದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ತಾ.ಪಂ.ಗ್ರಾ.ಪಂ. ಉಪಚುನಾವಣೆ : ವೇಳಾ ಪಟ್ಟಿ ಪ್ರಕಟ


ಚಾಮರಾಜನಗರ ನ.26 - ಜಿಲ್ಲೆಯ ಚಾಮರಾಜನಗರ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾ ಪಟ್ಟಿ ಪ್ರಕಟಸಿದೆ.
ಚಾಮರಾಜನಗರ ತಾಲ್ಲೂಕು ಪಂಚಾಯಿತಿಯ ಹರದನಹಳ್ಳಿ ಕ್ಷೇತ್ರದ (ಸಾಮಾನ್ಯ) ಒಂದು ಸದಸ್ಯ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದೆ.
ಚಾಮರಾಜನಗರ ತಾಲ್ಲೂಕಿನ ಬದನಗುಪ್ಪೆ ಗ್ರಮ ಪಂಚಾಯಿತಿ ಬೇಡರಪುರ ಕ್ಷೇತ್ರ(ಸಾಮಾನ್ಯ)ಸಂತೇಮರಹಳ್ಳಿ (ಅನುಸೂಚಿತ ಜಾತಿ ಮಹಿಳೆ) ಅಮಚವಾಡಿ (ಹಿಂದುಳಿದ ‘ಅ’ವರ್ಗ) ಹೊನ್ನಹಳ್ಳಿ ಗ್ರಾಮ ಪಂಚಾಯಿತಿಯ ವಡ್ಗಲ್‍ಪುರ (ಹಿಂದುಳಿದ ‘ಅ’ವರ್ಗ) ಕೊಳ್ಳೆಗಾಲ ತಾಲ್ಲೂಕಿನ ಗೋಪಿನಾಥಂ (ಸಾಮಾನ್ಯ) ಗುಂಡ್ಲುಪೇಟೆ ತಾಲ್ಲೂಕಿನ  ಬಲಚಾವಾಡಿ ಗ್ರಾಮ ಪಂಚಾಯಿತಿಯ ಗುರುವಿನಪುರ (ಸಾಮಾನ್ಯ) ತೆರಕಣಾಂಬಿ(ಅನುಸೂಚಿತ ಪಂಗಡ) ಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಕುರುಬರ ಹುಂಡಿ (ಸಾಮಾನ್ಯಮಹಿಳೆ)ಯ ತಲಾ ಒಂದು ಸ್ಥಾನಕ್ಕೆ ಸೇರಿದಂತೆ ಒಟ್ಟು 8 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಿಗದಿ ಮಾಡಲಾಗಿದೆ.
ನವೆಂಬರ್ 27ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ನವೆಂಬರ್ 30ಕಡೆಯದಿನ. ಡಿಸಂಬರ್1ರಂದು ನಾಮಪತ್ರಗಳ ಪರೀಶೀಲನ ಕಾರ್ಯನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ನವೆಂಬರ್4 ಕಡೆಯದಿನವಾಗಿದೆ. ಡಿಸೆಂಬರ್ 17ರಂದು ಬೆಳ್ಳಿಗೆ 7ರಿಂದ ಸಂಜೆ 5ಗಂಟೆವರೆಗೆ ಮತದಾನ ನಡೆಸಲು (ಅವಶ್ಯವಿದ್ದರೆ) ದಿನಾಂಕ ನಿಗದಿಯಾಗಿದೆ. ಮರು ಮತದಾನವು (ಅವಶ್ಯವಿದ್ದರೆ) ಡಿಸೆಂಬರ್ 19ರಂದು ನಡೆಸಲಾಗುತ್ತದೆ. ಮತಗಳ ಎಣಿಕೆ ಕಾರ್ಯವು ಡಿಸೆಂಬರ್ 20ರಂದು ಬೆಳಿಗ್ಗೆ 8 ಗಂಟೆಗೆ ಆಯಾ ತಾಲ್ಲೂಕು ಕೇಂದ್ರದಲ್ಲಿ ಆರಂಭವಾಗಲಿದೆ. ಡಿಸೆಂಬರ್ 20ರಂದೇ ಚುನಾವಣಾ ಪ್ರಕ್ರಿಯ ಪೂರ್ಣಗೂಳ್ಳಲಿದೆ.
ತಾಲ್ಲೂಕು ಪಂಚಾಯಿತಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಹಾಗೂ ಗ್ರಾಮ ಪಂಚಾಯಿತಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಆಯಾ ಗ್ರಾಮ  ಪಂಚಾಯಿತಿ ಕಚೇರಿಯಲ್ಲಿ ನಾಮ ಪತ್ರಗಳನ್ನು ಸ್ವೀಕರಿಸಲಾಗುತ್ತದೆ.  ನಾಮ ಪತ್ರ ಸಲ್ಲಿಸಲು ಕೊನೆಯ ದಿನಾಂಕವು ಅಧಿಸೂಚನೆ ಪ್ರಕಟಣೆಯ ದಿನಾಂಕ ತರುವಾಯ ಬರುವ ಮೂರನೆಯ ದಿನವಾಗಿರುತ್ತದೆ.
ಚುನಾವಣೆ ನೀತಿ ಸಂಹಿತೆಯು ಚುನಾವಣೆ ನಡೆಯುವ ತಾಲ್ಲೂಕು ಪಂಚಾಯಿತಿ ಕ್ಷೇತ್ರ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 27ರಿಂದ ಡಿಸೆÀಂಬರ್ 20ರವರೆಗೆ ಜಾರಿಯಲ್ಲಿರುತ್ತದೆ ಪ್ರಕಟಣೆ ತಿಳಿಸಿದೆ.


No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು