ನ.3ರಂದು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ರಜೆ ಪಡೆಯದೆ ಸೇವೆ ಸಲ್ಲಿಸಲು ಆದೇಶ
ಚಾಮರಾಜನಗರ, ನ. 02 - ರಾಜ್ಯದ ಖಾಸಗಿ ವೈದ್ಯರು ಹಾಗೂ ವೈದ್ಯಕೀಯ ಸಂಸ್ಥೆಯವರು ಬೇಡಿಕೆಗೆ ಒತ್ತಾಯಿಸಿ ನವೆಂಬರ್ 3ರಂದು ಅವರ ಆಸ್ಪತ್ರೆಗಳನ್ನು ಬಂದ್ ಮಾಡಲು ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಬಗೆಯ ಸರ್ಕಾರಿ ಆರೋಗ್ಯ ಅಧಿಕಾರಿಗಳು ಸಿಬ್ಬಂದಿ ಅಂದು ರಜೆ ಪಡೆಯದೆ ಕೇಂದ್ರಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾ ಆರೋಗÀ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.
ನವೆಂಬರ್ 3ರಂದು ಆರೋಗ್ಯ ಇಲಾಖೆಯ ಎಲ್ಲ ಕಾರ್ಯಕ್ರಮ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಆಡಳಿತ ವೈದ್ಯಾಧಿಕಾರಿಗಳು, ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ರಜೆ ಪಡೆಯದೆ ಕೇಂದ್ರಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸಬೇಕೆಂದು ಸುತ್ತೋಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ನ. 10ರಂದು ಜಿಲ್ಲಾಮಟ್ಟದ ಯುವಜನೋತ್ಸವ : ಸ್ಥಳ ಬದಲು
ಚಾಮರಾಜನಗರ, ನ. 02 - ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನವೆಂಬರ್ 10 ಹಾಗೂ 11ರಂದು ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನಗರದ ಡಿ. ದೇವರಾಜ ಅರಸು ಭವನದಲ್ಲಿ ಏರ್ಪಡಿಸಲಾಗುವುದು.ನವೆಂಬರ್ 10ರಂದು ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಸ್ಥಳ ಬದಲಾಯಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08226-224932, ಮೊಬೈಲ್ 9482718278 ನ್ನು ಸಂಪರ್ಕಿಸುವಂತೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 3ರಂದು ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ
ಚಾಮರಾಜನಗರ, ನ. 02 (ಕರ್ನಾಟಕ ವಾರ್ತೆ):- ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರವು ನವೆಂಬರ್ 3ರಂದು ಬೆಳಿಗ್ಗೆ 10.30 ಗಂಟೆಗೆ ಕೇಂದ್ರದ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಆಯೋಜಿಸಿದೆ.
ಗಣ್ಯರಿಂದ ಕನ್ನಡ ಧ್ವಜಾರೋಹಣ ಹಾಗೂ ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ. ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕÉೀಂದ್ರದ ನಿರ್ದೇಶಕರಾದ ಪ್ರೊ. ಶಿವಬಸವಯ್ಯ ಅಧ್ಯಕ್ಷತೆ ವಹಿಸುವರು. ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಸಂದರ್ಶನ ಪ್ರಾಧ್ಯಾಪಕರಾದ ಪ್ರೊ. ಕೃಷ್ಣಮೂರ್ತಿ ಹನೂರು ಪ್ರಾಸ್ತಾವಿಕ ಭಾಷಣ ಮಾಡುವರು. ಹಿರಿಯ ಸಾಹಿತಿ ಹಾಗೂ ರಂಗಕರ್ಮಿ ಮುಖ್ಯ ಅತಿಥಿ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಸಿಟಿ ಕಾಂಪೋಸ್ಟ್ ರೈತರ ಜಮೀನಿಗೆ ನೇರ ಸರಬರಾಜು : ನೊಂದಾಯಿಸಲು ಸೂಚನೆ
ಚಾಮರಾಜನಗರ, ನ. 02- ಕೃಷಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಇಲಾಖೆಯ ಯೋಜನೆಯಡಿ ಸಿಟಿ ಕಾಂಪೋಸ್ಟ್‍ನ್ನು ನೇರವಾಗಿ ರೈತರ ಜಮೀನಿಗೆ ಸರಬರಾಜು ಮಾಡಲಿದೆ.
ಪ್ರತಿ ಮೆಟ್ರಿಕ್ ಟನ್‍ಗೆ 1600 ರೂ. ಇದ್ದು, ಸಾಮಾನ್ಯ ವರ್ಗದ ರೈತರಿಗೆ ಪ್ರತಿ ಟನ್‍ಗೆ 800 ರೂ.ನಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಮೆಟ್ರಿಕ್ ಟನ್‍ಗೆ 1200 ರೂ. ಸಹಾಯಧನ ನೀಡಲಾಗುವುದು.
ಸಾಮಾನ್ಯ ವರ್ಗದ ರೈತರು ಪ್ರತಿ ಟನ್‍ಗೆ 800 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರು ಪ್ರತಿ ಟನ್‍ಗೆ 400 ರೂ. ವಂತಿಕೆ ಪಾವತಿಸಬೇಕು.
ಆಸಕ್ತ ರೈತ ಬಾಂಧವರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪಹಣೆ, ಆಧಾರ್ ಗುರುತಿನ ಚೀಟಿ, ಮೊಬೈಲ್ ಸಂಖ್ಯೆ ಮತ್ತು ಜಾತಿ ಪ್ರಮಾಣ ಪತ್ರ (ಪ.ಜಾತಿ ಮತ್ತು ಪ.ಪಂಗಡದವರಿಗೆ ಮಾತ್ರ) ದಾಖಲಾತಿಗಳನ್ನು ನೀಡಿ ಬೇಕಾಗುವ ಸಿಟಿ ಕಾಂಪೋಸ್ಟ್ ಪ್ರಮಾಣವನ್ನು ಪಡೆಯಲು ನೊಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ ಹತ್ತಿರದ ರೈತಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಕೃಷಿ ಇಲಾಖೆ ಜಂಟಿನಿರ್ದೇಶಕರಾದ ತಿರುಮಲೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ನ. 15, 16ರಂದು ಮೈಸೂರಿನಲ್ಲಿ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ
ಚಾಮರಾಜನಗರ, ನ. 02:- ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಮೈಸೂರಿನ ಜೆ.ಎಸ್.ಎಸ್. ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಸಹಯೋಗದೊಂದಿಗೆ ಪ್ರಪ್ರಥಮವಾಗಿ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನವನ್ನು ನವೆಂಬರ್ 15 ಹಾಗೂ 16ರಂದು ಮೈಸೂರಿನಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ಸಮಾಜ ಎಂಬ ವಿಷಯದ ಮೇಲೆ ಸಮ್ಮೇಳನ ಆಯೋಜಿಸಿದೆ.ಕೇಂದ್ರ ವಿಷಯಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ವಿದ್ವತ್‍ಪೂರ್ಣ ಉಪನ್ಯಾಸಗಳನ್ನು ಕನ್ನಡದಲ್ಲಿ ಹೆಸರಾಂತ ವೈಜ್ಞಾನಿಕ ಸಂಸ್ಥೆಗಳ ವಿಶೇಷ ಪರಿಣಿತ ಸಂಪನ್ಮೂಲ ತಜ್ಞರಿಂದ ಆಯೋಜಿಸಿದ್ದು 600 ಪ್ರತಿನಿಧಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಮೂಲ ಮತ್ತು ಅನ್ವಯಿಕ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಶೋಧನಾ ಪ್ರಾತ್ಯಕ್ಷಿಕೆಗಳನ್ನು ಕನ್ನಡದಲ್ಲಿ ಮಂಡಿಸಲು ಸಹ ಯುವ ವಿಜ್ಞಾನಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಆಸಕ್ತರು ನವೆಂಬರ್ 4ರೊಳಗೆ ಇಮೇಲ್ ಞsಣಚಿಞಚಿಟಿಟಿಚಿಜಚಿಛಿoಟಿ@gmಚಿiಟ.ಛಿom ನಲ್ಲಿ ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಹಿರಿಯ ವೈಜ್ಞಾನಿಕ ಅಧಿಕಾರಿ ಡಾ. ಎ.ಎಂ. ರಮೇಶ್ (ಮೊಬೈಲ್ 9845258894) ಅವರನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.
ಬಹಿರಂಗ ಹರಾಜು
ಚಾಮರಾಜನಗರ, ನ. 02 - ನ್ಯಾಯಾಲಯಲ್ಲಿ ಇತ್ಯರ್ಥಗೊಂಡಿರುವ ಪ್ರಕರಣಗಳಿಗೆ ಸಂಬಂಧಿಸಿದ 4 ದ್ವಿಚಕ್ರ ವಾಹನಗಳನ್ನು ನವೆಂಬರ್ 7ರಂದು ಬೆಳಿಗ್ಗೆ 11 ಗಂಟೆಗೆ ಹನೂರು ಪೊಲೀಸ್ ಠಾಣೆ ಆವರಣದಲ್ಲಿ ಈಗ ಇರುವ ಸ್ಥಿತಿಯಲ್ಲೇ ಬಹಿರಂಗ ಹರಾಜು ಮಾಡಲಾಗುತ್ತದೆ.ಹೀರೋಹೊಂಡ ಫ್ಯಾಷನ್ ಪ್ಲಸ್, ಹೀರೊಹೊಂಡ ಸಿಡಿ 100, ಟಿವಿಎಸ್ ವಿಕ್ಟರ್ ಹಾಗೂ ಸುಜುಕಿ ಮ್ಯಾಕ್ಸ್ ಮೋಟಾರ್ ಸೈಕಲ್ ಬಹಿರಂಗ ಹರಾಜು ಮಾಡಲಿದ್ದು ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದೆಂದು ಹನೂರು ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ.7 ರಿಂದ ವಿವಿಧ ತಾಲೂಕು ಕೇಂದ್ರಗಳಿಗೆ ಭ್ರಷ್ಠಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ದೂರು ಸ್ವೀಕಾರ
ಚಾಮರಾಜನಗರ, ನ. 02:- ಜಿಲ್ಲೆಯ ಭ್ರಷ್ಠಾಚಾರ ನಿಗ್ರಹದಳದ ಅಧಿಕಾರಿಗಳು ನವೆಂಬರ್ 7 ರಿಂದ ವಿವಿಧ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ನಾಗರಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.ನವೆಂಬರ್ 7ರಂದು ಗುಂಡ್ಲುಪೇಟೆ ಸರ್ಕಾರಿ ಅತಿಥಿಗೃಹ, 13ರಂದು ಚಾಮರಾಜನಗರದ ಎಸಿಬಿ ಪೊಲೀಸ್ ಠಾಣೆ, ನವೆಂಬರ್ 20ರಂದು ಯಳಂದೂರು ಸರ್ಕಾರಿ ಅತಿಥಿಗೃಹ, ನವೆಂಬರ್ 24ರಂದು ಕೊಳ್ಳೇಗಾಲ ಸರ್ಕಾರಿ ಅತಿಥಿಗೃಹ, ನವೆಂಬರ್ 29ರಂದು ಹನೂರು ಸರ್ಕಾರಿ ಅತಿಥಿಗೃಹದಲ್ಲಿ ನಾಗರಿಕರು ದೂರುಗಳನ್ನು ನೀಡಬಹುದಾಗಿದೆ.
ನಿಗದಿತ ದಿನಾಂಕದಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಧಿಕಾರಿಗಳು ಹಾಜರಿರುತ್ತಾರೆ. ಸರ್ಕಾರಿ ಕಚೇರಿಗಳಲ್ಲಿ ಕೆಲಸಕ್ಕೆ ವಿಳಂಬ, ಲಂಚದ ಹಣಕ್ಕೆ ಒತ್ತಾಯ, ಇನ್ನಿತರ ತೊಂದರೆ ನೀಡುತ್ತಿರುವ ಅಧಿಕಾರಿ ನೌಕರರ ವಿರುದ್ಧ ನಾಗರಿಕರು ದೂರುಗಳನ್ನು ಸಲ್ಲಿಸಬಹುದೆಂದು ಭ್ರಚ್ಠಾಚಾರ ನಿಗ್ರಹದಳದ ಜಿಲ್ಲಾ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment