ಸಕಾಲದಲ್ಲಿ ಮಾಹಿತಿ ಒದಗಿಸಿ : ರಾಜ್ಯ ಮಾಹಿತಿ ಆಯುಕ್ತರಾದ ಕೆ.ಎಂ.ಚಂದ್ರೇಗೌಡ ಸೂಚನೆ
ಚಾಮರಾಜನಗರ, ನ. 30 - ಆಡಳಿತದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಜಾರಿಗೊಳಿಸಲಾಗಿರುವ ಮಾಹಿತಿ ಹಕ್ಕು ಕಾಯ್ದೆಯನ್ವಯ ಅಧಿಕಾರಿಗಳು ಮಾಹಿತಿ ಒದಗಿಸಲು ಬದ್ದರಾಗಿರಬೇಕು ಎಂದು ರಾಜ್ಯ ಮಾಹಿತಿ ಆಯುಕ್ತರಾದ ಕೆ.ಎಂ. ಚಂದ್ರೇಗೌಡ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆ.ಡಿ.ಪಿ ಸಭಾಂಗಣದಲ್ಲಿಂದು ಮಾಹಿತಿ ಹಕ್ಕು ಕುರಿತ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು.
ಜನಸಾಮಾನ್ಯರಿಗೆ ಆಡಳಿತ ಬಗೆಗಿನ ಮಾಹಿತಿ ಹೊಂದುವ ಸಲುವಾಗಿ ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದಿದೆ. ಸರ್ಕಾರದ ಇಲಾಖೆಗಳ ಕಾರ್ಯವೈಖರಿ, ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಇರಬೇಕಿದೆ. ಈ ನಿಟ್ಟಿನಲ್ಲಿ ಮಾಹಿತಿ ಪಡೆಯಲು ಕೋರಿ ಬರುವ ಅರ್ಜಿಗಳನ್ನು ಸ್ವೀಕರಿಸಿ ಸಮರ್ಪಕವಾಗಿ ಮಾಹಿತಿ ನೀಡುವುದು ಅಧಿಕಾರಿಗಳ ಹೊಣೆಗಾರಿಕೆಯಾಗಿದೆ ಎಂದರು.
ಮಾಹಿತಿ ಹಕ್ಕು ಅಧಿನಿಯಮದಡಿ ಸಲ್ಲಿಕೆಯಾಗುವ ಅರ್ಜಿಗಳನ್ನು 30 ದಿನಗಳೊಳಗೆ ವಿಲೇವಾರಿ ಮಾಡಬೇಕು. ವಿಳಂಬ ಮಾಡಿದರೆ ದಂಡನೆಗೆ ಅವಕಾಶವಾಗುತ್ತದೆ. ಲಭ್ಯವಿರುವ ಮಾಹಿತಿ ಸಕಾಲದಲ್ಲಿ ನೀಡಬೇಕು. ಪ್ರತಿ ಅರ್ಜಿಗೂ ತನ್ನದೇ ಆದ ಮೌಲ್ಯ ಇರುತ್ತದೆ. ಯಾವ ಅರ್ಜಿಯನ್ನು ಕಡೆಗಣಿಸುವಂತಿಲ್ಲ. ಸಲ್ಲಿಕೆಯಾಗುವ ಅರ್ಜಿಗೆ ಸ್ಪಷ್ಟವಾಗಿ ಮಾಹಿತಿ ಒದಗಿಸಬೇಕು ಎಂದರು.
ಪ್ರತಿ ಇಲಾಖೆಗಳು ಆಯಾ ಕಚೇರಿಯ ಮುಖ್ಯ ಸ್ಥಳದಲ್ಲಿ ಮಾಹಿತಿ ಅಧಿಕಾರಿ, ಪ್ರಾಧಿಕಾರ ವಿವರವನ್ನು ಪ್ರಕಟಿಸಬೇಕು. ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದೆ. ಕಚೇರಿಯ ಮುಖ್ಯ ಪ್ರದೇಶದಲ್ಲಿ ಸಾರ್ವಜನಿಕರಿಗೆ ಎದ್ದು ಕಾಣುವ ಹಾಗೆ ಮಾಹಿತಿ ಅಧಿಕಾರಿ ವಿವರಗಳನ್ನು ಪ್ರದರ್ಶಿಸಬೇಕು ಎಂದು ಆಯುಕ್ತರು ತಿಳಿಸಿದರು.
ಅಧಿಕಾರಿಗಳು ಮಾಹಿತಿ ಹಕ್ಕು ಕಾಯ್ದೆಯ ಬಗ್ಗೆ ಸಂಪೂರ್ಣವಾಗಿ ಅರಿವು ಹೊಂದಬೇಕು. ಮಾಹಿತಿ ಹಕ್ಕು ಬಗ್ಗೆ ಹೆಚ್ಚು ತಿಳಿದುಕೊಂಡಷ್ಟು ಗೊಂದಲ ತಪ್ಪಲಿದೆ. ಜತೆಗೆ ಕಡತಗಳ ನಿರ್ವಹಣೆಯನ್ನು ನಿಯಾಮಾನುಸಾರ ಮಾಡಬೇಕು. ಇದರಿಂದ ಅರ್ಜಿ ವಿಲೇವಾರಿಗೆ ಅನುಕೂಲವಾಗಲಿದೆ ಎಂದು ಆಯುಕ್ತರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಉಪವಿಭಾಗಾಧಿಕಾರಿ ಫೌಜಿಯಾ ತರನಂ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಾಗಾರಕ್ಕೂ ಮೊದಲು ಮಾಹಿತಿ ಆಯುಕ್ತರು ಜಿಲ್ಲೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಿದರು. ಬಳಿಕ ಜಿಲ್ಲಾಡಳಿತ ಭವನದಲ್ಲಿರುವ ವಿವಿಧ ಇಲಾಖೆ ಕಚೇರಿಗಳ ಮುಖ್ಯ ದ್ವಾರದ ಬಳಿ ಮಹಿತಿ ಅಧಿಕಾರಿ, ಪ್ರಾಧಿಕಾರ ವಿವರಗಳನ್ನು ಪ್ರಕಟಿಸಲಾಗಿದೆಯೆ ಎಂಬ ಬಗ್ಗೆ ಪರಿಶೀಲಿಸಿದರು. ವಿವರ ಫಲಕ ಅಳವಡಿಸದೆ ಇರುವ ಅಧಿಕಾರಿಗಳಿಗೆ ತ್ವರಿತವಾಗಿ ಅಳವಡಿಸುವಂತೆ ನಿರ್ದೇಶನ ನೀಡಿದರು.
***********************************************
ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲ್ಲೂಕು, ಮಹದೇಶ್ವರಬೆಟ್ಟ:-
ದಿನಾಂಕ:30-11-2017ರಂದು ಬೆಳಿಗ್ಗೆ 7.00 ಗಂಟೆಗೆ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಎಂ.ಜೆ.ರೂಪಾ,ಕೆ.ಎ.ಎಸ್.(ಕಿರಿಯ ಶ್ರೇಣಿ) ರವರ ಅಧ್ಯಕ್ಷತೆಯಲ್ಲಿ ಹಾಗೂ ಶ್ರೀ ಸಾಲೂರು ಬೃಹನ್ಮಠದ ಶ್ರೀ ಶ್ರೀ ಪಟ್ಟದ ಗುರುಸ್ವಾಮಿಗಳವರ ಉಪಸ್ಥಿತಿಯಲ್ಲಿ ಹುಂಡಿಗಳನ್ನು ತೆರೆಯಲಾಗಿದ್ದು, ಸದರಿ ಹುಂಡಿಗಳ ಪರ್ಕಾವಣೆಯಲ್ಲಿ ಸಹಾಯಕ ಅಭಿಯಂತರರಾದ ಶ್ರೀ ಆರ್.ಎಸ್.ಮನುವಾಚಾರ್ಯ, ಲೆಕ್ಕಾಧೀಕ್ಷಕರಾದ ಮಹದೇವಸ್ವಾಮಿ, ಕಛೇರಿಯ ಅಧೀಕ್ಷಕರಾದ ಶ್ರೀಬಿ.ಮಾದರಾಜು, ಹಾಗೂ ದೇವಸ್ಥಾನದ ಎಲ್ಲಾ ನೌಕರರುಗಳು, ಚಾಮರಾಜನಗರ ಜಿಲ್ಲಾಧಿಕಾರಿಯವರ ಕಛೇರಿಯ ಪ್ರಥಮ ದರ್ಜೆ ಸಹಾಯಕರಾದ ಶ್ರೀ ಮೋಹನ್ ಕುಮಾರ್ ಮತ್ತು ಮಹದೇಶ್ವರಬೆಟ್ಟ ಆರಕ್ಷಕ ಸಿಬ್ಬಂದಿ ವರ್ಗ, ಎಸ್.ಬಿ.ಎಂ. ವ್ಯವಸ್ಥಾಪಕರಾದ ಸೆಂದಿಲ್ ನಾಥನ್ & ಸಿಬ್ಬಂದಿ ವರ್ಗದವರು ಹಾಜರಿದ್ದರು.ಇವರೆಲ್ಲರ ಸಹಕಾರದಿಂದ ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮವಾಗಿ ಜರುಗಿತು ಸದರಿ ದಿವಸದಂದು ಹುಂಡಿ ಪರ್ಕಾವಣೆಯಿಂದ ಒಟ್ಟು ರೂ.1,26,56,321/- (ಔಟಿe ಛಿಡಿoಡಿe ಣತಿeಟಿಣಥಿ six ಟಚಿಞh ಜಿiಜಿಣಥಿ six ಣhousಚಿಟಿಜ ಣhಡಿee ಣತಿeಟಿಣಥಿ oಟಿe ಡಿuಠಿees oಟಿಟಥಿ) ಬಂದಿರುತ್ತದೆ. ಇದಲ್ಲದೇ ಚಿನ್ನದ ಪದಾರ್ಥಗಳು 0. 038 (ಖಿhiಡಿಣಥಿ eighಣ gಡಿಚಿms) ಮತ್ತು ಬೆಳ್ಳಿ ಪದಾರ್ಥಗಳು 2.100 (ಖಿತಿo ಏಉ huಟಿಜಡಿeಜ ಉಡಿಚಿms) ದೊರೆತಿರುತ್ತದೆ.
************************************************************
ಕೆಎಸ್‍ಆರ್‍ಟಿಸಿ : 362 ಮಂದಿ ಪ್ರಯಾಣಿಕರಿಂದ 45,472 ರೂ. ದಂಡ ವಸೂಲಿ
ಚಾಮರಾಜನಗರ, ನ. 30 :- ಚಾಮರಾಜನಗರ ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಕ್ಟೋಬರ್ 2017ರಲ್ಲಿ 2480 ಬಸ್ಸುಗಳನ್ನು ಮಾರ್ಗ ತನಿಖೆಗೆ ಒಳಪಡಿಸಿ 253 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ.ಟಿಕೆಟ್ ಪಡೆಯದೇ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ 362 ಮಂದಿ ಪ್ರಯಾಣಿಕರಿಗೆ 45472 ರೂ. ದಂಡ ವಿಧಿಸಲಾಗಿದೆ ಎಂದು ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಆಶೋಕ್ ಕುಮಾರ್ ಪÀ್ರಕಟಣೆಯಲ್ಲಿ ತಿಳಿಸಿದ್ದಾರÉ.
ಡಿ. 1ರಂದು ನಗರದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಜಾಥಾ
ಚಾಮರಾಜನಗರ, ನ. 30 - ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಡಿಸೆÉಂಬರ್ 1ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಜಾಥಾ ಆರಂಭಗೊಳ್ಳಲಿದೆ.
ಜಿಲ್ಲಾಧಿಕಾರಿಗಳು ಜಾಥಾದಲ್ಲಿ ಪಾಲ್ಗೊಂಡು ಏಡ್ಸ್ ದಿನಾಚರಣೆ ಹಾಗೂ 2017-18ನೇ ಸಾಲಿಗೆ ಜಿಲ್ಲೆಯಲ್ಲಿ ಹೆಚ್ ಐವಿ, ಏಡ್ಸ್ ಅಂಕಿಅಂಶಗಳ ಮಾಹಿತಿ ನೀಡುವರು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
ಡಿ. 5 ರಂದು ನಗರದಲ್ಲಿ ವಸ್ತು ಪ್ರದರ್ಶನ, ರಕ್ತದಾನ ಶಿಬಿರ
ಚಾಮರಾಜನಗರ, ನ. 30 - ಜಿಲ್ಲಾ ಆಸ್ಪತ್ರೆಯ ಎಆರ್‍ಟಿ ಕೇಂದ್ರದ ವತಿಯಿಂದ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಡಿಸೆಂಬರ್ 5ರಂದು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆÉ ಎಚ್‍ಐವಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ವಸ್ತು ಪ್ರದರ್ಶನ ಹಾಗೂ ರಕ್ತದಾನ ಶಿಬಿರ ಆಯೋಜಿಸಿದೆ.ಅರಿವು ಜಾಗೃತಿ ಹಾಗೂ ವಸ್ತು ಪ್ರದರ್ಶನವು ಐಸಿಟಿಸಿ ಕೇಂದ್ರ, ಪಿಪಿಟಿಸಿಸಿ ಕೇಂದ್ರ, ಸುರಕ್ಷಾ ಕ್ಲಿನಿಕ್, ರಕ್ತ ಸಂಗ್ರಹಣ ಘಟಕ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಘಟಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾನೂನು ಸಲಹಾ ಕೇಂದ್ರ, ಸ್ವಯಂ ಸೇವಾ ಸಂಸ್ಥೆಗಳಾದ ಚೈತನ್ಯ ನೆಟ್‍ವರ್ಕ್, ಸ್ನೇಹ ಜ್ಯೋತಿ ಮಹಿಳಾ ಸಂಘ, ನಾಗರಿಕ ಸಹಾಯವಾಣಿ ಕೇಂದ್ರ ನಿರ್ವಹಣೆ ಉದ್ಭವ್ ಸಂಸ್ಥೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ ಎಂದು ಎಆರ್‍ಟಿ ಕೇಂದ್ರದ ವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತರಬೇತಿಗೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ
ಚಾಮರಾಜನಗರ ನ. 30 :- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆಗೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆ ಪೂರ್ವಸಿದ್ಧತೆ ಕುರಿತು ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಪ್ರವರ್ಗ-1, 2ಎ, 3ಎ ಹಾಗೂ 3ಬಿ.ಗೆ ಸೇರಿದ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಡಿಸೆಂಬರ್ 5 ಕಡೆಯ ದಿನ.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 080-65970004ನ್ನು ಸಂಪರ್ಕಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಮಾದರಿ ಗ್ರಾಮ ಪಂಚಾಯಿತಿಯಾಗಿ ದೊಡ್ಡಮೋಳೆ ಅಭಿವೃದ್ಧಿ : ಧ್ರುವನಾರಾಯಣ
ದೊಡ್ಡಮೋಳೆಯಲ್ಲಿ ನಡೆದ ಸಂಸದರ ಆದರ್ಶ ಗ್ರಾಮ ಯೋಜನೆ ಸಂಬಂಧ ವಿಶೇಷ ಗ್ರಾಮಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾಲೂಕಿನ ಹಿಂದುಳಿದ ಪ್ರದೇಶವಾಗಿರುವ ದೊಡ್ಡಮೋಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ದೊಡ್ಡಮೋಳೆ, ದೊಳ್ಳೀಪುರ, ಬ್ಯಾಡಮೂಡ್ಲು ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿದ್ದಾರೆ. ಈ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಕ್ರಿಯಾ ಯೋಜನೆ ಕಾರ್ಯರೂಪಕ್ಕೆ ಬರಲು ಗ್ರಾಮಸ್ಥರು ಸಹ ನಿಂತು ಕೈಜೋಡಿಸಬೇಕು. ಆಗಮಾತ್ರ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಉದ್ದೇಶ ಸಫಲವಾಗುತ್ತದೆ ಎಂದು ಧ್ರುವನಾರಾಯಣ ತಿಳಿಸಿದರು.
ಸ್ಥಳೀಯವಾಗಿ ಪ್ರೌಢಶಾಲೆ ಅಗತ್ಯವಿದೆ ಎಂಬುದು ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ. ವಸತಿ, ಕುಡಿಯುವ ನೀರು, ಸಿಮೆಂಟ್ ಕಾಂಕ್ರೀಟ್ ರಸ್ತೆ, ಬೀದಿ ದೀಪ, ಶೌಚಾಲಯ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುತ್ತದೆ ಎಂದರು.
ಶಿಕ್ಷಣಕ್ಕೆ ಪೂರಕವಾಗಿರುವ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ. ಯಾವ ಮಕ್ಕಳೂ ಸಹ ಶಾಲೆಯಿಂದ ಹೊರಗುಳಿಯಬಾರದು. ಎಲ್ಲರಿಗೂ ಶಿಕ್ಷಣ ಕೊಡಿಸಬೇಕು. ಕಷ್ಟಪಟ್ಟು ವ್ಯಾಸಂಗ ಮಾಡಿದರೆ ಸಮಾಜದಲ್ಲಿ ಮೇಲೆಬರಲು ಸಾಧ್ಯವಾಗಲಿದೆ. ಮಕ್ಕಳನ್ನು ದುಡಿಮೆಗೆ ಹಚ್ಚಬಾರದು, ಹೆಣ್ಣು ಮಕ್ಕಳ ಶಿಕ್ಷಣಕ್ಕೂ ಅವಕಾಶ ನೀಡಬೇಕೇ ವಿನ: ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಧ್ರುವನಾರಾಯಣ ಸಲಹೆ ಮಾಡಿದರು.
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ ಈ ಭಾಗದ ರಸ್ತೆ ಅಭಿವೃದ್ಧಿಗೆ 1.20 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ವಸತಿ ನಿರ್ಮಾಣಕ್ಕೂ ಅಗತ್ಯವಿರುವ ನೆರವು ನೀಡಲಾಗುತ್ತದೆ. ಇನ್ನಿತರ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ತಾವೂ ಸಹ ಹೆಚ್ಚಿನ ಗಮನ ಹರಿಸುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮಾತನಾಡಿ ತಾವೂ ಸಹ ಹರದನಹಳ್ಳಿಯನ್ನು ಪ್ರತಿನಿಧಿಸುತ್ತಿದ್ದು ಈ ಭಾಗಕ್ಕೆ ಸೇರಿದ ದೊಡ್ಡಮೋಳೆ ಗ್ರಾಮಪಂಚಾಯಿತಿ ಸಂಸದರ ಆದರ್ಶ ಗ್ರಾಮ ಯೋಜನೆಗೆ ಆಯ್ಕೆಯಾಗಿರುವುದು ಸಂತಸ ತಂದಿದೆ. ಅಭಿವೃದ್ಧಿ ಕೆಲಸಗಳಿಂದ ಜನರಿಗೆ ಗ್ರಾಮಕ್ಕೆ ಅನುಕೂಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಎಚ್.ವಿ. ಚಂದ್ರು ಮಾತನಾಡಿ ದೊಡ್ಡಮೋಳೆ ಗ್ರಾಮಪಂಚಾಯಿತಿಯು ಸಂಸದರ ಆದರ್ಶ ಗ್ರಾಮ ಯೋಜನೆಗೆ ಆಯ್ಕೆ ಮಾಡಿರುವುದಕ್ಕೆ ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ ತಾವು ಅಭಿನಂದನೆ ಸಲ್ಲಿಸುತ್ತೇನೆ. ಯೋಜನೆಯಡಿ ಸಮಗ್ರವಾಗಿ ಗ್ರಾಮಗಳು ಅಭಿವೃದ್ಧಿಯಾಗಲಿವೆ. ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಜತೆಗೂಡಿ ಬೆಂಬಲವಾಗಿ ಇದ್ದು ಪ್ರಗತಿ ಕಾರ್ಯಗಳಿಗೆ ಉತ್ತೇಜಿಸಬೇಕÀು ಎಂದರು.
ಜಿಲ್ಲಾಧಿಕಾರಿ ಬಿ. ರಾಮು ಮಾತನಾಡಿ ಸಂಸದರ ಆದರ್ಶ ಗ್ರಾಮ ಅಭಿವೃದ್ಧಿಗೆ ಆಯ್ಕೆಯಾಗಿರುವ ದೊಡ್ಡಮೋಳೆಯಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ, ಸ್ವಚ್ಚತೆ ಕೆಲಸಗಳಿಗೆ ಆದ್ಯತೆ ನೀಡಲಾಗುತ್ತದೆ. ಶಿಕ್ಷಣ, ಆರೋಗ್ಯ ಅತಿಮುಖ್ಯವಾಗಿದೆ. ಶಾಲೆ, ರಸ್ತೆ, ಇನ್ನಿತರ ಸೌಲಭ್ಯಗಳು ಜನರಿಗೆ ಸ್ಥಳೀಯವಾಗಿ ಸಮರ್ಪಕವಾಗಿ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಲಿದ್ದಾರೆ. ಇದರಿಂದ ಗ್ರಾಮದ ಚಿತ್ರಣವೇ ಬದಲಾವಣೆಯಾಗಲಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್, ತಾಲೂಕು ಪಂಚಾಯತ್ ಸದಸ್ಯರಾದ ಪುಟ್ಟಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ, ಉಪಾಧ್ಯಕ್ಷರಾದ ಸುಧಾ, ಗ್ರಾಮದ ಮುಖಂಡರು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಗೂ ಮೊದಲು ಧ್ರುವನಾರಾಯಣ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ದೊಡ್ಡಮೋಳೆ, ಬ್ಯಾಡಮೂಡ್ಲು, ದೊಳ್ಳೀಪುರ ಗ್ರಾಮದ ಎಲ್ಲ ಬೀದಿಗಳಿಗೆ ಭೇಟಿ ನೀಡಿ ಅಲ್ಲಿರುವ ವಾಸ್ತವ ಚಿತ್ರಣವನ್ನು ಪರಿಶೀಲಿಸಿದರು.
No comments:
Post a Comment