ಕೈಗಾರಿಕಾ ಶೃಂಗಸಭೆ : ಪೂರ್ವಭಾವಿ ರೋಡ್ ಶೋ
ಚಾಮರಾಜನಗರ, ನ. 03 - ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ನವೆಂಬರ್ 23 ಹಾಗೂ 24ರಂದು ಇಂಟರ್ ನ್ಯಾಷನಲ್ ಟ್ರೇಡ್ ಸೆಂಟರ್‍ನಲ್ಲಿ ಮಾರಾಟಗಾರರ ಅಭಿವೃದ್ಧಿ ಮತ್ತು ಹೂಡಿಕೆದಾರರ ಶೃಂಗ ಸಭೆ ನಡೆಯಲಿದೆ.
ಶೃಂಗ ಸಭೆಯ ಪೂರ್ವಭಾವಿಯಾಗಿ ಈ ತಿಂಗಳ 2ನೇ ವಾರದಲ್ಲಿ ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀ ಅವರ ಮಳಿಗೆಯಲ್ಲಿ ಏರ್ಪಡಿಸಲಾಗುವುದು.
ಈ ಕಾರ್ಯಕ್ರಮವನ್ನು ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಯ ಬಂಡವಾಳ ಹೂಡಿಕೆದಾರರ ಅನುಕೂಲಕ್ಕಾಗಿ ಆಯೋಜಿಸಲಾಗಿದೆ. ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಿಳಿಸಿದೆ.
ಹೆಚ್ಚಿನ ವಿವರಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ದೂರವಾಣಿ ಸಂಖೆÀ್ಯ 08226-224915 ಅಥವಾ 08226-224906 ಹಾಗೂ ತಿತಿತಿ.iಟಿvesಣಞಚಿಡಿಟಿಚಿಣಚಿಞಚಿ.ಛಿo.iಟಿ ವೆಬ್ ಸೈಟ್ ಸಂಪರ್ಕಿಸಿಯೂ ಪಡೆಯಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 6ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ
ಚಾಮರಾಜನಗರ, ನ. 03 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 6ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಕನಕದಾಸರ ಭಾವಚಿತ್ರ ಮೆರವಣಿಗೆಗೆ ಚಾಲನೆ ದೊರೆಯಲಿದೆ.
ಬೆಳಿಗ್ಗೆ 11 ಗಂಟೆಗೆ ಹಳೇ ಖಾಸಗಿ ಬಸ್ ನಿಲ್ದಾಣದ ಮಾರಿಗುಡಿ ದೇವಸ್ಥಾನದ ಆವರಣದ ಬಳಿ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಸಕ್ಕರೆ, ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಭಕ್ತ ಶ್ರೇಷ್ಠ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆಯ ಅಧ್ಯಕ್ಷರಾದ ಶೋಭ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನÀಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಗುಂಡ್ಲುಪೇಟೆ ವಿಶ್ರಾಂತ ಪ್ರಾಂಶುಪಾಲರಾದ ಕೆಂಪರಾಜು ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಅಂದು ಬೆಳಿಗ್ಗೆ 9.30 ಗಂಟೆಗೆ ಮುಖ್ಯ ವೇದಿಕೆಯಲ್ಲಿ ಗದಗಿನ ವೀರೇಶ್ವರ ಪುಣ್ಯಾಶ್ರಮದ ಏಕನಾಥ್ ಮತ್ತು ತಂಡದವರಿಂದ ಕನಕದಾಸರ ಕೀರ್ತನೆ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನ. 5ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ನ. 03 - ನಗರದ ನ್ಯಾಯಾಲಯ ರಸ್ತೆ, ಹಳೆಯ ಡಿವೈಎಸ್‍ಪಿ ಪೊಲೀಸ್ ಠಾಣೆಯಿಂದ ಸತ್ಯಮಂಗಲ ರಸ್ತೆಯವರೆಗೆ ರಸ್ತೆ ಅಗಲೀಕರಣ ಮಾಡಲು ರಸ್ತೆ ಬದಿಯಲ್ಲಿರುವ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾಮಗಾರಿ ನವೆಂಬರ್ 5ರಂದು ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹೌಸಿಂಗ್ ಬೋರ್ಡ್ ಹಾಗೂ ನ್ಯಾಯಾಲಯ ರಸ್ತೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜವಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 03 - ನಗರದ ಹೊಂಡರಬಾಳುವಿನಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2018-19ನೇ ಸಾಲಿಗೆ 6ನೇ ತರಗತಿ ದಾಖಲಾತಿ ಸಂಬಂಧ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಆಫ್ ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ಆನ್ ಲೈನ್‍ನಲ್ಲಿ ಮಾತ್ರ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.ಸಾಮಾನ್ಯ ಸೇವಾ ಕೇಂದ್ರ (ಸಿಎಸ್‍ಸಿ)ಗಳಿಂದ ದೂರ ಇರುವ ಶಾಲೆಯ ವಿದ್ಯಾರ್ಥಿಗಳು ಮುಖ್ಯೋಪಾಧ್ಯಾಯರಿಂದ ಭರ್ತಿ ಮಾಡಿಸಿದ ನಿಗದಿತ ಅರ್ಜಿ ನಮೂನೆಯನ್ನು ನೇರವಾಗಿ ವಿದ್ಯಾಲಯಕ್ಕೆ ಸಲ್ಲಿಸಿ ಅರ್ಜಿ ಸಂಖ್ಯೆ ಮತ್ತು ಸ್ವೀಕೃತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ನಮೂನೆಗಳು ಎಲ್ಲಾ ಬಿಆರ್‍ಪಿ, ಬಿಇಓ ಕಚೇರಿ ಹಾಗೂ ಜವಾಹರ ನವೋದಯ ವಿದ್ಯಾಲಯದಲ್ಲಿ ದೊರೆಯಲಿದೆ. ಆಫ್ ಲೈನ್ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ.
ಅರ್ಜಿ ಸಲ್ಲಿಸಲು ನವೆಂಬರ್ 25 ಕಡೆಯ ದಿನ. ಪ್ರವೇಶ ಪರೀಕ್ಷೆ 2018ರ ಫೆಬ್ರವರಿ 10ರಂದು ನಡೆಯಲಿದೆ.
ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ 9448552463, 9449626243, 9742476738, 9480293565, 9480769675, 7337756247ನ್ನು ಸಂಪರ್ಕಿಸುವಂತೆ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 15ರಂದು ಯರಗಂಬಳ್ಳಿ ಗ್ರಾಮದಲ್ಲಿ ಅಂಚೆ ಸಂತೆ
ಚಾಮರಾಜನಗರ, ನ. 03 - ಅಂಚೆ ಇಲಾಖೆಯು ಯಳಂದೂರು ಹೋಬಳಿಯ ಯರಗಂಬಳ್ಳಿ ಗ್ರಾಮದಲ್ಲಿ ನವೆಂಬರ್ 15ರಂದು ಅಂಚೆ ಸಂತೆ ಏರ್ಪಡಿಸಿದೆ.ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವವಿಮೆ ಇನ್ನಿತರ ಅಂಚೆ ಯೋಜನೆಗಳನ್ನು ಸ್ವೀಕರಿಸಲಾಗುತ್ತದೆ.
ಯರಗಂಬಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳುವಂತೆ ಅಂಚೆ ಅಧೀಕ್ಷಕರಾದ ಜಿ.ಸಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ನ. 17ರಂದು ಜಿ.ಪಂ. ಕೆಡಿಪಿ ಸಭೆ
ಚಾಮರಾಜನಗರ, ನ. 03:- ಜಿಲ್ಲಾ ಪಂಚಾಯತ್‍ನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಮಾಸಿಕ ಪ್ರಗತಿ ಪರಿಶೀಲನಾ ಸಭೆ ನವೆಂಬರ್ 17ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment