Monday, 6 November 2017

ನ. 6ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ (05-11-2017)

ನ. 6ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ


ಚಾಮರಾಜನಗರ, ನ. 05 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 6ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಕನಕದಾಸರ ಭಾವಚಿತ್ರ ಮೆರವಣಿಗೆಗೆ ಚಾಲನೆ ದೊರೆಯಲಿದೆ.
ಬೆಳಿಗ್ಗೆ 11 ಗಂಟೆಗೆ ಹಳೇ ಖಾಸಗಿ ಬಸ್ ನಿಲ್ದಾಣದ ಮಾರಿಗುಡಿ ದೇವಸ್ಥಾನದ ಆವರಣದ ಬಳಿ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು  ಸಕ್ಕರೆ, ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಭಕ್ತ ಶ್ರೇಷ್ಠ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆಯ ಅಧ್ಯಕ್ಷರಾದ ಶೋಭ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನÀಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್,  ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಗುಂಡ್ಲುಪೇಟೆ ವಿಶ್ರಾಂತ ಪ್ರಾಂಶುಪಾಲರಾದ ಕೆಂಪರಾಜು ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಅಂದು ಬೆಳಿಗ್ಗೆ 9.30 ಗಂಟೆಗೆ ಮುಖ್ಯ ವೇದಿಕೆಯಲ್ಲಿ ಗದಗಿನ ವೀರೇಶ್ವರ ಪುಣ್ಯಾಶ್ರಮದ ಏಕನಾಥ್ ಮತ್ತು ತಂಡದವರಿಂದ ಕನಕದಾಸರ ಕೀರ್ತನೆ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಚಾಮರಾಜನಗರ, ನ. 05 - ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ಅವರು ನವೆಂಬರ್ 6ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುವ ಸಚಿವರು ನಗರದಲ್ಲಿ ಆಯೋಜಿಸಲಾಗಿರುವ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮದÀಲ್ಲಿ ಪಾಲ್ಗೊಳ್ಳುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು