Monday, 4 December 2017

ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆ ನೂತನ ಅಧಿಕಾರಿಯಾಗಿ ಮಹದೇವಯ್ಯ ಅಧಿಕಾರ ಸ್ವೀಕಾರ ,ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ (04-12-2017)


ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆ ನೂತನ ಅಧಿಕಾರಿಯಾಗಿ ಮಹದೇವಯ್ಯ ಅಧಿಕಾರ ಸ್ವೀಕಾರ  

ಚಾಮರಾಜನಗರ ಡಿ.04- ಚಾಮರಾಜನಗರ ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನೂತನ ಸಹಾಯಕ ನಿರ್ದೇಶಕರಾಗಿ ಮಹದೇವಯ್ಯ ಅವರು ಅಧಿಕಾರ ವಹಿಸಿಕೊಂಡರು.
ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸೋಮವಾರ ಚಾಮರಾಜನಗರ ಜಿಲ್ಲಾಡಳಿತ ಭವನದಲ್ಲಿ ಇರುವ  ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಪ್ರಭಾರ ಅಧಿಕಾರಿಯಾಗಿದ್ದ ನಾಗವೇಣಿ ಅವರು ಮಹದೇವಯ್ಯ ಅವರಿಗೆ ಅಧಿಕರಾರ ವಹಿಸಿಕೊಟ್ಟರು. ಜಿಲ್ಲೆಯ ಎಲ್ಲಾ ಕಲಾವಿದರು ನೂತನ ವಾಗಿ ಅಧಿಕಾರ ವಹಿಸಿಕೊಂಡ ಮಹದೇವಯ್ಯ ಅವರನ್ನು ಗೌರವಿಸಿದರು.

****************************************

ಡಿ. 5ರಂದು ಜಿ.ಪಂ. ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ಚಾಮರಾಜನಗರ, ಡಿ. 04 :- ಜಿಲ್ಲಾ ಪಂಚಾಯಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಡಿಸೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ನಗರದ ನೂತನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಚುನಾವಣಾ ಸಭೆ ಕರೆಯಲಾಗಿದೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಯಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ. 5ರಂದು ಸೆಸ್ಕ್ ಜನಸಂಪರ್ಕ ಸಭೆ

ಚಾಮರಾಜನಗರ ಡಿ. 04 :- ಚಾಮುಂಡೇಶ್ವÀರಿ ವಿದ್ಯುತ್ ಸರಬರಾಜು ನಿಗಮವು ಡಿಸೆಂಬರ್ 5ರಂದು ಬೆಳಿಗ್ಗೆ 11 ಗಂಟೆಗೆ ನಗರದ ಉಪವಿಭಾಗದ ಸೆಸ್ಕ್ ಕಚೇರಿಯಲ್ಲಿ ಜನಸಂಪರ್ಕ ಸಭೆಯನ್ನು ಕರೆಯಲಾಗಿದೆ.
ಸಾರ್ವಜನಿಕರು ಸಭೆಗೆ ಹಾಜರಾಗಿ ವಿದ್ಯುತ್ ಸÀಂಬಂಧ ಕುಂದುಕೊರತೆಗಳನ್ನು ತಿಳಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ  ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ. 5ರಂದು ವಿದ್ಯುತ್ ವ್ಯತ್ಯಯ

ಚಾಮರಾಜನಗರ ಡಿ. 04 :- ಚಾಮುಂಡೇಶ್ವÀರಿ ವಿದ್ಯುತ್ ಸರಬರಾಜು ನಿಗಮವು ಡಿಸೆಂಬರ್ 5ರಂದು ಚಾಮರಾಜನಗರ ನ್ಯಾಯಾಲಯ ರಸ್ತೆ, ಡಿವೈಎಸ್‍ಪಿ ಪೊಲೀಸ್ ಠಾಣೆಯಿಂದ ಸತ್ತಿ ರಸ್ತೆಯವರೆಗೆ ರಸ್ತೆ ಅಗಲೀಕರಣ ಮಾಡಲು ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ನಿರ್ವಹಿಸಲಿದೆ.
ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೋರ್ಟ್ ರಸ್ತೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ  ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ. 12ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆ
ಚಾಮರಾಜನಗರ, ಡಿ. 04 :- ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 12ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆ ಕರೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


ನಾಗಮಲೆಗೆ ಸಾಹಸ ಚಾರಣ : ಅರ್ಜಿ ಆಹ್ವಾನ

ಚಾಮರಾಜನಗರ, ಡಿ. 04 :- ಯುವ ಸಬಲೀಕರಣ ಮತ್ತು ಕ್ರೀಡಾ ಇಲÁಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶ್ರೀ ಮಹದೇಶ್ವರ ಬೆಟ್ಟದಿಂದ ನಾಗಮಲೈಗೆ ನಡೆದು ಹೋಗುವ ಜಿಲ್ಲಾ ಮಟ್ಟದ ಸಾಹಸ ಚಾರಣ ಕ್ರೀಡೆಯನ್ನು ಡಿಸೆಂಬರ್ 28 ರಿಂದ 30ರವರೆಗೆ ಕೊಳ್ಳೇಗಾಲ ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ನೊಂದಾಯಿತ ಸಂಘಗಳ ಯುವಕ ಯುವತಿಯರು, ಕಾಲೇಜು ವಿದ್ಯಾರ್ಥಿಗಳು ಹಾಗೂ 15 ರಿಂದ 35ರ ವಯೋಮಾನದ ಯುವಜನರು ಭಾಗವಹಿಸಬಹುದು.
ಸಾಹಸ ಕ್ರೀಡೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಡಿಸೆಂಬರ್ 18ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08226-224932, ಮೊಬೈಲ್ 9482718278ನ್ನು ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕರಾದ ಎಂ. ಚಲುವಯ್ಯ ಪ್ರಕಟಣೆಯಲ್ಲಿ ಕೋರಿದ್ದಾರೆ.



ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ

ಚಾಮರಾಜನಗರ, ಡಿ. 04 :- ಜಿಲ್ಲೆಯ ನಾಲ್ಕೂ ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಡಿಸೆಂಬರ್ 8 ರಿಂದ 29ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ಡಿಸೆಂಬರ್ 8ರಂದು ಗುಂಡ್ಲುಪೇಟೆ ತಾಲೂಕಿನ ಸಾರ್ವಜನಿಕರಿಂದ ಗುಂಡ್ಲುಪೇಟೆಯ ಸರ್ಕಾರಿ ಅತಿಥಿಗೃಹದಲ್ಲಿ,  12ರಂದು ಚಾಮರಾಜನಗರ ತಾಲೂಕಿಗೆ ಸಂಬಂಧಿಸಿದಂತೆ ನಗರದ ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರುಗಳನ್ನು ಸ್ವೀಕರಿಸುವರು. 18ರಂದು ಯಳಂದೂರು, 22ರಂದು ಕೊಳ್ಳೇಗಾಲ ಹಾಗೂ 29ರಂದು ಹನೂರಿನಲ್ಲಿ ದೂರುಗಳನ್ನು ಅಲ್ಲಿನ ಸರ್ಕಾರಿ ಅತಿಥಿಗೃಹದಲ್ಲಿ ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

ಗುಂಡ್ಲುಪೇಟೆ : ಕಡ್ಡಾಯ ಶೌಚಾಲಯ ನಿರ್ಮಾಣಕ್ಕೆ ಮನವಿ

ಚಾಮರಾಜನಗರ, ಡಿ. 04 :- ಗುಂಡ್ಲುಪೇಟೆ ಪುರಸಭೆಯು ಪಟ್ಟಣವನ್ನು ಬಯಲು ಶೌಚಮುಕ್ತ ಪಟ್ಟಣವನ್ನಾಗಿಸಲು ಪ್ರತಿಯೊಬ್ಬ ನಾಗರಿಕರು ಶೌಚಾಲಯ ನಿರ್ಮಿಸಿ ಉಪಯೋಗಿಸುವುದು ಅತ್ಯವಶ್ಯಕವಾಗಿದೆ.
ಕಾಲರ, ಟೈಫಾಯ್ಡ್, ಅತಿಸಾರ ಬೇಧಿ ಮುಂತಾದ ಕಾಯಿಲೆಗಳನ್ನು ತಡೆಗಟ್ಟಲು ಬಯಲು ಶೌಚ ಮಾಡುವುದನ್ನು ನಿರ್ಮೂಲನೆ ಮಾಡಬೇಕಾಗಿದೆ.
ಈಗಾಗಲೇ ಪುರಸಭೆಗೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಮತ್ತು ಶೌಚಾಲಯ ನಿರ್ಮಾಣ ಮಾಡಲು ಸ್ಥಳಾವಕಾಶವಿದ್ದು ಕ್ರಮವಹಿಸದೇ ಇರುವವರು ಡಿಸೆಂಬರ್ 10ರೊಳಗೆ ಶೌಚಾಲಯ ನಿರ್ಮಿಸಿಕೊಂಡು ಸರ್ಕಾರದಿಂದ ಸಿಗುವ ಸೌಲಭ್ಯ ಪಡೆಯಬಹುದಾಗಿದೆ.
ಸಾರ್ವಜನಿಕರು ಸ್ವಚ್ಚತೆಗೆ ಹಾಗೂ ಬಯಲು ಶೌಚಮುಕ್ತ ಪಟ್ಟಣವನ್ನಾಗಿಸಲು ಪುರಸಭೆಯೊಂದಿಗೆ ಸಹಕರಿಸುವಂತೆ ಪುರಸಭೆ ಪ್ರಕಟಣೆ ಕೋರಿದೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಚಾಮರಾಜನಗರ, ಡಿ. 04 - ಅಲ್ಪಸಂಖ್ಯಾತ ಕಲ್ಯಾಣ ಇಲಾಖೆÉಯು ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಐಟಿಐ, ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ ಮತ್ತು ಬೌದ್ಧ ಜನಾಂಗದ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಮಂಜೂರಾತಿಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದ ಮಲ್ಪಿಪರ್ಪಸ್ ಹಾಲ್‍ನ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 31ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08226-224370 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.



No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು