ಡಿ.ಇಡಿ ಪರೀಕ್ಷೆ: ನಿಷೇದಾಜ್ಞೆ
ಚಾಮರಾಜನಗರ, ಡಿ. 11 - ನಗರದ ಶ್ರೀರಾಮ ಚಂದ್ರ ಡಿ.ಇಡಿ ಪರೀಕ್ಷಾ ಕೇಂದ್ರದಲ್ಲಿ ಡಿಸೆಂಬರ್ 11 ರಿಂದ 16ರ ವರೆಗೆ ಪ್ರಥಮ ಡಿ.ಎಲ್.ಇಡಿ, ಡಿ.ಇಡಿ ಮತ್ತು ದ್ವಿತೀಯ ಡಿ.ಇಡಿ ಪೂರಕ ಪರೀಕ್ಷೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶ ಹೊರಡಿಸಿದ್ದಾರೆ.ಡಿಸೆಂಬರ್ 11 ರಿಂದ 16ರ ವರೆಗೆ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯ ವರೆಗೆ ನಿಷೇಧಿತ ಸ್ಥಳವೆಂದು ನಿಷೇದಾಜ್ಞೆ ಹೊರಡಿಸಿದ್ದಾರೆ. ಸದರಿ ದಿನಗಳಂದು ಬೆಳಿಗ್ಗೆ 9 ರಿಂದ 5.30 ಗಂಟೆಯ ವರೆಗೆ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ.
ನಿಷೇದಾಜ್ಞೆ ಆದೇಶವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೆಲಸಗಳ ನಿಯೋಜಿತರಾದ ಸಿಬ್ಬಂದಿ ವರ್ಗಕ್ಕೆ ಅನ್ವಯವಾಗುವುದಿಲ್ಲವೆಂದು ಆದೇಶದಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಡಿ. 13, 14ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಡಿ. 12 :- ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ( ಗೀತ ಮಹದೇವ ಪ್ರಸಾದ್) ಅವರು ಡಿಸೆಂಬರ್ 13 ಹಾಗೂ 14ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.ಡಿಸೆಂಬರ್ 13ರಂದು ಬೆಳಿಗ್ಗೆ 10.30 ಗಂಟೆಗೆ ಗುಂಡ್ಲುಪೇಟೆಗೆ ಆಗಮಿಸಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಡಿಸೆಂಬರ್ 14ರಂದು ಬೆಳಿಗ್ಗೆ 10 ಗಂಟೆಗೆ ಗುಂಡ್ಲುಪೇಟೆಯಲ್ಲಿ ಚುನಾಯಿತ ಮಹಿಳಾ ಸದಸ್ಯರು, ಜಿಲ್ಲಾ ಮಟ್ಟದ ಜನಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 10.30 ಗಂಟೆಗೆ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳಿಗ್ಗೆ 11 ಗಂಟೆಗೆ ಗುಂಡ್ಲುಪೇಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 2 ಗಂಟೆಗೆ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಸಾರ್ವಜನಿಕರನ್ನು ಭೇಟಿ ಮಾಡುವರು. ಸಂಜೆ 4 ಗಂಟೆಗೆ ಮೈಸೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟuಯಲ್ಲಿ ತಿಳಿಸಿದ್ದಾರೆ.
ಡಿ. 14ರಂದು ಗುಂಡ್ಲುಪೇಟೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಉದ್ಘಾಟನೆ
ಚಾಮರಾಜನಗರ, ಡಿ. 12 ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 14ರಂದು ಬೆಳಿಗ್ಗೆ 11 ಗಂಟೆಗೆ ನಬಾರ್ಡ್ ಯೋಜನೆಯಡಿಯಲ್ಲಿ ಅಂದಾಜು 1046 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ 60 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಹೆಚ್) ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಗುಂಡ್ಲುಪೇಟೆಯ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಲಾಗಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಕೆ.ಆರ್. ರಮೇಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ ರಾಮಚಂದ್ರ ಉಪಸ್ಥಿತರಿರುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಯಣ್ಣ, ಆರ್. ನರೇಂದ್ರ, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು). ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚï.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾದ ಸಿ. ಗಿರೀಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ಎನ್. ನಟೇಶ್, ಉಪಾಧ್ಯಕ್ಷರಾದ ರೂಪ, ಪುರಸಭೆ ಉಪಾಧ್ಯಕ್ಷರಾದ ಜಿ.ಕೆ. ನಾಗೇಂದ್ರ ಹಾಗೂ ಪುರಸಭಾ ಸದಸ್ಯರಾದ ಸುರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದÉ.
No comments:
Post a Comment