ಅರ್ಜಿಗಳ ತ್ವರಿತ ವಿಲೇವಾರಿಗೆ ಕಂದಾಯ ಸಚಿವರ ಕಟ್ಟುನಿಟ್ಟಿನ ಸೂಚನೆ..VSS
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕಂದಾಯ ಕಾನೂನು 94 ಎ.ಬಿ.ಸಿ ಹಾಗೂ 94 ಸಿ.ಸಿ ಅರ್ಜಿಗಳ ವಿಲೇವಾರಿ ಸೇರಿದಂತೆ ಕಂದಾಯ ಇಲಾಖೆಯ ಇತರೆ ವಿಷಯಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈ ಹಿಂದೆ ಹಲವು ಕಡೆ ಭೂಮಿ ಇಲ್ಲದವರಿಗೆ ಭೂಮಿಯನ್ನು ಮಂಜೂರು ಮಾಡಲಾಗಿದೆ. ಫಲಾನುಭವಿಗಳು ಸಾಗುವಳಿ ಚೀಟಿಪಡೆದು ಅನುಭವದಲ್ಲಿದ್ದಾರೆ ಆದರೂ ಭೂಮಿ ಸರ್ವೇ ಮಾಡಿಸಿ ಹದ್ದುಬಸ್ತು ಗುರುತಿಸಿ ನೀಡಲಾಗಿಲ್ಲ ಎಂದು ಶಾಸಕರಾದ ಎಸ್.ಜಯಣ್ಣ, ಆರ್.ನರೇಂದ್ರ ಹಾಗೂ ಸಿ.ಪುಟ್ಟರಂಗಶೆಟ್ಟಿರವರು ಸಚಿವರ ಗಮನ ಸೆಳೆದರು.
ಈ ನಿಟ್ಟಿನಲ್ಲಿ ದರಖಾಸ್ತು ಸೇರಿದಂತೆ ಅರ್ಹ ಜಮೀನುಗಳು ಸಾಗುವಳಿಯಾಗುತ್ತಿದ್ದರೆ ಅವುಗಳನ್ನು ಪಕ್ಕಪೋಡಿ ಮಾಡಿ ಹಕ್ಕುದಾರರಿಗೆ ಹಂಚಿಕೆ ಮಾಡಬೇಕು ಎಂದು ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ ಸೂಚಿಸದರು.
ಅದಿವಾಸಿಗಳು ಹಾಗೂ ಇತರೆ ವರ್ಗದವರಿಗೆ ಮಂಜೂರಾಗಿರುವ ಭೂಮಿಯನ್ನು ಕಂದಾಯ ಇಲಾಖೆ ಜೊತೆ ಗೂಡಿ ಸರ್ವೇ ಮಾಡಿಸಬೇಕು, ಹಕ್ಕುದಾರರಿಗೆ ಅಗತ್ಯ ಅನುಕೂಲಗಳನ್ನು ನಿಯಮಾನುಸಾರ ಕಲ್ಪಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಸರಿಯವಾಗಿ ನಿರ್ವಹಣೆ ಮಾಡಬೇಕು, ದುರಸ್ತು ಇನ್ನಿತರ ಕೆಲಸ ಮಾಡುವುದು ತಹಶೀಲ್ದಾರರ ಮುಖ್ಯ ಕರ್ತವ್ಯವಾಗಿದೆ. ನಿವೇಶನ ರಹಿತರನ್ನು ಪಟ್ಟಿಮಾಡಿ ಅದನ್ನು ಪ್ರಕಟಿಸಿ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಕಳುಹಿಸಬೇಕು ಎಂದರು.
ಪ್ರತಿ ಗ್ರಾಮದಲ್ಲ್ಲೂ ಸ್ಮಶಾನಕ್ಕೆ ಭೂಮಿ ಗುರುತಿಸಿ ನೀಡಬೇಕು. ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದರೆ ಖಾಸಗಿಯಾಗಿಯಾದರೂ ಖರೀದಿಸಿ ಸ್ಮಶಾನಕ್ಕೆ ಅಧ್ಯತೆ ಮೇರೆಗೆ ಭೂಮಿ ನೀಡಬೇಕು. ಈ ಬಗ್ಗೆ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಗಮನನೀಡಬೇಕು ಎಂದು ಕಂದಾಯ ಸಚಿವರು ನಿರ್ದೇಶನ ನೀಡಿದರು.
ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳೀಯ ಶಾಸಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಸೇರಿದಂತೆ ಆಯಾ ಭಾಗದ ಜನಪ್ರತಿನಿಧಿಗಳನ್ನು ಅಹ್ವಾನಿಸಿ ಕಂದಾಯ ಇಲಾಖೆಗೆ ಸಂಬಂಧಿಸಿದ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಲು ಮುಂದಾಗಬೇಕೆಂದು ಕಂದಾಯ ಸಚಿವರು ತಿಳಿಸಿದರು.
ಲೋಕಸಭಾ ಸದಸ್ಯರಾದ ಆರ್.ದ್ರುವನಾರಾಯಣ ಮಾತನಾಡಿ ಕಂದಾಯ ಇಲಾಖೆಯಲ್ಲಿ ಭೂ ಪ್ರಕರಣ ಸೇರಿದಂತೆ ಇನ್ನಿತರ ವಿಷಯಗಳಲ್ಲಿ ಪ್ರಕ್ರಿಯೆ ಚುರುಕಾಗಿ ನಿರ್ವಹಿಸಲು ಅಧಿಕಾರಿಗಳು ಮುಂದಾಗಬೇಕು. ವಿಳಂಬಧೋರಣೆ ಅನುಸರಿಸಬಾರದು ಎಂದರು.
ಸಕ್ಕರೆ, ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ.ಮೋಹನ ಕುಮಾರಿ ಉರುಫ್ ಗೀತ ಮಹದೇವಪ್ರಸಾದ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಉಪಾಧ್ಯಕ್ಷರಾದ ಜೆ.ಯೋಗೇಶ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಎಸ್.ಜಯಣ್ಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಹೆಚ್.ವಿ.ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿ.ಪಂ ಕೈಗಾರಿಕೆ ಹಾಗೂ ಕೃಷಿ ಸ್ಥಾಯಿಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದರ್ ಕುಮಾರ್ ಮೀನ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ, ಉಪವಿಭಾಗಾಧಿಕಾರಿ ಫೌಜಿಯಾ ತರನಂ ಇತರರು ಸಭೆಯಲ್ಲಿ ಹಾಜರಿದ್ದರು.
****************************************************************************
ಆರೋಗ್ಯ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ: ಜಿಲ್ಲಾ ಉಸ್ತುವಾರಿ ಸಚಿವರಾದ ಗೀತ ಮಹದೇವಪ್ರಸಾದ್
ಗುಂಡ್ಲುಪೇಟೆ ಪಟ್ಟಣದಲ್ಲಿಂದು 10.8 ಕೋಟಿ ರೂ ವೆಚ್ಚದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಸಮಗ್ರ ಆರೋಗ್ಯ ರಕ್ಷಣೆಗಾಗಿ ರಾಜ್ಯ ಸರ್ಕಾರ ಸಂಕಲ್ಪ ಮಾಡುವ ಮೂಲಕ ಹತ್ತು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ. ಇದರಿಂದ ಆರೋಗ್ಯ ಕ್ಷೇತ್ರದಲ್ಲಿ ಅಮೂಲ್ಯವಾದ ಬದಲಾವಣೆಯನ್ನು ಕಾಣಲು ಸಾದ್ಯವಾಗಿದೆ. ಪ್ರತಿ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡುತ್ತಿದೆ. ಸಮರೋಪಾದಿಯಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಯಲ್ಲಿ ಜನರಿಕ್ ಔಷಧಿ ಮಳಿಗೆಗಳನ್ನು ತೆರೆಯಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಇನ್ನು ಒಂದು ತಿಂಗಳಲ್ಲಿ ಡಯಾಲಿಸಿಸ್ ಘಟಕಗಳು ಪ್ರಾರಂಭವಾಗಲಿವೆ. ಐ.ಸಿ.ಯು ತುರ್ತು ಚಿಕಿತ್ಸಾ ಘಟಕಗಳು ಸಹ ಕಾರ್ಯಾರಂಭವಾಗಲಿವೆ. ಜಿಲ್ಲಾ ಆಸ್ಪತ್ರೆಯಲ್ಲಿ ಸಿ.ಟಿ ಸ್ಕಾನ್ ಹಾಗೂ ಎಂ.ಆರ್.ಐ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರ್ಯ ಚಾಲನೆಯಲ್ಲಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ ತಾಯಿ ಮಕ್ಕಳ 3 ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರಸ್ತುತ ಉದ್ಘಾಟನೆಯಾಗಿರುವ ಗುಂಡ್ಲುಪೇಟೆಯ ತಾಯಿ ಮಕ್ಕಳ ಆಸ್ಪತ್ರೆಯನ್ನು 10.8 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಸಂತೇಮರಹಳ್ಳಿಯಲ್ಲಿಯೂ 60 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ನಿರ್ಮಿಸಲಾಗಿದೆ. ಕೊಳ್ಳೇಗಾಲದಲ್ಲಿ 30 ಹಾಸಿಗೆ ಸಾಮಥ್ರ್ಯವುಳ್ಳ ಆಸ್ಪತ್ರ್ರೆಯನ್ನು 8 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ ಎಂದರು.
ಬೇಗೂರಿನಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನು ಸ್ಥಾಪಿಸಲಾಗಿದೆ. ಕೊಳ್ಳೇಗಾಲ ತಾಲ್ಲೂಕಿನ ರಾಮಾಪುರದಲ್ಲಿ ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣ ಮಾಡಲು ಅನುದಾನ ನೀಡಲಾಗಿದೆ. ಕಾಡಂಚಿನ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ನೀಡಲು ಹಾಡಿಗಳಿಗೆ ಉಚಿತ ಸಂಚಾರಿ ಘಟಕಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಲೋಕಸಬಾ ಸದಸ್ಯರಾದ ಆರ್. ದ್ರುವನಾರಾಯಣ ಅವರು ತಾಯಿ ಶಿಶು ಮರಣ ಪ್ರಮಾಣವನ್ನು ತಗ್ಗಿಸುವ ಸಲುವಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಕಾರ್ಯಕ್ರಮವು ಆರೋಗ್ಯ ಕ್ಷೇತ್ರದಲ್ಲಿನ ಕ್ರಾಂತಿಕಾರಿಕ ಬದಲಾವಣೆಗೆ ಅನುವು ಮಾಡಿಕೊಟ್ಟು ಅನುಕೂಲ ಕಲ್ಪಿಸಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ|| ಕೆ.ಹೆಚ್.ಪ್ರಸಾದ್ ರವರು ಜಿಲ್ಲೆಯಲ್ಲಿ ಕೈಗೊಂಡಿರುವ ಆರೋಗ್ಯ ಸೇವೆ ಹಾಗೂ ಪ್ರಸ್ತುತ ನಿರ್ಮಾಣ ಮಾಡಲಾಗಿರುವ ಆಸ್ಪತ್ರೆಯಲ್ಲಿ ಲಭಿಸುವ ಅನುಕೂಲಗಳ ಬಗ್ಗೆ ವಿವರ ನೀಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಉಪಾಧ್ಯಕ್ಷರಾದ ಜೆ.ಯೋಗೇಶ್, ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ಪುರಸಭೆ ಅಧ್ಯಕ್ಷರಾದ ಪಿ.ಗಿರೀಶ್, ಉಪಾಧ್ಯಕ್ಷರಾದ ಜಿ.ಕೆ.ನಾಗೇಂದ್ರ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಹೆಚ್.ಎನ್.ನಟೇಶ್, ಉಪಾಧ್ಯಕ್ಷರಾದ ರೂಪ, ಜಿಲ್ಲಾ ಪಂಚಾಯತ್ ಸ್ತಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ.ಬೊಮ್ಮಯ್ಯ, ಕೆರೆಹಳ್ಳಿ ನವೀನ್, ಸದಸ್ಯರಾದ ಚೆನ್ನಪ್ಪ, ಮುಖಂಡರಾದ ಮುನಿರಾಜು, ಕೊಡಸೋಗೆ ಶಿವಬಸಪ್ಪ, ಬಾಗ್ಯಮ್ಮ, ಚಂದ್ರಪ್ಪ, ಎ.ಪಿ.ಎಂ.ಸಿ ಅಧ್ಯಕ್ಷರಾದ ಶಿವಪ್ಪ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
No comments:
Post a Comment