Friday, 15 December 2017

ತಾಲೂಕು, ಗ್ರಾಮ ಪಂಚಾಯಿತಿ ಉಪಚುನಾವಣೆ : ಮದ್ಯ ಮಾರಾಟ ನಿಷೇಧ,ಮಾದಾಪುರ ಜಿ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ (15-12-2017),ಮಾದಾಪುರ ಜಿ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ (15-12-2017)


ಚಾಮರಾಜನಗರ..................vss

ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘದ ಕಾರ್ಯಕಾರಿ ಸಮಿತಿಗೆ ಜಿಲ್ಲೆಯಿಂದ ನೂತನವಾಗಿ ಆಯ್ಕೆಯಾದವರನ್ನ ಕೆಪಿಟಿಸಿಎಲ್ ವೀರಶೈವ  ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು. 

   ನಗರದ ಮಹಾಮನೆಯಲ್ಲಿ ಕೆಪಿಟಿಸಿಎಲ್ ವೀರಶೈವ ನೌಕರರು ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸಂಘದ ಅಧ್ಯಕ್ಷ  ಪರಮೇಶ್ವರಪ್ಪ ಮಾತನಾಡಿ, ರಾಜ್ಯ ಸಮಿತಿಗೆ ಜಿಲ್ಲೆಯಿಂದ  ಆಯ್ಕೆಯಾಗಿರುವುದು ಸ್ವಾಗತಾರ್ಹ.  ಯಾವುದೇ ಕ್ಷೇತ್ರದಲ್ಲಿ ಅಭಿವೃದ್ದಿ ಆಗಬೇಕಾದರೆ ಅಲ್ಲಿನ ಒಗ್ಗಟ್ಟು ಬಹು ಮುಖ್ಯ. ನೌಕರರ ಹಾಗು ಗುತ್ತಿಗೆದಾರರ ನಡುವಿನ ಸಂಭಂದ ಒಂದು ನಾಣ್ಯದ ಎರಡು ಮುಖ ಇದ್ದ ಹಾಗೆ. ಆಗಾಗಿ ಎಲ್ಲರೂ ಒಂದುಗೂಡಿ ಕೆಲಸ ನಿರ್ವಹಿಸಿದರೆ ಅಭಿವೃದ್ದಿ ಹಾಗು ಶೀಘ್ರಗತಿಯಲ್ಲಿ ಕೆಲಸಗಳು ಮುಗಿಯುತ್ತವೆ. ಆದ್ದರಿಂದ ಎಲ್ಲರೂ ಜೊತೆಗೂಡಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸೋಣ ಎಂದರು.
   ಸನ್ಮಾನ ಸ್ವೀಕರಿಸಿದ ನಂತರ ಮಾತನಾಡಿದ ಹೊಸೂರುಜಗದೀಶ್, ಜಿಲ್ಲೆಯಿಂದ ನನ್ನನ್ನು ಆರಿಸಿ ಕಳುಹಿಸಿರುವುದಕ್ಕೆ ಎಲ್ಲರಿಗೂ ಕೃತಜ್ಞನಾಗಿ ಜಿಲ್ಲೆಯ ಅಭಿವೃದ್ದಿಗೆ ಪ್ರಾಮಾಣಿಕವಾಗಿ ನನ್ನ ಅವಧಿಯಲ್ಲಿ ದುಡಿಯುತ್ತೇನೆ. ಆಗೆಯೇ ಎಲ್ಲರ ಸಹಕಾರವು ಕೂಡ ಅಭಿವೃದ್ದಿ ಕೆಲಸಕ್ಕೆ ಮುಖ್ಯವಾಗಿದೆ. ಕೋಟಿಗಟ್ಟಲೇ ಟೆಂಡೆರ್ ಕರೆದು ಸ್ಥಳೀಯ ಗುತ್ತಿಗೆದಾರರಿಗೆ ಕೆಲಸವಿಲ್ಲದಂತಾಗಿದೆ. ಮುಂದಿನ ದಿನಗಳಲ್ಲಿ 5 ಲಕ್ಷದವರೆಗಿನ ಕಾಮಗಾರಿಯನ್ನು ತುಂಡುಗುತ್ತಿಗೆ ಆಧಾರದ ಮೇಲೆ ನೀಡಿದರೆ ಸ್ಥಳೀಯರಿಗೆ ಅನುಕೂಲವಾಗುತ್ತದೆ. ಇದನ್ನು ಜಾರಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸಂಘಕ್ಕೆ ಒತ್ತಡ ತರಲಾಗುವುದು ಎಂದರು.
ಚಾಮರಾಜನಗರ
    ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘದ ಕಾರ್ಯಕಾರಿ ಸಮಿತಿಗೆ ಜಿಲ್ಲೆಯಿಂದ ನೂತನವಾಗಿ ಆಯ್ಕೆಯಾದ ಹೊಸೂರುಜಗದೀಶ್ ಅವರನ್ನು ಕೆಪಿಟಿಸಿಎಲ್ ವೀರಶೈವ  ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
   ನಗರದ ಮಹಾಮನೆಯಲ್ಲಿ ಕೆಪಿಟಿಸಿಎಲ್ ವೀರಶೈವ ನೌಕರರು ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸಂಘದ ಅಧ್ಯಕ್ಷ  ಪರಮೇಶ್ವರಪ್ಪ ಮಾತನಾಡಿ, ರಾಜ್ಯ ಸಮಿತಿಗೆ ಜಿಲ್ಲೆಯಿಂದ  ಆಯ್ಕೆಯಾಗಿರುವುದು ಸ್ವಾಗತಾರ್ಹ.  ಯಾವುದೇ ಕ್ಷೇತ್ರದಲ್ಲಿ ಅಭಿವೃದ್ದಿ ಆಗಬೇಕಾದರೆ ಅಲ್ಲಿನ ಒಗ್ಗಟ್ಟು ಬಹು ಮುಖ್ಯ. ನೌಕರರ ಹಾಗು ಗುತ್ತಿಗೆದಾರರ ನಡುವಿನ ಸಂಭಂದ ಒಂದು ನಾಣ್ಯದ ಎರಡು ಮುಖ ಇದ್ದ ಹಾಗೆ. ಆಗಾಗಿ ಎಲ್ಲರೂ ಒಂದುಗೂಡಿ ಕೆಲಸ ನಿರ್ವಹಿಸಿದರೆ ಅಭಿವೃದ್ದಿ ಹಾಗು ಶೀಘ್ರಗತಿಯಲ್ಲಿ ಕೆಲಸಗಳು ಮುಗಿಯುತ್ತವೆ. ಆದ್ದರಿಂದ ಎಲ್ಲರೂ ಜೊತೆಗೂಡಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸೋಣ ಎಂದರು.
   ಸನ್ಮಾನ ಸ್ವೀಕರಿಸಿದ ನಂತರ ಮಾತನಾಡಿದ ಹೊಸೂರುಜಗದೀಶ್, ಜಿಲ್ಲೆಯಿಂದ ನನ್ನನ್ನು ಆರಿಸಿ ಕಳುಹಿಸಿರುವುದಕ್ಕೆ ಎಲ್ಲರಿಗೂ ಕೃತಜ್ಞನಾಗಿ ಜಿಲ್ಲೆಯ ಅಭಿವೃದ್ದಿಗೆ ಪ್ರಾಮಾಣಿಕವಾಗಿ ನನ್ನ ಅವಧಿಯಲ್ಲಿ ದುಡಿಯುತ್ತೇನೆ. ಆಗೆಯೇ ಎಲ್ಲರ ಸಹಕಾರವು ಕೂಡ ಅಭಿವೃದ್ದಿ ಕೆಲಸಕ್ಕೆ ಮುಖ್ಯವಾಗಿದೆ. ಕೋಟಿಗಟ್ಟಲೇ ಟೆಂಡೆರ್ ಕರೆದು ಸ್ಥಳೀಯ ಗುತ್ತಿಗೆದಾರರಿಗೆ ಕೆಲಸವಿಲ್ಲದಂತಾಗಿದೆ. ಮುಂದಿನ ದಿನಗಳಲ್ಲಿ 5 ಲಕ್ಷದವರೆಗಿನ ಕಾಮಗಾರಿಯನ್ನು ತುಂಡುಗುತ್ತಿಗೆ ಆಧಾರದ ಮೇಲೆ ನೀಡಿದರೆ ಸ್ಥಳೀಯರಿಗೆ ಅನುಕೂಲವಾಗುತ್ತದೆ. ಇದನ್ನು ಜಾರಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸಂಘಕ್ಕೆ ಒತ್ತಡ ತರಲಾಗುವುದು ಎಂದರು. 

ತಾಲೂಕು, ಗ್ರಾಮ ಪಂಚಾಯಿತಿ ಉಪಚುನಾವಣೆ : ಮದ್ಯ ಮಾರಾಟ ನಿಷೇಧ

ಚಾಮರಾಜನಗರ, ಡಿ. 15 :- ಚಾಮರಾಜನಗರ ತಾಲೂಕು ಹಾಗೂ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಡಿಸೆಂಬರ್ 17ರಂದು ಮತದಾನ ಹಾಗೂ ಡಿಸೆಂಬರ್ 20ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಬಿ. ರಾಮು ಅವರು ಸದರಿ ಸಂದರ್ಭಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ ತಾಲೂಕು ಹರದನಹಳ್ಳಿ ತಾಲೂಕು ಪಂಚಾಯಿತಿ ಕ್ಷೇತ್ರಕ್ಕೆ ಹಾಗೂ ತಾಲೂಕಿನ ಬದನಗುಪ್ಪೆ, ಸಂತೆಮರಹಳ್ಳಿ, ಅಮಚವಾಡಿ, ಹೊನ್ನಹಳ್ಳಿ ಕ್ಷೇತ್ರ ವ್ಯಾಪ್ತಿ, ಕೊಳ್ಳೇಗಾಲ ತಾಲೂಕಿನ ಗೋಪಿನಾಥಂ ಹಾಗೂ ಗುಂಡ್ಲುಪೇಟೆ ತಾಲೂಕಿನ ಬಲಚವಾಡಿ, ತೆರಕಣಾಂಬಿ ಮತ್ತು ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಡಿಸೆಂಬರ್ 15ರ ಮಧ್ಯರಾತ್ರಿಯಿಂದ ಡಿಸೆಂಬರ್ 17ರ ಮಧ್ಯರಾತ್ರಿವರೆಗೆ ಮತದಾನದ ನಿಮಿತ್ತ ಎಲ್ಲಾ ರೀತಿಯ ಮದ್ಯ ಮಾರಾಟ, ಶೇಖರಣೆ ಹಾಗೂ ಹಂಚಿಕೆಯನ್ನು ನಿಷೇಧಿಸಲಾಗಿದೆ.
ಮತ ಎಣಿಕೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 19ರ ಮಧ್ಯರಾತ್ರಿಯಿಂದ ಡಿಸೆಂಬರ್ 20ರ ಸಂಜೆ 5 ಗಂಟೆಯವರೆಗೆ ಎಲ್ಲ ರೀತಿಯ ಮಧ್ಯ ಮಾರಾಟ, ಶೇಖರಣೆ ಮತ್ತು ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.


ಡಿ. 16ರಂದು ನಗರದಲ್ಲಿ ವಿಶ್ವ ವಿಕಲಚೇತರ ದಿನಾಚರಣೆ

ಚಾಮರಾಜನಗರ, ಡಿ. 15 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ಎಲ್ಲರಿಗೂ ಸುಸ್ಥಿರ ಮತ್ತು ಚೇತೋಹಾರಿಯಾದ ಪರಿವರ್ತನಾ ಸಮಾಜ ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಡಿಸೆಂಬರ್ 16ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿನ ಜೆ.ಎಚ್. ಪಟೇೀಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಕ್ಕರೆ, ಸಣ್ಣ ಕೈಗಾರಿಕಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆಯ ಅಧ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು,  ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಸನ್ಮಾನ ಹಾಗೂ ಬಹುಮಾನ ವಿತರಣೆ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ರೈತರಿಗೆ ವಾಹನ ಚಾಲನಾ ತರಬೇತಿ

ಚಾಮರಾಜನಗರ, ಡಿ. 15:- ನಗರದ ಪ್ರಾದೇಶಿಕ ಸಾರಿಗೆ ಇಲಾಖೆಯು ರೈತ ಸಾರಥಿ ಯೋಜನೆಯಡಿ ಕೃಷಿ ಟ್ರಾಕ್ಟರ್ ಮತ್ತು ಟ್ರೈಲರ್ ಹೊಂದಿರುವ ರೈತರಿಗೆ ಮತ್ತು ಅವರು ಹೊಂದಿರುವ ಮೋಟಾರು ಸೈಕಲ್‍ಗೆ ಕಲಿಕಾ ಲೈಸೆನ್ಸ್ ಮತ್ತು ಚಾಲನಾ ತರಬೇತಿ ನೀಡಿ ಅನುಜ್ಞಾ ಪತ್ರ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ರೈತ ಬಾಂಧವರು ಸಾರಿಗೆ ಕಚೇರಿಯನ್ನು ಸಂಪರ್ಕಿಸಿ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ

ಚಾಮರಾಜನಗರ, ಡಿ. 15:- ಜಿಲ್ಲೆಯ ನಾಲ್ಕೂ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಡಿಸೆಂಬರ್ 18 ರಿಂದ 28ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸಲಿದ್ದಾರೆ.
ಡಿಸೆಂಬರ್ 18ರಂದು ಕೊಳ್ಳೇಗಾಲ, 19ರಂದು ಯಳಂದೂರು, 27ರಂದು ಚಾಮರಾಜನಗರ ಹಾಗೂ 28ರಂದು ಗುಂಡ್ಲುಪೇಟೆ ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ತಾಲೂಕು ಮಟ್ಟದ ಯುವಜನ ಮೇಳ 

ಚಾಮರಾಜನಗರ, ಡಿ. 15 - ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ತಾಲೂಕು ಮಟ್ಟದ ಯುವಜನ ಮೇಳವನ್ನು ಕೋಳ್ಳೆಗಾಲ ಹಾಗೂ ಯಳಂದೂರು ತಾಲೂಕುಗಳಲ್ಲಿ ಏರ್ಪಡಿಸಲಾಗಿದೆ.
ಕೊಳ್ಳೇಗಾಲದ ಎಸ್‍ವಿಕೆ ಕಾಲೇಜಿನಲ್ಲಿ ಡಿಸೆಂಬರ್ 19ರಂದು ಹಾಗೂ ಯಳಂದೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಡಿಸೆಂಬರ್ 22ರಂದು ನಡೆಸಲಾಗುವುದು. ಸ್ಪರ್ಧಾ ದಿನದಂದು ಬೆಳಿಗ್ಗೆ 9 ಗಂಟೆಗೆ ಆಯಾ ತಾಲೂಕಿನ ವ್ಯವಸ್ಥಾಪಕರಲ್ಲಿ ವರದಿ ಮಾಡಿಕೊಳ್ಳುವಂತೆ ತಿಳಿಸಿದೆ.
ವೈಯಕ್ತಿಕವಾಗಿ ಭಾವಗೀತೆ, ಲಾವಣಿ, ರಂಗಗೀತೆ ಹಾಗೂ ಏಕಪಾತ್ರಾಭಿನಯ ಸ್ಪರ್ಧೆಗಳಿವೆ.
ಗುಂಪು ಸ್ಪರ್ಧೆಗಳಾಗಿ ಗೀಗೀ ಪದ (5 ಮಂದಿ), ಕೋಲಾಟ ಹಾಗೂ ಜಾನಪದ ನೃತ್ಯ (12 ಮಂದಿ), ಸೋಬಾನೆ ಪದ (4 ಮಂದಿ), ಭಜನೆ (8 ಮಂದಿ), ಜಾನಪದ ಗೀತೆ ಹಾಗೂ ಚರ್ಮವಾದ್ಯ ಮೇಳ (6 ಮಂದಿ) ಸ್ಪರ್ಧೆಗಳು ನಡೆಯಲಿವೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿ (ದೂರವಾಣಿ ಸಂಖ್ಯೆ 08226-224932) ಅಥವಾ ಮೊಬೈಲ್ ಸಂಖ್ಯೆ 9482718278, 9880211027ನ್ನು ಸಂಪರ್ಕಿಸುವಂತೆ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ. 19ರಂದು ನಗರದಲ್ಲಿ ಪ.ಜಾ., ಪ.ಪಂ. ರೈತರಿಗೆ ಅರಿವು ಕಾರ್ಯಕ್ರಮ 

ಚಾಮರಾಜನಗರ, ಡಿ. 15:- ತೋಟಗಾರಿಕೆ ಇಲಾಖೆ ವತಿಯಿಂದ ಸೂಕ್ಷ್ಮ ಹನಿ ನೀರಾವರಿ ಯೋಜನೆ (ಡ್ರಿಪ್) ಹಾಗೂ ವಿವಿಧ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗದ ರೈತಬಾಂಧವರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಡಿಸೆಂಬರ್ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಮೀನು ಹೊಂದಿದ್ದು ನೀರಾವರಿ ಸೌಲಭ್ಯವಿರುವವರಿಗೆ ಇಲಾಖಾ ವತಿಯಿಂದ ದೊರೆಯುವ ಸವಲತ್ತುಗಳ ಕುರಿತು ತಿಳಿಸಲಾಗುವುದು.
ರೈತಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ. 27ರಂದು ವಾಹನಗಳ ಬಹಿರಂಗ ಹರಾಜು

ಚಾಮರಾಜನಗರ, ಡಿ. 15:- ನಗರದ ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ಮುಟ್ಟುಗೋಲು ಹಾಕಿಕೊಂಡು ತಾಲೂಕಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಅಭಿರಕ್ಷೆಗೆ ಇಡಲಾಗಿರುವ ಮ್ಯಾಕ್ಸಿಕ್ಯಬ್ ವಾಹನಗಳನ್ನು ಹಾಗೂ ಜೆಸಿಬಿಯನ್ನು ಯಥಾ ಸ್ಥಿತಿಯಲ್ಲಿ ಚಾಮರಾಜನಗರ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಡಿಸೆಂಬರ್ 27ರಂದು ಬೆಳಿಗ್ಗೆ 11.30 ಗಂಟೆಗೆ ಬಹಿರಂಗ ಹರಾಜು ಮಾಡಲಾಗುವುದು.
ನಗರದ ಪಟ್ಟಣ ಪೊಲೀಸ್ ಠಾಣೆ, ಕೊಳ್ಳೇಗಾಲದ ಗ್ರಾಮಾಂತರ ಹಾಗೂ ಪಟ್ಟಣ ಪೊಲೀಸ್ ಠಾಣೆ ಮತ್ತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ವಾಹನವನ್ನು ಅಭಿರಕ್ಷೆಗೆ ಇಡಲಾಗಿದೆ.
ಹರಾಜಿನಲ್ಲಿ ಭಾಗವಹಿಸಲು ಇಚ್ಚಿಸುವವರು ವಾಹನಗಳನ್ನು ಆಯಾ ಪೊಲೀಸ್ ಠಾಣೆಯಲ್ಲಿ ಪರಿಶೀಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹನಿ ನೀರಾವರಿಗೆ ಸಹಾಯಧನ : ಹೆಸರು ನೊಂದಾಯಿಸಲು ಮನವಿ

ಚಾಮರಾಜನಗರ, ಡಿ. 15:- ತೋಟಗಾರಿಕೆ ಇಲಾಖೆಯು ಸೂಕ್ಷ್ಮ ಹನಿ ನೀರಾವರಿ ಯೋಜನೆಯನ್ನು ಜಿಲ್ಲೆಯಾದ್ಯಂತ ಅನುಷ್ಠಾನಗೊಳಿಸುತ್ತಿದ್ದು ಸಹಾಯಧನ ನೀಡಲಿದೆ.
ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಟ ಪಂಗಡದ ರೈತರು ತರಕಾರಿ, ಹೂವು, ಹಣ್ಣು, ತೋಟದ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಶೇ. 90ರ ಸಹಾಯಧನ ಲಭಿಸಲಿದೆ.
ತರಕಾರಿ, ಹೂವು. ಅರಿಶಿನ ಇತ್ಯಾದಿ ಕಡಿಮೆ ಅಂತರದ (1.2*0.6 ಮೀ) ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಂಡಲ್ಲಿ ಗರಿಷ್ಟ ಪ್ರತಿ ಹೆಕ್ಟೇರ್‍ಗೆ ಶೇ.90ರಂತೆ ರೂ. 109160 (ರೂ.101013+8147), ಬಾಳೆ ಪಪ್ಪಾಯಿ ಬೆಳೆಗೆ (2*2 ಮೀ. ಅಂತರದ) ರೂ. 83802 (ರೂ. 65824+17978) ರಷ್ಟು ಸಹಾಯಧನವನ್ನು ಎರಡು ಕಂತiಗಳಲ್ಲಿ ಪಡೆಯಲು ಅವಕಾಶವಿದೆ.
ಆಸಕ್ತ ರೈತರು ಪ್ರಸಕ್ತ ಸಾಲಿನ ಪಹಣಿ, ಚೆಕ್ ಬಂದಿ, ಕಂದಾಯ ಇಲಾಖೆಯಿಂದ ಮುಟೇಶನ್, ಗ್ರಾಮ ಲೆಕ್ಕಾಧಿಕಾರಿಗಳಿಂದ ನೀರಿನ ಮೂಲಕ ವಿವರ (ಕಡ್ಡಾಯ), ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಜೆರಾಕ್ಸ್, ದರಪಟ್ಟಿ ಹಾಗೂ ಹನಿ ನೀರಾವರಿ ತಾಕಿಗೆ ರೂಟ್ ಮ್ಯಾಪ್ (ಕಂಪನಿ, ಡೀಲರ್‍ಗಳಿಂದ), ಜಾತಿ ಪ್ರಮÁಣ ಪತ್ರ, ಬ್ಯಾಂಕ್ ಖಾತೆ ವಿವರ (ಐಎಫ್‍ಸಿ ಕೋಡ್‍ನೊಂದಿಗೆ), ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ(ರಾಷ್ಟ್ರೀಕೃತ ಬ್ಯಾಂಕ್ ಖಾತೆ ಮಾತ್ರ), ಬೇಬಾಕಿ – ರೇಷ್ಮೆ ಮತ್ತು ಕೃಷಿ ಇಲಾಖೆಯಿಂದ, ಮಣ್ಣು ಮತ್ತು ನೀರು ಪರೀಕ್ಷೆ ವರದಿ, ಭಾವಚಿತ್ರ ಇತ್ಯಾದಿ ವಿವರಗಳೊಂದಿಗೆ ಆಯಾ ತಾಲೂಕಿನ ತೋಟಗಾರಿಕೆ ಕಚೇರಿಯಲ್ಲಿ ಹೆಸರನ್ನು ನೊಂದಾಯಿಸಿಕೊಂಡು ಯೋಜನೆಯ ಸದುಪಯೋಗ ಪಡೆಯುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮಾದಾಪುರ ಜಿ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ


ಚಾಮರಾಜನಗರ, ಡಿ. 15:- ಮಾದಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು ಅವರು ಇಂದು ಚಾಲನೆ ನೀಡಿದರು.
ಮಾದಾಪುರ ಕ್ಷೇತ್ರಕ್ಕೆ ಒಳಪಡುವ ಮಂಗಲದ ಹೊಸೂರು, ಮಸಗಾಪುರ, ಜಾಲಹಳ್ಳಿಹುಂಡಿ ಹೊಸಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕೊಟ್ಟರು. ಹಂಡರಕಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ ಚರಂಡಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದರು.
ಬಳಿಕ ಮಂಗಲ ಗ್ರಾಮದಲ್ಲಿ ಉಪ ಆರೋಗ್ಯ ಕೇಂದ್ರ ಹಾಗೂ ಪಶುವೈದ್ಯ ಆಸ್ಪತ್ರೆ ಕಟ್ಟಡ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಇದೇವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು ಅವರು ಮಂಗಲ ಗ್ರಾಮವು ಹೆದ್ದಾರಿ ವ್ಯಾಪ್ತಿಗೆ ಬರುವುದರಿಂದ ವಾಹನ ಸಂಚಾರವು ಹೆಚ್ಚಿದೆ. ಜನಸಂಖ್ಯೆಯೂ ಹೆಚ್ಚು ಇರುವ ಹಿನ್ನೆಲೆಯಲ್ಲಿ ಇಲ್ಲಿನ ಉಪಕೇಂದ್ರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.
ಪಶುವೈದ್ಯ ಆಸ್ಪತ್ರೆ ಸೇವೆಯೂ ಸಹ ಈ ಭಾಗಕ್ಕೆ ಹೆಚ್ಚು ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಅಭಿವೃದ್ಧಿಪಡಿಸುವ ಕೆಲಸಗಳಿಗೆ ಆದ್ಯತೆ ನೀಡಲಾಗಿದೆ ಎಂದು ಬಾಲರಾಜು ತಿಳಿಸಿದರು.
ಗ್ರಾಮೀಣ ಭಾಗದ ಜನರು ಆರೋಗ್ಯದತ್ತ ಹೆಚ್ಚು ಕಾಳಜಿ ವಹಿಸಬೇಕು. ನೈರ್ಮಲ್ಯ ಕಾಪಾಡಿಕೊಳ್ಳಬೇಕು. ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿಟ್ಟುಕೊಂಡು ಆರೋಗ್ಯದತ್ತ ಗಮನ ನೀಡಬೇಕು ಎಂದು ಬಾಲರಾಜು ಅವರು ಸಲಹೆ ಮಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಾಕಮ್ಮ, ಉಪಾಧ್ಯಕ್ಷರಾದ ಪುಷ್ಪ ಕುಮಾರ್, ಸದಸ್ಯರಾದ ಶಿವಣ್ಣ, ಇನ್ನಿತರ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪಲ್ಸ್ ಪೋಲಿಯೋ ಕುರಿತು ಕಾರ್ಯಗಾರ 

ಚಾಮರಾಜನಗರ ಡಿ-15-ಪಲ್ಸ್ ಪೋಲಿಯೋ ಒಂದು ರಾಷ್ಟ್ರೀಯ ಅಭಿಯಾನ ಆರೋಗ್ಯ ಕ್ಷೇತ್ರದಲ್ಲಿ ಆದಂತ ಕ್ರಾಂತಿಕಾರಿಕ ಬದಲಾವಣೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವು ಒಂದು ದೇಶದ ಮೂಲೆ ಮೂಲೆಯಲ್ಲಿ ಎಲ್ಲ ಮಕ್ಕಳಿಗೂ  ಎಕ ಕಾಲದಲ್ಲಿ ಪಲ್ಸ್ ಪೋಲಿಯೋ ಹಾಕುವುದ ಮೂಲಕ ಈ ಕಾರ್ಯಕ್ರಮ ಯಾಶಸ್ವಿಯಾಗಿದೆ ಎಂದು ಜಿಲ್ಲಾ ಪಂಚಾಯಿತ್ ಕಾರ್ಯನಿರ್ವಣಾಧಿಕಾರಿ ಡಾ, ಹರೀಶ್‍ಕುಮಾರ್ ತಿಳಿಸಿದರು.
 ನಗರದ ಜಿಲ್ಲಾಡಳಿತ ಭವನದ ನೂತನ ಕೆ.ಡಿ.ಪಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಚಾಮರಾಜನಗರ ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಗಳು ಉತ್ತಮ ಮಟ್ಟದಲ್ಲಿ ನಡೆದಿದೆ. ಮುಖ್ಯವಾಗಿ ಅಭಿವೃದ್ದಿಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಮಹಿಳೆಯಾರು ಮತ್ತು ಮಕ್ಕಳು ಈ ವಿಚಾರದ ಬಗ್ಗೆ ವಿಶೇಷ ಗಮನ ಕೊಡಬೇಕು ಮೊದಲು ಎಲ್ಲಾರೂ ಆರೋಗ್ಯವಾಂತರಾದರೆ ನಂತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಸರ್ಕಾರದಿಂದ ಹಮ್ಮಿಕೊಳ್ಳುವ ವಿವಿಧ ಕಾರ್ಯಕ್ರಮಗಳ ಮೂಲಕ ಎಲ್ಲರಿಗೂ ತಲುಪಲು ಸಾಧ್ಯ ಎಂದು ತಿಳಿಸಿದರು.
ಆರೋಗ್ಯ ಮತ್ತು ಶಿಕ್ಷಣ ನಿಡುವುದು ಎಲ್ಲವೂ ಸರ್ಕಾರದ ಕೆಲಸ ಮಾತ್ರವಲ್ಲ ಸಮುದಾಯದ ಪಾತ್ರವು ಬಹಳ ಮುಖ್ಯವಾಗಿದೆ  ಈ ಇಲಾಖೆಯ ಜೊತೆಗೂಡಿ ಶಿಕ್ಷಣಇಲಾಖೆ ಆರೋಗ್ಯ ಇಲಾಖೆಯ ಕ್ರಾರ್ಯಕ್ರಮಗಳಿಗೆ ವಿಶೇಷ ಗಮನ ನೀಡಲಾಗುತ್ತಿದೆ. ಜಿಲ್ಲೆಯು ಶೈಕ್ಷಣಿಕವಾಗಿ ಹಿಂದೆ ಇದ್ದೆವೆ ಶೇ% 60 ರಷ್ಟು ಸಾಕ್ಷರಿಲ್ಲ ಇಲ್ಲಿ ಬಂದಿರುವ ವಲಯ ಮಟ್ಟದ ಅಧಿಕಾರಿಗಳು 100 ರಷ್ಟು ಸಾಧನೆ ಮಾಡಿ ಜಿಲ್ಲೆಗೆ ಬಂದಿದ್ದಾರೆ ಅಭಿಯಾನಗಳು ಯಾಶಸ್ವಿಯಾಗಬೇಕಾದರೆ ಸಮುದಾಯದಿಂದ ಹೆಚ್ಚಿನ ಜನರು ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು  ನಮ್ಮ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು  ನಿಷ್ಠೆ ಮತ್ತು ಪ್ರಮಾಣಿಕತೆಯಿಂದ ಕೆಲಸಗಳನ್ನು ನಿರ್ವಸಿದರೆ ಇಂತಹ ಕಾರ್ಯಕ್ರಗಳು ಉತ್ತಮ ಮಟ್ಟದಲ್ಲಿ ಮಾಡಬಹುದು ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಆರೋಗ್ಯ ಅಧಿಕಾರಿ ಕೆ.ಹೆಚ್.ಪ್ರಸಾದ್ ಜಿಲ್ಲೆಯಲ್ಲಿ 75000 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಬೇಕಿದೆ. ಕಳೆದ 3 ವರ್ಷದ ಅಂದಾಜ್ ಮೊತ್ತ 74 ಸಾವಿದ 75ಸಾವಿರ ಮಕ್ಕಳಿಗೆ ನಮ್ಮ ಅಂದಾಜು 80000 ಸಾವಿರ ಬೆರೆ ಕಡೆಯಿಂದ ಬಂದ ಮಕ್ಕಳು ಬಸ್ಸ್ ನಿಲ್ಧಾಣ ಇನ್ನು ಮುಂತಾದ ಕಡೆ 5000 ಮಕ್ಕಳನ್ನು ಅಂದಾಜು ಮಾಡಲಾಗಿದೆ. ಪ್ರತಿ ಸಾಲ 99% ನಿಂದ 100% ಯಾಶಸ್ವಿಯಾಗಿದ್ದೇವೆ. ಆಶಾ ಕಾರ್ಯಕರ್ತೆಯನ್ನು ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಭಾಗಿಯಾಗಿದ್ದಾರೆ ಎಲ್ಲಾ ಕಾರ್ಯಕರ್ತೆಯಾರಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಯಾವರೀತಿ ಮಾಡಬೇಕು ಎಂದು ತಿಳಿಸುವ ಕಾರ್ಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ  ಪೋಲಿಯೋ ನಿರ್ಮೂಲನೆ ಮಾಡಲು ನಮ್ಮ ಸರ್ಕಾರಗಳು ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು.
ಆರ್.ಸಿ.ಹೆಚ್ ಅಧಿಕಾರಿ ಕೆ.ಎಂ. ವಿಶ್ವೇಶ್ವರಯ್ಯ ಮಾತನಾಡಿ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಎಲ್ಲಾರನ್ನು ಜೊತೆಗೂಡಿಸಿ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಈ ಕಾರ್ಯಕ್ರಮಕ್ಕೆ ಮುಖ್ಯವಾಗಿ ವಾಹನದ ವ್ಯಾವಸ್ಥೆ ಮುಖ್ಯ  ಮೊದಲನೆ ಹಂತದ ಕಾರ್ಯಕ್ರಮಕ್ಕೆ ವಾಹನಗಳು ದೊರೆಯುತ್ತದೆ  ಅದರೆ 2ನೇ ಹಂತದ ಕರ್ಯಕ್ರಮಕ್ಕೆ ವಾಹನದ ಕೊರತೆ ಇರುತ್ತದೆ. ಸರ್ಕಾರಿ ವಾಹನದ ಜೊತೆಗೆ ಖಾಸಗಿ ವಾಹನಗಳನ್ನು ಪಡೆದು ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಯಾಶಸ್ವಿ ಗೊಳಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅರೋಗ್ಯ ಇಲಾಖೆಯ ಎಸ್.ಎಂ.ಒ. ಸತೀಶ್‍ಚಂದ್ರ, ಅವರು ಕಾರ್ಯಗಾರದಲ್ಲಿ ಮಾಹಿತಿ ನೀಡಿದರು. ಡಾ. ಅನಿಲ್‍ಕುಮಾರ್, ರಾಜು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.




No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು