Monday, 18 December 2017

ಡಿ. 19ರಂದು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ (18-12-2017)

   

ಡಿ. 19ರಂದು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟ£

ಚಾಮರಾಜನಗರ, ಡಿ. 18 :- ಚಾಮರಾಜನಗರ ಜಿಲ್ಲಾ ಪೊಲೀಸ್ ಇಲಾಖೆಯು ವಾರ್ಷಿಕ ಕ್ರೀಡಾಕೂಟವನ್ನು ಡಿಸೆಂಬರ್ 19 ರಿಂದ 21ರವರೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಿದೆ.
ಡಿಸೆಂಬರ್ 19ರಂದು ಬೆಳಿಗ್ಗೆ 8 ಗಂಟೆಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪ್ರಾದೇಶಿಕ) ವಿಜಯ್ ಲಾಲ್ ಮೀನಾ ಕ್ರೀಡಾಕೂಟ ಉದ್ಘಾಟಿಸುವರು. ಜಿಲ್ಲಾಧಿಕಾರಿಗಳಾದ ಬಿ. ರಾಮು ಅಧ್ಯಕ್ಷತೆ ವಹಿಸುವರು.
ಡಿಸೆಂಬರ್ 21ರಂದು ಸಂಜೆ 4 ಗಂಟೆಗೆ ಕ್ರೀಡಾಕೂಟದ  ಸಮಾರೋಪ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕರಾದ ವಿಫುಲ್ ಕುಮಾರ್ ಆಗಮಿಸುವರು. ಪ್ರಿಯಾಂಕ ಸಿನ್ಹಾ ಬಹುಮಾನ ವಿತರಿಸುವರು ಎಂದು ಪ್ರಕಟಣೆ ತಿಳಿಸಿದೆ.


ಡಿ. 21ರಂದು ಆಕಾಶವಾಣಿಯಲ್ಲಿ ಚಾ.ನಗರ ಎ.ಪಿ.ಎಂ.ಸಿ ಅಧ್ಯಕ್ಷರ ಸಂದರ್ಶನ ಪ್ರಸಾರ

ಚಾಮರಾಜನಗರ, ಡಿ. 18 - ಮೈಸೂರು ಆಕಾಶವಾಣಿ ವತಿಯಿಂದ ಚಾಮರಾಜನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರು ಹಾಗೂ ರಾಜ್ಯ ಕೃಷಿ ಮಾರಾಟ ಮಂಡಳಿ ಸದಸ್ಯರೂ ಆದ ಬಿ.ಕೆ. ರವಿಕುಮಾರ್ ಅವರೊಂದಿಗೆ ನಡೆಸಿರುವ ಸಂದರ್ಶನವು ಆಕಾಶವಾಣಿಯ ಕೃಷಿರಂಗ ಕಾರ್ಯಕ್ರಮದಲ್ಲಿ ಡಿಸೆಂಬರ್ 21ರಂದು ಸಂಜೆ 6.40ಕ್ಕೆ ಪ್ರಸಾರವಾಗಲಿದೆ.
ಆಸಕ್ತ ರೈತಬಾಂಧವರು ಕಾರ್ಯಕ್ರಮದ ಸದುಪಯೋಗ ಮಾಡಿಕೊಳ್ಳುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 18ರಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿ ಸಮ್ಮೇಳನ 

ಚಾಮರಾಜನಗರ, ಡಿ. 18 :- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರೇವಾ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾನವಕುಲದ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ವಿಷಯದಡಿ 2018ರ ಜನವರಿ 18 ಹಾಗೂ 19ರಂದು ಸಮ್ಮೇಳನವನ್ನು ರೇವಾ ವಿಶ್ವವಿದ್ಯಾನಿಲಯದ ಕುವೆಂಪು ಸಭಾಂಗಣದಲ್ಲಿ ಏರ್ಪಡಿಸಿದೆ.
ತಾಂತ್ರಿಕ ಅಧಿವೇಶನದಲ್ಲಿ ಖ್ಯಾತ ವಿಜ್ಞಾನಿಗಳಿಂದ ಮತ್ತು ಸಂಶೋಧಕರಿಂದ ಉಪನ್ಯಾಸ ಏರ್ಪಡಿಸಲಾಗಿದೆ. ಸಮ್ಮೇಳನದಲ್ಲಿ ವಿವಿಧ ವಿಶ್ವ ವಿದ್ಯಾನಿಲಯಗಳ ಸ್ನಾತಕೋತ್ತರ, ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರಾಧ್ಯಾಪಕರು. ವಿಜ್ಞಾನಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿಜ್ಞಾನ ಆಸಕ್ತರು ಭಾಗವಹಿಸುವರು. ಭೌತ, ಗಣಿತ ವಿಜ್ಞಾನ, ರಸಾಯನ, ಜೀವ ವಿಜ್ಞಾನ, ಎಂಜಿನಿಯರಿಂಗ್ ಹಾಗೂ ಅಂತರ ಶಾಸ್ತ್ರೀಯ ವಿಜ್ಞಾನಗಳಿಗೆ ಸಂಬಂಧಿಸಿದ ವೈಜ್ಞಾನಿಕ ಪ್ರಾತ್ಯಕ್ಷಿಕೆಗಳನ್ನು ಪ್ರಸ್ತುತಪಡಿಸಲು ಅವಕಾಶವಿದೆ. ತಜ್ಞರ ಸಮಿತಿಯಿಂದ ಆಯ್ಕೆಯಾದ ಪ್ರತಿ ವಿಷಯದ 4 ಅತ್ಯುತ್ತಮ ಪ್ರಾತ್ಯಕ್ಷಿಕೆಗಳಿಗೆ ಬಹುಮಾನ ನೀಡಲಾಗುವುದು.
ಸಮ್ಮೇಳನಕ್ಕೆ ಪ್ರತಿನಿಧಿಗಳಾಗಿ ನೊಂದಾಯಿಸಲು ಹಾಗೂ ಸಂಶೋಧನಾ ಪ್ರಸ್ತುತಿಯ ಸಾರಾಂಶ ಕಳುಹಿಸಲು ಜನವರಿ 5 ಕಡೆಯ ದಿನ.
ಹೆಚ್ಚಿನ ವಿವರಗಳನ್ನು ಅಕಾಡೆಮಿ ಸಮ್ಮೇಳನದ ವೆಬ್ ತಾಣ ತಿತಿತಿ.ಞsಣಚಿಛಿoಟಿಜಿeಡಿeಟಿಛಿe.ಛಿom ದಲ್ಲಿ ಹಾಗೂ ಹಿರಿಯ ವೈಜ್ಞಾನಿಕಾಧಿಕಾರಿ ಡಾ. ಎ.ಎಂ. ರಮೇಶ್ (ಮೊಬೈಲ್ 9845258894) ಇವರಿಂದ ಪಡೆಯಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪÀ್ರಕಟಣೆ ತಿಳಿಸಿದÉ.

ಡಿ. 29ರಂದು ಚಾ.ನಗರ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ

ಚಾಮರಾಜನಗರ, ಡಿ. 18 ಚಾಮರಾಜನಗರ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯು ಡಿಸೆಂಬರ್ 29ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಅಧ್ಯಕ್ಷರ ಕೊಠಡಿಯಲ್ಲಿ (ಕೊಠಡಿ ಸಂಖ್ಯೆ 301) ಅಧ್ಯಕ್ಷರಾದ ಸುಹೇಲ್ ಅಲಿಖಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ. 19ರಂದು ನಗರದಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚಾಮರಾಜನಗರ, ಡಿ. 18 - ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜೆಎಸ್‍ಎಸ್ ಮಹಿಳಾ ಕಾಲೇಜು ಹಾಗೂ ಸಾಧನಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 19ರಂದು ಮಧ್ಯಾಹ್ನ 12 ಗಂಟೆಗೆ ನಗರದ ಜೆಎಸ್‍ಎಸ್ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೆಚ್.ಜಿ. ನಾಗರತ್ನ ಉದ್ಘಾಟಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಪಿ. ನಂದೀಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಜೆ.ಎಸ್.ಎಸ್. ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಎ.ಜಿ. ಶಿವಕುಮಾರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಭಾಷಣಕಾರರಾಗಿ ಜಿಲ್ಲಾ ಆಸ್ಪತ್ರೆ ಮನೋರೋಗ ತಜ್ಞರಾದ ವತ್ಸಲ ಆಗಮಿಸುವರು.
ಮುಖ್ಯ ಅತಿಥಿಗಳಾಗಿ ಎವೈಎಸ್‍ಪಿ ಎಸ್.ಇ. ಗಂಗಾಧರಸ್ವಾಮಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಅರುಣ್‍ಕುಮಾರ್ ಹಾಗೂ ಜೆಎಸ್‍ಎಸ್ ಪದವಿಪೂರ್ವ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಬಿ. ಮಹಾಲಿಂಗಪ್ಪ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಡಿ. 22ರಂದು ಕೊಳ್ಳೇಗಾದಲ್ಲಿ ಉದ್ಯೋಗ ಮೇಳ 

ಚಾಮರಾಜನಗರ, ಡಿ. 18 - ಉದ್ಯೋಗ ಮತ್ತು ತರಬೇತಿ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಎಸ್. ಜಯಣ್ಣ ಮತ್ತು ಆರ್. ಧ್ರುವನಾರಾಯಣ ಅಭಿಮಾನಿ ಬಳಗ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 22ರಂದು ಬೆಳಿಗ್ಗೆ 10 ಗಂಟೆಗೆ ಕೊಳ್ಳೇಗಾಲದ ಎಂ.ಜಿ.ಎಸ್.ವಿ ಕಾಲೇಜು ಅವರಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಮೈಸೂರಿನ ಖಾಸಗಿ ಕಂಪನಿಗಳಾದ ಜುಬಿಲಿಯಂಟ್, ಗ್ರಾಸ್ ರೂಟ್, ಒರಿಯಂಟ್ ಬೆಲ್, ವೇದ ಸಾಫ್‍ಟೆಕ್, ರಾಕ್ ಮೈಂಡ್ ಪೀ.ಲಿ. ಈಗಲ್ ಟೆಕ್ನಾಲಜಿ, ನಾರಾಯಣ ಸೂಪರ್ ಸ್ವೆಷಾಲಿಟಿ ಆಸ್ಪತ್ರೆ, ಅಪೋಲೋ ಆಸ್ಪತ್ರೆ, ಪ್ರೋಟಿಸ್ ಆಸ್ಪತ್ರೆ, ಭರತ್ ಆಸ್ಪತ್ರೆ, ಸುಪ್ರಿಯಾ ಆಸ್ಪತ್ರೆ, ಭಾರತೀಯ ಜೀವ ವಿಮಾ ನಿಗಮ, ಸೆಕ್ಯೂರಿಟಿ, ಆಸ್ಪತ್ರೆ ಮತ್ತು ಹಣಕಾಸಿನ ಸೇವೆಗಳು ಸೇರಿದಂತೆ ಐ. ಟಿ. ಬಿ. ಟಿ ಪಿ. ಜಿ ಕಂಪನಿಗಳು ಮೇಳದಲ್ಲಿ ಭಾಗವಹಿಸಲಿವೆ.
ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮೊ, ಯಾವುದೇ ಪದವಿ, ಸ್ನಾತಕೋತ್ತರ ಪದವಿ, ನರ್ಸಿಂಗ್, ಬಿ.ಎಸ್.ಸಿ, ನರ್ಸಿಂಗ್, ಎ.ಎನ್.ಎಂ. ಜಿ.ಎನ್.ಎಂ. ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವ 18 ರಿಂದ  40 ವರ್ಷದೊಳಗಿನ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಮೇಳ ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯಾರ್ಥಿಗಳು ತಮ್ಮ ಸ್ವ- ವಿವರದೊಂದಿಗೆ ಹಾಗೂ ಅಂಕ ಪಟ್ಟಿ ದಾಖಲೆಯೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದೂರವಾಣಿ ಸಂಖ್ಯೆ 08226-224430 ಅಥವಾ 9480166210 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆ ತಿಳಿಸಿದೆÉ.



No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು