ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ: ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರ ಎಸಗಿ ಕೊಲೆಗೈದ ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ಬೀದಿಗಿಳಿದು ಪ್ರತಿಭಟಿಸಿದರು.
ಪಟ್ಟಣದಲ್ಲಿರುವ ವಿವಿಧ ವಿದ್ಯಾರ್ಥಿ ಸಂಘ ಎಬಿವಿಪಿ ಹಾಗೂ ಬಿವಿಎಸ್ ಪ್ರತಿಭಟಿಸಿ ಅಪರ ಜಿಲ್ಲಾದಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಚಾಮರಾಜನಗರ ಚಾಮರಾಜೇಶ್ವರ ದೇವಾಲಯದಿಂದ ಮೆರವಣಿಗೆ ಹೊರಟು ಜೋಡಿ ರಸ್ತೆ ಮೂಲಕ ಸಾಗಿ ಜಿಲ್ಲಾಡಳಿತಭವನದ ತಲುಪಿ ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ಅತ್ಯಾಚಾರ ಎಸಗಿದ ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವಿವಿದ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಬಾಗವಹಿಸಿದ್ದರು
_______________________________________________________________________________
ಜಿಲ್ಲಾ ಉಸ್ತುವಾರಿ ಸಚಿವರಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪರಿಶೀಲನೆ : ತ್ವರಿತ ಪೂರ್ಣಗೊಳಿಸಲು ಸೂಚನೆ
ಉತ್ತೂರು ಏತ ಯೋಜನೆ ಹಾಗೂ ಗಾಂಧಿ ಗ್ರಾಮ ಏತ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲಿಸಿದ ಉಸ್ತುವಾರಿ ಸಚಿವರು ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.
ಉತ್ತೂರು ಏತ ಯೋಜನೆಯಡಿ ಉತ್ತೂರಿನ ಕೆರೆ ಬಳಿ ನಿರ್ಮಾಣವಾಗುತ್ತಿರುವ ಪಂಪ್ ಹೌಸ್‍ಗೆ ಮೊದಲು ಭೇಟಿ ನೀಡಿದ ಉಸ್ತುವಾರಿ ಸಚಿವರು ಅಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ವೀಕ್ಷಿಸಿದರು. ಯಾವ ಸಮಂiÀiದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ನಿರ್ಮಾಣ ಕಾರ್ಯ ಹೇಗೆ ಸಾಗಿದೆ ಎಂಬ ಬಗ್ಗೆ ಮಾಹಿತಿ ಪಡೆದ ಸಚಿವರು ವಿಳಂಬ ಮಾಡದೆ ಕಾಮಗಾರಿ ಚುರುಕುಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಈಗಾಗಲೇ ಕೆರೆಗಳಿಗೆ ನೀರು ತುಂಬಿಸುವ ಕುರಿತು ಸಾಕಷ್ಟು ಮನವರಿಕೆ ಮಾಡಿಕೊಟ್ಟಿದ್ದೇವೆ. ಜನರ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಕಾಲಮಿತಿಯೊಳಗೆ ಮುಗಿಸಬೇಕು. ಗ್ರಾಮೀಣರ ಅನುಕೂಲಕ್ಕೆ ನೀರು ತುಂಬಿಸುವ ಕೆಲಸ ಬೇಗ ನಡೆಸಬೇಕೆಂದು ಸಚಿವರು ಸೂಚಿಸಿದರು.
ಉತ್ತೂರು ಭಾಗದಲ್ಲಿ ಹಾದುಹೋಗಿರುವ ಪೈಪ್ ಲೈನ್ ಕಾಮಗಾರಿಯನ್ನು ಸಹ ಸಚಿವರು ವೀಕ್ಷಿಸಿದರು. ಕೆಲಸ ಬಾಕಿ ಇರುವ ಕಡೆ ಅತಿ ಶೀಘ್ರವಾಗಿ ಪೈಪ್‍ಗಳ ಜೋಡಣೆ ಕಾರ್ಯವನ್ನು ಕೈಗೊಳ್ಳುವಂತೆ ಸಹ ಅಧಿಕಾರಿಗಳಿಗೆ ತಿಳಿಸಿದರು. ಬಳಿಕ ಗಾಂಧಿಗ್ರಾಮ ಏತ ಯೋಜನೆ ವ್ಯಾಪ್ತಿಯ ಕಮ್ಮರಹಳ್ಳಿ ಕೆರೆ ಬಳಿ ನಿರ್ಮಾಣವಾಗಿರುವ ಪಂಪ್ ಹೌಸ್‍ಗೆ ಭೇಟಿ ನೀಡಿ ಅಲ್ಲಿನ ಕಾಮಗಾರಿಯನ್ನು ಪರಿಶೀಲಿಸಿದರು. ಉಳಿದ ಕೆಲಸಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ನಂತರ ಗಾಂಧಿಗ್ರಾಮದ ಬಳಿ ಕಬಿನಿ ನದಿಯಿಂದ ನೀರು ಪೂರೈಸಲು ನಿರ್ಮಾಣ ಮಾಡಲಾಗಿರುವ ಜಾಕ್‍ವೆಲ್ (ಮೂಲಸ್ಥಾವರ) ಸ್ಥಳಕ್ಕೆ ಭೇಟಿ ಕೊಟ್ಟು ವ್ಯಾಪಕವಾಗಿ ಪರಿಶೀಲಿಸಿದರು. ವಿಳಂಬ ಮಾಡದೆ ತುರ್ತಾಗಿ ನೀರು ತುಂಬಿಸುವ ಕೆಲಸಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆ ಪೂರ್ಣಗೊಳಿಸಬೇಕು ಎಂದು ಉಸ್ತುವಾರಿ ಸಚಿವರು ಸೂಚನೆ ನೀಡಿದರು.
ಇದೇವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಉಸ್ತುವಾರಿ ಸಚಿವರು ಉತ್ತೂರು ಏತ ಯೋಜನೆಯಡಿ ಒಟ್ಟು 11 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು 53 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿದ್ದೇವೆ. ಮುಂಬರುವ ಫೆಬ್ರವರಿ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿದೆ. ಹೀಗಾಗಿ ಕಾಮಗಾರಿಯನ್ನು ಪರಿಶೀಲಿಸಲಾಗಿದೆ. ಚಾಮರಾಜನಗರ ತಾಲೂಕಿನ ಎರಡು ಹಾಗೂ ಗುಂಡ್ಲುಪೇಟೆ ತಾಲೂಕಿನ 9 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಗಾಂಧಿಗ್ರಾಮ ಏತ ಯೋಜನೆಯಡಿ ಕಬಿನಿ ನದಿಯಿಂದ ನೀರೆತ್ತಿ ಗುಂಡ್ಲುಪೇಟೆ ತಾಲೂಕುಗಳ 9 ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ. ಎರಡು ಹಂತಗಳ ಪೈಪ್ ಲೈನ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಪಂಪ್ ಹೌಸ್ ಕಾಮಗಾರಿಯು ಸಹ ಮುಗಿದಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಮರಿಸ್ವಾಮಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಜೇಂದ್ರ ಪ್ರಸಾದ್, ಸಹಾಯಕ ಎಂಜಿನಿಯರ್ ಮಹೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು ಹಾಜರಿದ್ದರು.
ಪದವಿ ಅಂಕಗಳ ಮಾಹಿತಿಯನ್ನು ಆನ್‍ಲೈನ್‍ನಲ್ಲಿ ನಮೂದಿಸಲು ಸೂಚನೆ
ಚಾಮರಾಜನಗರ, ಡಿ. 21 :- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾಪೂರ್ವ ತರಬೇತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿಲ್ಲ.ಬದಲಾಗಿ ಅಭ್ಯರ್ಥಿಗಳು ಪದವಿಯಲ್ಲಿ ಗಳಿಸಿರುವ ಅಂಕಗಳು ಮತು ಪ್ರವರ್ಗವಾರು ಮೀಸಲಾತಿಯನ್ವಯ ಆಯ್ಕೆ ಮಾಡಲಿರುವುದರಿಂದ ಅಭ್ಯರ್ಥಿಗಳು ಪದವಿಯಲ್ಲಿ ಗಳಿಸಿರುವ ಅಂಕಗಳ ಮಾಹಿತಿಯನ್ನು ಆನ್ ಲೈನ್ ಮೂಲಕ ಡಿಸೆಂಬರ್ 27ರೊಳಗೆ ನಮೂದಿಸಲು ತಿಳಿಸಿದೆ.
ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನೋಡುವಂತೆ ಅಥವಾ ಸಹಾಯವಾಣಿ 080-65970004 ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ. 27ರಂದು ನಗರದಲ್ಲಿ ಸಾಧಕರೊಂದಿಗೆ ಸಂವಾದ, ಕವಿಗೋಷ್ಠಿ ಕಾರ್ಯಕ್ರಮ
ಚಾಮರಾಜನಗರ, ಡಿ. 21 - ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಜೆಎಸ್‍ಎಸ್ ಮಹಿಳಾ ಕಾಲೇಜು ಇವರ ಸಹಯೋಗದೊಂದಿಗೆ ಡಿಸೆಂಬರ್ 27ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆಎಸ್‍ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಸಾಧಕರೊಂದಿಗೆ ಸಂವಾದ ಹಾಗೂ ಕವಿಗೋಷ್ಠಿಯನ್ನು ಏರ್ಪಡಿಸಲಾಗಿದೆ.ನಾಡಿನ ಪ್ರಸಿದ್ಧ ಸಾಹಿತಿ ಹಾಗೂ ಸಂಸ್ಕøತಿ ಚಿಂತಕರಾದ ಡಾ. ಕೃಷ್ಣಮೂರ್ತಿ ಹನೂರು ಅವರು ಕಾರ್ಯಕ್ರಮ ಉದ್ಘಾಟಿಸುವರು. ಜೆಎಸ್‍ಎಸ್ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಎ.ಜಿ. ಶಿವಕುಮಾರ್ ಅಧ್ಯಕ್ಷತೆ ವಹಿಸುವರು. ಜೆಎಸ್‍ಎಸ್ ವಿದ್ಯಾಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್. ಎಂ. ಸ್ವಾಮಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸಾಧಕರಾದ ನಾಡಿನ ಪ್ರಸಿದ್ಧ ಸಾಹಿತಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರೂ ಆದ ಪ್ರೊ. ಮಲೆಯೂರು ಗುರುಸ್ವಾಮಿ ಅವರೊಂದಿಗೆ ಸಂವಾದ ನಡೆಯಲಿದೆ.
ಕವಿಗೋಷ್ಠಿಯಲ್ಲಿ ಹಿರಿಯ ಕವಿಗಳು ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ. ಸಿ. ನಾಗಣ್ಣ ಅಧ್ಯಕ್ಷತೆ ವಹಿಸುವರು. ಕವಿ ಸೋಮಶೇಖರ ಬಿಸಲ್ವಾಡಿ ಪ್ರಾಸ್ತಾವಿಕ ನುಡಿಗಳನ್ನಾಡುವರು.
ಎಂ. ಪುಟ್ಟತಾಯಮ್ಮ, ಚಾ.ಶ್ರೀ. ಜಗದೀಶ್, ಗುಂ.ಪು. ದೇವರಾಜು, ಗು.ಬಿ. ರಮೇಶ್, ಎನ್. ಮಹೇಶ್, ಡಾ. ಕೆ. ಲಕ್ಷ್ಮಿ ಪ್ರೇಮಕುಮಾರ್, ಸಿ. ಶಂಕರ್ ಅಂಕನಶೆಟ್ಟಿಪುರ, ಗಿರೀಶ್ ಹರವೆ, ಸಿ. ಸಿದ್ದರಾಜು, ಬಾಳಗುಣಸೆ ಮಂಜುನಾಥ, ಬಿ.ಎಸ್. ಗವಿಸ್ವಾಮಿ, ಮದ್ದೂರು ದೊರೆಸ್ವಾಮಿ, ಜಿ.ಡಿ. ದೊಡ್ಡಯ್ಯ, ನಂಜುಂಡಸ್ವಾಮಿ ಹರದನಹಳ್ಳಿ, ಎಂ. ರಾಜೇಂದ್ರ ಪ್ರಸಾದ್, ಕಾಳಿಂಗಸ್ವಾಮಿ ಸಿದ್ದಾರ್ಥ ಹಾಗೂ ನಾಟಕ ಭಾರ್ಗವ ಕೆಂಪರಾಜು ಆಹ್ವಾನಿತ ಕವಿಗಳಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮತದಾನದ ಹಕ್ಕು ಮಹತ್ವ ಅರಿಯಲು ಯುಜನರಿಗೆ ಸಲಹೆ
ಚಾಮರಾಜನಗರ, ಡಿ.21 - ದೇಶದ ದಿಕ್ಸೂಚಿ ಬರೆಯುವುದು ಯುವ ಜನರ ಕೈಯಲ್ಲಿದೆ. ಮತದಾನದ ಹಕ್ಕು ಮಹತ್ವವನ್ನು ಯುವ ಜನರು ಅರಿಯಬೇಕು ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದ ಕೆ.ಡಿ.ಪಿ. ಸಭಾಂಗಣದಲ್ಲಿ ಇಂದು ಯುವ ಮತದಾರರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯುವ ಜನತೆ ದೇಶದ ಪ್ರಜಾಪ್ರಭುತ್ವ ಉಳಿವಿಗಾಗಿ ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕು. ಯುವ ಜನರು ಜಾಗೃತರಾಗುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಇಂದು ಅನೇಕ ಅಂಶಗಳು ಮಕ್ಕಳ ಮೇಲೆ ಪ್ರಭಾವ ಬೀರುತ್ತಿದೆ. ಒಳ್ಳೆಯ ವಿಷಯ ವಿಶ್ಲೇಷಿಸುವ, ವಿಚಾರ ಮಾಡುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಕಿವಿ ಮಾತು ಹೇಳಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರು ಭಾವಿ ಮತದಾರರಾದ ವಿದ್ಯಾರ್ಥಿಗಳಿಗೆ ಮತದಾನದ ಹಕ್ಕು ಮಹತ್ವ ಕುರಿತು ಅರಿವು ಮೂಡಿಸಿದರೆ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ವಿವಿಧ ಶಾಲೆ ಹಾಗೂ ಕಾಲೇಜುಗಳಿಂದ ತಾಲ್ಲೂಕು ಮಟ್ಟದಲ್ಲಿ ಆಯ್ಕೆಯಾದ 24 ಶಾಲಾ ಕಾಲೇಜಿನ ವಿದ್ಯಾರ್ಥಿಗಳ ಪೈಕಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಯಿತು.
ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ವಿತರಿಸಿದರು.
ಕೊಳ್ಳೇಗಾಲದ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಾದ ಎನ್. ಕುಸುಮ ಮತ್ತು ಆರ್. ಮಹೇಶ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಮಚವಾಡಿಯ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಶಿವಪ್ರಸಾದ್ ಮತ್ತು ಬಿ. ಸುಮಿತ್ರ ದ್ವಿತೀಯ ಸ್ಥಾನವನ್ನು ಪಡೆದರೆ, ತೃತೀಯ ಸ್ಥಾನ ಸಮನಾಗಿ ಗುಂಡ್ಲುಪೇಟೆಯ ಕೆ.ಎಸ್. ನಾಗರತ್ನಮ್ಮ ಪದವಿ ಪೂರ್ವ ಕಾಲೇಜಿನ ನಾಗರಾಜು ಮತ್ತು ಬಿ.ಎಸ್. ಮಧು ಹಾಗೂ ಆದರ್ಶ ವಿದ್ಯಾಲಯದ ಅಂಜಲಿ ಮತ್ತು ಹೇಮಂತ್ ಕುಮಾರ್ ಪಡೆದರು. ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೂ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ವಿತರಿಸಲಾಯಿತು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರೆಜಿನ ಮೆಲಾಕಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
No comments:
Post a Comment