Friday, 22 December 2017

ಮುಖ್ಯಮಂತ್ರಿಯವರ ಜಿಲ್ಲಾ ಪ್ರವಾಸ ಕಾರ್ಯಕ್ರಮ: ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ (22-12-2017)


ಮುಖ್ಯಮಂತ್ರಿಯವರ ಜಿಲ್ಲಾ ಪ್ರವಾಸ ಕಾರ್ಯಕ್ರಮ: ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ 

ಚಾಮರಾಜನಗರ, ಡಿ. 22 - ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶÀಂಕುಸ್ಥಾಪನೆ ನೆರವೆರಿಸಲು ಮುಖ್ಯ ಮಂತ್ರಿಯವರು ಜನವರಿ 10 ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಅಗತ್ಯ ಸಿದ್ಧತೆ ಕೈಗೊಳ್ಳುವ ನಿಟ್ಟಿನಲ್ಲಿ ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಮತ್ತು ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಶಾಸಕರು ಹಾಗೂ ಇತರೆ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಮುಖ್ಯ ಮಂತ್ರಿಯವರು ಭೇಟಿ ನೀಡುತ್ತಿರುವ ಸಂಬಂಧ ಕಾರ್ಯಕ್ರಮ ಆಯೋಜನೆ ಇನ್ನಿತರ ವಿಷಯಗಳ ಕುರಿತು ವ್ಯಾಪಕವಾಗಿ ಚರ್ಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಗೀತಮಹದೇವಪ್ರಸಾದ್ ಅವರು ಮಾತನಾಡಿ ಮುಖ್ಯ ಮಂತ್ರಿಯವರು ಜಿಲ್ಲೆಗೆ ಭೇಟಿನೀಡುವ ಸಂದರ್ಭದಲ್ಲಿ ಅಗತ್ಯವಿರುವ ಎಲ್ಲಾ ಪೂರ್ವ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಂಡಿರಬೇಕು. ಜಿಲ್ಲೆಯಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ಅಭಿವೃದ್ಧಿ ಕೆಲಸ ಹಾಗೂ ಶಂಕುಸ್ಥಾಪನೆ ನೆರವೇರಿಸಬೇಕಿರುವ ಕಾಮಗಾರಿ ಪಟ್ಟಿಯನ್ನು ತಯಾರಿಸಿ ಇದಕ್ಕೆ ಕೈಗೊಳ್ಳಬೇಕಿರುವ ಪ್ರಕ್ರಿಯೆಯನ್ನು ಅಧಿಕಾರಿಗಳು ನಿರ್ವಹಿಸಬೇಕೆಂದು ಸೂಚಿಸಿದರು.

ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿದಂತೆ ಇತರೆ ಅಭಿವೃದ್ಧಿ ಕೆಲಸಗಳನ್ನು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮುಖ್ಯ ಮಂತ್ರಿಯವರು ಉದ್ಘಾಟಿಸಲು ಅಗತ್ಯ ಏರ್ಪಾಡುಗಳನ್ನು ಮಾಡಬೇಕು ಎಂದರು.

ಶಾಸಕರಾದ ಆರ್.ನರೇಂದ್ರ ಅವರು ಮಾತನಾಡಿ ಹೊಸ ತಾಲ್ಲೂಕಾಗಿ ಹನೂರು ಘೋಷಣೆ, ಹನೂರು ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಡಿ.ಸಿ.ಸಿ ಬ್ಯಾಂಕ್ ಉದ್ಘಾಟನೆಯನ್ನು ಹನೂರು ಪಟ್ಟಣದಲ್ಲಿ ಮುಖ್ಯ ಮಂತ್ರಿಗಳಿಂದ ನೆರವೇರಿಸಲಾಗುತ್ತದೆ. ಅಲ್ಲದೇ ಇನ್ನೂ ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮುಖ್ಯ ಮಂತ್ರಿಯವರು ಜನವರಿ 10 ರಂದು ಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯ ಹೂಡಿ ಜನವರಿ 11 ರಂದು ಬೆಳಿಗ್ಗೆ ಮಲೈಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಹಲವು ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂಬಂಧ ಎಲ್ಲಾ ಸಿದ್ದತೆಗಳನ್ನು ತ್ವರಿತವಾಗಿ ಅಧಿಕಾರಿಗಳು ಪೂರ್ಣಗೊಳಿಸಬೇಕು ಎಂದರು.

ಶಾಸಕರಾದ ಎಸ್.ಜಯಣ್ಣ ಅವರು ಮಾತನಾಡಿ ಪಟ್ಟಣದಲ್ಲಿ ನೂತನ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ, ಡಾ|| ಬಿ.ಆರ್.ಅಂಬೇಡ್ಕರ್ ಭವನ, ನಗರಸಭೆ ಕಟ್ಟಡ, ಪ್ರವಾಸಿ ಮಂದಿರ ಉದ್ಘಾಟನೆ ಇತರೆ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ. ಅಧಿಕಾರಿಗಳು ಇದಕ್ಕೆ ಪೂರಕವಾಗಿ ಎಲ್ಲಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದರು.

ಜಿಲ್ಲಾಧಿಕಾರಿ ಬಿ.ರಾಮು ಅವರು ಮಾತನಾಡಿ ಮುಖ್ಯ ಮಂತ್ರಿಯವರು ಚಾಮರಾಜನಗರ, ಕೊಳ್ಳೇಗಾಲ, ಹನೂರು ಹಾಗೂ ಮಹದೇಶ್ವರ ಬೆಟ್ಟಕ್ಕೆ ಭೇಟಿನೀಡಿ ನೆರವೇರಿಸಲಿರುವ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಗಳಿಗೆ ಅವಶ್ಯವಿರುವ ಎಲ್ಲಾ ಸಿದ್ದತೆಗಳು ಸಕಾಲಕ್ಕೆ ಪೂರ್ಣಗೊಳ್ಳಬೇಕು. ಪ್ರತಿ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಅಭಿವೃದ್ಧಿ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯವನ್ನು ಮುಖ್ಯ ಮಂತ್ರಿಯವರ ಕಾರ್ಯಕ್ರಮದಲ್ಲಿ ವಿತರಿಸಲು ಬೇಕಿರುವ ಪ್ರಕ್ರಿಯೆ ಕೈಗೊಳ್ಳಬೇಕು. ಇನ್ನಿತರ ಪ್ರಮುಖ ಯೋಜನೆ ಅನುಷ್ಠಾನ ಸಂಬಂಧ ಕಾರ್ಯಗತಗೊಳಿಸಲು ಸಿದ್ದರಾಗಿರಬೇಕೆಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಎಂ.ರಾಮಚಂದ್ರ, ಉಪಾಧ್ಯಕ್ಷರಾದ ಜೆ.ಯೋಗೇಶ್, ನಗರಸಭೆ ಅಧ್ಯಕ್ಷರಾದ ಶೋಭಾ ಪುಟ್ಟಸ್ವಾಮಿ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಕೆರೆಹಳ್ಳಿ ನವೀನ್, ಸದಸ್ಯರಾದ ಶಿವಮ್ಮ, ಚೆನ್ನಪ್ಪ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾಪ್ರಸನ್ನ, ಉಪವಿಭಾಗಾಧಿಕಾರಿ ಫೌಜೀಯ ತರನಂ, ಇತರೆ ಜನಪ್ರನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಚಿಕ್ಕಲ್ಲೂರು ಜಾತ್ರೆ ಪೂರ್ವ ಸಿದ್ಧತಾ ಸಭೆ: ಅವಶ್ಯ ಸೌಕರ್ಯ ಕಲ್ಪಿಸಲು ಸೂಚನೆ 


ಚಾಮರಾಜನಗರ, ಡಿ. 22 - ಕೊಳ್ಳೇಗಾಲ ತಾಲ್ಲ್ಲೂಕಿನ ಪ್ರಸಿದ್ಧ ಯಾತ್ರಾ ಕ್ಷೇತ್ರ ಚಿಕ್ಕಲ್ಲ್ಲೂರಿನಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ಸಕಲ ವ್ಯವಸ್ಥ್ಥೆಗಳನ್ನು ಕಲ್ಪಿಸಲು ಸಕ್ಕರೆ, ಸಣ್ಣ ಕೈಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಗೀತಾ ಮಹದೇವಪ್ರಸಾದ್ ಹಾಗೂ ಶಾಸಕರಾದ ಆರ್.ನÀರೇಂದ್ರ ಅವರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು.

ನಗರದÀ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾತ್ರಾ ಮಹೋತ್ಸವ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಉಸ್ತುವಾರಿ ಸಚಿವರು ಭಕ್ತಾಧಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಏರ್ಪಾಡುಗಳನ್ನು ತ್ವರಿತವಾಗಿ ಮಾಡುವಂತೆ ಸೂಚಿಸಿದರು.

ಶಾಸಕರಾದ ಆರ್.ನರೇಂದ್ರ ಅವರು ಮಾತನಾಡಿ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗಲಿದೆ. ಕುಡಿಯುವ ನೀರು, ಸ್ವಚ್ಛತೆ, ರಸ್ತೆ, ಶೌಚಾಲಯ ಇನ್ನಿತರ ಅಗತ್ಯ ಸೌ¯ಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆ ಅಧಿಕಾರಿಗಳು ಭಕ್ತಾಧಿಗಳು ವಾಸ್ತವ್ಯ ಹೂಡುವ ಸ್ಥಳಗಳಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು. ಈಗಲೇ ಅವಶ್ಯವಿರುವ ಕೆಲಸವನ್ನು ಪೂರ್ಣಗೊಳಿಸಬೇಕು ಎಂದರು.

ವಾಹನಗಳ ದಟ್ಟಣೆ ಹೆಚ್ಚಾಗುವುದರಿಂದ ಸುಗಮ ಸಂಚಾರಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಬೇಕು. ವಾಹನ ನಿಲುಗಡೆಗೆ ಜಾಗ ಗುರುತಿಸಿ ವಾಹನ ಸವಾರರಿಗೆ ಮಾಹಿತಿ ನೀಡಲು ಫಲಕಗಳನ್ನು ಅಳವಡಿಸಬೇಕು. ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಭಕ್ತಾಧಿಗಳಿಗೆ ಕೊರತೆಯಾಗದಂತೆ ಬಸ್‍ಗಳನ್ನು ನಿಯೋಜಿಸಬೇಕು. ಕೊಳ್ಳೇಗಾಲ, ಹನೂರು ಪಟ್ಟಣದಿಂದಲೂ ಹೆಚ್ಚು ಬಸ್ಸುಗಳು ಹೋಗಿ ಬರಲು ಅವಶ್ಯ ಕ್ರಮ ತೆಗೆದುಕೊಳ್ಳಬೇಕು ಎಂದರು.

ವೈದ್ಯರು ಜಾತ್ರಾ ಸಂದರ್ಭದಲ್ಲಿ 24*7 ಅವಧಿಯಲ್ಲಿಯೂ ಲಭ್ಯರಿರಬೇಕು. ಸ್ವಚ್ಛತಾ ಕೆಲಸಗಳು ಸುಗಮವಾಗಿ ಸಾಗಬೇಕು. ರಸ್ತೆ ದುರಸ್ಥಿ ಸೇರಿದಂತೆ ಇತರೆ ಕಾಮಗಾರಿಗಳು ತ್ವರಿತಗÀತಿಯಲ್ಲಿ ಪೂರ್ಣವಾಗಬೇಕು. ಡಿಸೆಂಬರ್ 28 ರಿಂದಲೇ ಭಕ್ತಾಧಿಗಳು ಚಿಕ್ಕಲ್ಲೂರು ಕ್ಷೇತ್ರಕ್ಕೆ ಆಗಮಿಸುವ ಸಾಧ್ಯತೆ ಇರುತ್ತದೆ. ಇದಕ್ಕೂ ಮೊದಲೇ ಎಲ್ಲಾ ಸಿದ್ಧತೆಗಳನ್ನು ನಿರ್ವಹಿಸಿ ಭಕ್ತಾಧಿಗಳಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ನರೇಂದ್ರ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಬಿ.ರಾಮು ಅವರು ಮಾತನಾಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಾಣಿಬಲಿಯನ್ನು ನಿಷೇಧಿಸಲಾಗಿದ್ದು, ಇದರ ಕಟ್ಟನಿಟ್ಟಿನ ಅನುಷ್ಠಾನಕ್ಕೆ ಅಧಿಕಾರಿಗಳನ್ನು ನಿಯೋಜಿಸಲಾಗುತ್ತದೆ. ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಭಕ್ತಾಧಿಗಳಿಗೆ ಅಗತ್ಯವಿರುವ ಎಲ್ಲಾ ಮೂಲ ಸೌಕರ್ಯ ಒದಗಿಸಲು ಅಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ಮುಂದಾಗಬೇಕೆಂದು ನಿರ್ದೇಶÀನ ನೀಡಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಎಂ.ರಾಮಚಂದ್ರ, ಉಪಾಧ್ಯಕ್ಷರಾದ ಜೆ.ಯೋಗೇಶ್, ಕೊಳ್ಳೇಗಾಲ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ರಾಜು, ನಗರಸಭೆ ಅಧ್ಯಕ್ಷರಾದ ಶೋಭಾ ಪುಟ್ಟಸ್ವಾಮಿ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಕೆರೆಹಳ್ಳಿ ನವೀನ್, ಸದಸ್ಯರಾದ ಶಿವಮ್ಮ, ಚೆನ್ನಪ್ಪ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾಪ್ರಸನ್ನ, ಉಪವಿಭಾಗಾಧಿಕಾರಿ ಫೌಜೀಯ ತರನಂ, ಚಿಕ್ಕಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಡಿ. 23ರಂದು ನೇರ ಫೋನ್-ಇನ್ ಕಾರ್ಯಕ್ರಮ


ಚಾಮರಾಜನಗರ, ಡಿ. 19 - ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಡಿಸೆಂಬರ್ 23ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.

      ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

ಡಿ. 23ರಂದು ಪ.ಜಾ. ನಿರುದ್ಯೋಗಿ ಅಭ್ಯರ್ಥಿಗಳಿಗೆ ಲಘುವಾಹನ ಚಾಲನಾ ತರಬೇತಿಗೆ ಸಂದರ್ಶನ

ಚಾಮರಾಜನಗರ, ಡಿ. 19 - ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ, ಯುವತಿಯರಿಗೆ ಡಿಸೆಂಬರ್ 23ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಲಘು ವಾಹನ ಚಾಲನಾ ತರಬೇತಿ ನೀಡುವ ಸಂಬಂಧ ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ. 28 ರಂದು ವಿಕಲಚೇತನ ಮಕ್ಕಳ ಕ್ರೀಡಾಕೂಟ 


ಚಾಮರಾಜನಗರ, ಡಿ. 22 :- ಸಾರ್ವಜನಿಕ ಶಿಕ್ಷಣ ಇಲಾಖೆಯು 2017-18 ನೇ ಸಾಲಿನ ವಿಕಲಚೇತನ ಶಾಲಾ ವಿದ್ಯಾರ್ಥಿಗಳಿಗೆÉ ಜಿಲ್ಲಾ ಮಟ್ಟದ ಕ್ರೀಡಾಕೂಟ ಆಯೋಜಿಸಿದೆ.

ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಗಣದಲ್ಲಿ ಡಿಸೆಂಬರ್ 28 ರಂದು 14 ರಿಂದ 17 ವಯೋಮಿತಿಯೊಳಗಿನ  ವಿಕಲಚೇತನ ಮಕ್ಕಳ ಜಿಲ್ಲಾ ಮಟ್ಟದ ಅಥ್ಲೇಟಿಕ್ಸ್ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಕೀಡಾಕೂಟಕ್ಕೆ ಭಾಗವಹಿಸುವ ಕ್ರೀಡಾಪಟುಗಳು ಶಾಲೆಯಿಂದ ಶಾಲಾ ದಾಖಲಾತಿ ದೃಢೀಕರಣ ಪತ್ರ ಹಾಗೂ ವೈದ್ಯಕೀಯ ದೃಢಿಕರಣ ಪತ್ರ ಹಾಗೂ ಕ್ರೀಡಾ ಅರ್ಹತಾ ನಮೂನೆ ತರಬೇಕು. ಮುಖ್ಯ ಶಿಕ್ಷಕರು ಮಕ್ಕಳನ್ನು ಜವಬ್ದಾರಿಯುತವಾಗಿ ಕೀಡಾಕೂಟಕ್ಕೆ ಕಳುಹಿಸಿಕೊಡಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಲಚೇತನರ ಬಸ್ ಪಾಸ್ ಅವಧಿ ವಿಸ್ತರಣೆ


ಚಾಮರಾಜನಗರ, ಡಿ. 22:- 2017 ನೇ ಸಾಲಿನಲ್ಲಿ ವಿತರಿಸಿದ ವಿಕಲಚೇತನರ ಬಸ್ ಪಾಸ್ ಆವಧಿಯನ್ನು ಫೆಬ್ರವರಿ 28ರ ವರೆಗೆ ವಿಸ್ತರಿಸಲಾಗಿದೆ.
       
       ಪ್ರತಿ ವರ್ಷದಂತೆ 2018ನೇ ಸಾಲಿನಲ್ಲಿಯೂ ರಿಯಾಯಿತಿ ದರದ ಪಾಸುಗಳನ್ನು ವಿತರಿಸಲಾಗುವುದು. ಪ್ರಸೃತ ಯಾವುದೇ ತೊಂದರೆಯಾಗದಂತೆ 2017 ನೇ ಸಾಲಿನ ಪಾಸುಗಳ ಅವಧಿಯನ್ನು ಫಬ್ರವರಿ 28ರ ವರೆಗೂ ವಿಸ್ತರಿಸಲಾಗಿದೆ  ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗಿಯ ನಿಯಂತ್ರ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು