ಚಿಕ್ಕಲ್ಲೂರು ಜಾತ್ರೆ : ಪ್ರಾಣಿಬಲಿ ನಿಷೇಧ – ಉಸ್ತುವಾರಿಗೆ ಸೆಕ್ಟರ್ ಆಫೀಸರ್‍ಗಳ ನಿಯೋಜನೆ
ಚಾಮರಾಜನಗರ, ಡಿ. :- ಕೊಳ್ಳೇಗಾಲ ತಾಲೂಕಿನ ಶ್ರೀಕ್ಷೇತ್ರ ಚಿಕ್ಕಲ್ಲೂರು ಹೊಸಮಠದ ದೇವಸ್ಥಾನದ ಪರಿಧಿ/ಜಾತ್ರಾ ಪ್ರದೇಶದಲ್ಲಿ ಜನವರಿ 2 ರಿಂದ 7ರ ಮಧ್ಯರಾತ್ರಿಯವರೆಗೆ ದೇವರ ಹೆಸರಿನಲ್ಲಿ ಯಾವುದೇ ರೀತಿಯ ಪ್ರಾಣಿಬಲಿ ನೀಡುವುದು ಹಾಗೂ ಮಾರಕಾಸ್ತ್ರಗಳನ್ನು ತರುವುದನ್ನು ತಡೆಗಟ್ಟಲು ಹಾಗೂ ಹೈಕೋರ್ಟ್ ನಿರ್ದೇಶನದಂತೆ ಪ್ರಾಣಿ ಬಲಿಯನ್ನು ತಡೆಗಟ್ಟಿ, ಪ್ರಾಣಿ ಬಲಿ ನಿಷೇಧದ ಬಗ್ಗೆ ತಿಳಿವಳಿಕೆ ಸಂಬಂಧ ನಿರ್ವವಣೆಗೆ ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಿ ಜಿಲ್ಲಾಧಿಕಾರಿ ಬಿ.ರಾಮು ಅವರು ಆದೇಶ ಹೊರಡಿಸಿದ್ದಾರೆ.
ಪ್ರಾಣಿಬಲಿ ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು, ಪ್ರಾಣಿಬಲಿ ನಿಷೇಧ ಕುರಿತು ನಾಗರಿಕರಿಗೆ ತಿಳಿವಳಿಕೆ ನೀಡುವ ಸಮಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಘಟನೆಗಳು ಸಂಭವಿಸಿದರೆ ತಕ್ಷಣ ಆದೇಶ ಮಾಡುವ ಸಲುವಾಗಿ ಸೆಕ್ಟರ್ ಆಫೀಸರ್‍ಗಳನ್ನು ನಿಯೋಜಿಸಲಾಗಿದೆ.
ಉಪವಿಭಾಗಾಧಿಕಾರಿ ಕೊಳ್ಳೇಗಾಲ ತಹಸೀಲ್ದಾರ್ ಅವರೊಂದಿಗೆ ಹೆಚ್ಚುವರಿಯಾಗಿ ಸೆಕ್ಟರ್ ಆಫೀಸರ್‍ಗಳನ್ನಾಗಿ ವಿವಿಧ ಇಲಾಖೆಯ ಅಧಿಕಾರಿಗಳನ್ನು ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮೊದಲನೇ ಪಾಳಿಯಲ್ಲಿ (ಬೆಳಿಗ್ಗೆ 8ರಿಂದ ಮಧ್ಯಾಹ್ನ 2ಗಂಟೆಯವರೆಗೆ) ಶ್ರೀಕ್ಷೇತ್ರ ಚಿಕ್ಕಲ್ಲೂರು ಹೊಸಮಠದ ತೆರೆದ ಸುತ್ತಮುತ್ತಲಿನ ಪ್ರದೇಶಕ್ಕೆÉ್ಕ ಕೊಳ್ಳೇಗಾಲದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಪಂಚಾಯತ್ ಎಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಹಳೆ ಮಠದ ಸುತ್ತಮುತ್ತಲ ಪ್ರದೇಶಕ್ಕೆ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನೀಯರ್, ಸಿದ್ದಪಾಜಿ ದೇವಸ್ಥಾನದ ಸುತ್ತಮುತ್ತಲ ಪ್ರದೇಶಕ್ಕೆ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಕೊತ್ತನೂರು ಬಾಣೂರು, ಸುಂಡಳ್ಳಿ ಗ್ರಾಮಗಳ ಸುತ್ತ ಮುತ್ತಲ ಪ್ರದೇಶಕ್ಕೆ ಕೊಳ್ಳೇಗಾಲದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ರಾಚಪ್ಪಾಜಿ ನಗರದ ಸುತ್ತಮುತ್ತಲ ಪ್ರದೇಶಕ್ಕೆ ಕೊಳ್ಳೇಗಾಲ ನಗರಸಭೆ ಪೌರಾಯುಕ್ತರು ಹಾಗೂ ಬಂಡಳ್ಳಿ ರಸ್ತೆ ಮಾರ್ಗದ ಸುತ್ತಮುತ್ತಲ ಪ್ರದೇಶ ವ್ಯಾಪ್ತಿಗೆ ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸೆಕ್ಟರ್ ಆಫೀಸರ್‍ಗಳನ್ನಾಗಿ ನಿಯೋಜಿಸಲಾಗಿದೆ.
ಎರಡನೇ ಪಾಳಿಯಲ್ಲಿ ( ಮಧ್ಯಾಹ್ನ 2ಗಂಟೆಯಿಂದ ರಾತ್ರಿ 10ರವರೆಗೆ) ಶ್ರೀಕ್ಷೇತ್ರ ಚಿಕ್ಕಲ್ಲೂರು ಹೊಸಮಠದ ತೆರೆದ ಸುತ್ತಮುತ್ತಲಿನ ಪ್ರದೇಶಕ್ಕೆÉ್ಕ ಕೊಳ್ಳೇಗಾಲದ ಕಾವೇರಿ ನಿರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನೀಯರ್, ಹಳೆ ಮಠದ ಸುತ್ತಮುತ್ತಲ ಪ್ರದೇಶಕ್ಕೆ ಚಾಮರಾಜನಗರದ ತೂಕ ಮತ್ತು ಅಳತೆ ಇಲಾಖೆಯ ಸಹಾಯಕ ನಿಯಂತ್ರಕರು ಸಿದ್ದಪಾಜಿ ದೇವಸ್ಥಾನದ ಸುತ್ತಮುತ್ತಲ ಪ್ರದೇಶಕ್ಕೆ ಚಾಮರಾಜನಗರ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು ಕೊತ್ತನೂರು ಬಾಣೂರು, ಸುಂಡಳ್ಳಿ ಗ್ರಾಮಗಳ ಸುತ್ತ ಮುತ್ತಲ ಪ್ರದೇಶಕ್ಕೆ ಪಶುಸಂಗೋಪನೆ ಇಲಾಖೆ ಉಪನಿರ್ದೇಶಕರು ರಾಚಪ್ಪಾಜಿ ನಗರದ ಸುತ್ತಮುತ್ತಲ ಪ್ರದೇಶಕ್ಕೆ ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಉಪನಿರ್ದೇಶಕರು ಹಾಗೂ ಬಂಡಳ್ಳಿ ರಸ್ತೆ ಮಾರ್ಗದ ಸುತ್ತಮುತ್ತಲ ಪ್ರದೇಶ ವ್ಯಾಪ್ತಿಗೆ ಲೆಕ್ಕ ಪರಿಶೀಲನಾ ವರ್ತುಲದ ಹಿರಿಯ ಉಪನಿರ್ದೇಶಕರನ್ನು ಸೆಕ್ಟರ್ ಆಫೀಸರ್‍ಗಳನ್ನಾಗಿ ನಿಯೋಜಿಸಲಾಗಿದೆ.
ಮೂರನೇ ಪಾಳಿಯಲ್ಲಿ (ರಾತ್ರಿ 10ಗಂಟೆಯಿಂದ ಬೆಳಿಗ್ಗೆ 8ಗಂಟೆಯವರೆಗೆ) ಶ್ರೀಕ್ಷೇತ್ರ ಚಿಕ್ಕಲ್ಲೂರು ಹೊಸಮಠದ ತೆರೆದ ಸುತ್ತಮುತ್ತಲಿನ ಪ್ರದೇಶಕ್ಕೆÉ್ಕ ಚಾಮರಾಜನಗರದ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಹಳೆ ಮಠದ ಸುತ್ತಮುತ್ತಲ ಪ್ರದೇಶಕ್ಕೆ ಚಾಮರಾಜನಗರದ 1ನೇ ಪಿ.ಡಬ್ಲ್ಯೂ.ಡಿ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಿದ್ದಪಾಜಿ ದೇವಸ್ಥಾನದ ಸುತ್ತಮುತ್ತಲ ಪ್ರದೇಶಕ್ಕೆ ಕೊಳ್ಳೇಗಾಲದ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಕೊತ್ತನೂರು ಬಾಣೂರು, ಸುಂಡಳ್ಳಿ ಗ್ರಾಮಗಳ ಸುತ್ತ ಮುತ್ತಲ ಪ್ರದೇಶಕ್ಕೆ ಕೊಳ್ಳೇಗಾಲದ ಉಡುತೋರೆ ಹಳ್ಳ ವಿಭಾಗÀದ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ರಾಚಪ್ಪಾಜಿ ನಗರದ ಸುತ್ತಮುತ್ತಲ ಪ್ರದೇಶಕ್ಕೆ ಕೊಳ್ಳೇಗಾಲದ ಅಜ್ಜಿಪುರ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನೀಯರ್, ಹಾಗೂ ಬಂಡಳ್ಳಿ ರಸ್ತೆ ಮಾರ್ಗದ ಸುತ್ತಮುತ್ತಲ ಪ್ರದೇಶದ ವ್ಯಾಪ್ತಿಗೆ ಕೊಳ್ಳೇಗಾಲದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುರನ್ನು ಸೆಕ್ಟರ್ ಆಫೀಸರ್‍ಗಳನ್ನಾಗಿ ನಿಯೋಜಿಸಲಾಗಿದೆ.
ಗುಂಡ್ಲುಪೇಟೆಯಲ್ಲಿ ಡಿ. 29ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ
ಚಾಮರಾಜನಗರ, ಡಿ. 28 :- ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 29ರಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಲುಪೇಟೆ ಟೌನ್ ದೊಡ್ಡಹುಂಡಿ ಭೋಗಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಾಹಕ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಬಿ. ರಾಮು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷರಾದ ಕೆ.ಎಲ್. ಶಿವಲಿಂಗೇಗೌಡ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಕೊಳ್ಳೇಗಾಲ ಉಪವಿಭಾಗಾಧಿಕಾರಿ ಫೌಜಿಯಾ ತರುನ್ನುಂ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಗೌರಮ್ಮಣ್ಣಿ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಅಧ್ಯಕ್ಷರಾದ ಮಾದಮ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಗುಂಡ್ಲುಪೇಟೆ ಬಿಇಓ ಹಾಲತಿ ಸೋಮಶೇಖರ್ ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಡಿ. 29ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ವಿಶ್ವ ಮಾನವ ದಿನಾಚಾರಣೆ
ಚಾಮರಾಜನಗರ, ಡಿ. 28 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಡಿಸೆಂಬರ್ 29ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವ ಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ರಾಷ್ಟ್ರ ಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಕರ್ನಾಟಕ ಸಂಸ್ಕøತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪದ್ಮಶೇಖರ್ ಅವರು ವಿಶೇಷ ಉಪನ್ಯಾಸ ನೀಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆಯ ಅಧ್ಯಕ್ಷರಾದ ಶೋಭ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ರಾಷ್ಟ್ರಕವಿ ಕುವೆಂಪು ಅವರ ಕುರಿತಂತೆ ಎಸ್.ಜಿ. ಮಹಾಲಿಂಗಸ್ವಾಮಿ ಮತ್ತು ತಂಡ ಗೀತ ಗಾಯನ ಕಾರ್ಯಕ್ರಮ ನಡೆಸಿಕೊಡುವರು. ಮೈಸೂರಿನ ಜಿ. ಗಂಗಾಧರ್ ನಿರ್ದೇಶನದಲ್ಲಿ, ಮಂಡ್ಯದ ಸದ್ವಿದ್ಯಾ ತಂಡವು ಕುವೆಂಪು ವಿರಚಿತ ಜಲಗಾರ ನಾಟಕವನ್ನು ಅಭಿನಯಿಸಲಿದೆ
ಡಿ. 29ರಂದು ಜಿ.ಪಂ. ಸಾಮಾನ್ಯ ಸಭೆ
ಚಾಮರಾಜನಗರ, ಡಿ. 28- ಜಿಲ್ಲಾ ಪಂಚಾಯಿತಿಯ ಸಾಮಾನ್ಯ ಸಭೆಯು ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 29ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಡಿ. 29ರಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಡಿ. 28 - ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಡಿಸೆಂಬರ್ 29ರಂದು ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಪಣ್ಯದಹುಂಡಿ, ಬದನಗುಪ್ಪೆ, ಬೆಂಡರವಾಡಿ, ಇಂಡಸ್ಟ್ರಿಯಲ್, ಮರಿಯಾಲ, ಚಿಕ್ಕ ಹೊಮ್ಮ, ತೊರವಳ್ಳಿ, ಎನ್ ಜೆ ವೈ ಕೆಲ್ಲಂಬಳ್ಳಿ, ದಾಸನೂರು, ಬೇಡರಪುರ, ದೊಡ್ಡ ಹೊಮ್ಮ ಹಾಗೂ ಸುತ್ತಮುತ್ತಲಿನÀ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
No comments:
Post a Comment