ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷಾಪೂರ್ವ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜ. 4 :- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುವ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾಪೂರ್ವ ತರಬೇತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಾಮಾನ್ಯ ಪ್ರವೇಶ ಪರೀಕ್ಷೆಯ ಬದಲಾಗಿ ಅಭ್ಯರ್ಥಿಗಳನ್ನು ಪದವಿಯಲ್ಲಿ ಗಳಿಸಿರುವ ಅಂಕಗಳು ಮತು ಪ್ರವರ್ಗವಾರು ಮೀಸಲಾತಿಯನ್ವಯ ಆಯ್ಕೆ ಮಾಡಲಿರುವುದರಿಂದ ಅಭ್ಯರ್ಥಿಗಳು ಪದವಿಯಲ್ಲಿ ಗಳಿಸಿರುವ ಅಂಕಗಳ ಮಾಹಿತಿಯನ್ನು ಆನ್‍ಲೈನ್ ಮೂಲಕ ನಮೂದಿಸಲು ಜನವರಿ 8ರವರೆಗೆ ಅವಧಿ ವಿಸ್ತರಿಸಿದೆ.
ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಹಾಗೂ ಸಹಾಯವಾಣಿ 080-65970004 ನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನವರಿ 7ರಂದು ಹರದನಹಳ್ಳಿಯಲ್ಲಿ ಗಿರಿಜನ ಉತ್ಸವ
ಚಾಮರಾಜನಗರ, ಜ. 04 - ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಗಿರಿಜನ ಉಪಯೋಜನೆಯಡಿ ಗಿರಿಜನ ಉತ್ಸವ ಕಾರ್ಯಕ್ರಮವನ್ನು ಜನವರಿ 7ರಂದು ಮಧ್ಯಾಹ್ನ 4 ಗಂಟೆಗೆ ಹರದನಹಳ್ಳಿಯ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮೆರವಣಿಗೆ ಚಾಲನೆ ನೀಡುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಸಾಧಕರಿಗೆ ಸನ್ಮಾನ ಮಾಡುವರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಸದಸ್ಯರಾದ ಮಹದೇವಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಬ್ಬಶೆಟ್ಟಿ, ಉಪಾಧ್ಯಕ್ಷರಾದ ಚಿಕ್ಕಮಣಿ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಜಿ. ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹದೇವಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಪ್ರೋತ್ಸಾಹಧನಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ
ಚಾಮರಾಜನಗರ, ಜ. 04 - ಹಿಂದುಳಿದ ವರ್ಗಗಳ ಸಮೂದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.2017-18 ನೇ ಸಾಲಿನಲ್ಲಿ IIIಖಿS, ಓIಖಿs, IISಇಖs, ಂIIಒS, ಓಐU, ISಒ, IIP, ISI, ಎIPಒಇಖ, SPಂ ಹಾಗೂ ಇನ್ನಿತರ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ), ಹಾಗೂ 3(ಬಿ) ಮತ್ತು ಸಾಮಾನ್ಯ ವರ್ಗದ ಆರ್ಹ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರೋತ್ಸಾಹಧನ ನೀಡಲಿದೆ. ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಜ. 20ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಇಲಾಖೆ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.iಟಿ ಹಾಗೂ ಸಹಾಯವಾಣಿ 080-65970004 ಸಂಪರ್ಕಿಸಲು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ. 5ರಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಜ. 5 :- ಚಾಮುಂಡೇಶ್ವÀರಿ ವಿದ್ಯುತ್ ಸರಬರಾಜು ನಿಗಮವು ಜನವರಿ 5ರಂದು ರಾಮಸಮುದ್ರ ವ್ಯಾಪ್ತಿಗೆ ಬರುವ ಹೌಸಿಂಗ್ ಬೊರ್ಡಿಂಗ್ ಕಾಲೋನಿ ಹಾಗೂ ಕೋರ್ಟ್ ರಸ್ತೆ ಭಾಗಗಳಲ್ಲಿ ರಸ್ತೆ ಅಗಲೀಕರಣ ನಿಮಿತ್ತ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ನಿರ್ವಹಿಸಲಿದೆ.
ಅಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹೌಸಿಂಗ್ ಬೋರ್ಡ್ ಹಾಗೂ ಕೋರ್ಟ್ ರಸ್ತೆ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಚೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment