ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿಯವರಿಂದ ಅಭಿವೃದ್ಧಿ ಕಾಮಗಾರಿ ವೀಕ್ಷಣೆ : ಪ್ರಾಧಿಕಾರದ ಸಭೆ
ಚಾಮರಾಜನಗರ, ಜ. 11- ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಯಾತ್ರಾ ಕ್ಷೇತ್ರ ಮಹದೇಶ್ವರ ಬೆಟ್ಟದಲ್ಲಿ ಇಂದು ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಮಲೈಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಬಳಿಕ ಮಲೈಮಹದೇಶ್ವರ ಸ್ವಾಮಿ ಕ್ಷೇತ್ರಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು.ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಸಲುವಾಗಿ ಬುಧವಾರ ಮುಖ್ಯಮಂತ್ರಿಯವರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಚಾಮರಾಜನಗರ ತಾಲೂಕಿನ ನಾಗವಳ್ಳಿ, ಕೊಳ್ಳೇಗಾಲ ಹಾಗೂ ಹನೂರು ಪಟ್ಟಣದಲ್ಲಿ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಬುಧವಾರ ರಾತ್ರಿ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಮುಖ್ಯಮಂತ್ರಿಯವರು ವಾಸ್ತವ್ಯ ಹೂಡಿದ್ದರು.
ಇಂದು ಬೆಳಿಗ್ಗೆ ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿದ ಮುಖ್ಯಮಂತ್ರಿಯವರು ದೇವರ ದರ್ಶನ ಪಡೆದರು. ಬಳಿಕ ಮಲೈಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಅಂತರಗಂಗೆ ಕಾಮಗಾರಿ ಸ್ಥಳಕ್ಕೆ ಭೇಟಿ ಕೊಟ್ಟರು. ಅಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಪ್ರಾಧಿಕಾರದ ವತಿಯಿಂದಲೇ ನಿರ್ಮಾಣ ಮಾಡುತ್ತಿರುವ ಅಂಗಡಿ ಮಳಿಗೆಗಳ ಕಾಮಗಾರಿಯನ್ನು ಸಹ ಪರಿಶೀಲಿಸಿದರು.
ದೇವಾಲಯದ ಬಳಿ ಜನರ ನೆರಳಿಗಾಗಿ ನಿರ್ಮಾಣ ಮಾಡಲಾಗಿರುವ ಬೃಹತ್ ರಂಗಮಂದಿರವನ್ನು ಕೆಲಹೊತ್ತು ನಿಂತು ಮುಖ್ಯಮಂತ್ರಿಯವರು ವೀಕ್ಷಿಸಿದರು. ಮಹದೇಶ್ವರ ಬೆಟ್ಟದಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಆದಷ್ಟು ಶೀಘ್ರವೇ ಪೂರ್ಣಗೊಳಿಸಬೇಕೆಂದು ಮುಖ್ಯಮಂತ್ರಿಯವರು ಸೂಚಿಸಿದರು.
ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿಯವರು ಪ್ರಾಧಿಕಾರದ ಸಭೆಯನ್ನು ನಡೆಸಿದರು. ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್), ಶಾಸಕರಾದ ಆರ್. ನರೇಂದ್ರ, ಸಿ.ಪುಟ್ಟರಂಗಶೆಟ್ಟಿ, ಎಸ್. ಜಯಣ್ಣ, ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕೊಪ್ಪಾಳಿ ಮಹದೇವನಾಯ್ಕ, ಜವರೇಗೌಡ, ಕೀಳನಪುರದ ಮಹದೇವಪ್ಪ, ಕಾವೇರಿ ಶಿವಕುಮರ್, ದೇವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್, ಪ್ರಾಧಿಕಾರದ ಕಾರ್ಯದರ್ಶಿ ಎ.ಜೆ. ರೂಪ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಗಣೇಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕುಮಾರ್, ಇನ್ನಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಮತದಾನದ ಮಹತ್ವದ ಅರಿವು ಮೂಡಿಸಿ:ಜಿ.ಪಂ ಸಿ.ಇ.ಒ ಡಾ.ಕೆ.ಹರೀಶ್ ಕುಮಾರ್
ಚಾಮರಾಜನಗರ, ಜ. 11 ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಗೊಳ್ಳಲು ವಿದ್ಯಾರ್ಥಿಗಳಿಗೂ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕಾದ ಅವಶ್ಯಕತೆ ಇದ್ದು, ಈ ಸಂಬಂಧ ಅಗತ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು.ಹನೂರು ತಾಲ್ಲೂಕಿನ ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿಯಲ್ಲಿ ಇಂದು ರಾಷ್ಟ್ರೀಯ ಮತದಾರರ ದಿನ ಆಚರಣೆ ಹಿನ್ನೆಲೆಯಲ್ಲಿ ಮತದಾನದ ಪ್ರಾಮುಖ್ಯತೆ ಬಗ್ಗೆ ಅರಿವು ಉಂಟು ಮಾಡುವ ದಿಸೆಯಲ್ಲಿ ಕೈಗೊಳ್ಳಬೇಕಿರುವ ವಿವಿಧ ಚಟುವಟಿಕೆಗಳ ಕುರಿತ ಸಭೆಯಯಲ್ಲಿ ಅವರು ಮಾತನಾಡಿದರು.
ಶಾಲಾ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಮತದಾರರಾಗಲಿದ್ದಾರೆ. ಹೀಗಾಗಿ ಮತದಾನದ ಮಹತ್ವ ತಿಳಿಯಬೇಕಿದೆ. 18 ವರ್ಷ ತುಂಬಿದ ಎಲ್ಲರು ಮತದಾರರಾಗುವುದರಿಂದ ಮತದಾನದ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದರು.
ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಮತದಾನ ಪ್ರಕ್ರಿಯೆ ಹಂತಗಳು ಹಾಗೂ ಇದಕ್ಕೆ ಸಂಬಂಧಿಸಿದ ಇನ್ನಿತರ ವಿಷಯಗಳ ಕುರಿತು ಮನದಟ್ಟಾಗುವಂತೆ ಮಾಹಿತಿ ನೀಡÀಬೇಕು. ಮತದಾನದ ಜಾಗೃತಿ ಮೂಡಿಸಲು ಚರ್ಚಾ ಸ್ಪರ್ಧೆ, ಪ್ರಬಂಧ, ಚಿತ್ರಕಲೆ ಸ್ಪರ್ಧೆಯನ್ನು ಹಮ್ಮಿಕೊಳ್ಳಬೇಕು ಎಂದು ಹರೀಶ್ ಕುಮಾರ್ ರವರು ತಿಳಿಸಿದರು.
ಶಿಕ್ಷಣ ಸಂಸ್ಥೆಗಳಲ್ಲಿ ಮತದಾರರ ಸಾಕ್ಷರತೆ ಕ್ಲಬ್‍ಗಳನ್ನು ರಚಿಸಿ ಆ ಮೂಲಕ ನಿರಂತರವಾಗಿ ಮತದಾರರ ಪ್ರಾಮುಖ್ಯತೆ ಬಗ್ಗೆ ತಿಳಿಸಿಕೊಡಬೇಕು ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಸೇರ್ಪಡೆ, ಮರಣ ಹೊಂದಿರುವ, ವಲಸೆ ಹೋಗಿರುವ ಮತದಾರರ ಹೆಸರುಗಳನ್ನು ಕೈಬಿಡುವ ಪ್ರಕ್ರಿಯೆ ಬಗ್ಗೆ ಪೋಷಕರಲ್ಲೂ ತಿಳಿವಳಿಕೆ ನೀಡಬೇಕಿದೆ ಎಂದರು.
ಉಪ ವಿಭಾಗಾಧಿಕಾರಿ ಫೌಜಿಯ ತರನಮ್ ಮಾತನಾಡಿ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತದಾನದ ಮಹತ್ವವನ್ನು ತಿಳಿಸಿಕೊಡುವ ದಿಸೆಯಲ್ಲಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು. ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಉಪ ವಿಭಾಗಾಧಿಕಾರಿ ಫೌಜಿಯ ತರನಮ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಹದೇವಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್, ಬಿ.ಆರ್.ಸಿ, ಸಿ.ಆರ್.ಪಿ ಗಳು ಸಭೆಯಲ್ಲಿ ಹಾಜರಿದ್ದರು.
ಗುಂಡ್ಲುಪೇಟೆ : ಜ. 12, 13ರÀಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಚಾಮರಾಜನಗರ, ಜ. 11 - ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಗುಂಡ್ಲುಪೇಟೆ ಗುರುಭವನದಲ್ಲಿ ಜನವರಿ 12 ಹಾಗೂ 13ರಂದು ನಡೆಯಲಿದೆ.ಜನವರಿ 12ರಂದು ಬೆಳಿಗ್ಗೆ 10.30 ಗಂಟೆಗೆ ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯರು ಹಾಗೂ ಖ್ಯಾತ ಸಾಹಿತಿಗಳಾದ ಸಿ. ನಾಗಣ್ಣ ಸಮ್ಮೇಳನ ಉದ್ಘಾಟಿಸುವರು. ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ಎಸ್. ಆಶಯ ನುಡಿ ನುಡಿಯುವರು.
ಸಂಸದರಾದ ಆರ್. ಧ್ರುವನಾರಾಯಣ ದಿ. ಮುದ್ದು ಮಾದಪ್ಪ ದತ್ತಿ ಪ್ರಶಸ್ತಿಯನ್ನು ಸಾಹಿತಿಗಳಾದ ಶೀಲಾ ಸತ್ಯೇಂದ್ರಸ್ವಾಮಿ ಅವರಿಗೆ ಪ್ರಧಾನ ಮಾಡುವರು.
ಹಿರಿಯ ಸಾಹಿತಿ ಮತ್ತು ಸಂಶೋಧಕರಾದ ಜಿ.ಜಿ. ಮಂಜುನಾಥನ್ ಸಮೇಳನಾಧ್ಯಕ್ಷರ ನುಡಿಗಳನ್ನಾಡುವರು.
ಖ್ಯಾತ ಸಾಹಿತಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಮಲೆಯೂರು ಗುರುಸ್ವಾಮಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡುವರು. ಪರಿಷತ್ತಿನ ಮಾಜಿ ಅಧ್ಯಕ್ಷರಾದ ಎ.ಎಂ. ನಾಗಮಲ್ಲಪ್ಪ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಸೋಮಶೇಖರ ಬಿಸಲ್ವಾಡಿ ಪುಸ್ತಕ ಲೋಕಾರ್ಪಣೆ ಮಾಡುವರು.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎಸ್. ಜಯಣ್ಣ, ಆರ್. ನರೇಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾದ ಪಿ. ಗಿರೀಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಧ್ವಜಾರೋಹಣ ನೆರವೇರಿಸುವರು. 8.30 ಗಂಟೆಗೆ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಎಸ್. ಮಹೇಶ್ ಮೆರವಣಿಗೆಗೆ ಚಾಲನೆ ನೀಡುವರು. ಪುರಸಭೆ ಉಪಾಧ್ಯಕ್ಷರಾದ ಜಿ.ಕೆ. ನಾಗೇಂದ್ರ ಪುಷ್ಪಾರ್ಚನೆ ಮಾಡುವರು. ಆರಕ್ಷಕ ಉಪನಿರೀಕ್ಷಕರಾದ ಬಿ.ಎಸ್. ಶಿವರುದ್ರ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.
ಸಮ್ಮೇಳನದಲ್ಲಿ ವಿವಿಧ ವಿಷಯಗಳ ಕುರಿತು ಗೋಷ್ಠಿ, ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.
ಜ. 13ರಂದು ನಗರದಲ್ಲಿ ಜಿಲ್ಲಾ ಯುವಜನ ಸಮಾವೇಶ
ಚಾಮರಾಜನಗರ, ಜ. 1- ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ. ನೆಹರು ಯುವ ಕೇಂದ್ರ, ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ ಹಾಗೂ ರಂಗವಾಹಿನಿ ಇವರ ಸಹಯೋಗದಲ್ಲಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಯುವಜನ ಸಮಾವೇಶವನ್ನು ಜನವರಿ 13ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಸಂಸದರಾದ ಆರ್. ಧ್ರುವನಾರಾಯಣ ಸಮಾವೇಶ ಉದ್ಘಾಟಿಸುವರು. ಕೆಆರ್ ಡಿಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ. ಶಿವಬಸವಯ್ಯ ಯುವಜನರಿಗೆ ಸಂದೇಶ ನೀಡುವರು.
ದೀನಬಂಧು ಸಂಸ್ಥೆಯ ನಿರ್ದೇಶಕರಾದ ಜಿ.ಎಸ್. ಜಯದೇವ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಮೈಸೂರು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಕೆ.ಎಂ. ಪ್ರಸನ್ನಕುಮಾರ್ ಅತಿಥಿ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದÉ.
ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಜ. 11- ಜಿಲ್ಲೆಯಲ್ಲಿ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರುರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ. ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 2018-19ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಯನ್ನು ಜಿಲ್ಲಾ ಮಟ್ಟದ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸ್ಥಳೀಯ ವಸತಿ ಶಾಲೆ, ತಾಲೂಕು ಮಟ್ಟದ ಕಚೇರಿ ಹಾಗೂ ತಾಲೂಕು ಬಿಇಓ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸಮೀಪದ ಯಾವುದಾದರೂ ವಸತಿ ಶಾಲೆಗೆ ಜನವರಿ 13ರ ಸಂಜೆ 5.30ರ ಒಳಗೆ ಸಲ್ಲಿಸಬೇಕು.
ಪ್ರವೇಶ ಪರೀಕ್ಷೆ ಫೆಬ್ರವರಿ 18ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ವಸತಿ ಶಾಲಾ ಪ್ರಾಂಶುಪಾಲರನ್ನು (ದೂ.ಸಂ. 08229-232228, ಮೊಬೈಲ್ 9164373076) ಸಂಪರ್ಕಿಸುವಂತೆ ಮೊರಾರ್ಜಿ ದೇಸಾಯಿ ವಸತಿಶಾಲೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ : ಜ. 12 ರಿಂದ ರಾಷ್ಟ್ರೀಯ ಯುವದಿನ, ಸಪ್ತಾಹ ಆಚರಣೆ
ಚಾಮರಾಜನಗರ, ಜ. 11- ನೆಹರು ಯುವ ಕೇಂದ್ರ, ಜಿಲ್ಲೆಯ ಯುವ, ಮಹಿಳಾ ಸಂಘಟನೆಗಳು ಹಾಗೂ ಜಿಲ್ಲೆಯ ವಿವಿಧ ಕಾಲೇಜುಗಳ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಮತ್ತು ಪ್ರೌಢಶಾಲೆಗಳ ಸಯಯೋಗದಲ್ಲಿ ದಿವ್ಯಚೇತನ ಸ್ವಾಮಿ ವಿವೇಕಾನಂದರವರ 155ನೇ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ದಿನ ಹಾಗೂ ಸಪ್ತಾಹ ದಿನಾಚರಣೆಯನ್ನು ಜನವರಿ 12 ರಿಂದ 19ರವರೆಗೆ ಜಿಲ್ಲೆಯ ವಿವಿಧೆಡೆ ಹಮ್ಮಿಕೊಳ್ಳಲಾಗಿವೆ.ಜನವರಿ 12 – ರಾಷ್ಟ್ರೀಯ ಯುವ ದಿನ:-
ಕೊಳ್ಳೇಗಾಲದ ಜೆ.ಎಸ್.ಎಸ್. ಮಹಿಳಾ ಕಾಲೇಜು ಹಾಗೂ ಮುಡಿಗುಂಡದ ವಾಲ್ಮೀಕಿ ಸಮಾಜಸೇವಾ ಸಮಿತಿ ಆಶ್ರಯದಲ್ಲಿ ಕೊಳ್ಳೇಗಾಲದ ಜೆ.ಎಸ್.ಎಸ್. ಮಹಿಳಾ ಕಾಲೇಜು ಆವರಣದಲ್ಲಿ ಜನವರಿ 12ರಂದು ಮಧ್ಯಾಹ್ನ 12 ಗಂಟೆಗೆ ರಾಷ್ಟ್ರೀಯ ಯುವ ದಿನ ಆಚರಿಸಲಿದ್ದು ರಾಜ್ಯ ಯುವ ಪ್ರಶಸ್ತಿ ಪುರಸ್ಕøತರಾದ ಸಿ.ಎಂ. ನರಸಿಂಹಮೂರ್ತಿ ಕಾರ್ಯಕ್ರಮ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲರಾದ ಉಮೇಶ್ ಅಧ್ಯಕ್ಷತೆ ವಹಿಸುವರು. ರೋಟರಿ ಸಂಸ್ಥೆಯ ಕಾರ್ಯದರ್ಶಿ ಜೋಸೆಫ್ ಅಲೆಗ್ಜಾಂಡರ್ ಅತಿಥಿ ಉಪನ್ಯಾಸ ನೀಡುವರು. ರೋಟರಿ ಸಂಸ್ಥೆ ಅಧ್ಯಕ್ಷರಾದ ಪುಟ್ಟ ಅರಸಶೆಟ್ಟಿ ಹಾಗೂ. ಜೆ.ಎಸ್.ಎಸ್. ಮಹಿಳಾ ಕಾಲೇಜು ಎನ್ ಎಸ್ ಎಸ್ ಅಧಿಕಾರಿ ಸ್ಮಿತಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜನವರಿ 13 – ಸಾಂಸ್ಕøತಿಕ ದಿನ:-
ಚಾಮರಾಜನಗರ ಸಂಯುಕ್ತ ಯುವಜನ ಸಂಘದ ಆಶ್ರಯದಲ್ಲಿ ತಾಲೂಕಿನ ಆಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಜನವರಿ 13ರಂದು ಬೆಳಿಗ್ಗೆ 10 ಗಂಟೆಗೆ ಸಾಂಸ್ಕøತಿಕ ದಿನಾಚರಣೆ ಆಚರಿಸಲಿದ್ದು ಸಮಾಜ ಕಾರ್ಯಕರ್ತರಾದ ಶೇಖಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಪ್ರಭುಸ್ವಾಮಿ ಅಧ್ಯಕ್ಷತೆ ವಹಿಸುವರು. ಶಾಲೆಯ ಕನ್ನಡ ಶಿಕ್ಷಕರಾದ ಮಹದೇವಮ್ಮ ಅತಿಥಿ ಉಪನ್ಯಾಸ ನೀಡುವರು. ಆಲೂರಿನ ಶ್ರೀ ಮಹದೇಶ್ವರ ಬೀಸು ಕಂಸಾಳೆ ಕಲಾಸಂಘ ಅಧ್ಯಕ್ಷರಾದ ಶಿವಣ್ಣ ಹಾಗೂ. ಗ್ರಾಮದ ಯಜಮಾನರಾದ ಮಹದೇವಸ್ವಾಮಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜನವರಿ 14 – ಭಾಗವಹಿಸುವಿಕೆಯ ದಿನ:-
ಹೆÉೂನ್ನೂರಿನ ಜಗಜ್ಯೋತಿ ಶ್ರೀ ಬಸವೇಶ್ವರ ಯುವಕರ ಸಂಘದೊಂದಿಗೆ ಯಳಂದೂರು ತಾಲೂಕು ಹೊನ್ನೂರಿನ ಯುವಸಂಘದ ಆವರಣದಲ್ಲಿ ಜನವರಿ 14ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮದ ಅಂಗವಾಗಿ ಭಾಗವಹಿಸುವಿಕೆಯ ದಿನವನ್ನು ಆಚರಿಸಲಿದೆ. ಹೊನ್ನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಮಹದೇವಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಜಗಜ್ಯೋತಿ ಶ್ರೀ ಬಸವೇಶ್ವರ ಯುವಕರ ಸಂಘದ ಆಧ್ಯಕ್ಷರಾದ ಎಂ. ಜಗದೀಶ್ ಅಧ್ಯಕ್ಷತೆ ವಹಿಸುವರು. ಹೊನ್ನೂರಿನ ಭೀಮರಾವ್ ಜೀ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಉಮೇಶ್ ಅತಿಥಿ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಹೊನ್ನೂರಿನ ನಾಡಗೌಡರಾದ ಮರಿಸ್ವಾಮಿ ಹಾಗೂ ಗ್ರಾಮದ ಮುಖಂಡರಾದ ಸಿದ್ದರಾಜು ಪಾಲ್ಗೊಳ್ಳುವರು.
ಜನವರಿ 15 – ಸಮಾಜ ಸೇವಾ ದಿನ:-
ಗುಂಡ್ಲುಪೇಟೆ ತಾಲೂಕಿನ ಶಿವಪುರದ ಜೆ.ಎಸ್.ಎಸ್. ಪ್ರೌಢಶಾಲೆ ಹಾಗೂ ಕಸ್ತೂರಿ ಕನ್ನಡ ಕಲಾಬಳಗದ ಸಂಘಟನೆಯೊಂದಿಗೆ ಶಿವಪುರದ ಜೆ.ಎಸ್.ಎಸ್. ಪ್ರೌಢಶಾಲೆಯಲ್ಲಿ ಜನವರಿ 15ರಂದು ಬೆಳಿಗ್ಗೆ 11 ಗಂಟೆಗೆ ಸಮÁಜ ಸೇವಾ ದಿನವನ್ನು ಆಚರಿಸಲಿದೆ. ಶಿವಪುರ ಜೆ.ಎಸ್.ಎಸ್. ಪ್ರೌಢಶಾಲೆಯ ಗಣಿತ ಶಿಕ್ಷಕರಾದ ಲಿಂಗರಾಜು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಶಿಕ್ಷಕರಾದ ಜೆ.ಎನ್. ಲೋಕೇಶ್ ಅಧ್ಯಕ್ಷತೆ ವಹಿಸುವರು. ಕನ್ನಡ ಶಿಕ್ಷಕರಾದ ಹೆಚ್.ಪಿ. ಪಶುಪತಿ ಅತಿಥಿ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಾದ ಎಸ್. ಬಸವಣ್ಣ, ಹಿಂದಿ ಶಿಕ್ಷಕರಾದ ಬಿ. ಮೀನಾಕ್ಷಿ, ದೈಹಿಕ ಶಿಕ್ಷಕರಾದ ಶಾಂತ ಮಲ್ಲೇಶ್ ಹಾಗೂ ಗಣಿತ ಶಿಕ್ಷಕರಾದ ಬಸವಣ್ಣ ಪಾಲ್ಗೊಳ್ಳುವರು.
ಜನವರಿ 16 – ಭಾಗವಹಿಸುವಿಕೆಯ ದಿನ:-
ಸತ್ತೇಗಾಲದ ಸರ್ಕಾರಿ ಪ್ರೌಢಶಾಲೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸತ್ಯಾದ್ರಿ ಯುವಕರ ಸಂಘದೊಂದಿಗೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಜನವರಿ 16ರಂದು ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮದ ಅಂಗವಾಗಿ ದೈಹಿಕ ದಕ್ಷತಾ ದಿನವನ್ನು ಆಚರಿಸಲಿದೆ. ಸತ್ತೇಗಾಲ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಭಾಗ್ಯಲಕ್ಷ್ಮಿ ಕಾರ್ಯಕ್ರಮ ಉದ್ಘಾಟಿಸುವರು. ಕೊಳ್ಳೇಗಾಲ ರೋಟರಿ ಸಂಸ್ಥೆಯ ಆಧ್ಯಕ್ಷರಾದ ಪುಟ್ಟ ಅರಸಶೆಟ್ಟಿ ಅಧ್ಯಕ್ಷತೆ ವಹಿಸುವರು. ರೋಟರಿ ಸಂಸ್ಥೆ ಕಾರ್ಯದರ್ಶಿಗಳಾದ ಜೋಸೆಫ್ ಅಲೆಗ್ಜಾಂಡರ್ ಅತಿಥಿ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಡಾ. ಬಿ.ಆರ್. ಅಂಬೇಡ್ಕರ್ ಸಹ್ಯಾದ್ರಿ ಯುವಕರ ಸಂಘದ ಅಧ್ಯಕ್ಷರಾದ ಜಯಚಂದ್ರ ಹಾಗೂ ರೋಟರಿ ಸಂಸ್ಥೆ ಸದಸ್ಯರಾದ ಜೆ.ಕುಮಾರಸ್ವಾಮಿ ಪಾಲ್ಗೊಳ್ಳುವರು.
ಜನವರಿ 17 – ಯುವಜನರು ಮತ್ತು ಶಾಂತಿ ದಿನ:-
ಕಾಗಲವಾಡಿಯ ಟಿ.ಎಸ್. ಸುಬ್ಬಣ್ಣ ಸಾರ್ವಜನಿಕ ಪ್ರೌಢಶಾಲೆ ಹಾಗೂ ಹುರುಳಿನಂಜನಪುರದ ಉದಯ್ ಭೀಮ್ ಯುವಜನ ಸಂಘದ ಆಶ್ರಯದಲ್ಲಿ ಜನವರಿ 17ರಂದು ಬೆಳಿಗ್ಗೆ 10 ಗಂಟೆಗೆ ಕಾಗÀಲವಾಡಿಯ ಟಿ.ಎಸ್. ಸುಬ್ಬಣ್ಣ ಸಾರ್ವಜನಿಕ ಪ್ರೌಢಶಾಲೆಯಲ್ಲಿ ಯುವಜನರು ಮತ್ತು ಶಾಂತಿ ದಿನಾಚರಣೆ ಪ್ರಯುಕ್ತ ಕಾಗಲವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಮ್ಮ ಕಾರ್ಯಕ್ರಮ ಉದ್ಘಾಟಿಸುವರು. ಟಿ.ಎಸ್. ಸುಬ್ಬಣ್ಣ ಸಾರ್ವಜನಿಕ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಬಿ. ಮಹದೇವಯ್ಯ ಅಧ್ಯಕ್ಷತೆ ವಹಿಸುವರು. ಕನ್ನಡ ಶಿಕ್ಷಕರಾದ ರವಿ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು. ಮುಖ್ಯ ಅತಿಥಿಗಳಾಗಿ ಕಾಗಲವಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ದೇವಿ, ಟಿ.ಎಸ್. ಸುಬ್ಬಣ್ಣ ಸಾರ್ವಜನಿಕ ಪ್ರೌಢಶಾಲೆಯ ಗಣಿತ ಶಿಕ್ಷಕರಾದ ನಾಗೇಂದ್ರ ಪ್ರಸಾದ್ ಹಾಗೂ ಚಾಮರಾಜನಗರದ ಜಿಲ್ಲಾ ಯುವ ಪ್ರಶಸ್ತಿ ಪುರಸ್ಕøತರಾದ ಮಂಜುನಾಥ ಆಗಮಿಸುವರು.
ಜನವರಿ 18 – ಕೌಶಲ್ಯಾಭಿವೃದ್ಧಿ ದಿನ:-
ಯಳಂದೂರಿನ ಬಿಳಿಗಿರಿ ಪ್ರಥಮದರ್ಜೆ ಕಾಲೇಜು ಹಾಗೂ ಚಂದನ ಮಹಿಳಾ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿ ಜನವರಿ 18ರಂದು ಬೆಳಿಗ್ಗೆ 11 ಗಂಟೆಗೆ ಕೌಶಲ್ಯಾಭಿವೃದ್ಧಿ ದಿನವನ್ನು ಆಚರಿಸಲÁಗುತ್ತಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಕಾರ್ಯದರ್ಶಿಗಳಾದ ವಿ.ಎಂ. ರಾವÀುಚಂದ್ರ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲರಾದ ಎಂ.ವಿ. ಪುಷ್ಟಕುಮಾರ್ ಅಧ್ಯಕ್ಷತೆ ವಹಿಸುವರು. ನಗರದ ಯುವ ಪರಿವರ್ತಕರಾದ ರವಿಕುಮಾರ್ ಅತಿಥಿ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಯಳಂದೂರಿನ ಬಿಳಿಗಿರಿ ರೋವರ್ ಸ್ಕೌಟ್ ಲೀಡರ್ ಡಿ.ವಿ. ಪ್ರಕಾಶ್ ಮೂರ್ತಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಡಿ.ಬಿ. ಶಿವರುದ್ರಪ್ಪ, ಚಂದನ ಮಹಿಳಾ ಅಭಿವೃದ್ಧಿ ಸಂಘದ ತಾಲೂಕು ಸಂಯೋಜಕರಾದ ಸುಂದ್ರಮ್ಮ ಪಾಲ್ಗೊಳ್ಳುವರು.
ಜನವರಿ 19 – ಜಾಗೃತಿ ದಿನ ಹಾಗೂ ಯುವ ಸಪ್ತಾಹ ಸಮಾರೋಪ:-
ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಾದಾಪಟ್ಟಣದ ಚೆನ್ನಬಸವೇಶ್ವರ ಕಲಾ ಬಳಗದ ಸಂಘಟನೆಯೊಂದಿಗೆ ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜನವರಿ 19ರಂದು ಬೆಳಿಗ್ಗೆ 11 ಗಂಟೆಗೆ ಜಾಗೃತಿ ದಿನ ಮತ್ತು ಯುವ ಸಪ್ತಾಹದ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿದೆ.
ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಜಿ. ಮಲ್ಲೇಶ್ ಅಧ್ಯಕ್ಷತೆ ವಹಿಸುವರು. ಕನ್ನಡ ಉಪನ್ಯಾಸಕರಾದ ಗಣೇಶ್ ಅತಿಥಿ ಉಪನ್ಯಾಸಕರಾಗಿ ಭಾಗವಹಿಸುವರು. ಗುಂಡ್ಲುಪೇಟೆ ಸಂಜೀವಿನಿ ಯೋಜನೆ ಸಂಯೋಜಕರಾದ ಸುಬ್ಬಮ್ಮ, ಸಮಷ್ಟಿ ಸಮಗ್ರ ಅಭಿವೃದ್ಧಿ ಟ್ರಸ್ಟ್‍ನ ಕಾರ್ಯನಿರ್ವಾಹಕರಾದ ಗಂಗಾಧರಸ್ವಾಮಿ ಹಾಗೂ ಚಾಮರಾಜನಗರದ ನವಸಮೃದ್ಧಿ ಗ್ರಾಮೀಣಾಭಿವೃದ್ಧಿ ಅಧ್ಯಕ್ಷರಾದ ಕಾಳಿಂಗಸ್ವಾಮಿ ಸಿದ್ದಾರ್ಥ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ನೆಹರು ಯುವ ಕೇಂದ್ರದ ಪ್ರಕಟಣೆ ತಿಳಿಸಿದೆ.
ಜಿಲ್ಲಾ ಮಟ್ಟದ ನಾಟಕ, ಜಾನಪದ ನೃತ್ಯ ಸ್ಪರ್ಧೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜ. 11 ಕನ್ನಡ ಮತ್ತು ಸಂಸ್ಕøತಿ ಇಲಾಖೆಯು 2017-18ನೇ ಸಾಲಿನಲ್ಲಿ ಮೈಸೂರು ವಲಯದ 8 ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ನಾಟಕ ಮತ್ತು ಜಾನಪದ ನೃತ್ಯ ಸ್ಪರ್ಧೆ ಆಯೋಜಿಸಲು ಉದ್ದೇಶಿಸಲಾಗಿದೆ.ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ಕಾಲೇಜಿನ ಪ್ರಾಂಶುಪಾಲರು ಜನವರಿ 22ರ ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.
ನಾಟಕದ ಆಯ್ಕೆ, ನಾಟಕದ ನಿರ್ದೇಶಕರು ಮತ್ತು ಜಾನಪದ ನೃತ್ಯ ಪ್ರಕಾರದ ಆಯ್ಕೆ, ತರಬೇತುದಾರರು ಮುಂತಾದ ವಿವರಗಳನ್ನು ಪರಿಗಣಿಸಿ ಕಾಲೇಜುಗಳನ್ನು ಸ್ಪರ್ಧೆ ಆಯ್ಕೆ ಮಾಡಿ ಸ್ಪಧೆ ನಡೆಯುವ ಸ್ಥಳ. ದಿನಾಂಕವನ್ನು ತಿಳಿಸಲಾಗುವುದು.
ನಾಟಕ ಮತ್ತು ಜಾನಪದ ನೃತ್ಯ ಸ್ಪರ್ಧೆಯ ನಿಯಮಾವಳಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದುಕೊಳ್ಳುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣÉಯಲ್ಲಿ ತಿಳಿಸಿದ್ದಾರÉ.
ಜ. 15ರಂದು ಸುಗ್ಗಿಹುಗ್ಗಿ ಕಾರ್ಯಕ್ರಮ
ಚಾಮರಾಜನಗರ, ಜ. 11 :- ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಕೃಷಿ ಇಲಾಖೆ ಸಹಯೋಗದಲ್ಲಿ ಚಾಮರಾಜನಗರ ತಾಲೂಕು ಕೆಂಪನಪುರದಲ್ಲಿ ಜನವರಿ 15ರಂದು ಸಂಜೆ 4 ಗಂಟೆಗೆ ಸುಗ್ಗಿ ಹುಗ್ಗಿ ಕಾರ್ಯಕ್ರಮ ಆಯೋಜಿಸಿದೆ.ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಎಸ್. ಜಯಣ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮೆರವಣಿಗೆಗೆ ಚಾಲನೆ ನೀಡುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಸಾಧಕರಿಗೆ ಸನ್ಮಾನ ಮಾಡುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು. ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಕೆಂಪನಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ.ಎಂ. ಗುರುಸಿದ್ದಪ್ಪ, ಉಪಾಧ್ಯಕ್ಷರಾದ ತೊಳಸಮ್ಮ ಆಗಮಿಸುವರು.
ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಜ. 12ರಂದು ಕಾನೂನು ಅರಿವು ನೆರವು ಕಾರ್ಯಕ್ರಮ
ಚಾಮರಾಜನಗರ, ಜ. 11 - ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮನೋನಿಧಿ ಇನ್ಸ್‍ಸ್ಟಿಟ್ಯೂಷನ್, ಸಾಧನ ಸಂಸ್ಥೆ ಇವರ ಸಹಯೋಗದಲ್ಲಿ ಜನವರಿ 12ರಂದು ಮಧ್ಯಾಹ್ನ 12 ಗಂಟೆಗೆ ನಗರದ ಹೌಸಿಂಗ್ ಬೋರ್ಡ್‍ನಲ್ಲಿರುವ ಮನೋನೊಧಿ ಇನ್ಸ್‍ಸ್ಟಿಟ್ಯೂಷನ್‍ನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ ಏರ್ಪಡಿಸಿದೆ.ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಪಿ. ನಂದೀಶ್ ಕಾರ್ಯಕ್ರಮ ಉದ್ಘಾಟಿಸುವರು. ಮನೋನಿಧಿ ಇನ್ಸ್‍ಸ್ಟಿಟ್ಯೂಷನ್‍ನ ಕಾರ್ಯದರ್ಶಿ ಶೈಲಜಾ ಕೃಪಾನಿಧಿ ಅಧ್ಯಕ್ಷತೆ ವಹಿಸುವರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಅರ್. ಅರುಣ್ ಕುಮಾರ್ ಹಾಗೂ ಬಾಲ ನ್ಯಾಯ ಮಂಡಳಿ ಸದಸ್ಯರಾದ ಟಿ.ಜಿ. ಸುರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
No comments:
Post a Comment