Tuesday, 16 January 2018

ಮತದಾರರಿಗೆ ಚುನಾವಣಾ ನೊಂದಣಿ ಅರಿವು ಮೂಡಿಸಿ: ಸಿ.ಇ.ಒ,ಕೊಳವೆಬಾವಿ ಕೊರೆಯಲು ಅನುಮತಿ ಕಡ್ಡಾಯ : ಸುರಕ್ಷತಾ ಕ್ರಮಗಳನ್ನು ಪಾಲಿಸಿ - ಜಿಲ್ಲಾಧಿಕಾರಿ ಬಿ. ರಾಮು ಸೂಚನೆ (16-01-2018)


ಮತದಾರರಿಗೆ ಚುನಾವಣಾ ನೊಂದಣಿ ಅರಿವು ಮೂಡಿಸಿ: ಸಿ.ಇ.ಒ

ಚಾಮರಾಜನಗರ, ಜ. 16- 18 ವರ್ಷ ವಯೋಮಿತಿ ದಾಟಿದ ಪ್ರತಿಯೊಬ್ಬ ಮತದಾರರನ್ನು ಜ. 22ರೊಳಗೆ ನೊಂದಾಯಿಸುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ತಿಳಿಸಿದರು.
ಜಿಲ್ಲಾಡಳಿತ ಭವನದಲ್ಲಿರುವ ಜಿ.ಪಂ. ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ಚುನಾವಣಾ ಪೂರ್ವ ಸಭೆಯನ್ನದ್ದೇಶಿಸಿ ಅವರು ಮಾತನಾಡಿದರು.ಚುನಾವಣಾ ಪೂರ್ವ ಸಿದ್ದತೆಯಲ್ಲಿ ಮತದಾರರ ವ್ಯವಸ್ಥಿತ ನೊಂದಣಿ ಮತ್ತು ಚುನಾವಣಾ ಪಾಲ್ಗೊಳ್ಳುವಿಕೆ (Sveeಠಿ) ಅತ್ಯಂತ ಮಹತ್ವದ್ದಾಗಿದೆ. 2018ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ 18 ವರ್ಷ ವಯೋಮಿತಿ ಮೀರಿದವರನ್ನು ಕಡ್ಡಾಯವಾಗಿ ನೊಂದಾಯಿಸಲು ಕ್ರಮವಹಿಸಬೇಕು. ಶಾಲಾ ಕಾಲೇಜಿನ ಮುಖ್ಯಸ್ಥರು ವಿದ್ಯಾರ್ಥಿ ಮತದಾರರ ನೊಂದಾವಣೆಗೆ ನಮೂನೆ 6ನ್ನು ಕಡ್ಡಾಯವಾಗಿ ವಿತರಿಸಿ ಭರ್ತಿಮಾಡಿ ಸಲ್ಲಿಸಬೇಕು ಎಂದರು.ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆಯ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಬಹುಮುಖ್ಯವಾಗಿದೆ. ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಮತ್ತು ಕೃಷಿ ಇಲಾಖೆ ಅಧಿಕಾರಿಗಳು ತಮ್ಮ ಕ್ಷೇತ್ರಮಟ್ಟದ ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡಿ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲು ಕ್ರಮವಹಿಸುವಂತೆ ತಿಳಿಸಿದರು.ಮಹಿಳೆಯರು, ವಿಕಲಚೇತನರು, ಹೆಚ್.ಐ.ವಿ ಪೀಡಿತರು, ಲಿಂಗತ್ವ ಅಲ್ಪಸಂಖ್ಯಾತರುಗಳನ್ನು ಭೇಟಿ ಮಾಡಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು. ಈ ನಿಟ್ಟನಲ್ಲಿ ಕ್ಷೇತ್ರಮಟ್ಟದ ಶಿಕ್ಷಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಂಡು ಅರಿವು ಮೂಡಿಸುವ ಕೆಲಸವಾಗಬೇಕು. ಜಿಲ್ಲೆಯಾದ್ಯಂತ ಜ. 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಕಡ್ಡಾಯವಾಗಿ ಕ್ಷೇತ್ರಮಟ್ಟದಲ್ಲಿ ಆಯೋಜಿಸುವಂತೆ ಸೂಚನೆರ ನೀಡಿದರು.ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸಂಘ ಸಂಸ್ಥೆಯವರು ಮತ್ತು ಪಂಚಾಯತ್ ಅಬಿವೃದ್ಧಿ ಅಧಿಕಾರಿಗಳು 18 ವರ್ಷ ಮೀರಿದ ಯುವ ಮತದಾರರ ಹೆಸರನ್ನು ಸೇರ್ಪಡೆಗೊಳಿಸಲು ಗ್ರಾಮಗಳಲ್ಲಿ ಟಾಂ ಟಾಂ ಪ್ರಚಾರ ನೀಡಬೇಕು ಇದಕ್ಕಾಗಿ ಹೊಸ ಮತದಾರರ ನೊಂದಣಿ ದಿನಾಂಕವನ್ನು ಚುನಾವಣಾ ಆಯೋಗವು ಜ. 12ರಿಂದ ಜ. 22 ರವರೆಗೆ ವಿಸ್ತರಿಸಿದೆ ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು ನೊಂದಣಿ ಸಮಯದಲ್ಲಿ ವಿಕಲಚೇತನರಿಗೆ ಸೂಕ್ತ ವ್ಯವಸ್ತೆ ಕಲ್ಪಿಸಬೇಕು. ಗುಡ್ಡಗಾಡು ಪ್ರದೇಶದ ನಿವಾಸಿಗಳಿಗೆ ಸೂಕ್ತ ಮಾಹಿತಿ ನೀಡಿ ನೊಂದಣಿಯಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಬೇಕು. ನಮೂನೆ 6ರಲ್ಲಿ ಹೊಸದಾಗಿ ನೊಂದಣಿ ಮಾಡುವುದು, ನಮೂನೆ 6(ಎ) ವಿದೇಶದಲ್ಲಿ ನಾಗರೀಕತ್ವ, ನಮೂನೆ 7 ರಲ್ಲಿ ಮರಣ ಹಾಗೂ ಮದುವೆಯಾಗಿ ಹೊರಹೋಗಿರುವವರನ್ನು ರದ್ದು ಮಾಡುವುದು, ನಮೂನೆ 8 ರಲ್ಲಿ ವರ್ಗಾವಣೆ ಮಾಡುವುದು, ನಮೂನೆ 8(ಎ) ನಲ್ಲಿ ಹೆಸರು ಮತ್ತು ಇತರೆ ತಿದ್ದುಪಡಿಗೆ ಅವಕಾಶ ಕಲ್ಪಿಸುವುದನ್ನು ತ್ವರಿತವಾಗಿ ಮಾಡಬೇಕಾಗಿದೆ ಎಂದು ಹರೀಶ್‍ಕುಮಾರ್ ಅವರು ತಿಳಿಸಿದರು.ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ. ಜಿಲ್ಲಾ ಆರೋಗ್ಯಾಧಿಕಾರಿ ಹಾಗು ಇತರೆ ಸಿಬ್ಬಂದಿಗಳು ಸಭೆಯಲ್ಲಿ ಹಾಜರಿದ್ದರು.


ಕೊಳವೆಬಾವಿ ಕೊರೆಯಲು ಅನುಮತಿ ಕಡ್ಡಾಯ : ಸುರಕ್ಷತಾ ಕ್ರಮಗಳನ್ನು ಪಾಲಿಸಿ - ಜಿಲ್ಲಾಧಿಕಾರಿ ಬಿ. ರಾಮು ಸೂಚನೆ

ಚಾಮರಾಜನಗರ, ಜ. 16: ಜಿಲ್ಲೆಯಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು 15 ದಿನ ಮುಂಚಿತವಾಗಿಯೇ ಸಂಬಂಧಪಟ್ಟ ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳಿಗೆ ಅರ್ಜಿ ಸಲ್ಲಿಸಿ ಕಡ್ಡಾಯವಾಗಿ ನಿರಾಕ್ಷೇಪಣಾ ಪತ್ರ ಪಡೆಯಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದ್ದಾರೆ.
ಜಮೀನು ಮಾಲೀಕರು, ಬೋರ್‍ವೆಲ್ ಕೊರೆಯುವವರು 15 ದಿನ ಮುಂಚಿತವಾಗಿಯೇ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಆಯುಕ್ತರು ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿ ನಿರಾಪೇಕ್ಷಣಾ ಪತ್ರ ಪಡೆದುಕೊಳ್ಳಬೆಕು. ಅಧಿಸೂಚಿತ ಪ್ರದೇಶದಲ್ಲಿ ಕೊಳವೆಬಾವಿ ಕೊರೆಯುವ ಮೊದಲು ಜಿಲ್ಲಾಮಟ್ಟದ ಕರ್ನಾಟಕ ಅಂತರ್ಜಲ ಪ್ರಾಧಿಕಾರದ ಅನುಷ್ಠಾನ ಸಮಿತಿಯ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
ಖಾಸಗಿ ಬೋರ್ ವೆಲ್ ಪಡೆಯಬೇಕಾದಲ್ಲಿ ಕರ್ನಾಟಕ ಅಂತರ್ಜಲ ಸಂರಕ್ಷಣಾ ಕಾಯಿದೆ ಪ್ರಕಾರ ಸಾರ್ವಜನಿಕ ಕೊಳವೆ ಬಾವಿ, ತೆರೆದ ಬಾವಿಯಿಂದ 500 ಮೀ. ಅಂತರದಲ್ಲಿ ಯಾವುದೇ ರೀತಿಯ ಇನ್ನೊಂದು ಬಾವಿ ಕೊರೆಯುವಂತಿಲ್ಲ. ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011ರಂತೆ ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೊಂದಣಿಯಾಗಿ ನಮೂನೆ 7ಎ ಹೊಂದಿರುವ ರಿಗ್ ವಾಹನಗಳಿಂದ ಮಾತ್ರ ಕೊಳವೆ ಬಾವಿಗಳನ್ನು ಕೊರೆಸಬೇಕು. ಬೋರ್ ವೆಲ್ ಕೊರೆಯುವಾಗ ಸ್ಥಳದಲ್ಲಿ ರಿಗ್ ಮಾಲೀಕರು  ಹಾಗೂ ಕೊರೆಸುವವರ ಹೆಸರು ಇರುವ ನಾಮಫಲಕಗಳನ್ನು ಹಾಕಬೇಕು.
ಸಫಲ ಅಥವಾ ವಿಫಲ ಕೊಳವೆ ಬಾವಿಗಳಿಗೆ ಕೇಸಿಂಗ್ ಅಳವಡಿಸಿ ಸುತ್ತ ಕಾಂಕ್ರೀಟ್ ಪ್ಲಾಟ್ ಫಾರಂ ನಿರ್ಮಿಸಿ ಪೈಪ್‍ಗೆ ಭದ್ರವಾಗಿ ಕ್ಯಾಪ್ ಹಾಕಿ ವೆಲ್ಡಿಂಗ್ ಮಾಡಿಸಬೇಕು. ಒಂದುವೇಳೆ ಕೊಳವೆ ಬಾವಿಗಳನ್ನು ಸುರಕ್ಷಿತವಾಗಿ ಮುಚ್ಚದೇ ಇದ್ದು ಯಾವುದೇ ಅನಾಹುತ ಸಂಭವಿಸಿದಲ್ಲಿ ಬೋರ್‍ವೆಲ್ ಕೊರೆದ ಸಂಸ್ಥೆ ಹಾಗೂ ಜಮೀನಿನ ಮಾಲೀಕರೇ ನೇರ ಹೊಣೆಗಾರರಾಗುತ್ತಾರೆ. ಸುರಕ್ಷತೆ ವಹಿಸದೇ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ವೈಫಲ್ಯ ಕಂಡುಬಂದಲ್ಲಿ ಜಿಲ್ಲಾಡಳಿತದಿಂದ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ.
ರಿಗ್ ಮಾಲೀಕರು ಏಜೆನ್ಸಿಯವರು ಕೊಳವೆ ಬಾವಿ ಕೊರೆಯುವ ಕಾರ್ಯ ಮುಕ್ತಾಯವಾದ ಕೂಡಲೇ ನಮೂನೆ 1 ಸಿಯಲ್ಲಿ ವಿವರಗಳನ್ನು ಸಂಬಂಧಪಟ್ಟ ಗ್ರಾಮ ಪಂಚಾಯತ್, ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ ಅಧಿಕಾರಿಗಳಿಗೆ ಹಾಗೂ ಅಧಿನಿಯಮದ ಪ್ರಕಾರ ಪ್ರಾಧಿಕಾರಕ್ಕೆ ಸಲ್ಲಿಸಬೇಕು.
ಗ್ರಾಮಾಂತರ ಪ್ರದೇಶದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಕಾರ್ವನಿರ್ವಾಹಕ ಅಧಿಕಾರಿಗಳು, ನಗರ ಪಟ್ಟಣ ಪ್ರದೇಶದಲ್ಲಿ ಕಿರಿಯ ಎಂಜಿನಿಯರ್, ಅನುಷ್ಠಾನ ಅಧಿಕಾರಿಗಳು ಮೇಲ್ವಿಚಾರಕರಾಗಿ ಇರುತ್ತಾರೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 17ರಂದÀು ಜಿ.ಪಂ. ಕೆಡಿಪಿ ಸಭೆ 

ಚಾಮರಾಜನಗರ, ಜ. 16 - ಚಾಮರಾಜನಗರ ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆಯನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಜನವರಿ 17ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಜ. 18ರಂದು ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಾಗಾರ ಉದ್ಘಾಟನಾ ಸಮಾರಂಭ

ಚಾಮರಾಜನಗರ, ಜ. 16 - ಜಿಲ್ಲಾ ಪಂಚಾಯತ್‍ನ ಕೈಮಗ್ಗ ಮತ್ತು ಜವಳಿ ಇಲಾಖೆಯು ಕೊಳ್ಳೇಗಾಲದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಜನವರಿ 18ರಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರದ ನೂತನ ಜವಳಿ ನೀತಿ ಹಾಗೂ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಒಂದು ದಿನದ ಕಾರ್ಯಾಗಾರ ಹಮ್ಮಿಕೊಂಡಿದೆ.
ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಸಮಾರಂಭ ಉದ್ಘಾಟಿಸುವರು. ಶಾಸಕರಾದ ಎಸ್. ಜಯಣ್ಣ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಎಸ್. ಜಯಣ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ್, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ಜಿಲ್ಲಾ  ಪಂಚಾಯತ್ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ಕೊಳ್ಳೇಗಾನ ನಗರಸಭೆ ಅಧ್ಯಕ್ಷರಾದ ಶಾಂತರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಆರ್. ರಾಜು, ನಗರಸಭೆ ಉಪಾಧ್ಯಕ್ಷರಾದ ಶಿವಾನಂದ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಲತಾ ರಾಜಣ್ಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಜವಳಿ ಅಭಿವೃದ್ಧಿ ಆಯುಕ್ತರಾದ ಆರ್. ಗಿರೀಶ್, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜವಳಿ ಅಭಿವೃದ್ಧಿ ಆಯುಕ್ತರ ಪತ್ರಾಂಕಿತ ಸಹಾಯಕರಾದ ವಿಜಯಕುಮಾರ್ ಬಿ. ನಿರಾಳೆ, ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿನಿರ್ದೇಶಕರಾದ ಎಸ್. ಪ್ರಕಾಶ್, ಎ. ಸುರೇಶ್ ಕುಮಾರ್ ಪಾಲ್ಗೊಳ್ಳುವರು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 19ರಂದು ಚಾ.ನಗರ ತಾಲೂಕು ಮಟ್ಟದ ಯುವಜನ ಮೇಳ 

ಚಾಮರಾಜನಗರ, ಜ. 16 :- ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಸವಾಪುರದ ಗೌತಮಬುದ್ಧ ಸಾಂಸ್ಕøತಿಕ ಕಲಾ ಮತ್ತು ಕ್ರೀಡಾ ಯುವಜನ ಸಂಘ ಮತ್ತು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರುಗಳ ವತಿಯಿಂದ ಚಾಮರಾಜನಗರ ತಾಲೂಕು ಮಟ್ಟದ ಯುವಜನ ಮೇಳವನ್ನು ಜನವರಿ 19ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅಧ್ಯಕ್ಷತೆ ವಹಿಸುವರು.
ನಗರಸಭೆ ಅಧ್ಯಕ್ಷರಾದ ಶೋಭ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ದಯಾನಿಧಿ, ಚಂದಕವಾಡಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಆರ್. ಬಾಲರಾಜು, ಮಾದಾಪುರ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎಸ್. ಬಾಲರಾಜು, ಅಮಚವಾಡಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಲಾ, ಉಡಿಗಾಲ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ. ಚಂದ್ರಕಲಾ ಚಂದ್ರಶೇಖರ್, ಸಂತೆಮರಹಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಶೀಲಾ ಹಾಗೂ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಚ್.ಎಸ್. ಪ್ರೇಮಲತಾ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಾರ್ಯಕ್ರಮದ ಅಂಗವಾಗಿ ಭಾವಗೀತೆ, ರಂಗಗೀತೆ, ಏಕಪಾತ್ರಾಭಿನಯ, ಲಾವಣಿ, ಜಾನಪದ ನೃತ್ಯ, ಕೋಲಾಟ, ಭಜನೆ, ಸೋಬಾನೆ ಪದ, ರಾಗಿ ಬೀಸುವ ಕಲ್ಲಿನ ಪದ ಹಾಗೂ ಚರ್ಮವಾದ್ಯ ಮೇಳ ಸ್ಪರ್ಧೆಗಳು ನಡೆಯಲಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಎಂ ಚಲುವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಲಚೇತನರ ರಿಯಾಯಿತಿ ಬಸ್‍ಪಾಸ್ ನವೀಕರಣೆ 

ಚಾಮರಾಜನಗರ, ಜ. 16:- ಚಾಮರಾಜನಗರ ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಜಿಲ್ಲೆಯ ತಾಲೂಕುಗಳಲ್ಲಿನ ವಿಕಲಚೇತನ ಫಲಾನುಭವಿಗಳಿಗೆ 2018ನೇ ಸಾಲಿಗೆ ರಿಯಾಯಿತಿ ದರದ ಬಸ್ ಪಾಸುಗಳನ್ನು ನವೀಕರಿಸುವ ಸಂಬಂಧü ಆಯಾ ತಾಲೂಕುಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕ್ರಮ ಕೈಗೊಳ್ಳಲಿದೆ. ಮಾನ್ಯತೆ ಇರುವ 31.12.2017ರ ಬಸ್ ಪಾಸುಗಳನ್ನು ಫೆಬ್ರವರಿ 28ರವರೆಗೆ ಮಾತ್ರ ಪರಿಗಣಿಸಲಾಗುವುದು.
ಚಾಮರಾಜನಗರ ತಾಲೂಕಿನ ವಿಕಲಚೇತನರಿಗೆ ಜನವರಿ 18 ರಿಂದ 20ರವರೆಗೆ ನಗರದ ಬಸ್ ನಿಲ್ದಾಣದಲ್ಲಿ, ಗುಂಡ್ಲುಪೇಟೆ ತಾಲೂಕಿನವರಿಗೆ ಜನವರಿ 22 ಹಾಗೂ 23ರಂದು ಗುಂಡ್ಲುಪೇಟೆ ಬಸ್ ನಿಲ್ದಾಣದಲ್ಲಿ, ಕೊಳ್ಳೇಗಾಲ ಹಾಗೂ ಯಳಂದೂರಿನವರಿಗೆ ಜನವರಿ 25 ರಿಂದ 27ರವರೆಗೆ ಕೊಳ್ಳೇಗಾಲ ಘಟಕದಲ್ಲಿ ಹಾಗೂ ನಂಜನಗೂಡು ವಿಕಲಚೇತನರಿಗೆ ಜನವರಿ 29 ರಿಂದ 31ರವರೆಗೆ ನಂಜನಗೂಡು ಘಟಕದಲ್ಲಿ ನವೀಕರಿಸಲಾಗುವುದು.
ನವೀಕರಣಕ್ಕೆ ಇಚ್ಚಿಸುವವರು 2017ನೇ ಸಾಲಿನಲ್ಲಿ ಪಡೆದಿರುವ ಬಸ್ ಪಾಸ್, ಅಂಗವಿಕಲರ ಗುರುತಿನ ಚೀಟಿ ಹಾಗೂ ನಕಲು ಪ್ರತಿ, ಆಧಾರ್ ಕಾರ್ಡ್ ನಕಲು ಪ್ರತಿ, ಇತ್ತೀಚಿನ 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಪಾಸ್ ದರ  660 ರೂ.ಗಳನ್ನು ಪಾವತಿಸಬೇಕು.
ತಾಲೂಕು ಕೇಂದ್ರಗಳಲ್ಲಿ ಆಯಾ ದಿನದಂದು ಫಲಾನುಭವಿಗಳು ಖುದ್ದು ಹಾಜರಿದ್ದು ಬಸ್ ಪಾಸ್‍ಗಳನ್ನು ನವೀಕರಿಸಿಕೊಳ್ಳಬೇಕು. ಫೆಬ್ರವರಿ 28ರ ನಂತರ ಯಾವುದೇ ವಿಕಲಚೇತನರ ಬಸ್ ಪಾಸ್‍ಗಳನ್ನು ನವೀಕರಿಸಲು ಅವಕಾಶವಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 17ರಂದು ಚಾ.ನಗರ ಸಭೆ ಸಾಮಾನ್ಯ ಸಭೆ

ಚಾಮರಾಜನಗರ, ಜ. 16 - ಚಾಮರಾಜನಗರ ನಗರಸಭೆಯ ಸಾಮಾನ್ಯ ಸಭೆಯು ಜನವರಿ 17ರಂದು ಮಧ್ಯಾಹ್ನ 3 ಗಂಟೆಗೆ ನಗರಸಭೆ ಕಚೇರಿ ಸಭಾಂಗಣದಲ್ಲಿ ನಗರಸಭಾ ಅಧ್ಯಕ್ಷರಾದ ಶೋಭಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 24ರಂದು ಪ.ಜಾ, ಪ.ಪಂಗಡವರಿಗೆ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿಗೆ ನೇರ ಆಯ್ಕೆ

ಚಾಮರಾಜನಗರ, ಜ. 16- ಮೈಸೂರಿನಲ್ಲಿರುವ ಕೇಂದ್ರೀಯ ಪ್ಲಾಸ್ಟಿಕ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯು ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸೇರಿದ ನಿರುದ್ಯೋಗಿ ಯುವಕ ಯುವತಿಯರಿಗೆ ಬೇಸಿಕ್ ಕಂಪ್ಯೂಟರ್, ಸ್ಪೋಕನ್ ಇಂಗ್ಲೀಷ್ ಮತ್ತು ವಿವಿಧ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿಗೆ ಜನವರಿ 24ರಂದು ನೇರ ಆಯ್ಕೆ ನಡೆಸಲಿದೆ.
ತರಬೇತಿ 6 ತಿಂಗಳದಾಗಿದ್ದು ಉಚಿತ ಊಟ, ವಸತಿ ಹಾಗೂ ಮಾಸಿಕ 500 ರೂ.ಗಳ ಶಿಷ್ಯ ವೇತನ ನೀಡಲಿದೆ. 18 ರಿಂದ 35ರ ವಯೋಮಿತಿಯ ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ, ಐಟಿಐ, ಡಿಪ್ಲೊಮಾ ಪದವಿ ಅಭ್ಯರ್ಥಿಗಳು ಅರ್ಹರು.
ಹೆಚ್ಚಿನ ಮಾಹಿತಿಗೆ ಮೈಸೂರಿನ ಹೆಬ್ಬಾಳದ ಕೈಗಾರಿಕಾ ಕೇಂದ್ರಲ್ಲಿರುವ ಸಿಪೆಟ್ (ದೂ.ಸಂಖ್ಯೆ 0821-2510681, ಮೊಬೈಲ್ 9632688884) ಸಂಪರ್ಕಿಸುವಂತೆ ಸಿಪೆಟ್ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮ : ಶಾಲಾ ಮುಖ್ಯಸ್ಥರಿಂದ ಅರ್ಜಿ ಆಹ್ವಾನ

ಚಾಮರಾಜನಗರ, ಜ. 16:- ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ ನನ್ನ ನೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸುವ ಯೋಜನೆಯನ್ನು ಹಮ್ಮಿಕೊಂಡಿದೆ.
ಯೋಜನೆಯಡಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳು ಶಾಲೆಗಳಲ್ಲಿ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಬಹುದಾಗಿದೆ. ಕಾರ್ಯಕ್ರಮಕ್ಕೆ ಪ್ರಾಧಿಕಾರವು 5000 ರೂ.ಗಳ ಗರಿಷ್ಟ ಮಿತಿಯೊಂದಿಗೆ ವಾಸ್ತವಿಕ ವೆಚ್ಚ ಭರಿಸಲಿದೆ.
ಕಾರ್ಯಕ್ರಮದ ದಿನಾಂಕ, ಆಹ್ವಾನಿಸುವ ಇಬ್ಬರು ತೀರ್ಪುಗಾರರ ಹೆಸರು, ಇತ್ಯಾದಿ ವಿವರಗಳೊಂದಿಗೆ ಆಯಾ ಶಾಲಾ ಮುಖ್ಯಸ್ಥರು ಜನವರಿ 20ರೊಳಗೆ ಸ್ವಯಂ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮದ ಮುನ್ನ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ.
ಅರ್ಜಿಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 (ದೂ.ಸಂ. 080-22484516, 22107704) ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರನ್ನು ಅಥವಾ ಪ್ರಾಧಿಕಾರದ ವೆಬ್ ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಞಚಿಞಚಿಠಿಡಿಚಿಜhiಞಚಿಡಿಚಿ.ಛಿom ಸಂಪರ್ಕಿಸುವಂತೆ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು