Tuesday, 23 January 2018

ಶಿಕ್ಷಕರ ಕ್ಷೇತ್ರದ ಮತದಾರರ ತಿದ್ದುಪಡಿ ಪಟ್ಟಿ ಪ್ರಕಟ : ಪರಿಶೀಲನೆಗೆ ಲಭ್ಯ (23-01-2018)


ಶಿಕ್ಷಕರ ಕ್ಷೇತ್ರದ ಮತದಾರರ ತಿದ್ದುಪಡಿ ಪಟ್ಟಿ ಪ್ರಕಟ : ಪರಿಶೀಲನೆಗೆ ಲಭ್ಯ

ಚಾಮರಾಜನಗರ, ಜ. 23:- ಮತದಾರರ ನೋಂದಣಿ ನಿಯಮಾವಳಿಗಳ ಅನುಸಾರವಾಗಿ 1.11.2017ರ ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿಗೆ ತಿದ್ದುಪಡಿಗಳ ಪಟ್ಟಿ ಸಿದ್ಧಪಡಿಸಿರುವುದನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದ್ದು ಪರಿಶೀಲನೆಗೆ ಲಭ್ಯವಿದೆ.
ಸದರಿ ಮತದಾರರ ಪಟ್ಟಿಯ ಒಂದು ಪ್ರತಿಯನ್ನು ತಿದ್ದುಪಡಿಯ ಪಟ್ಟಿಯೊಂದಿಗೆ ಪ್ರಕಟಿಸಲಾಗಿದೆ. ಈ ಪಟ್ಟಿಯು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯೂ ಆಗಿರುವ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ತಾಲೂಕು ತಹಸೀಲ್ದಾರ್‍ಗಳ ಕಚೇರಿ ಮತ್ತು ಮೈಸೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಪರಿಶೀಲನೆಗಾಗಿ ದೊರೆಯುತ್ತದೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 24ರಂದು ನಗರದಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತಿ

ಚಾಮರಾಜನಗರ, ಜ. 23:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು ಜನವರಿ 24ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಉದ್ಘಾಟನೆ ನೆರವೇರಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಹಾಯೋಗಿ ವೇಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧÀ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ನಾಗಮಂಗಲದ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಗಂಗಾರಾಮ್ ಚಂಡಾಳ ಅವರು ವಿಶೇಷ ಉಪನ್ಯಾಸ ನೀಡುವರು. ಗುಂಡ್ಲುಪೇಟೆ ತಾಲೂಕು ಅಗತಗೌಡನಹಳ್ಳಿಯ ಬಿ. ರಾಜೇಂದ್ರ ಮತ್ತು ಸಂಗಡಿಗರು ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಡುವರೆಂದು ಪ್ರಕಟಣೆ ತಿಳಿಸಿದೆ.

ಜ. 25ರಂದು ರಾಷ್ಟ್ರೀಯ ಮತದಾರರ ದಿನ ಆಚರಣೆ

ಚಾಮರಾಜನಗರ, ಜ. 23 :- ಚುನಾವಣಾ ಆಯೋಗ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ರಾಷ್ಟ್ರೀಯ ಮತದಾರರ ದಿನ ಆಚರಣೆಯನ್ನು ಜನವರಿ 25ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಜೆ. ನಾಗರತ್ನ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಬಿ. ರಾಮು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಇಂದುಶೇಖರ್ ಉಮ್ಮತ್ತೂರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಸಿ. ಬಸವರಾಜು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ಜ. 27ರಂದು ನಗರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ

ಚಾಮರಾಜನಗರ, ಜ. 23 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿಯನ್ನು ಜನವರಿ 27ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧÀ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರಿನ ಮಾನಸ ಗಂಗೋತ್ರಿಯ ಇತಿಹಾಸ ವಿಭಾಗದ ಪ್ರೊಫೆಸರ್ ಮತ್ತು ಛೇರ್‍ಮನ್‍ರಾದ ಡಾ. ವೈ.ಎಚ್. ನಾಯಕ್‍ವಾಡಿ ಅವರು ವಿಶೇಷ ಉಪನ್ಯಾಸ ನೀಡುವರು. ಮೈಸೂರಿನ ಸಿ.ಎಂ. ಮಹದೇವ ಮತ್ತು ತಂಡದವರು ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಡುವರೆಂದು ಪ್ರಕಟಣೆ ತಿಳಿಸಿದೆ.


No comments:

Post a Comment

ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು