Friday, 26 January 2018

26-01-2018 69 ನೇ ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಸಶಸ್ತ್ರ ಪೊಲೀಸ್ ಕೇಂದ್ರಸ್ಥಾನದಲ್ಲಿ ರಕ್ತದಾನ ಶಿಬಿರ

     

ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತವಾರಿ ಸಚಿವರಿಂದ ಚಾಲನೆ

ಚಾಮರಾಜನಗರ, ಜ. 26 - ತಾಲ್ಲೂಕಿನಲ್ಲಿ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರಕ್ಕೆ ಒಳಪಡುವ ವಿವಿಧ ಗ್ರಾಮಗಳಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಸಕ್ಕರೆ ಸಣ್ಣ ಕೃಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಎಂ.ಸಿ ಮೋಹನ ಕುಮಾರಿ( ಗೀತಾ ಮಹದೇವಪ್ರಸಾದ್) ಅವರು ಇಂದು ಗುದ್ದಲಿ ಪೂಜೆ ನೆರವೇರಿಸಿದರು. 
ತಾಲ್ಲೂಕಿನ ಹಳೇಪುರ, ಹರವೆ, ಹೊಸಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಇಂದು ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಉಸ್ತುವಾರಿ ಸಚಿವರು ಚಾಲನೆ ನೀಡಿದರು.


ಹೊಸಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರಾದ ಗೀತಾ ಮಹದೇವಪ್ರಸಾದ್ ರವರು ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಹೊಸದಾಗಿ 77 ರಸ್ತೆ ಕಾಮಗಾರಿಗಳನ್ನು  ಕೈಗೆತ್ತಿಕೊಳ್ಳಲಾಗುತ್ತಿದೆ. ಗುರುವಾರ 17 ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಇಂದು 7 ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
ಎಲ್ಲಾ ರಸ್ತೆ ಕಾಮಗಾರಿಯು ಇನ್ನು ಒಂದುವರೆ ತಿಂಗಳಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ. ಕಾಮಗಾರಿಯು ಗುಣಮಟ್ಟದಿಂದ ಇರಬೇಕು. ಕಾಮಗಾರಿ ನಿರ್ವಹಣೆಯಲ್ಲಿ ಯಾವುದೇ ಲೋಪವನ್ನು ಸಹಿಸಲಾಗುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ಆಯಾ  ಗ್ರಾಮಗಳಲ್ಲಿ ಅಭಿವೃದ್ದಿ ಕಾಮಗಾರಿ ನಡೆದಾಗ ಸ್ಥಳೀಯರು ಕಾಮಗಾರಿ ಗುಣಮಟ್ಟ ಸರಿಯಾಗಿದಯೆ ಎಂದು ಪರಿಶೀಲಿಸಬೇಕು. ಉತ್ತಮ ಕಾಮಗಾರಿ ನಿರ್ವಹಣೆಯಾಗಲು ನಿಗಾ ವಹಿಸಿ ತಿಳಿಸಬೇಕು ಎಂದು ಉಸ್ತುವಾರಿ ಸಚಿವರು ತಿಳಿಸಿದರು. 
ಉಸ್ತುವಾರಿ ಸಚಿವರಾಗಿದ್ದ ಮಹದೇವಪ್ರಸಾದ್ ಅವರ ಅವಧಿಯಲ್ಲಿ ಪ್ರಾರಂಭಗೊಂಡಿರುವ ಕೆಲಸಗಳನ್ನು ತಾವು ಪೂರ್ಣಗೊಳಿಸಲು ಬಧ್ಧರಾಗಿರುವುದಾಗಿ ತಿಳಿಸಿದ ಉಸ್ತುವಾರಿ ಸಚಿವರು ಕುಡಿಯುವ ನೀರು ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ. ಕೆರೆ ತುಂಬಿಸುವ ಕಾಮಗಾರಿ ಸಹ ಪ್ರಗತಿಯಲ್ಲಿದೆ ಎಂದರು. 
ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ ಚಂದ್ರು, ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಸ್ಥಳಿಯ ಜನಪ್ರತಿನಿಧಿಗಳಾದ ಶೋಭ, ರೇವಣ್ಣ, ಸ್ವಾಮಿ, ಹರವೆ ಆನಂದ್, ಇತರರು ಕಾರ್ಯಕ್ರದಲ್ಲಿ ಉಪಸ್ಥಿತರಿದ್ದರು.

ಜ. 27ರಂದು ನಗರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ
ಚಾಮರಾಜನಗರ, ಜ. 26  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿಯನ್ನು ಜನವರಿ 27 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಸಭೆ ಅಧÀ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರಿನ ಮಾನಸ ಗಂಗೋತ್ರಿಯ ಇತಿಹಾಸ ವಿಭಾಗದ ಪ್ರೊಫೆಸರ್ ಮತ್ತು ಛೇರ್‍ಮನ್‍ರಾದ ಡಾ. ವೈ.ಎಚ್. ನಾಯಕ್‍ವಾಡಿ ಅವರು ವಿಶೇಷ ಉಪನ್ಯಾಸ ನೀಡುವರು. ಮೈಸೂರಿನ ಸಿ.ಎಂ. ಮಹದೇವ ಮತ್ತು ತಂಡದವರು ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಡುವರೆಂದು ಪ್ರಕಟಣೆ ತಿಳಿಸಿದೆ.

     

ಜ. 27ರಂದು ನೇರ ಫೋನ್ ಇನ್ ಕಾರ್ಯಕ್ರಮ

ಚಾಮರಾಜನಗರ, ಜ. 26 - ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಜನವರಿ 27ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ




69 ನೇ ಗಣರಾಜ್ಯೋತ್ಸವದ ಪ್ರಯುಕ್ತ ದಿನಾಂಕ:26-01-2018 ರಂದು ಚಾಮರಾಜನಗರ ಜಿಲ್ಲಾ ಪೊಲೀಸ್, ರಕ್ತನಿಧಿ ಕೇಂದ್ರ ಸರ್ಕಾರಿ ಆಸ್ಪತ್ರೆ ಚಾಮರಾಜನಗರ ಹಾಗೂ ರೋಟರಿ ಸಿಲ್ಕ್‍ಸಿಟಿ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಜಿಲ್ಲಾ ಸಶಸ್ತ್ರ ಪೊಲೀಸ್ ಕೇಂದ್ರಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದು ಒಟ್ಟು 23 ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ರಕ್ತದಾನ ಮಾಡಿರುತ್ತಾರೆ. ಭಗವಾನ್ ಮಹವೀರ ದರ್ಶನ್ ಕಣ್ಣಿನ ಆಸ್ಪತ್ರೆ ಮೈಸೂರು, ರವರ ವತಿಯಿಂದ ನೇತ್ರ ತಪಾಸಣೆÉಯನ್ನು ಏರ್ಪಡಿಸಲಾಗಿದ್ದು ಒಟ್ಟು 117 ಪೊಲೀಸ್ ಕುಟುಂಬದ ಸದಸ್ಯರು ತಪಾಸಣೆ ಮಾಡಿಸಿರುತ್ತಾರೆ. ಇದರಲ್ಲಿ 10 ಜನ ಸಿಬ್ಬಂದಿಯವರುಗಳಿಗೆ ನೇತ್ರ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಸಲಹೆ ನೀಡಲಾಗಿರುತ್ತದೆ ಹಾಗೂ ಜೆ.ಎಸ್.ಎಸ್ ಆಸ್ಪತ್ರೆ ಚಾಮರಾಜನಗರ, ರವರ ವತಿಯಿಂದ ಸಾಮಾನ್ಯ ಆರೋಗ್ಯ ತಪಾಸಣೆಯನ್ನು ಕೈಗೊಳ್ಳಲಾಗಿದ್ದು ಇದರಲ್ಲಿ 105 ಪೊಲೀಸ್ ಕುಟುಂಬದ ಸದಸ್ಯರು ತಪಾಸಣೆ ಮಾಡಿಸಿರುತ್ತಾರೆ. ಮಾನ್ಯ ಪೊಲೀಸ್ ಅಧೀಕ್ಷಕರು, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಸದರಿ ಕಾರ್ಯಕ್ರಮದಲ್ಲಿ ಭೇಟಿ ನೀಡಿ ಮೆಚ್ಚುಗೆಯನ್ನು ವ್ಯಕ್ತ ಪಡಿಸಿರುತ್ತಾರೆ.  








No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು