Sunday, 28 January 2018

ಮೊದಲ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕರಿಂದ ಚಾಲನೆ (28-1-2018)

   

ಮೊದಲ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕರಿಂದ ಚಾಲನೆ


ಚಾಮರಾಜನಗರ, ಜ. 28- ಮಗುವಿನ ಬಾಯಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ನಗರದಲ್ಲಿಂದು ಮೊದಲ ಸುತ್ತಿನ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದ ಮುಖ್ಯ ದ್ವಾರದ ಒಳ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಪಲ್ಸ್ ಪೋಲಿಯೋ ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಮೊದಲ ಹಂತದ ಲಸಿಕಾ ಕಾರ್ಯಕ್ರಮ ಇಂದು ದೇಶಾದ್ಯಂತ ಆರಂಭವಾಗಿದೆ ಎಂದರು.
ಜಿಲ್ಲೆಯಲ್ಲಿಯೂ ಸಹ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಜನವರಿ 28 ಮತ್ತು ಮಾರ್ಚ್ 11ರಂದು ಎರಡು ಹಂತಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಆಗತಾನೆ ಹುಟ್ಟಿದ ಮಗುವಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಬೇಕು. ಆರೋಗ್ಯ ಕಾರ್ಯಕರ್ತರು, ಪೋಷಕರು ಯಾವ ಮಗುವು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರು ಶ್ರಮಿಸಬೇಕು ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು.
ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಅವರು ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣಕ್ಕಾಗಿ 15 ವರ್ಷಗಳಿಂದಿಚೆಗೆ ನಿರಂತರವಾಗಿ ಪಲ್ಸ್ ಪೋಲಿಯೋ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಪೋಲಿಯೋ ಪ್ರಕರಣ ಕಂಡುಬಂದಿಲ್ಲ. ಈ ನಿಟ್ಟಿನಲ್ಲಿ ಪೋಲಿಯೋ ವೈರಸ್‍ನ್ನು ನಿಯಂತ್ರಿಸಲಾಗಿದೆ ಎಂದರು.
ಈ ಬಾರಿ ಜಿಲ್ಲೆಯಲ್ಲಿ 75 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಸಿಕೆ ಹಾಕಿಸಿದ ಮಗುವಿನ ಬೆರಳಿಗೆ ಶಾಯಿ ಹಾಕಿ ಗುರುತು ಮಾಡಲಾಗುತ್ತದೆ. ಆಂಗನವಾಡಿ, ಅಶಾ ಕಾರ್ಯಕರ್ತೆಯರು, ಶಿಕ್ಷಕರು, ಅರೋಗ್ಯ ಕಾರ್ಯಕರ್ತರು ಹಾಗೂ ಸಿಬ್ಬಂದಿಗಳು ಸೇರಿದಂತೆ ಒಟ್ಟು 2500 ಮಂದಿಯನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಮೊದಲ ದಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ತೆರೆಯಲಾಗಿರುವ ಬೂತ್‍ಗಳಲ್ಲಿ ಲಸಿಕೆ ಹಾಕಲಾಗುತ್ತದೆ. ನಂತರದ 2 ದಿನಗಳಲ್ಲಿ ಮನೆಮನೆಗೆ ಭೇಟಿ ನೀಡಿ ಮಕ್ಕಳಿಗೆ ಲಸಿಕೆ ಹಾಕಲಾಗುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ರಘುರಾಮ್ ಸರ್ವೆಗಾರ್, ಆರ್.ಸಿ.ಹೆಚ್ ಅಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಐ.ಎಂ.ಎ ಜಿಲ್ಲಾ ಅಧ್ಯಕ್ಷರಾದ ಡಾ. ಬಸವರಾಜೇಂದ್ರ, ಐ.ಎ.ಪಿ ಜಿಲ್ಲಾ ಪ್ರತಿನಿಧಿ ಡಾ. ಶಶಿಧರ್, ಲಯನ್ಸ್ ಸೇವಾ ಸಂಸ್ಥೆಯ ಡಾ. ಮಹೇಶ್, ವಿವಿಧ ನರ್ಸಿಂಗ್ ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಇದಕ್ಕೂ ಮೊದಲು ಜಿಲ್ಲಾಸ್ಪತ್ರೆಯ ಮುಂಭಾಗದಿಂದ ಅರಂಭವಾದ ಪಲ್ಸ್ ಪೋಲಿಯೊ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡಿದರು.
ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಜಾಥಾ ಜಿಲ್ಲಾ ಆಸ್ಪತ್ರೆಯಿಂದ ಹೊರಟು ನಗರ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಆಗತಾನೆ ಹುಟ್ಟಿದ ಮಗುವಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಪೊಲಿಯೋ ಹನಿಗಳನ್ನು ಹಾಕಿಸಿ ಪೋಲಿಯೋ ನಿರ್ಮೂಲನೆ ಮಾಡುವ ಕುರಿತು ಘೊಷಣೆ ಮೊಳಗಿತು.
ನಗರಸಭೆ ಅದ್ಯಕ್ಷರಾದ ಶೋಭಾಪುಟ್ಟಸ್ವಾಮಿ, ಜೆ.ಎಸ್.ಎಸ್ ನರ್ಸಿಂಗ್ ಶಾಲಾ ವಿದ್ಯಾರ್ಥಿಗಳು, ಮನೋನಿಧಿ ನರ್ಸಿಂಗ್ ವಿದ್ಯಾರ್ಥಿಗಳು, ಬಸವರಾಜೇಂದ್ರ ನರ್ಸಿಂಗ್ ಶಾಲಾ ವಿದ್ಯಾರ್ಥಿಗಳು, ಸರ್ಕಾರಿ ನರ್ಸಿಂಗ್ ಶಾಲಾ ವಿದ್ಯಾರ್ಥಿಗಳು, ಸಂತ ಫೋಲ್ ಪ್ರೌಡಾಶಾಲಾ ವಿದ್ಯಾರ್ಥಿಗಳು, ಸ್ವಯಂ ಸೇವಾ ಸಂಘಗಳು, ಇತರ ಆರೋಗ್ಯ ಇಲಾಖಾ ಸಿಬ್ಬಂದಿಗಳು ಜಾಥಾದಲ್ಲಿ ಭಾಗವಹಿಸಿದರು.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು