ಜ. 28ರಂದು ಪಲ್ಸ್ ಪೋಲಿಯೊ : ಪೂರ್ವಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ
ಚಾಮರಾಜನಗರ, ಜ. 18 - ಜಿಲ್ಲೆಯಲ್ಲಿ ಮೊದಲ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಜನವರಿ 28ರಂದು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ಅಗತ್ಯ ಪೂರ್ವಸಿದ್ದತೆಯನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ. ರಾಮು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಪಲ್ಸ್ ಪೋಲಿಯೋ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಆಗ ತಾನೆ ಹುಟ್ಟಿದ ಮಗುವಿನಿಂದ ಹಿಡಿದು 5 ವರ್ಷದವರೆಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಪಲ್ಸ್ ಪೋಲಿಯೋ ಹನಿ ನೀಡುವ ಕೇಂದ್ರಗಳನ್ನು ತೆರೆಯಬೇಕು. ಶಾಲೆ ಅಂಗನವಾಡಿಗಳಲ್ಲಿ ಪಲ್ಸ್ ಪೋಲಿಯೋ ಬೂತುಗಳನ್ನು ತೆರೆಯಲು ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಅವಶ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪಲ್ಸ್ ಪೋಲಿಯೋ ಹನಿ ಶೇಖರಣೆಗೆ ನಿರಂತರ ವಿದ್ಯುತ್ ಸರಬರಾಜು ಅವಶ್ಯಕವಿದೆ. ಈ ಹಿನ್ನೆಲೆಯಲ್ಲಿ ಜನವರಿ 25 ರಿಂದ 31ರವರೆಗೆ ನಿರಂತರವಾಗಿ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ 24 ಗಂಟೆಗಳ ಅವಧಿಯು ವಿದ್ಯುತ್ ಸರಬರಾಜು ಮಾಡಬೇಕು. ವಿದ್ಯುತ್ ಅಡಚಣೆಗೆ ಅವಕಾಶವಾಗದ ಹಾಗೆ ಚೆಸ್ಕಾಂ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.
ಜಿಲ್ಲೆಯಾದ್ಯಂತ ವ್ಯಾಪಕವಾಗಿ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಬೇಕಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ವಷ್ಟು ವಾಹನಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಆರೋಗ್ಯ ಇಲಾಖೆಗೆ ನಿಯೋಜಿಸಬೇಕು. ಇಲಾಖೆಗಳ ವಾಹನಗಳು ಸುಸ್ಥಿತಿಯಲ್ಲಿ ಇರುವ ಬಗ್ಗೆ ದೃಢೀಕರಿಸಿ ವರದಿ ಸಲ್ಲಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ವಾಹನದ ಕೊರತೆ ಎದುರಾಗಬಾರದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ಕಾಡಂಚಿನ ಗ್ರಾಮಗಳು ಹಾಗೂ ದುರ್ಗಮ ಅರಣ್ಯ ಪ್ರದೇಶಗಳು ಹೆಚ್ಚು ಇವೆ. ಹೀಗಾಗಿ ಈ ಭಾಗದ ಜನತೆಗೂ ಪಲ್ಸ್ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ತಲುಪಲು ಎಲ್ಲಾ ಸಿದ್ಧತೆ ಕೈಗೊಳ್ಳಬೇಕು. ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯ ವಾಪ್ತಿಯಲ್ಲಿ ಪಲ್ಸ್ ಪೋಲಿಯೋ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡÀಬೇಕು ಎಂದರು.
ಸರ್ಕಾರಿ, ಖಾಸಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಇತರೆ ಜನನಿಬಿಡ ಸಾರ್ವಜನಿಕ ಸ್ಥಳಗಳಲ್ಲೂ ಬೂತ್‍ಗಳನ್ನು ತೆರೆಯಬೇಕು. ಮುಖ್ಯ ಸ್ಥಳಗಳಲ್ಲಿ ಬಸ್‍ಗಳನ್ನು ನಿಲುಗಡೆ ಮಾಡಿ ಪೋಲಿಯೋ ಹನಿ ಹಾಕಿಸಲು ಪೊಲೀಸರು ಸಹಕರಿಸಬೇಕು. ಸಂಚಾರಿ ವಾಹನಗಳ ಮೂಲಕವೂ ಲಸಿಕೆ ನೀಡಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳಬೇಕೆಂದು ಅವರು ತಿಳಿಸಿದರು.
ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಆಯಾ ಸ್ಥಳೀಯ ಸಂಸ್ಥೆಗಳು ಕಾರ್ಯಕ್ರಮಕ್ಕೆ ಸಂಪೂರ್ಣವಾಗಿ ತೊಡಗಿಕೊಳ್ಳಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ನಿಯೋಜಿತರಾಗುವ ಸಿಬ್ಬಂದಿ ಅಧಿಕಾರಿಗಳಿಗೆ ಅವಶ್ಯವಿರುವ ಎಲ್ಲ ಬಗೆಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸಬೇಕು. ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಬೇಕು. ಇದರಿಂದ ಪೋಷಕರಿಗೂ ಕಾರ್ಯಕ್ರಮದ ಅರಿವು ಉಂಟಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪಲ್ಸ್ ಪೋಲಿಯೋ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಸ್ವಯಂ ಸೇವಾ ಸಂಸ್ಥೆಗಳು, ನರ್ಸಿಂಗ್ ಶಾಲೆಗಳ ವಿದ್ಯಾರ್ಥಿ ಸಿಬ್ಬಂದಿ ಸಹಕಾರ ಅಗತ್ಯವಿದೆ. ವಿವಿಧ ಇಲಾಖೆಗಳು ಕೂಡ ತೊಡಗಿಕೊಂಡು ಪಲ್ಸ್ ಪೋಲಿಯೋ ರಾಷ್ಟ್ರೀಯ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶ್ವಸಿ ಗೊಳಿಸಲು ಕಾರ್ಯೋನ್ಮುಖರಾಗಬೇಕೆಂದು ಜಿಲ್ಲಾಧಿಕಾರಿ ರಾಮು ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್.ಪ್ರಸಾದ್, ಜಿಲ್ಲಾ ಲಸಿಕಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ರಘುರಾಂ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.
ನಗರದಲ್ಲಿ ಕೇಂದ್ರತಂಡದಿಂದ ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆ ಆರಂಭ
ಚಾಮರಾಜನಗರ, ಜ. 18 - s ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆ ಕಾರ್ಯವು ಇಂದಿನಿಂದ ಆರಂಭಗೊಂಡಿದೆ .
ಸ್ವಚ್ಛ ಸರ್ವೇಕ್ಷಣೆ ಸಮೀಕ್ಷೆಗಾಗಿ ಕೇಂದ್ರ ಸರ್ಕಾರದಿಂದ ನಿಯೋಜನೆಗೊಂಡಿರುವ ಹಿರಿಯ ಅಧಿಕಾರಿ ನಾಗೇಂದ್ರ ಮತ್ತು ಇತರೆ ಅಧಿಕಾರಿಗಳ ತಂಡ ಚಾಮರಾಜನಗರ ಪಟ್ಟಣಕ್ಕೆ ಇಂದು ಆಗಮಿಸಿದರು. ಕೇಂದ್ರ ತಂಡವನ್ನು ನಗರಸಭಾ ಅಧ್ಯಕ್ಷರಾದ ಶೋಭ, ಪೌರಾಯುಕ್ತರಾದ ಬಿ.ಫೌಜಿಯಾ ತರನ್ನುಂ ಸ್ವಾಗತಿಸಿದರು.
ಸ್ವಚ್ಛ ಸರ್ವೇಕ್ಷಣೆ ಸಮೀಕ್ಷಾ ತಂಡಕ್ಕೆ ಇದುವರೆಗೆ ವಾರ್ಡ್‍ಗಳಲ್ಲಿ ಕೈಗೊಂಡಿರುವ
ಸ್ವಚ್ಛ ಸರ್ವೇಕ್ಷಣೆ ಸಮೀಕ್ಷೆಗಾಗಿ ಕೇಂದ್ರ ಸರ್ಕಾರದಿಂದ ನಿಯೋಜನೆಗೊಂಡಿರುವ ಹಿರಿಯ ಅಧಿಕಾರಿ ನಾಗೇಂದ್ರ ಮತ್ತು ಇತರೆ ಅಧಿಕಾರಿಗಳ ತಂಡ ಚಾಮರಾಜನಗರ ಪಟ್ಟಣಕ್ಕೆ ಇಂದು ಆಗಮಿಸಿದರು. ಕೇಂದ್ರ ತಂಡವನ್ನು ನಗರಸಭಾ ಅಧ್ಯಕ್ಷರಾದ ಶೋಭ, ಪೌರಾಯುಕ್ತರಾದ ಬಿ.ಫೌಜಿಯಾ ತರನ್ನುಂ ಸ್ವಾಗತಿಸಿದರು.
ಸ್ವಚ್ಛ ಸರ್ವೇಕ್ಷಣೆ ಸಮೀಕ್ಷಾ ತಂಡಕ್ಕೆ ಇದುವರೆಗೆ ವಾರ್ಡ್‍ಗಳಲ್ಲಿ ಕೈಗೊಂಡಿರುವ
ಸ್ವಚ್ಛತಾ ಕ್ರಮಗಳ ಬಗ್ಗೆ ವಿವರ ನೀಡಿದ ಪೌರಾಯುಕ್ತರಾದ ಫೌಜಿಯಾ ತರನ್ನುಂ ರವರು ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ 31ವಾರ್ಡ್‍ಗಳು ಇವೆ. ಎಲ್ಲಾ ವಾರ್ಡುಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ತಮ್ಮ ಸಮೀಕ್ಷೆ ವೇಳೆಯಲ್ಲಿಯೂ ಸೂಚಿಸಲಾಗುವ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದರು.
ಇದೇವೇಳೆ ನಗರಸಭೆ ಅಧ್ಯಕ್ಷರಾದ ಶೋಭರವರು ಮಾತನಾಡಿ ಸ್ವಚ್ಛ ಸರ್ವೇಕ್ಷಣೆ ಯಶಸ್ವಿಗೊಳ್ಳಲು ಎಲ್ಲರ ಸಹಕಾರ ಬೇಕಿದೆ, ಆರೋಗ್ಯ ಶಾಖೆ ಸ್ವಚ್ಛತೆ ಕಾರ್ಯಕ್ಕೆ ವಿಶೇಷವಾಗಿ ಆಧ್ಯತೆ ನೀಡಿ ಶ್ರಮಿಸಬೇಕಿದೆ. ನಾಗರೀಕರೂ ಸಹಾ ವಾರ್ಡ್‍ಗಳಲ್ಲಿ ನೈರ್ಮಲ್ಯ ಉತ್ತಮವಾಗಿರಲು ಸಹಕಾರ ನೀಡಬೇಕು, ಮನೆಮನೆಗೆ ಕಸ ಸಂಗ್ರಹಣೆ ಮಾಡಲು ಬರುವ ಆಟೋ ಟಿಪ್ಪರ್‍ಗಳಿಗೆ ಕಸ ನೀಡಬೇಕು. ನಗರಸಭೆ ನೀಡುವ ಸೂಚನೆಗಳನ್ನು ಪಾಲಿಸಿ ಸ್ವಚ್ಛ ನಗರವನ್ನಾಗಿಸಲು ಕೈಜೋಡಿಸಬೇಕು ಎಂದರು.
ಬಳಿಕ ಕೇಂದ್ರ ತಂಡವು ನಗರಸಭಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ಸ್ವಚ್ಛತಾ ಕೆಲಸಕ್ಕೆ ಸಂಬಂದಿಸಿದ ದಾಖಲೆಗಳನ್ನು ಪರಿಶೀಲಿಸಿತು. ತದನಂತರ ವಾರ್ಡ್‍ಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸುವ ಕೆಲಸ ಆರಂಭಿಸಿತು.
ಮೊದಲಿಗೆ ಡಾ||ಬಿ.ಆರ್.ಅಂಬೇಡ್ಕರ್ ಬಡಾವಣೆಗೆ ಭೇಟಿ ನೀಡಿ ಸ್ವಚ್ಛತಾಕೆಲಸ ಹೇಗೆ ನಡೆದಿದೆ ಎಂಬ ಬಗ್ಗೆ ಖುದ್ಧು ಪರಿಶೀಲನೆ ನಡೆಸಿತು. ಸ್ಥಳೀಯ ಬಡಾವಣೆಯ ನಾಗರೀಕರಿಂದಲೇ ನೈರ್ಮಲ್ಯ ಕಾರ್ಯದ ಬಗ್ಗೆ ಅಭಿಪ್ರಾಯ ಸಂಗ್ರಹಣೆ ಮಾಡಿತು. ನಾಗರೀಕರು ನೀಡಿದ ಪ್ರತಿಕ್ರಿಯೆಯನ್ನು ದಾಖಲು ಮಾಡಿಕೊಂಡಿತು.
ಬಳಿಕ ಶಂಕರಪುರ, ಭ್ರಮರಾಂಬ ಬಡಾವಣೆಗೂ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ಕೇಂದ್ರ ತಂಡ ಮುಂದುವರೆಸಿತು. ಅಲ್ಲಿಯೂ ಪರಿಶೀಲಿಸಿ ನಾಗರೀಕರಿಂದ ಅಭಿಪ್ರಾಯ ಕೇಳಿ ಪ್ರತಿಕ್ರಿಯೆಯನ್ನು ದಾಖಲು ಮಾಡಲಾಯಿತು.
ನಗರಸಭೆ ಸದಸ್ಯರಾದ ಚಿನ್ನಸ್ವಾಮಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಟಿ.ಎಸ್.ಸತ್ಯಮೂರ್ತಿ ಪರಿಸರ ಅಭಿಯಂತರರಾದ ಗಿರಿಜಮ್ಮ, ಹಿರಿಯ ಆರೋಗ್ಯ ನಿರೀಕ್ಷಕರಾದ ಎಸ್.ಸರವಣ, ಕೆ.ಎಂ.ಮಹದೇವಸ್ವಾಮಿ ಇದ್ದರು.
ಮತದಾರರ ಜಾಗೃತಿ ಕೆಲಸವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ:ಜಿಲ್ಲಾಧಿಕಾರಿ ಬಿ.ರಾಮು
ಚಾಮರಾಜನಗರ, ಜ.18 - ಜಿಲ್ಲೆಯಲ್ಲಿ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ದಿಸೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಬಿ.ರಾಮು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಮತದಾರರ ಜಾಗೃತಿ ಅಭಿಯಾನ ಅಂಗವಾಗಿ ನಡೆದ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳೂ ಸೇರಿದಂತೆ ಇತರೆ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮತದಾನ ಕಾರ್ಯವು ಅತ್ಯಂತ ಪವಿತ್ರವಾಗಿದ್ದು, ಅರ್ಹರೆಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬೇಕಿದೆ. ಪ್ರಜಾ ಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಲು ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಜನರನ್ನ ಜಾಗೃತಗೊಳಿಸಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡುವ ಕೆಲಸಕ್ಕೆ ಅಧಿಕಾರಿಗಳು ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ರಾಮು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಮಾತನಾಡಿ ಮತದಾರರ ಪಟ್ಟಿಯಲ್ಲಿನ ಲೋಪದೋಷಗಳು ಸಾಮಾನ್ಯವಾಗಿ ಚರ್ಚೆಯಾಗುತ್ತದೆ. ಇದಕ್ಕೆ ಅವಕಾಶವಾಗದಂತೆ ಅರ್ಹರೆಲ್ಲರಿಗೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ಇನ್ನಿತರ ಮಾರ್ಪಾಡುಗಳನ್ನು ನಿಗಧಿತ ಅವಧಿಯೊಳಗೆ ಮಾಡಿದರೆ ಯಾವುದೇ ಗೊಂದಲಕ್ಕೆ ಅವಕಾಶವಾಗುವುದಿಲ್ಲ. ಹೀಗಾಗಿ ಅಧಿಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಆಧ್ಯತೆ ನೀಡಬೇಕು ಎಂದರು.
ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆಯಾ ಭಾಗದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ನೆರವಾಗಲಿದ್ದಾರೆ. ಮತಗಟ್ಟೆ ಮಟ್ಟದ ಅಧಿಕಾರಿಗಳಾಗಿ ಸ್ಥಳೀಯ ಜನರ ನೋಂದಣಿ ಮಾರ್ಪಾಡುಗಳಿಗೆ ಸ್ಪಂದಿಸಲಿದ್ದಾರೆ. ಜಿಲ್ಲಾ ಹಾಗೂ ತಾಲ್ಲೋಕುಮಟ್ಟದ ಅಧಿಕಾರಿಗಳು ವ್ಯಾಪಕವಾಗಿ 18 ವರ್ಷ ತುಂಬಿದವರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಉತ್ತೇಜಿಸಬೇಕು. ಹೆಸರು ಸೇರ್ಪಡೆ ಮಾಡದಿರುವ ಇತರರಿಗೂ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಅರಿವು ಮೂಡಿಸಬೇಕು. ದೋಷರಹಿತ ಮತದಾರರ ಪಟ್ಟಿ ಸಿದ್ದವಾಗಲು ಶ್ರಮಿಸಬೇಕು ಎಂದು ಹರೀಶ್ ಕುಮಾರ್ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಕೆ.ಹೆಚ್.ಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಬಸವರಾಜು, ಜಿಲ್ಲಾ ಸರ್ಜನ್ ರಘುರಾಂ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೋಕುಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಜ. 19ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಜ. 18 - ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಅವರು ಜನವರಿ 19ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಅಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಲುಪೇಟೆ ಕ್ಷೇತ್ರಕ್ಕೆ ಆಗಮಿಸಿ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಂಜೆ 4 ಗಂಟೆಗೆ ಮೈಸೂರಿಗೆ ತೆರಳುವರು ಎಂದು ಸಚಿವರ ವಿಶೇಷಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ. 20ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಜ. 18 - ಚಾಮರಾಜನಗರ ತಾಲೂಕಿನ ಚಂದಕವಾಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಜನವರಿ 20ರಂದು ನಡೆಯಲಿದೆ.ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹಿರಿಕೆರೆ, ಕಾಳಿಕಾಂಬ, ಚಂದÀಕವಾಡಿ, ರೇಚಂಬಳ್ಳಿ, ಮಲ್ಲೇದೇವನಹಳ್ಳಿ, ನವೋದಯ, ಹೊಂಡರಬಾಳು, ಜ್ಯೋತಿಗೌಡನಪುರ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಜ. 20ರಂದು ನಗರದಲ್ಲಿ ಮರಗಳ ಹರಾಜು
ಚಾಮರಾಜನಗರ, ಜ. 18 :- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಚಾಮರಾಜನಗರ ಉಪವಿಭಾಗ ಕಚೇರಿಯ ಆವರಣದಲ್ಲಿರುವ ಬಾಗೆ ಮರ, 3 ನೀಲಗಿರಿ ಮರ ಹಾಗೂ ಒಂದು ಕಾಡು ಜಾತಿಯ ಮರವನ್ನು ಜನವರಿ 20ರಂದು ನಗರದ ಉಪವಿಭಾಗ ಕಚೇರಿ ಆವರಣದಲ್ಲಿ ಬಹಿರಂಗ ಹರಾಜು ಮಾಡಲಿದೆ.ಬಾಗೆ ಮರವನ್ನು ಅಂದು ಬೆಳಿಗ್ಗೆ 11.30 ಗಂಟೆಗೆ, ನೀಲಗಿರಿ ಹಾಗೂ ಕಾಡು ಜಾತಿ ಮರವನ್ನು ಮಧ್ಯಾಹ್ನ 12.30 ಗಂಟೆಗೆ ಹರಾಜು ಮಾಡಲಾಗುವುದು.
ಬಹಿರಂಗ ಹರಾಜಿನಲ್ಲಿ ಸಾರ್ವಜನಿಕರು ಭಾಗವಹಿಸಬಹುದಾಗಿದ್ದು ಭದ್ರತಾ ಠೇವಣಿ ಇನ್ನಿತರ ವಿವರಗಳಿಗೆ ನಗರದ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿರುವ ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ (08226-223904) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
No comments:
Post a Comment