ಜ. 28ರಂದು ಪಲ್ಸ್ ಪೋಲಿಯೊ : ಒಟ್ಟು 75652 ಮಕ್ಕಳಿಗೆ ಲಸಿಕೆ ನೀಡುವ ಗುರಿ
ಚಾಮರಾಜನಗರ, ಜ. 27- ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಗೆ ಕಾರಣವಾಗುವ ಪೋಲಿಯೊ ರೋಗ ಮುಕ್ತಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಜಿಲ್ಲೆಯಲ್ಲಿ ಸಕಲ ವ್ಯಾಪಕ ಸಿದ್ದತೆ ಕೈಗೊಳ್ಳಲಾಗಿದೆ.ಆಗ ತಾನೇ ಹುಟ್ಟಿದ ಮಗುವಿನಿಂದ 5 ವರ್ಷದ ವರೆಗಿನ ಮಕ್ಕಳಿಗೆ ಪೋಲಿಯೊ ಹನಿ ನೀಡಲಾಗುತ್ತದೆ.
ಜಿಲ್ಲೆಯಲ್ಲಿ ಜನವರಿ 28ರಂದು ಮೊದಲ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ಅಂದಾಜು ಒಟ್ಟು 75652 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.
ಚಾಮರಾಜನಗರ ತಾಲ್ಲೂಕಿನಲ್ಲಿ 24724, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 15470, ಕೊಳ್ಳೇಗಾಲ ತಾಲ್ಲೂಕಿನಲ್ಲಿ 29478 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 5980 ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ.
ಜಿಲ್ಲೆಯಲ್ಲಿ ಒಟ್ಟು 622 ಬೂತ್‍ಗಳನ್ನು ಲಸಿಕೆ ನೀಡಲು ತೆರೆಯಲಾಗುತ್ತಿದೆ. ನಗರ ಪ್ರದೇಶಗಳಲ್ಲಿ 92 ಗ್ರಾಮೀಣ ಪ್ರದೇಶಗಳಲ್ಲಿ 530 ಬೂತ್‍ಗಳು ಕಾರ್ಯನಿರ್ವಹಿಸಲಿವೆ. ಈ ಪೈಕಿ ಚಾಮರಾಜನಗರ ತಾಲ್ಲೂಕಿನಲ್ಲಿ 194, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 158, ಕೊಳ್ಳೇಗಾಲ ತಾಲ್ಲೂಕಿನಲ್ಲಿ 223 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 47 ಲಸಿಕಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಪಲ್ಸ್ ಪೋಲಿಯೋ ಬೂತ್‍ಗಳಲ್ಲಿ ಮಕ್ಕಳಿಗೆ ಲಸಿಕೆಯನ್ನು ಹಾಕಲಾಗುತ್ತದೆ.
ಲಸಿಕಾ ಕಾರ್ಯಕ್ರಮದ ಮೇಲುಸ್ತುವಾರಿಗೆ 130 ಮೇಲ್ವಿಚಾರಕರು ಹಾಗೂ 2488 ಲಸಿಕಾ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ. 20 ಟ್ರಾನ್ಸಿಟ್ 20 ಮೊಬೈಲ್ ತಂಡಗಳು ಕಾರ್ಯ ನಿರ್ವಹಿಸಲಿವೆ.
ಜನವರಿ 28ರಂದು ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ತೆರೆಯಲಾಗುವ ಲಸಿಕಾ ಕೇಂದ್ರಗಳಲ್ಲಿ ಪೋಲಿಯೊ ಹನಿ ನೀಡಲಾಗುತ್ತದೆ. ಗ್ರಾಮಾಂತರ ಪ್ರದೇಶದಲ್ಲಿ ಬೂತ್ ಕಾರ್ಯಕ್ರಮದ ಬಳಿಕ ಮೊದಲ 2 ದಿನಗಳು ಹಾಗೂ ಪಟ್ಟಣ ಪ್ರದೇಶಗಳಲ್ಲಿ 3 ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತದೆ.
ಪಟ್ಟಣ ಪ್ರದೇಶದಲ್ಲಿ ಒಟ್ಟು 36021 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 199691 ಮನೆಗಳು ಸೇರಿದಂತೆ ಒಟ್ಟು 235712 ಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ.
ಜಿಲ್ಲಾ ವ್ಯಾಪ್ತಿಯ ನರ್ಸಿಂಗ್ ಶಾಲೆಗಳು, ಸ್ವಯಂ ಸೇವಾ ಸಂಸ್ಥೆಗಳು ಅಭಿಯಾನಕ್ಕೆ ಸಹಕಾರ ನೀಡಿವೆ.
ಅಂಗವೈಕಲ್ಯತೆ ತಪ್ಪಿಸುವ ಸಲುವಾಗಿ ಪಲ್ಸ್ ಪೋಲಿಯೊ ಆಂದೋಲನವನ್ನು ರಾಷ್ಟ್ರೀಯ ಕಾರ್ಯಕ್ರಮವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಜಿಲ್ಲೆಯಲ್ಲೂ ಪಲ್ಸ್ ಪೋಲಿಯೋ ಲಸಿಕೆ ಆಂದೋಲನವನ್ನು ಯಶಸ್ವಿಗೊಳಿಸಲು ಜಿಲ್ಲಾ ಜನತೆಯ ಸಹಕಾರ ಅವಶ್ಯವಾಗಿದೆ. ಪೋಷಕರು ಜನವರಿ 28ರಂದು ತಪ್ಪದೇ ಆಗ ತಾನೇ ಹುಟ್ಟಿದ ಮಗುವಿನಿಂದ 5 ವರ್ಷದವರೆಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಬೇಕು. ಈ ಮಹತ್ವದ ಕಾರ್ಯಕ್ರಮಕ್ಕೆ ಎಲ್ಲ ಪೋಷಕರು, ಸಮುದಾಯ ಮುಖಂಡರು, ಸ್ವಯಂ ಸೇವಾ ಸಂಸ್ಥೆಯ ಪದಾಧಿಕಾರಿಗಳು ಸೇರಿದÀಂತೆ ಸರ್ವರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಮನವಿ ಮಾಡಿದ್ದಾರೆ.
ಶೌಚಾಲಯ ಬಳಕೆ ವಿಶೇಷ ಅಭಿಯಾನಕ್ಕೆ ಮಂಗಲದಲ್ಲಿ ಶುಭಾರಂಭ
ಚಾಮರಾಜನಗರ, ಜ. 27 - ಜಿಲ್ಲೆಯಲ್ಲಿ ಶೌಚಾಲಯ ನಿರ್ಮಾಣ ಹಾಗೂ ಬಳಕೆಗಾಗಿ ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳಲ್ಲೂ ಹಮ್ಮಿಕೊಂಡಿರುವ ಮೂರು ದಿನಗಳ ನಿರಂತರ ಜಾಗೃತಿ ಅಭಿಯಾನಕ್ಕೆ ಚಾಮರಾಜನಗರ ತಾಲೂಕಿನ ಮಂಗಲದಲ್ಲಿ ಉತ್ತಮ ಆರಂಭ ಸಿಕ್ಕಿದೆ.ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಲ್ಲಿ ಎಲ್ಲರೂ ಶೌಚಾಲಯ ನಿರ್ಮಿಸಿ ಬಳಸಿಕೊಳ್ಳಬೇಕೆಂಬ ಉದ್ದೇಶದಿಂದ ಆರಂಭಿಸಿರುವ ಮೂರು ದಿನಗಳ ಜಾಗೃತಿ ಜಾಥಾಗೆ ಗಣರಾಜ್ಯೋತ್ಸವ ದಿನದಂದು ಸ್ವಚ್ಚತೆ ಸಂದೇಶವುಳ್ಳ ಬೃಹತ್ ಬಲೂನನ್ನು ಹಾರಿಬಿಡುವ ಮೂಲಕ ಸಕ್ಕರೆ, ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ಚಾಲನೆ ನೀಡಿ ಶುಭ ಹಾರೈಸಿದ್ದರು. ಶಾಸಕರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು ಸೇರಿದಂತೆ ಎಲ್ಲ ಗಣ್ಯರು ಹಿರಿಯ ಅಧಿಕಾರಿಗಳು ಈ ವಿಶೇಷ ಜಾಗೃತಿಗೆ ಶುಭ ಕೋರಿದ್ದರು.
ಇಂದು ಅಭಿಯಾನವು ತಾಲೂಕಿನ ಮಂಗಲ ಪ್ರೌಢಶಾಲೆಯಲ್ಲಿ ಆರಂಭಗೊಂಡಿದ್ದು ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಪ್ರತಿನಿಧಿಗಳು ಶಿಕ್ಷಣ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಸಾಕಷ್ಟು ಮಂದಿ ಶಾಲಾ ಆವರಣದಲ್ಲಿ ಸಮಾವೇಶಗೊಂಡು ಪರಿಣಾಮಕಾರಿಯಾಗಿ ಅರಿವಿನ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ.
ಕಾರ್ಯಕ್ರಮದಲ್ಲಿ ಸ್ವಚ್ಚತಾ ಪ್ರತಿಜಾÐ ವಿಧಿ ಬೋಧಿಸಿದ ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು ಅವರು ಮಾತನಾಡಿ ಆರೋಗ್ಯವೇ ಸಂಪತ್ತು. ಆರೋಗ್ಯ ಒಂದಿದ್ದರೆ ಏನನ್ನಾದರೂ ಗಳಿಸಬಹುದು. ಹೀಗಾಗಿ ಆರೋಗ್ಯ ಕಾಪಾಡಿಕೊಳ್ಳಲು ಮುಖ್ಯವಾಗಿರುವ ಶೌಚಾಲಯವನ್ನು ಪ್ರತಿಯೊಬ್ಬರೂ ನಿರ್ಮಾಣ ಮಾಡಿಕೊಳ್ಳಬೇಕು. ಜಾಗದ ಸಮಸ್ಯೆ ಇದ್ದಲ್ಲಿ ಸಮುದಾಯ ಶೌಚಾಲಯ ನಿರ್ಮಿಸಿಕೊಡಲಾಗುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು ಮಾತನಾಡಿ ವೈಯಕ್ತಿಕ ಆರೋಗ್ಯ ಕಾಳಜಿಯಿಂದ ಪ್ರತಿಯೊಬ್ಬರೂ ಶೌಚಾಲಯ ಹೊಂದಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರಿಗೆ 15 ಸಾವಿರ ರೂ. ಇತರೆ ವರ್ಗದವರಿಗೆ 12 ಸಾವಿರ ರೂ. ಪ್ರೋತ್ಸಾಹಧನವನ್ನು ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ನೀಡಲಾಗುತ್ತಿದೆ. ಸುತ್ತಮುತ್ತಲ ಪರಿಸರ ಉತ್ತಮವಾಗಿಡಲು ಹಾಗೂ ಮುಂದಿನ ಪೀಳಿಗೆಯ ಆರೋಗ್ಯ ದೃಷ್ಠಿಯಿಂದ ಶೌಚಾಲಯ ನಿರ್ಮಾಣಕ್ಕೆ ಜನರು ಆಸಕ್ತಿ ತೋರಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಶಿಕ್ಷಣ ಆರೋಗ್ಯ ಕ್ಷೇತ್ರಗಳಲ್ಲಿ ಬದಲಾವಣೆಯಾಗಬೇಕಾದರೆ ಕೇವಲ ಅಧಿಕಾರಿ ಜನಪ್ರತಿನಿಧಿಗಳಿಂದ ಮಾತ್ರ ಸಾಧ್ಯವಾಗುವುದಿಲ್ಲ. ಜನರ ಮಾನಸಿಕ ಸ್ಥಿತಿಸಕಾರಾತ್ಮಕವಾಗಿ ಬದಲಾವಣೆಯಾದರೆ ಮಾತ್ರ ಎಲ್ಲವೂ ಯಶಸ್ವಿಯಾಗುತ್ತದೆ. ಹೀಗಾಗಿ ಎಲ್ಲರ ಸಹಕಾರದೊಂದಿಗೆ ಆರೋಗ್ಯಕ್ಕೆ ಪೂರಕವಾಗಿರುವ ಶೌಚಾಲಯ ನಿರ್ಮಾಣ ಮತ್ತು ಬಳಕೆಗೆ ವ್ಯಾಪಕವಾಗಿ ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು.
ಗ್ರಾಮೀಣ ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸ್ವಸಹಾಯಸಂಘದ ಸದಸ್ಯರು ಜನರಲ್ಲಿ ಪರಿಣಾಮಕಾರಿಯಾಗಿ ಅರಿವು ಮೂಡಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲರ ನೆರವಿನೊಂದಿಗೆ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಮಾಚ್ ್ ಒಳಗೆ ಜಿಲ್ಲೆಯನ್ನು ಬಹಿರ್ದೆಸೆ ಬಯಲು ಮುಕ್ತಗೊಳಿಸಲು ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ. ಇದಕ್ಕೆ ಜಿಲ್ಲೆಯ ಜನತೆ ಕೈಜೋಡಿಸಬೇಕೆಂದು ಡಾ. ಕೆ. ಹರೀಶ್ ಕುಮಾರ್ ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಬಸವರಾಜು, ಜಿ.ಪಂ. ಮುಖ್ಯ ಯೋಜನಾಧಿಕಾರಿ ಮಾದೇಶು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಾಕಮ್ಮ, ಇನ್ನಿತರ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
:
ನೇರ ಪೋನ್ ಇನ್: 27 ದೂರುಗಳು ದಾಖಲು
ಚಾಮರಾಜನಗರ, ಜ. 27:- ಜಿಲ್ಲೆಯ ನಾಗರಿಕರ ಕುಂದು ಕೊರತೆ ಆಲಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಇಂದು ನಡೆದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಒಟ್ಟು 27 ದೂರುಗಳು ದಾಖಲಾದವು
ಹೆಚ್ಚುವರಿ ಜಿಲ್ಲಾಧಿಕಾರಿ ಕೆ. ಎಂ. ಗಾಯತ್ರಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂಧರ್ ಕುಮಾರ್ ಮೀನಾ ಅವರ ಸಮ್ಮುಖದಲ್ಲಿ ನಡೆದ ಒಂದು ತಾಸಿನ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ದೂರುಗಳು ಕೇಳಿಬಂದವು.
ವಿದ್ಯಾರ್ಥಿ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಹಳ್ಳಿಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಹಲವರು ಮನವಿ ಮಾಡಿದರು.
ನಗರದಲ್ಲಿ ರೈಲು ನಿಲ್ದಾಣಕ್ಕೆ ತೆರಳುವವರಿಗೆÉ ಬೆಳಿಗ್ಗೆ 6 ಗಂಟೆಗೆ ಹಾಗೂ ಸಂಜೆ 5ಕ್ಕೆ ರಾತ್ರಿ 8.30ಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಗಮನ ಸೆಳೆಯಲಾಯಿತು. ಹಾಗೆಯೇ ಕಾಗಲವಾಡಿಯಿಂದ ನಗರದ ಶಾಲಾ ಕಾಲೇಜುಗಳಗೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಳಿಗ್ಗೆ 8.30ಕ್ಕೆ ಹಾಗೂ 9.30ಕ್ಕೆ ಹಾಗೂ ಸಂಜೆ 4,30 ಕ್ಕೆ ಬಸ್ ವ್ಯವಸ್ಥೆ ಮಾಡುವಂತೆ ಕೆಲವರು ಕೇಳಿಕೊಂಡರು. ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಕೆ.ಎಸ್. ಅರ್.ಟಿ.ಸಿ. ಅಧಿಕಾರಿಗಳಿಗೆ ಸೂಚಿಸಲಾಗುವುದೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಗಾಯತ್ರಿ ಅವರು ತಿಳಿಸಿದರು.
ಕಾಗಲವಾಡಿ ನ್ಯಾಯಬೆಲೆ ಅಂಗಡಿಯಲ್ಲಿ ಕಂಪ್ಯೂಟರ್ ಸ್ಕೇಲ್ ವ್ಯವಸ್ಥೆ ಇಲ್ಲದೆ ತೂಕದಲ್ಲಿ ಮೋಸ ಮಾಡಲಾಗುತ್ತಿದೆ ಎಂದು ಸ್ಥಳೀಯರೊಬ್ಬರು ದೂರಿದರು. ಸಂತೆ ಮರಹಳ್ಳಿಯಲ್ಲಿ ಸಾರ್ವಜನಿಕ ಶೌಚಾಲಯ ಸರಿಯಿಲ್ಲ. ಪೊಲೀಸ್ ಸ್ಟೇಷನ್ ಹಿಂಭಾಗ ಪ್ರದೇಶಕ್ಕೆ ಸರಿಯಾಗಿ ಕುಡಿಯುವ ನೀರು ಸರಬರಾಜು ಮಾಡದೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಅಲ್ಲಿನ ನಿವಾಸಿಯೊಬ್ಬರು ಗಮನಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಹರೀಶ್ ಕುಮಾರ್ ಅವರು ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದರು.
ಯಳಂದೂರಿನ ಟೌನನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯತ್ತಿರುವ ಸ್ಥಳದಲ್ಲಿ ಒಳಚರಂಡಿ ಕಾಮಗಾರಿ ಮಂದಗತಿಯಲ್ಲಿ ನಡೆಯಿತ್ತಿರುವುದರಿಂದ ಅಕ್ಕ-ಪಕ್ಕದ ಮನೆಗಳಿಗೆ ಚರಂಡಿ ನೀರು ನುಗ್ಗುತ್ತಿದ್ದು ಮನೆಯಲ್ಲಿ ವಾಸಿಸಲು ತೊಂದರೆಯಾಗುತ್ತಿದೆ ಎಂದು ಸ್ಥಳಿಯರು ಗಮನ ಸೆಳೆದರು.
ಕೊಳ್ಳೆಗಾಲದಿಂದ ಹನೂರಿಗೆ ತಲುಪಲು ರಸ್ತೆ ಹದಗೆಟ್ಟಿದೆ ಹಾಗೂ ಕೌದಳ್ಳಿಯಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡುವಂತೆ ಸ್ಥಳೀಯರೊಬ್ಬರು ಮನವಿ ಮಾಡಿದರು. ಹನೂರು ಪಕ್ಕದ ಉದ್ನೂರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂತು.
ಕಾರ್ಯಕ್ರಮದ ಬಳಿಕ ಪೋನ ಇನ್ ಕಾರ್ಯಕ್ರದಲ್ಲಿ ಸಾರ್ವಜನಿಕರಿಂದ ಕೇಳಿ ಬಂದಿದ್ದ ದೂರುಗಳ ಇತ್ಯರ್ಥ ಬಗ್ಗೆ ಪರಿಶೀಲಿಸಲಾಯಿತು. ಸಾರ್ವಜನಿಕರ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸುವ ಕಡೆ ಗಮನ ಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ ಗಾಯತ್ರಿ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಸಮಾಜದ ಅಂಕುಡೊಂಕು ತಿದ್ದುವಲ್ಲಿ ಅಂಬಿಗರ ಚೌಡಯ್ಯ ಪ್ರಮುಖರು : ಜಿ.ಪಂ. ಅಧ್ಯಕ್ಷರ ಅಭಿಮತ
ಚಾಮರಾಜನಗರ, ಜ. 27- ವಚನಗಳ ಮೂಲಕ ಸಮಾಜದ ಅಂಕುಡೊಂಕು ತಿದ್ದುವಲ್ಲಿ ಅಂಬಿಗರ ಚೌಡಯ್ಯ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ತಿಳಿಸಿದರು.ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬಿಗರ ಚೌಡಯ್ಯ ಅವರ ಎಲ್ಲ ವಚನಗಳಲ್ಲಿ ಸಾಮಾಜಿಕ ಕಳಕಳಿ ಇದೆ. ಜತೆಗೆ ಸಮಾಜದ ಬಗೆಗಿನ ಲೋಪದೋಷಗಳ ಬಗ್ಗೆ ನಿರ್ದಾಕ್ಷಿಣ್ಯ ಮನೋಭಾವ ಮೂಲಕ ಎತ್ತಿ ಹಿಡಿದಿದ್ದಾರೆ. ಇಂತಹ ಶರಣರ ಚಿಂತನೆಗಳು ಯುವಜನಾಂಗ ರೂಡಿಸಿಕೊಂಡರೆ ಜಾತ್ಯಾತೀತ ಹಾಗೂ ಮಾನವೀಯ ಮೌಲ್ಯವುಳ್ಳ ಆದರ್ಶ ಸಮಾಜ ನಿರ್ಮಾಣವಾಗಲು ಸಾಧ್ಯವಾಗಲಿದೆ ಎಂದು ರಾಮಚಂದ್ರ ಅವರು ಅಭಿಪ್ರಾಯಪಟ್ಟರು.
ಅಂಬಿಗರ ಚೌಡಯ್ಯ ಅವರು ನುಡಿದಂತೆ ನಡೆದವರು. ವಿಚಾರಪರ ವಾದ ವಾಸ್ತವ ಅಂಶಗಳನ್ನು ಸಹ ಜನಮಾನಸದಲ್ಲಿ ಮೂಡಿಸಿದರು. ಆತ್ಮಬಲ, ಸತ್ಯ ಪ್ರತಿಪಾದನೆಯಲ್ಲಿ ಮುಂಚೂಣಿಯಲ್ಲಿದ್ದರು. 12ನೇ ಶತಮಾನದಲ್ಲಿ ಪ್ರಜ್ವಲವಾಗಿ ಬೆಳಗಿದವರ ಪೈಕಿ ಅಂಬಿಗರ ಚೌಡಯ್ಯನವರೂ ಸಹ ಮುಖ್ಯವಾಗಿದ್ದಾರೆ ಎಂದು ರಾಮಚಂದ್ರ ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಚೌಡಯ್ಯನವರು ಅಂಬಿಗ ವೃತ್ತಿಯನ್ನು ಕೈಗೊಂಡು ಜೀವನದುದ್ದಕ್ಕೂ ಪ್ರಾಮಾಣಿಕವಾಗಿ ಇದ್ದರು. ಸಮಾಜದ ಓರೆಕೋರೆಗಳನ್ನು ತೋರಿಸಿ ಸರಿದಾರಿಯಲ್ಲಿ ನಡೆಯಬೇಕೆಂಬ ಮಾರ್ಗದರ್ಶನವನ್ನು ತಮ್ಮ ವಚನಗಳ ಮೂಲಕ ಮಾಡಿದ್ದಾರೆ. ಅವರ ವಚನಗಳ ಸಾರ ಪ್ರಸ್ತುತ ಸಂದರ್ಭಕ್ಕೂ ಅನ್ವಯಿಸುತ್ತದೆ ಎಂದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು ಅವರು ಮಾತನಾಡಿ ಅಂಬಿಗರ ಚೌಡಯ್ಯ ಅವರು ಕಾಯಕ ಮಹತ್ವವನ್ನು ತೋರಿದರು. ಯಾವ ವೃತ್ತಿಯೂ ಮೇಲುಕೀಳಲ್ಲ. ಬಡವಬಲ್ಲಿದ ಎಂಬ ಬೇಧ ಸಲ್ಲದು ಎಂಬ ಅನೇಕ ಉದಾತ್ತ ಮೌಲ್ಯಗಳನ್ನು ತೋರಿಸಿಕೊಟ್ಟಿದ್ದಾರೆ ಎಂದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು ಮಾತನಾಡಿ ಶರಣರು, ವಚನಕಾರರು ಸಮಾಜದ ಸನ್ಮಾರ್ಗ ಹಾಗೂ ಉನ್ನತಿಗೆ ಹಲವು ಸಂದೇಶಗಳನ್ನು ನೀಡಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕಿದೆ ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಮುಖಂಡರಾದ ಗು. ಪುರುಷೋತ್ತಮ್, ಪ್ರಕಾಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಮಹದೇವಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜ. 28ರಂದು ನಗರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಉದ್ಘಾಟನೆ
ಚಾಮರಾಜನಗರ, ಜ. 27 - ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಮುಖ್ಯ ದ್ವಾರದ ಒಳ ಆವರಣದಲ್ಲಿ ಜನವರಿ 28ರಂದು ಬೆಳಿಗ್ಗೆ 8 ಗಂಟೆಗೆ ಮೊದಲ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.ಜ. 29ರಂದು ನಗರದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಕಾರ್ಯಕ್ರಮ
ಚಾಮರಾಜನಗರ, ಜ. 27 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶಿವಯೋಗಿ ಶ್ರೀ ಸಿದ್ಧರಾಮೇಶ್ವರರ ಜಯಂತಿ ಕಾರ್ಯಕ್ರಮವನ್ನು ಜನವರಿ 29ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.ಬೆಳಿಗ್ಗೆ 11 ಗಂಟೆಗೆ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಸಮಾರಂಭ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲÁ್ಲ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸÀಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಣಿ ವಿಶೇಷ ಉಪನ್ಯಾಸ ನೀಡುವರು.
ರಾಮಸಮುದ್ರದ ಪಿ. ಮಹೇಶ್ ಮತ್ತು ತಂಡದಿಂದ ವಚನ ಕಾರ್ಯಕ್ರಮ ಏರ್ಪಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಮುಂದೂಡಿಕೆ
ಚಾಮರಾಜನಗರ, ಜ. 27 - ಜಿಲ್ಲೆಯ ಹೊಂಡರಬಾಳುವಿನಲ್ಲಿರುವ ಜವಾಹರ ನವೋದಯ ವಿದ್ಯಾಲಯವು 2018-19ನೇ ಶೈಕ್ಷಣಿಕ ವರ್ಷದ 6ನೇ ತರಗತಿಯ 2018ರ ಪ್ರವೇಶ ಪರೀಕ್ಷೆಯನ್ನು ಕೆಲವು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಿದೆ.ಈ ಹಿಂದೆ ಆಯ್ಕೆ ಪರೀಕ್ಷೆಯನ್ನು ಫೆಬ್ರವರಿ 10ರಂದು ನಡೆಸಲಾಗುವುದು ಎಂದು ತಿಳಿಸಲಾಗಿತ್ತು. ಪರೀಕ್ಷೆಯ ಮುಂದಿನ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಆರ್. ಡ್ಯಾನಿಯಲ್ ರೆತ್ನಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದರ್ಶ ವಿದ್ಯಾಲಯ : 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ
ಚಾಮರಾಜನಗರ, ಜ. 27 :- ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಚಾಮರಾಜನಗರ ತಾಲೂಕು ವ್ಯಾಪ್ತಿಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವೆಬ್ ವಿಳಾಸ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ಅಥವಾ ತಿತಿತಿ.viಜಥಿಚಿvಚಿhiಟಿi.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿಯನ್ನು ಜನವರಿ 27 ರಿಂದ ಫೆಬ್ರವರಿ 17ರ ಸಂಜೆ 5.30 ಗಂಟೆಯವರೆಗೆ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಒಂದು ಪ್ರತಿಯನ್ನು ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರಿಗೆ ಕಡ್ಡಾಯವಾಗಿ ನೀಡಬೇಕು ಎಂದು ಆದರ್ಶ ವಿದ್ಯಾಲಯದ ಪ್ರಕಟಣೆ ತಿಳಿಸಿದೆ.
No comments:
Post a Comment