ಜ. 29ರಂದು ನಗರದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಕಾರ್ಯಕ್ರಮ
ಚಾಮರಾಜನಗರ, ಜ. 29 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶಿವಯೋಗಿ ಶ್ರೀ ಸಿದ್ಧರಾಮೇಶ್ವರರ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿ ಇಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಸೀಲ್ದಾರ್ ಕೆ. ಪುರಂಧರ್ ಅವರು ಎಲ್ಲ ಶರಣರು, ದಾರ್ಶನಿಕರು, ಸಂತರು, ಮಹಾನ್ ವ್ಯಕ್ತಿಗಳು ನೀಡಿದ ಸಂದೇಶವು ಸಮಾಜದ ಸ್ವಾಸ್ಥ್ಯಕ್ಕೆ ಪೂರಕವಾಗಿದೆ. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಈ ಎಲ್ಲರ ಕೊಡುಗೆ ಅಪಾರವಾಗಿದೆ ಎಂದರು.
ಉತ್ತಮ ಮೌಲ್ಯ ಆದರ್ಶಗಳ ಬಗ್ಗೆ ತಿಳಿವಳಿಕೆ ಹಾಗೂ ವಿಚಾರಗಳನ್ನು ಮನಮುಟ್ಟಿಸುವ ದಿಸೆಯಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಸರ್ವರೂ ಒಂದೇ ಎಂಬ ಮಹತ್ತರ ಆಶಯ ಮುಖ್ಯ ಉದ್ದೇಶವಾಗಿದೆ ಎಂದು ಪುರಂಧರ್ ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆ ಅಧ್ಯಕ್ಷರಾದ ಶೋಭ ಅವರು ಸಿದ್ಧರಾಮೇಶ್ವರರು ಕಾಯಕವನ್ನು ಪ್ರತಿಪಾದಿಸಿದರು. ಕೆರೆಕಟ್ಟೆಗಳನ್ನು ನಿರ್ಮಿಸಿ ಜನರ ಹಿತಕ್ಕಾಗಿ ಶ್ರಮಿಸಿದರು. ಅವರ ವಚನಗಳಲ್ಲಿ ಉದಾತ್ತವಾದ ಸಮಾಜಮುಖಿ ಸಂದೇಶಗಳಿವೆ ಎಂದರು.
ಸಾವÀiÁಜಿಕ ಕಳಕಳಿ ಹೊಂದಿದ್ದ ಸಿದ್ಧರಾಮೇಶ್ವರರು ಅಪಾರವಾದ ಜ್ಞಾನ ಹೊಂದಿದ್ದರು. ತಮ್ಮ ವಚನಗಳ ಮೂಲಕ ಉತ್ತಮ ಮಾರ್ಗದರ್ಶನ ಮಾಡಿದ್ದಾರೆ ಎಂದು ಶೋಭ ಅವರು ಅಭಿಪ್ರಾಯಪಟ್ಟರು.
ಮುಖ್ಯ ಉಪನ್ಯಾಸ ನೀಡಿದ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸಹಾಯಕ ಪ್ರಾಧ್ಯಾಪಕರಾದ ಬಸವಣ್ಣ ಅವರು ಮಾತನಾಡಿ ಸಮಾಜದಲ್ಲಿನ ಮೌಢ್ಯ, ಕಂದಾಚಾರ, ಸಾಮಾಜಿಕ ಅಸಮಾನತೆ ಹೋಗಲಾಡಿಸಿ ಸಮ ಸಮಾಜ ಕಟ್ಟಬೇಕೆಂಬ ಉದ್ದೇಶದಿಂದ ಸಿದ್ಧರಾಮೇಶ್ವರರು ಶ್ರಮಿಸಿದರು ಎಂದರು.
ಸಿದ್ಧರಾಮೇಶ್ವರರು ಜನರ ಕಲ್ಯಾಣಕ್ಕಾಗಿ ತಮ್ಮ ಸ್ವಂತ ಆಸ್ತಿಯನ್ನೂ ಸಹ ಮುಡುಪಾಗಿಟ್ಟರು. ಅವರಿಗೆ ಬಳುವಳಿಯಾಗಿ ಬಂದಿದ್ದ ಜಮೀನನ್ನು ಶೋಷಿತರಿಗೆ, ದುರ್ಬಲ ವರ್ಗದವರಿಗೆ ನೀಡಿದರು. ಹಸಿದು ಬಂದವರಿಗೆ ಅನ್ನ ನೀಡುವ, ದಣಿದು ಬಂದವರಿಗೆ ವಿರಮಿಸಲು ಅಗತ್ಯ ವ್ಯವಸ್ಥೆಗಳನ್ನು ಅಂದೇ ಕಲ್ಪಿಸುವ ಮೂಲಕ ಮಾದರಿಯಾಗಿದ್ದಾರೆ ಎಂದು ಬಸವಣ್ಣ ಅವರು ತಿಳಿಸಿದರು.
ಬೋವಿ ಸಮಾಜದ ಮುಖಂಡರಾದ ಮುರುಗೇಶ್ ಅವರು ಮಾತನಾಡಿ ಬೋವಿ ಜನಾಂಗದವರಿಗೆ ಸೌಲಭ್ಯಗಳನ್ನು ಕಲ್ಪಿಸುವ ಸಲುವಾಗಿ ಪ್ರತೇಕವಾಗಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ. ಜಿಲ್ಲಾ ಕೇಂದ್ರದಲ್ಲಿ ಈ ನಿಗಮದ ಪ್ರತ್ಯೇಕ ಕಚೇರಿ ಅಗತ್ಯವಿದೆ. ಅಲ್ಲದೆ ಜಿಲ್ಲಾ ಕೇಂದ್ರದಲ್ಲಿ ಬೋವಿ ಸಮುದಾಯ ಭವನ ನಿರ್ಮಾಣ ಕೂಡ ಆಗಬೇಕೆಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್. ಮುನಿರಾಜಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಮಹದೇವಯ್ಯ, ಬೋವಿ ಸಮಾಜದ ರಾಜ್ಯ ಮುಖಂಡರಾದ ಎಲ್. ನಾರಾಯಣ್, ಗೋವಿಂದರಾಜು ಸ್ವಾಮಿಗಳು, ಕೃಷ್ಣಮೂರ್ತಿ, ಸಿ.ಕೆ. ಗೋವಿಂದರಾಜು, ಎಸ್.ಆರ್. ಮಹದೇವ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜ. 30ರಂದು ಚಾ.ನಗರ ಜಿಲ್ಲಾ ಮಟ್ಟದ ಯುವಜನ ಮೇಳ
ಚಾಮರಾಜನಗರ, ಜ. 29 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಆಶ್ರಯದÀಲ್ಲಿ ಚಾಮರಾಜನಗರ ಜಿಲ್ಲಾ ಮಟ್ಟದ ಯುವಜನ ಮೇಳ ಉದ್ಘಾಟನಾ ಸಮಾರಂಭವನ್ನು ಜನವರಿ 30ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಸಮಾರಂಭ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸÀಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ನಗರಸಭೆ ಅಧ್ಯಕ್ಷರಾದ ಶೋಭ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಯಕ್ರಮದ ಅಂಗವಾಗಿ ಭಾವಗೀತೆ, ರಂಗಗೀತೆ, ಏಕಪಾತ್ರಾಭಿನಯ, ಲಾವಣಿ, ಜಾನಪದ ಗೀತೆ, ಜಾನಪದ ನೃತ್ಯ, ಕೋಲಾಟ, ಭಜನೆ, ಸೋಬಾನೆ ಪದ, ರಾಗಿ ಬೀಸುವ ಕಲ್ಲಿನ ಪದ, ಚರ್ಮವಾದ್ಯ ಮೇಳ ಹಾಗೂ ಡೊಳ್ಳು ಕುಣಿತ ಸ್ಪರ್ಧೆಗಳು ನಡೆಯಲಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಎಂ ಚಲುವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 2, 3ರಂದು ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕøತಿಕ ಸ್ಪರ್ಧೆ
ಚಾಮರಾಜನಗರ, ಜ. 29 :- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಚಾಮರಾಜನಗರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಯನ್ನು ಫೆಬ್ರವರಿ 2 ಹಾಗೂ 3ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಿದೆ.ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್ - ಪುರುಷರು (45 ವರ್ಷದೊಳಗಿನವರಿಗೆ) 100 ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, 10,000 ಮೀ. ಓಟ, ಉದ್ದಜಿಗಿತ, ಎತ್ತರ ಜಿಗಿತ, ಗುಂಡು ಎಸೆತ,ಡಿಸ್ಕಸ್ ಎಸೆತ, ಜಾವಲಿನ್ ಎಸೆತ, 4*100 ಹಾಗು 4*400 ರಿಲೇ ಸ್ಪರ್ಧೆಗಳಿವÉ.
ವಾಲಿಬಾಲ್, ಫುಟ್ ಬಾಲ್, ಕಬಡ್ಡಿ, ಕ್ರಿಕೆಟ್, ಚೆಸ್, ಷಟಲ್ ಬ್ಯಾಡ್ಮಿಂಟನ್, ಕೇರಂ, ಟೇಬಲ್ ಟೆನ್ನಿಸ್ ಹಾಗೂ ಸಿಂಗಲ್ ಮತ್ತು ಡಬಲ್ಸ್ ಲಾನ್ ಟೆನ್ನಿಸ್ ಪಂದ್ಯಾಟಗಳಿವೆ.
ಮಹಿಳೆಯರಿಗೆ (40 ವರ್ಷದೊಳಗಿನವರಿಗೆ) 100 ಮೀ, 200 ಮೀ, 400 ಮೀ, 800 ಮೀ, ಓಟ, ಉದ್ದಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಡಿಸ್ಕಸ್ ಎಸೆತ, ಜಾವಲಿನ್ ಎಸೆತ, 4*100 ಹಾಗು 4*400 ರಿಲೇ ಸ್ಪರ್ಧೆಗಳಿವೆ.
ಥ್ರೋಬಾಲ್, ಷಟಲ್ ಬ್ಯಾಡ್ಮಿಂಟನ್, ಟೆನಿಕಾಯಿಟ್ ರಿಂಗ್, ಕೇರಂ ಸಿಂಗಲ್ ಮತ್ತು ಡಬಲ್ಸ್ ಪಂದ್ಯಾಟಗಳಿವೆ.
ಅಥ್ಲೆಟಿಕ್ಸ್ - ಪುರುಷರು (40 ವರ್ಷ ಮೇಲ್ಪಟ್ಟವರಿಗೆ) 100 ಮೀ, 400 ಮೀ, 800 ಮೀ, ಓಟ, ಗುಂಡು ಎಸೆತ, ಡಿಸ್ಕಸ್ ಎಸೆತ, ಷಟಲ್ ಬ್ಯಾಡ್ಮೆಂಟನ್ (ಸಿಂಗಲ್ ಮತ್ತು ಡಬಲ್ಸ್) ಸ್ಪರ್ಧೆಗಳಿವೆ.
ಅಥ್ಲೆಟಿಕ್ಸ್ – ಮಹಿಳೆಯರಿಗೆ (40 ವರ್ಷ ಮೇಲ್ಪಟ್ಟವರಿಗೆ) 100 ಮೀ, 200 ಮೀ, 800 ಮೀ. ಓಟ, ಷಟಲ್ ಬ್ಯಾಡ್ಮಿಂಟನ್, ಟೆನಿಕಾಯಿಟ್ ರಿಂಗ್ ಸಿಂಗಲ್ಸ್ ಸ್ಪರ್ಧೆಗಳು ನಡೆಯಲಿವೆ.
ಸಾಂಸ್ಕøತಿಕ ಸ್ಪರ್ಧೆಗಳಾದ ಹಿಂದೂಸ್ಥಾನಿ ಸಂಗೀತ ಮೌಖಿಕ (ಕ್ಲಾಸಿಕಲ್), ಲಘು ಶಾಸ್ತ್ರೀಯ ಸಂಗೀತ, ಕರ್ನಾಟಕ ಸಂಗೀತ - ಶಾಸ್ತ್ರೀಯ ಸಂಗೀತ, ಲಘು ಶಾಸ್ತ್ರೀಯ ಸಂಗೀತ, ನೃತ್ಯ (ಶಾಸ್ತ್ರೀಯ) - ಕಥಕ್, ಒಡಿಸ್ಸಿ, ಕಥಕಳಿ, ಮಣಿಪುರಿ, ಕೂಚುಪುಡಿ, ಭರತನಾಟ್ಯ, ಜಾನಪದ ಗೀತೆ, ಲಘು ಶಾಸ್ತ್ರೀಯ ಸಂಗೀತ, ಕರಕುಶಲ ವಸ್ತುಗಳ ಪ್ರದರ್ಶನ, ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಹಾಗೂ ಲಘು ಶಾಸ್ತ್ರೀಯ ಸಂಗೀತ, ಕಿರುನಾಟಕ (12 ರಿಂದ 20 ಜನ), ಜಾನಪದ ನೃತ್ಯ (6 ಜನ) ಸ್ಪರ್ಧೆಗಳನ್ನು ನಡೆಸಲಾಗುವುದು.
ದೈಹಿಕ ಶಿಕ್ಷಣ ಶಿಕ್ಷಕ ಅಧ್ಯಾಪಕರು, ತರಬೇತುದಾರರು, ಪೊಲೀಸ್, ವೃತ್ತಿಪರ ಸಂಗೀತಗಾರರು, ದಿನಗೂಲಿ ನೌಕರರು, ಅರೆಕಾಲಿಕ ನೌಕರರು ಹಾಗೂ ಸಂಚಿತ ವೇತನ ನೌಕರರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.
ಭಾಗವಹಿಸುವ ಸರ್ಕಾರಿ ನೌಕರರು ತಮ್ಮ ಇಲಾಖೆಯ ಮುಖ್ಯಸ್ಥರಿಂದ ಅನುಮತಿ ಪತ್ರ ಪಡೆದು ಫೆಬ್ರವರಿ 2ರಂದು ಬೆಳಿಗ್ಗೆ 9.30 ಗಂಟೆ ಒಳಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ 08226-224934, ಮೊಬೈಲ್ 9611172984, 94822718278 ಸಂಪರ್ಕಿಸುವಂತೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಎಂ. ಚಲುವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಜ. 30ರಂದು ತಾಲೂಕು ಪಂಚಾಯತ್ ಸಾಮಾನ್ಯ ಸಭೆ
ಚಾಮರಾಜನಗರ, ಜ. 29 - ಚಾಮರಾಜನಗರ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯು ಅಧ್ಯಕ್ಷರಾದ ಎಚ್.ವಿ. ಚಂದ್ರು ಅವರ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ. 30ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಜ. 29 - ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಜನವರಿ 30ರಂದು ರಾಮಸಮುದ್ರ ಉಪವಿಭಾಗದ ವ್ಯಾಪ್ತಿಗೆ ಬರುವ ಭಾಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ರಾಮಸಮುದ್ರದ ಹೌಸಿಂಗ್ ಬೋರ್ಡ್, ಚಿಕ್ಕ ಬೀದಿ, ಪೊಲೀಸ್ ಕ್ವಾರ್ಟಸ್ ಹಾಗೂ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment