Friday, 19 January 2018

ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆ ಪರಿಶೀಲನೆ ಕಾರ್ಯ ಸಮರ್ಪಕವಾಗಿ ನಿರ್ವಹಿಸಿ : ಡಿಸಿ ಸೂಚನೆ... #vss (19-01-2018)


ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆ ಪರಿಶೀಲನೆ ಕಾರ್ಯ ಸಮರ್ಪಕವಾಗಿ ನಿರ್ವಹಿಸಿ : ಡಿಸಿ ಸೂಚನೆ... vss

ಚಾಮರಾಜನಗರ, ಜ. 19 :- ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ನಡೆದಿರುವ ಪ್ರಕ್ರಿಯೆಯನ್ನು ಹೋಬಳಿ ಮಟ್ಟದಲ್ಲಿ ಪರಿಶೀಲಿಸುವ ಸಲುವಾಗಿ ನೇಮಕವಾಗಿರುವ ನೋಡಲ್ ಅಧಿಕಾರಿಗಳು ವ್ಯಾಪಕ ಭೇಟಿ ನೀಡಿ ಪರಿಷ್ಕರಣೆ ಕಾರ್ಯದ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಬಿ. ರಾಮು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ನೇಮಕವಾಗಿರುವ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೇಮಕವಾಗಿರುವ ನೋಡಲ್ ಅಧಿಕಾರಿಗಳು ನಿಗದಿಪಡಿಸಿರುವ ಹೋಬಳಿಗಳಲ್ಲಿ ವ್ಯಾಪಕ ಪ್ರವಾಸ ಕೈಗೊಂಡು ಮತಗಟ್ಟೆ ಮಟ್ಟದ ಅಧಿಕಾರಿಗಳು ಸಂಬಂಧಿಸಿದ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮನೆಮನೆಗೆ ತೆರಳಿ ನಮೂನೆ 6,7,8 ಮತ್ತು 8ಎ ಅರ್ಜಿಗಳನ್ನು ಸ್ವೀಕರಿಸಿರುವ ಬಗ್ಗೆ ಹಾಗೂ ಈ ಅರ್ಜಿಗಳನ್ನು ತಹಸೀಲ್ದಾರ್ ಕಚೇರಿಗೆ ನೀಡಿ ಸ್ವೀಕೃತಿ ಪಡೆದಿದ್ದಾರೆಯೇ ಎಂದು ಪರಿಶೀಲಿಸಬೇಕು. ಪರಿಷ್ಕರಣೆ ಸಂದರ್ಭದಲ್ಲಿ ನಮೂನೆ 7ನ್ನು ಸ್ವೀಕರಿಸದೇ ಇದ್ದಲ್ಲಿ ವಿವರಣೆ ಪಡೆದು ಮತದಾರರ ನೋಂದಣಾಧಿಕಾರಿಗಳಿಗೆ ವರದಿ ಸಲ್ಲಿಸಿ ಪ್ರತಿಯೊಂದಿಗೆ ಜಿಲ್ಲಾ ಅಧಿಕಾರಿ ಕಚೇರಿಗೂ ಮಾಹಿತಿ ಸಲ್ಲಿಸುವಂತೆ ಬಿ. ರಾಮು ಅವರು ಸೂಚಿಸಿದರು.
ಹೋಬಳಿ ವ್ಯಾಪ್ತಿಯಲ್ಲಿ ಪ್ರತಿ ಗ್ರಾಮಗಳ ಮನೆಮನೆಗೆ ಭೇಟಿ ಪರಿಷ್ಕರಣಾ ಕಾರ್ಯ ಹೇಗೆ ನಡೆದಿದೆ ಎಂಬುದನ್ನು ಖುದ್ದು ಪರಿಶೀಲಿಸಬೇಕು. ಪರಿಶೀಲಿಸಿದ ಕಾರ್ಯ ಕುರಿತ ವರದಿಯನ್ನು ಆಯಾ ಸಂಜೆಯೇ ಸಲ್ಲಿಸಬೇಕು. ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಯಾವ ರೀತಿ ಕಾರ್ಯ ನಿರ್ವಹಿಸಿದ್ದಾರೆ ಎಂಬ ಬಗ್ಗೆ ಪರಿಶೀಲಿಸಬೇಕು. ಭಾನುವಾರವೂ ಸಹ ರಜೆ ಪಡೆಯದೆ ಕೆಲಸ ನಿರ್ವಹಿಸಬೇಕು. ಎಲ್ಲ ಮತಗಟ್ಟೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ತಹಸೀಲ್ದಾರರು ಪ್ರತಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಮತಗಟ್ಟೆ ಸಂಖ್ಯೆ ಬರೆಸಿ ಅದರ ಛಾಯಾಚಿತ್ರವನ್ನು ತಹಸೀಲ್ದಾರರಿಗೆ ಕಳುಹಿಸಬೇಕು. ಸ್ವೀಕೃತವಾಗಿರುವ ನಮೂನೆಗಳ ಮಾಹಿತಿಯನ್ನು ಸಲ್ಲಿಸಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮತಗಟ್ಟೆಗಳ ಪರಿಶೀಲನೆ ಕೆಲಸವನ್ನು ಯಾವುದೇ ಲೋಪವಿಲ್ಲದಂತೆ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಯಾವುದೇ ಲೋಪಕ್ಕೆ ಅವಕಾಶವಾಗದಂತೆ ನಿರ್ವಹಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಪ್ರತಿದಿನ ನಡೆಯುತ್ತಿರುವ ಕೆಲಸದ ವರದಿ ಕಡ್ಡಾಯವಾಗಿ ಸಲ್ಲಿಸಬೇಕು. ವಿಕಲಚೇತನರ ಪಟ್ಟಿಯನ್ನು ತಯಾರಿಸಿ ವಿಕಲಚೇತನರು ಯಾವುದೇ ಗೊಂದಲಕ್ಕೆ ಆಸ್ಪದವಿರದಂತೆ ಮತದಾನ ಮಾಡಲು ಅನುಕೂಲಗಳನ್ನು ಕಲ್ಪಿಸಲೂ ಸಹ ವಿಶೇಷ ಕ್ರಮ ತೆಗೆದುಕೊಳ್ಳಬೇಕು ಎಂದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲನೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮನೆಮನೆಗೆ ತೆರಳಿ ಪರಿಶೀಲಿಸಿದ ಸಂಬಂಧ ದಾಖಲೆಗಳನ್ನು ಸಹ ಸಲ್ಲಿಸಬೇಕು. ಯಾವುದೇ ವಿಳಂಬಕ್ಕೆ ಅವಕಾಶವಾಗದಂತೆ ಸೂಚಿಸಲಾಗಿರುವ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಹರೀಶ್ ಕುಮಾರ್ ಅವರು ಸೂಚಿಸಿದರು.
ಉಪವಿಭಾಗಾಧಿಕಾರಿ ಫೌಜಿಯಾ ತರನ್ನುಂ, ನೇಮಕವಾಗಿರುವ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಇಂದಿರಾಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್,ಏಕವಲ್ಯ ಮಾದರಿ ವಸತಿಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 

ಚಾಮರಾಜನಗರ, ಜ. 19:- ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಇಂದಿರಾಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 25ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಜನವರಿ 13 ಕಡೆಯ ದಿನವಾಗಿತ್ತು.  ಪೋಷಕರು ಹಾಗೂ ಜಿಲ್ಲಾ ಸಮನ್ವಯಾಧಿಕಾರಿಗಳ ಕೋರಿಕೆ ಮೇರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಿದೆ.
ಅರ್ಜಿಯನ್ನು ಜಿಲ್ಲಾ ಮಟ್ಟದ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ, ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ತಾಲೂಕಿನ ಮೊರಾರ್ಜಿ ದೇಸಾಯಿ, ಕಿತ್ತೂರುರಾಣಿ ಚೆನ್ನಮ್ಮ, ಏಕಲವ್ಯ ಮಾದರಿ ಶಾಲೆಗಳಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ವಸತಿಶಾಲಾ ಪ್ರಾಂಶುಪಾಲರಿಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

     ಜ. 20ರಂದು ನಗರ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ 

ಚಾಮರಾಜನಗರ, ಜ. 19 - ಚಾಮರಾಜನಗರ ಪಟ್ಟಣದಲ್ಲಿ, ರಸ್ತೆ ಅಗಲಿಕರಣ ಹಿನ್ನೆಲೆಯಲ್ಲಿ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಜನವರಿ 20ರಂದು ಸೆಸ್ಕ್ ಕೈಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಚಾಮರಾಜನಗರ ಪಟ್ಟಣದ ಹೌಸಿಂಗ್‍ಬೋರ್ಡ್, ಕೋರ್ಟ್‍ರಸ್ತೆ, ಕರಿನಂಜನಪುರ, ಟಿ.ಕೆ ಮೋಳೆ, ಬಿ. ರಾಚಯ್ಯ ಜೋಡಿರಸ್ತೆ, ಚಂದುಕಟ್ಟೆ ಮೋಳೆ, ಬ್ಯಾಡಮೂಡ್ಲು, ದೊಡ್ಡಮೋಳೆ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.




No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು