ನೇರ ಪೋನ್ ಇನ್ ಕಾರ್ಯಕ್ರಮ : 30 ದೂರುಗಳು ದಾಖಲು
ಚಾಮರಾಜನಗರ, ಫೆ 24 - ಜಿಲ್ಲೆಯ ನಾಗರಿಕರ ಕುಂದು ಕೊರತೆ ಆಲಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಇಂದು ನಡೆದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಒಟ್ಟು 30 ದೂರುಗಳು ದಾಖಲಾದವು.
ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಹಾಗೂ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ದೂರುಗಳು ಕೇಳಿಬಂದವು.
ಹೌಸಿಂಗ್ ಬೋರ್ಡ್ ವ್ಯಾಪ್ತಿಯಲ್ಲಿ ಚರಂಡಿ ವ್ಯವಸ್ಥೆ ಸರಿಯಾಗಿಲ್ಲದೆ ಬಚ್ಚಲು ನೀರು ಮನೆ ಮುಂದೆ ನಿಂತು ಅನೈರ್ಮಲ್ಯ ತಾಂಡವವಾಡುತ್ತಿದೆ. ಹಂದಿಗಳ ಅವಾಸ ಸ್ಥಾನವಾಗಿದೆ. ರಾತ್ರಿ ಹೊತ್ತು ಸೊಳ್ಳೆಗಳ ಕಾಟ ವಿಪರೀತವಾಗಿದೆ. ಅಲ್ಲದೆ ನಗರಸಭೆ ವತಿಯಿಂದ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿಲ್ಲ. ಚರಂಡಿ ಶುಚಿಗೊಳಿಸಿಲ್ಲ ಎಂದು ನಿವಾಸಿಯೊಬ್ಬರು ದೂರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಬಿ. ರಾಮು ನಿಯಮಿತವಾಗಿ ಚರಂಡಿ ಸ್ವಚ್ಛಗೊಳಿಸಲು ನಗರ ಸಭೆಯ ಅಧಿಕಾರಿಗಳಿಗೆ ಸೂಚಿಸಿದರು ಅಲ್ಲದೇ ಮನೆಯ ಮುಂದೆ ನೀರು ನಿಲ್ಲುವುದನ್ನು ತಪ್ಪಿಸಲು ಕ್ರಮ ವಹಿಸಲಾಗುವುದು ಎಂದರು.
ಕುದೇರು ಗ್ರಾಮದಲ್ಲಿ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ, ಕೆ.ಎಸ್.ಆರ್.ಟಿ.ಸಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡುವಂತೆ ಸ್ಥಳೀಯರೊಬ್ಬರು ಮನವಿ ಮಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಶೇ 90 ರಷ್ಟು ಶೌಚಾಲಯ ನಿರ್ಮಿಸಲಾಗಿದೆ ಆದರೆ ಅದು ಸರಿಯಾಗಿ ಬಳಕೆಯಾಗುತ್ತಿಲ್ಲ ಸಾರ್ವಜನಿಕ ಶೌಚಾಯಲವನ್ನು ನರೇಗಾ ಯೋಜನೆಯಡಿ ನಿರ್ಮಾಣ ಮಾಡಲಾಗುತ್ತಿದ್ದು, ಶೌಚಾಯಲದ ಬಳಕೆ ಮನೆ ಮನೆಗೆ ಭೇಟಿ ನೀಡಿ ಅರಿವು ಮೂಡಿಸಬೇಕು. ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗುತ್ತದೆ. ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ತಿಳಿಸಿದರು.
ಸದ್ಯದಲ್ಲೇ ಬೆಳಿಗ್ಗೆ 6 ಗಂಟೆಗೆ ಹಾಗೂ ಸಂಜೆ 5ಕ್ಕೆ ರಾತ್ರಿ 8.30ಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕುದೇರು ಮಾರ್ಗದಲ್ಲಿ ಬರುವಂತೆ ಸೂಚಿಸಲಾಗುತ್ತದೆ ಜಿಲ್ಲಾಧಿಕಾರಿ ಬಿ. ರಾಮು ಅವರು ತಿಳಿಸಿದರು.
ಗುಂಡ್ಲುಪೇಟೆ ತಾಲೂಕಿನ ಪಂಚನಹಳ್ಳಿಯ ನಿವಾಸಿ ಪೈಪ್‍ಲೈನ್ ಒಡೆದು 15 ದಿನಗಳಿಂದ ನೀರು ಪೋಲಾಗುತ್ತಿದೆ. ಕುಡಿಯಲು ನೀರು ಪೂರೈಕೆಯಾಗುತ್ತಿಲ್ಲ ಎಂದು ದೂರಿದರು
ಬೇಸಿಗೆ ಆರಂಭವಾಗುತ್ತಿದ್ದು, ಬಹುಗ್ರಾಮ ಯೋಜನೆಯಡಿ ಕುಡಿಯುವ ನೀರಿನ ವ್ಯತ್ಯಯ ಪರಿಹರಿಸಿ ಬೇಗ ಪೈಪ್‍ಲೈನ್ ಸರಿಪಡಿಸಿ ಕುಡಿಯುವ ನೀರಿಗೆ ತೊಂದರೆಯಾಗದಿರುವಂತೆ ನೊಡಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಚಾಮರಾಜನಗರ ಪಟ್ಟಣದಲ್ಲಿ ಅಕ್ರಮ ಕಸಾಯಿಖಾನೆ ಅಂಗಡಿ ತ್ಯಾಜ್ಯದಿಂದ ದುರ್ಗಂಧ ಹೆಚ್ಚುತ್ತಿದೆ ಎಂದು ಸ್ಥಳೀಯ ನಿವಾಸಿ ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಬಿ. ರಾಮು ಅವರು ಕಸಾಯಿ ಅಂಗಡಿಯನ್ನು ಮುಖ್ಯ ರಸ್ತೆಯಿಂದ ಬೇರೆಡೆ ಸ್ಥಳಾಂತರಿಸುವಂತೆ ಹಾಗೂ ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಿಸಲು ಅಧಿಕಾರಿಗಳಿಗೆ ಸೂಚಿಸಿದರು.
ತೆರಕಣಾಂಬಿ ನ್ಯಾಯಬೆಲೆ ಅಂಗಡಿಯಲ್ಲಿ ಕಂಪ್ಯೂಟರ್ ಆಪರೇಟರ್ ಪಡಿತರ ಚೀಟಿ ಒಂದÀಕ್ಕೆ 10 ರೂಪಾಯಿ ವಸೂಲಿ ಮಾಡುತ್ತಿರುವ ಬಗ್ಗೆ ಸ್ಥಳೀಯರೊಬ್ಬರು ದೂರಿದರು. ಪಡಿತರಕ್ಕೆ ಯಾವುದೇ ಹಣ ಪಡೆಯವಂತಿಲ್ಲ ವಸೂಲಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಬಿ. ರಾಮು ಅವರು ಸೂಚಿಸಿದರು.
ಜಿಲ್ಲೆಯ ವಿವಿಧ ಭಾಗಗಳಿಂದ ಕರೆ ಮಾಡಿದ ಸಮಸ್ಯೆಗಳನ್ನು ಆಲಿಸಿದ ಅವರು ಕಾರ್ಯಕ್ರಮದ ಬಳಿಕ ಪೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕೇಳಿ ಬಂದಿದ್ದ ದೂರುಗಳ ಇತ್ಯರ್ಥದ ಬಗ್ಗೆ ಪರಿಶೀಲಿಸಿದರು. ಸಾರ್ವಜನಿಕರ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸುವ ಕಡೆ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಸಂತ ಸೇವಾಲಾಲ್ ಅವರು ಧೈರ್ಯ ಹಾಗೂ ದಿಟ್ಟತನದ ಪ್ರತೀಕ: ರಾಮಚಂದ್ರ
ಚಾಮರಾಜನಗರ, ಫೆ 24 - ಸಂತ ಸೇವಾಲಾಲರು ಬಂಜಾರ ಸಮುದಾಯದ ಅಭಿವೃದ್ಧಿ ಪರ್ವದಲ್ಲಿ ಧೈರ್ಯ ಹಾಗೂ ದಿಟ್ಟತನದ ಪ್ರತೀಕವಾಗಿದ್ದರು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಂ. ರಾಮಚಂದ್ರ ಅವರು ಅಭಿಪ್ರಾಯ ಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದೊಂದಿಗೆ ನಗರದ ಜೆ. ಹೆಚ್. ಪಟೇಲ್ ಸಭಾಂಗಣದಲ್ಲಿಂದು ಆಯೋಜಿಸಲಾಗಿದ್ದ ಸಂತ ಸೇವಾಲಾಲ್ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಂಜಾರ ಸಮುದಾಯ ಅದೋಗತಿಗೆ ತಲುಪಿದ ಸಂದರ್ಭದಲ್ಲಿ ಜನಾಂಗದ ಪ್ರಮುಖರನ್ನು ಒಗ್ಗೂಡಿಸಿ ಸಮುದಾಯವನ್ನು ಉಳಿಸಿ, ಬೆಳೆಸುವಲ್ಲಿ ಧೈರ್ಯ ಹಾಗೂ ದಿಟ್ಟತನ ತೋರಿ ಸಮಾಜದ ಉನ್ನತ ಸ್ತರ ತಲುಪಿಸಿದ ಮಹಾನ್ ಪುರುಷ ಸೇವಾಲಾಲ್ ಎಂದರು.
ಸಂತ ಸೇವಾಲಾಲರು ಸಮಾಜದಲ್ಲಿನ ಅಸಮಾನತೆ ತೊಲಗಿಸಿ ಬಂಜಾರ ತಾಂಡ ಜನರ ಆಚಾರ ವಿಚಾರಗಳನ್ನು ಸರಿದಾರಿಗೆ ತಂದು ಸಮುದಾಯದ ಸಾಂಸ್ಕøತಿಕ ಇತಿಹಾಸವನ್ನು ರಕ್ಷಿಸಿ ಜೀವಂತವಾಗಿ ಉಳಿಯುವಂತೆ ಮಾಡಿದ್ದಾರೆ. ತಾಂಡಗಳ ಯುವಕರು ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದೆ ಬಂದು ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸಬೇಕು. ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನ ಪಡೆಯಬೇಕು ಎಂದು ರಾಮಚಂದ್ರ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಶಾಸಕರಾದ ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಸೇವಾಲಾಲರು ತಮ್ಮ ನೇರ ಮಾತುಗಳಿಂದ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದ ಮೇದಾವಿ. ತಾಂಡಗಳ ಜನರಲ್ಲಿ ನಾವೆಲ್ಲ ಒಂದೇ ಎಂಬ ಭಾವನೆಯೇ ಬಂಜಾರ ಜನಾಂಗದ ಶಕ್ತಿ. ಸಮುದಾಯದವರು ವಿದ್ಯಾವಂತರಾಗುತ್ತಿದ್ದು, ಉನ್ನತ ಹುದ್ದೆಗಳನ್ನು ಪಡೆಯುತ್ತಿರುವುದು ಪ್ರಸಂಶನೀಯ ಎಂದು ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಬಿ. ರಾಮು ಅವರು ಮಾತನಾಡಿ ಬಗರ್ ಹುಕುಮ್ ಕಾರ್ಯಕ್ರಮದಡಿ ಜಿಲ್ಲೆಯಲ್ಲಿರುವ ಎಲ್ಲಾ ತಾಂಡಗಳನ್ನು ಗುರುತಿಸಿ ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅವುಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಸಾಹಿತಿ ಹಾಗೂ ಸುರಾಪುರ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಪಳನಿಸ್ವಾಮಿ ಜಾಗೇರಿ ಅವರು ಸಮುದಾಯದ ಕುರಿತು ವಿವರಿಸಿ ಬಂಜಾರ ಜನಾಂಗದ ತಾಂಡಗಳು ಇಂದಿಗೂ ಶೈಕ್ಷಣಿಕವಾಗಿ ಹಿಂದುಳಿದಿವೆ. ನಿರ್ಗತಿಕರ ಬದುಕಿಗೆ ಇತಿಶ್ರೀ ಹಾಡಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಶಿಕ್ಷಣ ಸಂಘಟನೆ ಹಾಗೂ ಹೋರಾಟದ ಮನೋಭಾವನೆ ಬೆಳೆಸಿಕೊಂಡು ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಮುಂದೆ ಬರಬೇಕೆಂದು ತಿಳಿಸಿದರು.
ಜಿಲ್ಲಾ ಪಂಚಾಯತ್‍ನ ಉಪಾಧ್ಯಕ್ಷರಾದ ಯೋಗೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ತಾಯಿ ಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ, ಸದಸ್ಯರಾದ ಬಸವರಾಜು, ತಾಲೂಕು ಪಂಚಾಯಿತಿ ಸದಸ್ಯರಾದ ಮಣಿ, ಕುಮಾರ್ ನಾಯಕ್, ಬಂಜಾರ ಸಮಾಜದ ಮುಖಂಡರಾದ ಚಂದ್ರಕಲಾ ಬಾಯಿ, ಮಾದಪ್ಪ ನಾಯಕ್, ಎ.ಪಿ.ಎಂ.ಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಡಾ. ಕೆ. ಹರೀಶ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಫೆ. 26ರಂದು ನಗರದಲ್ಲಿ ದಲಿತ ವಚನಕಾರರ ಜಯಂತಿ ಆಚರಣೆ
ಚಾಮರಾಜನಗರ, ಫೆ. 24- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ದಲಿತ ವಚನಕಾರರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆಬ್ರವರಿ 26ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಸಮಾರಂಭ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ದಲಿತ ವಚನಕಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲÁ್ಲ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸÀಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಚಿತ್ರದುರ್ಗ ಜಿಲ್ಲೆಯ ಛಲವಾದಿ ಮಠ ಶಿಬಿರದ ಪೀಠಾಧ್ಯಕ್ಷರಾದ ಬಸವನಾಗಿ ದೇವಶರಣರು ವಿಶೇಷ ಉಪನ್ಯಾಸ ನೀಡುವರು. ಬೀದರ್‍ನ ರಾಷ್ಟ್ರ ಪ್ರಶಸ್ತಿ ಪುರಸ್ಕøತ ಕಲಾವಿದರಾದ ಶಂಭುಲಿಂಗ ವಾಲದೊಡ್ಡಿ ಅವರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕೆಎಸ್‍ಆರ್‍ಟಿಸಿ : ಪ್ರಯಾಣಿಕರಿಂದ ದಂಡ ವಸೂಲಿ
ಚಾಮರಾಜನಗರ, ಫೆ. 24- ಚಾಮರಾಜನಗರ ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2018ರ ಜನವರಿ ಮಾಹೆಯಲ್ಲಿ 2086 ಬಸ್ಸುಗಳನ್ನು ಮಾರ್ಗ ತನಿಖೆಗೆ ಒಳಪಡಿಸಿದ್ದು 236 ಪ್ರಕರಣಗಳನ್ನು ಪತ್ತೆ ಹಚ್ಚಿದೆ.
ಅಧಿಕೃತ ಟಿಕೆಟ್ ಪಡೆಯದೆ ನಿಗಮದ ಬಸ್ಸುಗಳ ಪ್ರಯಾಣಿಸುತ್ತಿದ್ದ 310 ಪ್ರಯಾಣಿಕರಿಂದ 36418 ರೂ.ಗಳ ದಂಡ ವಿಧಿಸಿದೆ ಎಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಅಶೋಕ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
Àಕೃಷಿ ಭಾಗ್ಯ ಯೋಜನೆ ಸೌಲಭ್ಯಕ್ಕೆ ಪ.ಜಾ., ಪ.ಪಂ. ರೈತರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಫೆ. 24 (- ತೋಟಗಾರಿಕೆ ಇಲಾಖೆ ವತಿಯಿಂದ ಕೃಷಿ ಭಾಗ್ಯ ಯೋಜನೆಯಡಿ ತರಕಾರಿ ಬೀಜಗಳ ಕಿಟ್ ವಿತರಣೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ.
ಈ ಯೋಜನೆಯಡಿ ಸಣ್ಣ, ಅತಿ ಸಣ್ಣ ರೈತರಿಗೆ ತಕಾರಿ ಬೆಳೆಗಳ ಉತ್ಪಾದನೆ ವೆಚ್ಚ ಕಡಿಮೆ ಮಾಡಲು ಸುಧಾರಿತ ತರಕಾರಿ ತಳಿಗಳ ಪರಿಚಯ ಹಾಗೂ ಉತ್ತಮ ಗುಣಮಟ್ಟದ ತರಕಾರಿ ಬೀಜಗಳು ದೊರಕುವಂತೆ ಖಚಿತಪಡಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ನೀರಾವರಿ ಸೌಲಭ್ಯವಿರುವ ಜಮೀನು ಹೊಂದಿದ್ದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ, ಅತೀ ಸಣ್ಣ ಹಾಗೂ ರೈತ ಮಹಿಳೆಯರಿಗೆ 2000 ರೂ.ಗಳ ತರಕಾರಿ ಬೀಜಗಳ ಕಿಟ್ ವಿತರಣೆ ಮಾಡಲಾಗುವುದು.
ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾಡಳಿತ ಭವನದಲ್ಲಿರುವ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಆಧಾರ್, ಚುನಾವಣಾ ಕಾರ್ಡ್, ಸ್ವಯಂ ಘೋಷಣಾ ಪತ್ರ (ಇತರೆ ಉತ್ಪಾದನಾ ಕ್ರಮಗಳನ್ನು ಅನುಸರಿಸುವ ಕುರಿತು)ದ ಪ್ರತಿಗಳನ್ನು ಲಗತ್ತಿಸಿ ಮಾರ್ಚ್ 5ರೊಳಗೆ ಸಲ್ಲಿಸಬೇಕು.
ರೈತರು ತರಕಾರಿ ಬೀಜಗಳ ಕಿಟ್ ಸವಲತ್ತನ್ನು ಪಡೆದುಕೊಂಡು ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾ.ನಗರ : ಅಂಗನವಾಡಿ, ಮಿನಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಫೆ. 24 - ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 5 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 25 ಅಂಗನವಾಡಿ ಹಾಗೂ 3 ಮಿನಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ 52 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಗೌರವಧನ ಸೇವೆಯ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳು ಮಾರ್ಚ್ 17ರ ಒಳಗೆ ಅರ್ಜಿ ಸಲ್ಲಿಸಬೇಕÀು.
ಹೆಚ್ಚಿನ ವಿವರಗಳಿಗೆ ಸಂಬಂಧಿಸಿದ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಥವಾ ವೆಬ್‍ಸೈಟ್ ತಿತಿತಿ.ಚಿಟಿgಚಿಟಿತಿಚಿಜiಡಿeಛಿಡಿuiಣ.ಞಚಿಡಿ.ಟಿiಛಿ.iಟಿ ನಿಂದ ಪಡೆಯುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ಯುವ ಪಡೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಫೆ. 24 - ಯುವ ಕಾರ್ಯ ಹಾಗು ಕೀಡಾ ಸಚಿವಾಲಯವು ನೆಹರು ಯುವ ಕೇಂದ್ರದ ಮೂಲಕ ರಾಷ್ಟ್ರೀಯ ಯುವ ಪಡೆಯ (ಓಚಿಣioಟಿಚಿಟ ಙouಣh ಅoಡಿಠಿs)ಎಂಬ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ.
ಈ ಯೋಜನೆಯಲ್ಲಿ ಯುವ ಜನರನ್ನು ನೇಮಕ ಮಾಡಿಕೊಂಡು ತರಬೇತಿ ನೀಡುವ ಮೂಲಕ ಗ್ರಾಮೀಣ ಪ್ರದೇಶದ ಯುವಜನರನ್ನು ಯುವಕ, ಯುವತಿ, ಮಹಿಳಾ ಮಂಡಳಿಗಳಾಗಿ ಸಂಘಟಿಸುವ ಹಾಗೂ ಸಮಾಜಮುಖಿಯನ್ನಾಗಿಸುವ ಕಾರ್ಯ ನಿರ್ವಹಿಸಬೇಕಾಗಿದ್ದು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ 18 ರಿಂದ 29ರ (01.04.2018ಕ್ಕೆ) ವಯೋಮಿತಿಯವರು ಅರ್ಹರು. ಕನಿಷ್ಟ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು. ಯಾವುದೇ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಾಗಿರಬಾರದು. ಬೇರಾವುದೇ ಸಂಘಸಂಸ್ಥೆ, ಇಲಾಖೆಯಲ್ಲಿ ಪೂರ್ಣ ಅಥವಾ ಅರೆಕಾಲಿಕ ಹುದ್ದೆಯಲ್ಲಿರಬಾರದು.
ಆಯ್ಕೆಯಾದ ಅಭ್ಯರ್ಥಿಗಳಿಗೆ 5 ಸಾವಿರ ರೂ.ಗಳ ಸಂಭಾವನೆ ಮತ್ತು ಪ್ರವಾಸಭತ್ಯೆಯಾಗಿ ನೀಡಲಾಗುವುದು.
ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದ ನೆಹರು ಯುವಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಮಾರ್ಚ್ 5ರ ಒಳಗೆ ಸಲ್ಲಿಸುವಂತೆ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಸ್. ಸಿದ್ಧರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾ.ನಗರ : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಫೆ. 24 ಚಾಮರಾಜನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 3 ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೋಟೆತಿಟ್ಟು, ಅರಳಿಕಟ್ಟೆ-2ನೇ(ಪ.ಜಾ), ಕೆಬ್ಬೆಪುರ (ಇತರೆ) ಹಾಗೂ ಮೂಡ್ನಾಕೂಡು-2ನೇ ಮತ್ತು ಕಿಲಗೆರೆ-2ನೇ(ಪ.ಜಾ) ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಬಸವಾಪುರ-3ನೇ ಹಾಗೂ ಯಡಪುರ (ಪ.ಜಾ) ಮತ್ತು ಕೇತಹಳ್ಳಿ (ಇತರೆ) ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಮಾರ್ಚ್ 17 ಅಂತಿಮ ದಿನ. ಹೆಚ್ಚಿನ ವಿವರಗಳಿಗೆ ವೆಬ್‍ಸೈಟ್ ತಿತಿತಿ.ಚಿಟಿgಚಿಟಿತಿಚಿಜiಡಿeಛಿಡಿuiಣ.ಞಚಿಡಿ.ಟಿiಛಿ.iಟಿ ನಿಂದ ಪಡೆಯುವಂತೆ ಚಾಮರಾಜನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ರಾಷ್ಟ್ರೀಯ, ಅಂತರಾಷ್ಟ್ರೀಯ ಪದಕ ವಿಜೇತ ಕ್ರೀಡಾಪಟುಗಳಿಗೆ ನಗದು ಬಹುಮಾನ : ಅರ್ಜಿ ಆಹ್ವಾನ
ಚಾಮರಾಜನಗರ, ಫೆ. 24:- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2015, 2016 ಹಾಗೂ 2017ನೇ ಸಾಲಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಹಾಗೂ ಅಮತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ್ನ ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ಸರ್ಕಾರದ ವತಿಯಿಂದ ನಗದÀು ಪುರಸ್ಕಾರವನ್ನು ನೀಡಲಾಗುತ್ತಿದೆ.
ಭಾರತ ಸರ್ಕಾರದಿಂದ ಅಂಗೀಕೃತವಾಗಿರುವ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ, ಪದಕ ವಿಜೇತರಾದಲ್ಲಿ 50 ಸಾವಿರ ರೂ.ಗಳ ನಗದು ಪುರಸ್ಕಾರ ನೀಡಲಾಗುವುದು. (ಒಲಂಪಿಕ್, ಏಷಿಯನ್, ಕಾಮನ್ ವೆಲ್ತ್ ಗೇಮ್ಸ್, ವಲ್ಡ್ ಕಪ್, ಚಾಂಪಿಯನ್ ಷಿಪ್, ನ್ಯಾಷನಲ್ ಗೇಮ್ಸ್ (ಪ್ರತಿ 4 ವರ್ಷಗಳಿಗೊಮ್ಮೆ ನಡೆಯುವ ಕ್ರೀಡೆಗಳು), ನ್ಯಾಷನಲ್ ಚಾಂಪಿಯನ್ ಷಿಪ್) ಜೂನಿಯರ್, ನಾನ್ ಜೂನಿಯರ್ ನ್ಯಾಷನಲ್)
ಒಲಂಪಿಕ್, ಕಾಮನ್ ವೆಲ್ತ್ ಮತ್ತು ಏಷಿಯನ್ ಗೇಮ್ಸ್ ಕ್ರೀಡಾಪಟುಗಳನ್ನು ಹೊರತುಪಡಿಸಿ ಉಳಿದ ಎಲ್ಲ ಕ್ರೀಡಾಕೂಟಗಳಲ್ಲಿ ಪದಕ ಪಡೆಯುವ ಕ್ರೀಡಾಪಟುಗಳಿಗೆ ವಾರ್ಷಿಕ ಗರಿಷ್ಟ 5 ಲಕ್ಷ ರೂ. ಅಥವ ವಾರ್ಷಿಕ ಅತ್ಯುತ್ತಮ ಎರಡು ಸಾಧನೆಗಳನ್ನು ಪರಿಗಣಿಸಿ ಯಾವುದು ಕಡಿಮೆಯೋ ಆ ಮೊತ್ತಕ್ಕೆ ನಗದು ಬಹುಮಾನವನ್ನು ನೀಡಲಾಗುವುದು.
ಕರ್ನಾಟಕವನ್ನು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಅರ್ಹ ಕ್ರೀಡಾಪಟುಗಳು ಮತ್ತು ಭಾರತವನ್ನು ಪ್ರತಿನಿಧಿಸಿ ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ನಿಗದಿತ ನಮೂನೆಯನ್ನು ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪಡೆದು ಭರ್ತಿ ಮಾಡಿ ಮಾರ್ಚ್ 25ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯ ದೂರವಾಣಿ ಸಂಖ್ಯೆ 08226-224932ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.