ಮತಗಟ್ಟೆಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಡಿ.ಸಿ. ಸೂಚನೆ
ಚಾಮರಾಜನಗರ, ಫೆ. 05 ಮುಂಬರುವ ವಿಧಾನ ಸಭಾ ಚುನಾವಣೆ ಉದ್ದೇಶದಿಂದ ಜಿಲ್ಲೆಯಲ್ಲಿ ಗುರುತಿಸಲಾಗಿರುವ ಮತಗಟ್ಟೆಗಳಿಗೆ ಮೂಲಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಮುಂದಾಗುವಂತೆ ಜಿಲ್ಲಾಧಿಕಾರಿ ಬಿ. ರಾಮು ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇಂದು ನಡೆದ ವಿಧಾನಸಭಾ ಚುನಾವಣೆ ಸಂಬಂಧ ಕೈಗೊಳ್ಳಬೇಕಿರುವ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆಗಳುಯ ಇರುವ ಬಗ್ಗೆ ತಹಸೀಲ್ದಾರ್ ಅವರು ಖಾತರಿ ಮಾಡಿಕೊಳ್ಳಬೇಕು. ಗುರುತಿಸಲಾಗಿರುವ ಮತಗಟ್ಟೆ ಕೊಠಡಿಗಳು ದುರಸ್ತಿಯಾಗಬೇಕಿದ್ದರೆ ತಕ್ಷಣವೇ ಅದಕ್ಕೆ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಮತಗಟ್ಟೆಗಳಲ್ಲಿ ಪೀಠೋಪಕರಣಗಳು ಸಹ ಇರಬೇಕು. ಇತರೆ ಅಗತ್ಯ ಸೌಲಭ್ಯಗಳು ಇದೆಯೇ ಎಂದು ಪರಿಶೀಲಿಸಬೇಕು. ಇಲ್ಲವಾದಲ್ಲಿ ಯಾವ ಅವಶ್ಯಕತೆ ಇದೆ ಎಂಬುದನ್ನು ಪರಿಶೀಲಿಸಿ ಅದರ ಅನುಷ್ಠಾನಕ್ಕೆ ಮುಂದಾಗಬೇಕು. ಈಗಾಗಲೇ ಪ್ರಥಮವಾಗಿ ಕೆಲ ಮಾಹಿತಿ ಪಡೆಯಲಾಗಿದೆ. ಅದರ ಅನುಸಾರ ಆಗಬೇಕಿರುವ ಕೆಲಸಗಳಿಗೆ ಸೂಚಿಸಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.
ಸೆಕ್ಟರ್ ಅಧಿಕಾರಿಗಳ ನೇಮಕ, ರೂಟ್ ಮ್ಯಾಪ್, ಇನ್ನಿತರ ಪ್ರಕ್ರಿಯೆಗೂ ಪೂರ್ವಸಿದ್ಧತೆ ಮಾಡಬೇಕು. ಸರ್ಕಾರಿ ವಾಹನಗಳನ್ನು ಚುನಾವಣೆ ಕಾರ್ಯಕ್ಕೆ ಬಳಸಲಾಗುತ್ತದೆ. ಹೀಗಾಗಿ ಎಲ್ಲವೂ ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಚುನಾವಣೆ ಸಂದರ್ಭದಲ್ಲಿ ಭದ್ರತೆಗಾಗಿ ನಿಯೋಜಿಸಲ್ಪಡುವ ಅಧಿಕಾರಿ ಸಿಬ್ಬಂದಿಗೆ ವಾಸ್ತವ್ಯಕ್ಕಾಗಿ ಲಭ್ಯವಿರುವ ಕೊಠಡಿಗಳನ್ನು ಗುರುತಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಅವರು ಮಾತನಾಡಿ ಜಿಲ್ಲೆಗೆ ಹೊಂದಿಕೊಂಡಿರುವ ಅಂತರ್ ರಾಜ್ಯ ಚೆಕ್ ಪೋಸ್ಟ್‍ಗಳನ್ನು ಸಹ ತೆರೆಯಲಾಗುತ್ತದೆ. ಇಲ್ಲಿಗೆ ಅಗತ್ಯವಿರುವ ಸಿಬ್ಬಂದಿ ನೇಮಕ ಮಾಡಲಾಗುತ್ತದೆ. ಚೆಕ್ ಪೋಸ್ಟ್‍ಗಳಿಗೆ ವಿದ್ಯುತ್, ಇನ್ನಿತರ ಅಗತ್ಯ ಸಿದ್ಧತೆಗಳನ್ನು ಸಹ ಮಾಡಬೇಕಾಗುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಉಪವಿಭಾಧಿಕಾರಿ ಫೌಜಿಯಾ ತರನಮ್, ತಹಸೀಲ್ದಾರ್ ಕೆ. ಪುರಂಧರ್, ಚಂದ್ರಮೌಳಿ, ಕಾಮಾಕ್ಷಮ್ಮ, ಸಿದ್ದು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಎಚ್. ಸತೀಶ್, ಜಂಟಿ ಕೈಗಾರಿಕಾ ನಿರ್ದೇಶಕರಾದ ಮರುಳೇಶ್, ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್, ಅರಣ್ಯ, ಅಗ್ನಿಶಾಮಕ ದಳ, ಕೆಎಸ್‍ಆರ್‍ಟಿಸಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಫೆ. 7ರಂದು ಚಾಮರಾಜನಗರದಲ್ಲಿ ವಿದ್ಯುತ್ ಸಂಬಂಧ ಜನಸಂಪರ್ಕ ಸಭೆ
ಚಾಮರಾಜನಗರ, ಫೆ. 05 ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಚಾಮರಾಜನಗರ ಉಪವಿಭಾಗದ ಕಚೇರಿ ಆವರಣದಲ್ಲಿ ಫೆಬ್ರವರಿ 7ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನಸಂಪರ್ಕ ಸಭೆಯನ್ನು ನಡೆಸಲಿದೆ.ವಿದ್ಯುತ್ ಸಂಬಂಧಿತ ಕುಂದುಕೊರತೆ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಸಭೆಗೆ ಹಾಜರಾಗಿ ತಿಳಿಸಿ ಪರಿಹರಿಸಿಕೊಳ್ಳÀಬಹುದೆಂದು ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ.6 ರಿಂದ ರಾಗಿ ಖರೀದಿ ಕೆಂದ್ರಗಳು ಆರಂಭ
ಚಾಮರಾಜನಗರ, ಫೆ. 05 - ಜಿಲ್ಲೆಯಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡುವ ಸಲುವಾಗಿ ಚಾಮರಾಜನಗರ ತಾಲ್ಲೋಕಿನ ಕಾಳನಹುಂಡಿ ರಸ್ತೆಯಲ್ಲಿರುವ ರಾಜ್ಯ ಉಗ್ರಾಣ ನಿಗಮ ಹಾಗೂ ಕೊಳ್ಳೇಗಾಲ ಪಟ್ಟಣದ ಕುರುಬನಕಟ್ಟೆ ರಸ್ತೆಯಲ್ಲಿರುವ ರಾಜ್ಯ ಉಗ್ರಾಣ ನಿಗಮದಲ್ಲಿ ಫೆಬ್ರವರಿ 6 ರಿಂದ ಖರೀದಿ ಕೇಂದ್ರ ತೆರೆಯಲಾಗಿದೆ.ಖರೀದಿ ಕೇಂದ್ರಗಳು ಮಾರ್ಚ್ ಅಂತ್ಯದವರೆಗೂ ಕಾರ್ಯ ನಿರ್ವಹಿಸಲಿವೆ. ಪ್ರತಿ ಕ್ವಿಂಟಾಲ್ ರಾಗಿಗೆ 2300 ರೂ ನಿಗಧಿಪಡಿಸಿದ್ದು, ಈ ದರ ಅನುಸಾರ ರಾಗಿಯನ್ನು ಖರೀದಿ ಮಾಡಲಾಗುತ್ತದೆ. ಖರೀದಿ ಕೇಂದ್ರಗಳಲ್ಲಿ ಗ್ರೇಡರ್‍ಗಳನ್ನು ನೇಮಕ ಮಾಡಲಾಗಿದೆ. ಗುಣಮಟ್ಟದ ರಾಗಿಯನ್ನು ಖರೀದಿ ಮಾಡಲಾಗುತ್ತದೆ. ರಾಗಿ ತರುವ ರೈತರು ಬೆಳೆಗಾರರಿಂದ ಆರ್.ಟಿ,ಸಿ. ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ ಪಡೆಯಲಾಗುತ್ತದೆ. ರಾಗಿ ಖರೀದಿಸಿದ ನಂತರ ರೈತರು ಬೆಳೆಗಾರರ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುತ್ತದೆ.
ಖರೀದಿ ಕೇಂದ್ರದಲ್ಲಿ ಯಾವುದೇ ದಲ್ಲಾಳಿಗಳಿಗೆ ಅವಕಾಶವಿರುವುದಿಲ್ಲ. ರಾಗಿ ಬೆಳೆಗಾರರು ರೈತರು ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ಖರೀದಿಸುವ ಸಲುವಾಗಿ ತೆರೆಯಲಾಗಿರುವ ಖರೀದಿ ಕೇಂದ್ರಗಳ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 6ರಂದು ಮೂಡ್ನಾಕೂಡುವಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಕುರಿತ ವಿಚಾರ ಸಂಕಿರಣ, ಕಾರ್ಯಾಗಾರ
ಚಾಮರಾಜನಗರ, ಫೆ. 05 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರದ ಜನಹಿತಾಶಕ್ತಿ ಹೋರಾಟ ವೇದಿಕೆ ಇವರ ಸಹಕಾರದೊಂದಿಗೆ ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ 1955 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವಗರ್Àಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1959 ಹಾಗೂ 1905ರ ಕುರಿತಂತೆ ವಿಚಾರ ಸಂಕಿರಣ ಮತ್ತು ಕಾರ್ಯಾಗಾರವನ್ನು ತಾಲೂಕಿನ ಮೂಡ್ನಾಕೂಡಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಫೆಬ್ರವರಿ 6ರಂದು ಬೆಳಿಗ್ಗೆ 11 ಗÀಂಟೆಗೆ ಆಯೋಜಿಸಲಾಗಿದೆ.ನಗರದ ಇಂಟರ್ ನ್ಯಾಷನಲ್ ಚಾರಿಟಬಲ್ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಪೂಜ್ಯ ಬಂತೇ ಬೋಧಿತತ್ವ ಅವರು ದಿವ್ಯ ಸಾನಿಧ್ಯ ವಹಿಸುವರು.
ಹರವೆ ಮಠಾಧೀಶರಾದ ಪೂಜ್ಯ ಶ್ರೀ ಸರ್ಪಭೂಷಣ ಸ್ವಾಮೀಜಿಯವರು ಉದ್ಘಾಟನೆ ನೆರವೇರಿಸುವರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಕರಾದ ಬಿ. ಮಹದೇವ ಅಧ್ಯಕ್ಷತೆ ವಹಿಸುವರು.
ಸಾಹಿತಿ ಹಾಗೂ ವಿಚಾರವಾದಿಗಳಾದ ಸೋಮಶೇಖರ ಬಿಸಲ್ವಾಡಿ ಹಾಗೂ ನಗರದ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಪಿ. ದೇವರಾಜು ಅವರು ವಿಚಾರ ಮಂಡಿಸುವರು.
ಪ್ರಜಾ ಪರಿವರ್ತನಾ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಸಿ.ಎಂ. ಕೃಷ್ಣಮೂರ್ತಿ, ದ.ಸಂ.ಸ.ದ ರಾಜ್ಯ ಸಂಯೋಜಕರಾದ ಕೆ.ಎಂ. ನಾಗರಾಜು, ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷರಾದ ಮೂಡ್ನಾಕೂಡು ಪ್ರಕಾಶ್, ಕದಂಬ ಕನ್ನಡ ಸೇನೆಯ ರಾಜ್ಯಾಧ್ಯಕ್ಷರಾದ ಕದಂಬ ನಾ. ಅಂಬರೀಷ್, ನಿಜಧ್ವನಿ ಸೇವಾ ಸಮಿತಿಯ ಜಿಲ್ಲಾಧ್ಯಕ್ಷರಾದ ನಿಜಧ್ವನಿ ಗೋವಿಂದರಾಜು, ಯುವ ಮುಖಂಡರಾದ ಕೆರೆಹಳ್ಳಿ ಬಸವರಾಜು, ಇದಾಯತ್ ಷರೀಫ್, ದಲಿತ ಮುಖಂಡರಾದ ಹೆಗ್ಗವಾಡಿ ಕೆಂಪರಾಜು, ಹೊಸಹಳ್ಳಿ ಮಧುಸೂದನ್, ಕೆರೆಹಳ್ಳಿ ರಾಜುಕುಮಾರ್, ಹರವೆ ಹೊಸಹಳ್ಳಿ ಡಾ. ಬಿ.ಆರ್. ಅಂಬೇಡ್ಕರ್ ಸಂಘದ ನಾಗೇಂದ್ರ ಹೊಸಹಳ್ಳಿ, ಕುಲಗಾಣದ ಡಾ. ಬಿ.ಆರ್. ಅಂಬೇಡ್ಕರ್ ಸಂಘದ ಕುಲಗಾಣ ಷಡಕ್ಷರಿ, ಮೂಡ್ನಾಕೂಡು ಮಹಿಳಾ ಸಂಘದ ಅಧ್ಯಕ್ಷರಾದ ಭಾಗ್ಯಮ್ಮ, ಪದ್ಮಾವತಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜನಹಿತಾಸಕ್ತಿ ಹೋರಾಟ ವೇದಿಕೆಯ ಜಿಲ್ಲಾಧ್ಯಕ್ಷರಾದ ರಾಮಸಮುದ್ರ ಸುರೇಶ್, ಜಿಲ್ಲಾ ಉಪಾಧ್ಯಕ್ಷರಾದ ಸಿದ್ದಯ್ಯನಪುರ ಧನಂಜಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಡಹಳ್ಳಿ ನಾಗರಾಜು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಫೆ. 7ರಂದು ಹರದನಹಳ್ಳಿಯಲ್ಲಿ ಸೆಸ್ಕ್ ಜನಸಂಪರ್ಕ ಸಭೆ
ಚಾಮರಾಜನಗರ, ಫೆ. 05 - ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಹರದನಹಳ್ಳಿ ಉಪವಿಭಾಗದ ಸೆಸ್ಕ್ ಕಚೇರಿಯಲ್ಲಿ ಫೆಬ್ರವರಿ 7ರಂದು ಮಧ್ಯಾಹ್ನ 3.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜನಸಂಪರ್ಕ ಸಭೆಯನ್ನು ನಡೆಸಲಿದೆ.ವಿದ್ಯುತ್ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಸಭೆಗೆ ಹಾಜರಾಗಿ ತಿಳಿಸಬಹುದೆಂದು ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆÀ ಕೌಶಲ್ಯಾಭಿವೃದ್ಧಿ ತರಬೇತಿ : ಹೆಸರು ನೊಂದಾಯಿಸಿ
ಚಾಮರಾಜನಗರ, ಫೆ. 05 - ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬÉೀತಿ ನೀಡಿ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ವೆಬ್ ಸೈಟ್ ತಿತಿತಿ.sಣsಞiಟಟಞಚಿಡಿ.iಟಿ ನಲ್ಲಿ ವಿವರಗಳನ್ನು ನೊಂದಾಯಿಸಲು ತಿಳಿಸಿದೆ.ಹೆಸರು ನೊಂದಾಯಿಸಲು ಫೆಬ್ರವರಿ 21 ಕಡೆಯ ದಿನ.
ಹೆಚ್ಚಿನ ಮಾಹಿತಿಗೆ ತಾಲೂಕಿನ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ (ದೂ.ಸಂಖ್ಯೆ 08226-226070), ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ, ನಿರ್ದೇಶಕರ ಕಚೇರಿ, 1ನೇ ಮಹಡಿ, ಲೋಟಸï ಟವರ್ಸ್, ರೇಸ್ ಕೋರ್ಸ್ ರಸ್ತೆ, ಬೆಂಗಳೂರು ಅಥವಾ ಸಹಾಯವಾಣಿ ಸಂಖ್ಯೆ 9972494764ನ್ನು ಸಂಪರ್ಕಿಸಿ ಪಡೆದುಕೊಳ್ಳುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ರೀಡಾ ವಸತಿಶಾಲೆಗೆ ಆಯ್ಕೆ ಪ್ರಕ್ರಿಯೆ
ಚಾಮರಾಜನಗರ, ಫೆ. 05 :- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2018-19ನೇ ಸಾಲಿಗೆ ಕ್ರೀಡಾ ವಸತಿಶಾಲೆಗೆ ಆಯ್ಕೆ ಪ್ರಕ್ರಿಯೆಯನ್ನು ತಾಲೂಕುವಾರು ಕೈಗೊಂಡಿದೆ.ಫೆಬ್ರವರಿ 6ರಂದು ಬೆಳಿಗ್ಗೆ 9.30 ಗಂಟೆಗೆ ಗುಂಡ್ಲುಪೇಟೆಗೆ ಸಂಬಂಧಿಸಿದಂತೆ ಗುಂಡ್ಲುಪೇಟೆ ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣ, ಫೆಬ್ರವರಿ 7ರಂದು ಕೊಳ್ಳೇಗಾಲ ತಾಲೂಕಿನ ಸಂಬಂಧಿಸಿದಂತೆ ಕೊಳ್ಳೇಗಾಲ ಪಟ್ಟಣದ ಮಹದೇಶ್ವರ ಕಾಲೇಜು ಮೈದಾನ, ಫೆಬ್ರವರಿ 8ರಂದು ಚಾಮರಾಜನಗರ ತಾಲೂಕಿಗೆ ಸಂಬಂಧಿಸಿದಂತೆ ನಗರದ ಡಾ.ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣ, ಫೆಬ್ರವರಿ 9ರಂದು ಹನೂರು ತಾಲೂಕಿಗೆ ಸಂಬಂಧಿಸಿದಂತೆ ಹನೂರು ಪಟ್ಟಣದ ಮಲೆಮಹದೇಶ್ವರ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಬೆಳಿಗ್ಗೆ 9.30 ಗಂಟೆಗೆ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ. ಪ್ರಸಕ್ತ ಸಾಲಿನಲ್ಲಿ 7 ಮತ್ತು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು 2018-19ನೇ ಸಾಲಿಗೆ ಕ್ರಮವಾಗಿ 8ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಆಸಕ್ತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕು. ವಿವರಗಳಿಗೆ ಬಿ.ಕೆ. ಗೋಪಾಲ್, ಫುಟ್ ಬಾಲ್ ತರಬೇತುದಾರರು (ಮೊ. 9945615695), ಮಹದೇವಯ್ಯ, ವಾಲಿಬಾಲ್ ತರಬೇತುದಾರರು (ಮೊ. 7760841489), ಕೆ.ಸಿ. ಶಿವಣ್ಣ (ಮೊ. 9482990914), ಬಿ.ಎಸ್. ಕಾರ್ತಿಕ್ (ಮೊ.9901062721) ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದೂರವಾಣಿ ಸಂಖ್ಯೆ 08226-224932 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
No comments:
Post a Comment