Thursday, 8 February 2018

ರಾಜ್ಯಮಟ್ಟದ ಯುವಜನಮೇಳ : ಜಿಲ್ಲೆಯ ಶ್ರೀ ಗುರುಮಲ್ಲೇಶ್ವರ ಭಜನಾ ಸಂಘಕ್ಕೆ ಪ್ರಥಮ ಸ್ಥಾನ (08-02-2018)

   

ಪ.ಜಾ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಾಮರಾಜನಗರ, ಫೆ. 08 - ಸಮಾಜ ಕಲ್ಯಾಣ ಇಲಾಖೆಯು 2017-18ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ (ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ) ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಿದೆ.
ಅರ್ಜಿ ಸಲ್ಲಿಕೆಗೆ ಈ ಹಿಂದೆ 2017ರ ನವೆಂಬರ್ 30 ಕಡೆಯ ದಿನವಾಗಿತ್ತು ಎಂದು ತಿಳಿಸಲಾಗಿತ್ತು. ವಿಶ್ವವಿದ್ಯಾನಿಲಯಗಳ ಫಲಿತಾಂಶ ಪ್ರಕಟವಾಗದಿರುವ ಹಾಗೂ ತಡವಾಗಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ಅಂತಿಮವಾಗಿ ಫೆಬ್ರವರಿ 15ರವರೆಗೆ ವಿಸ್ತರಿಸಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.


ಅಂತರ್ಜಾತಿ ವಿವಾಹಿತ ದಂಪತಿಗಳಿಗೆ ಪ್ರೋತ್ಸಾಹಧನ ಮಂಜೂರಾತಿ : ತಂತ್ರಾಂಶ ಅಭಿವೃದ್ಧಿ

ಚಾಮರಾಜನಗರ, ಫೆ. 08 - ಸಮಾಜ ಕಲ್ಯಾಣ ಇಲಾಖೆಯು ಅಸ್ಪøಶ್ಯತೆಯ ನಿವಾರಣೆಗಾಗಿ ಅಂತರ್ಜಾತಿ ವಿವಾಹಿತ ದಂಪತಿಗಳಿಗೆ ಪ್ರೋತ್ಸಾಹಧನ ಮಂಜೂರಾತಿಗಾಗಿ ಸರಳೀಕರಣ ಹಾಗೂ ಪ್ರೋತ್ಸಾಹಧನ ತ್ವರಿತ ಮಂಜೂರಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ತಂತ್ರಾಂಶವನ್ನು ಸಿದ್ಧಪಡಿಸಲಾಗಿದೆ.
ಈ ಯೋಜನೆಯಡಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಲು ಇಚ್ಚಿಸುವ ದಂಪತಿಗಳು ಕಡ್ಡಾಯವಾಗಿ ಸಮಾಜ ಕಲ್ಯಾಣ ಇಲಾಖೆಯ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಮಟ್ಟದ ಯುವಜನಮೇಳ : ಜಿಲ್ಲೆಯ ಶ್ರೀ ಗುರುಮಲ್ಲೇಶ್ವರ ಭಜನಾ ಸಂಘಕ್ಕೆ ಪ್ರಥಮ ಸ್ಥಾನ

ಚಾಮರಾಜನಗರ, ಫೆ. 08 - ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ರಾಜ್ಯಮಟ್ಟದ ಯುವಜನ ಮೇಳದಲ್ಲಿ ಚಾಮರಾಜನಗರ ಜಿಲ್ಲೆಯ ಕಟ್ನವಾಡಿ ಗ್ರಾಮದ ಶ್ರೀ ಗುರುಮಲ್ಲೇಶ್ವರ ಭಜನಾ ಸಂಘವು ಭಜನೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ.
ಭಜನಾ ತಂಡದಲ್ಲಿ ರಾಚಪ್ಪ, ಎನ್. ರಮೇಶ್, ಬಸವರಾಜು, ಡಿ.ಸಿ. ಗುರುಮೂರ್ತಿ, ಮಾದೇಶ್ ಬಲಚವಾಡಿ, ಮಹದೇವ ಪ್ರಸಾದ್, ಬಿ. ಶಂಭುಲಿಂಗಪ್ಪ ಕಲಾವಿದರು ಭಾಗವಹಿಸಿದ್ದರು.
ಕಳೆದ ಫೆಬ್ರವರಿ 2 ರಿಂದ 4ರವರೆಗೆ ನಡೆದ ರಾಜ್ಯಮಟ್ಟದ ಯುವಜನ ಮೇಳದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂಡದ ಶ್ರೀ ಗುರುಮಲ್ಲೇಶ್ವರ ಭಜನಾ ಸಂಘದ ಸದಸ್ಯರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ. ಚಲುವಯ್ಯ ಅವರು ಇಂದು ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯಲ್ಲಿ ಅಭಿನಂದಿಸಿದರು.






No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು