Thursday, 15 February 2018

ಹರವೆ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ (15-02-2018)

ಹರವೆ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಚಾಮರಾಜನಗರ, ಫೆ. 15 - ಚಾಮರಾಜನಗರ ತಾಲೂಕಿನ ಹರವೆ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಸಕ್ಕರೆ, ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ (ಗೀತಾ ಮಹದೇವಪ್ರಸಾದ್) ಅವರು ಇತ್ತೀಚೆಗೆ ಚಾಲನೆ ನೀಡಿದರು.
ಕಲ್ಪುರ ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಮುಕ್ಕಡಹಳ್ಳಿಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ 42 ಲಕ್ಷ ರೂ. ಹಾಗೂ ಕೆರೆಹಳ್ಳಿಯಲ್ಲಿ 22 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದರು.
ಭುಜಗನಪುರದಲ್ಲಿ 25 ಲಕ್ಷ ರೂ. ಹಾಗೂ ಜೋಗಿ ಕಾಲೋನಿಯಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯ ಸರ್ಕಾರ ಗ್ರಾಮೀಣ ಭಾಗಗಳ ಮೂಲ ಸೌಕರ್ಯಕ್ಕೆ ಒತ್ತು ನೀಡಿದೆ. ರಸ್ತೆ, ಚರಂಡಿ, ಕುಡಿಯುವ ನೀರು ಸೌಲಭ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಂಡಿದೆ ಎಂದರು.
ಹರವೆ ಭಾಗದಲ್ಲಿ ಅಭಿವೃದ್ಧಿ ಕೆಲಸಗಳನ್ನು ಸಾಕಷ್ಟು ಕೈಗೊಳ್ಳಲಾಗಿದೆ. ಉಸ್ತುವಾರಿ ಸಚಿವರಾಗಿದ್ದ ಮಹದೇವಪ್ರಸಾದ್ ಅವರ ಅವಧಿಯಲ್ಲಿಯೂ ನಾನಾ ಪ್ರಗತಿಪರ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ. ರಸ್ತೆ, ಕುಡಿಯುವ ನೀರು, ಕೆರೆ ತುಂಬಿಸುವ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಪಂಚಾಯತ್ ರಾಜ್ ವಿಕೇಂದ್ರೀಕರಣದಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಿದೆ. ರಾಜ್ಯ ಸರ್ಕಾರ ಇದರ ಅನುಷ್ಠಾನಕ್ಕೆ ಬದ್ಧತೆ ತೋರಿದ್ದು ವಿಶೇಷ ಗಮನ ನೀಡಲಾಗಿದೆ ಎಂದು ಗೀತಾ ಮಹದೇವಪ್ರಸಾದ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್ ಅವರು ಮಾತನಾಡಿ ಹರವೆ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ಸಾಗಿವೆ. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಮಹದೇವಪ್ರಸಾದ್ ಅವರ ಕಾಳಜಿಯಿಂದಾಗಿ ಈ ಭಾಗದಲ್ಲಿ ಅಭಿವೃದ್ಧಿ ಕೆಲಸಗಳು ಹೆಚ್ಚು ನಡೆದಿವೆ ಎಂದರು.
ರಾಜ್ಯ ಸರ್ಕಾರ ಮೂಲಸೌಕರ್ಯ, ಮಹಿಳೆಯರ ಸಬಲೀಕರಣ ಸೇರಿದಂತೆ ಹಲವಾರು ಪ್ರಮುಖ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿದೆ. ಅಭಿವೃದ್ಧಿ, ಜನಪರ ಕೆಲಸಗಳಿಗೆ ಹೆಚ್ಚು ಗಮನ ಹರಿಸಿ ಅನುಷ್ಠಾನ ಮಾಡಿದೆ. ಪಂಚಾಯತ್ ರಾಜ್ ವ್ಯವಸ್ಥೆಯ ವಿಕೇಂದ್ರೀರಣಕ್ಕೂ ಪ್ರಾಮುಖ್ಯತೆ ನೀಡಿದ ಪರಿಣಾಮ ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿ ಕಾರ್ಯಗಳು ಹೆಚ್ಚು ಪ್ರಮಾಣದಲ್ಲಿ ನಿರ್ವಹಣೆಯಾಗುತ್ತಿದೆ ಎಂದು ನವೀನ್ ಅವರು ತಿಳಿಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಸದಸ್ಯರಾದ ರೇವಣ್ಣ, ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಮುಕ್ಕಡಹಳ್ಳಿ ರವಿಕುಮಾರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹದೇವಪ್ಪ, ಪುಷ್ಪಲತಾ, ಸದಸ್ಯರಾದ ವೀರಭದ್ರಯ್ಯ, ಮಂಜುನಾಥ್, ಮುಖಂಡರಾದ ಗುರುಸಿದ್ದೇಗೌಡ, ಉದಯಕುಮಾರ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.



ಬಾಲ ಕಾರ್ಮಿಕರ ಪುನರ್ವಸತಿ ಶಾಲೆ ನಡೆಸಲು ಪ್ರಸ್ತಾವನೆ ಆಹ್ವಾನ

ಚಾಮರಾಜನಗರ, ಫೆ. 15 (:- ಜಿಲ್ಲೆಯಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ಪುನರ್ವಸತಿ ಶಾಲೆ ನಡೆಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಪ್ರಸ್ತಾವನೆ ಆಹ್ವಾನಿಸಲಾಗಿದೆ.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯಿದೆ 1986ರ ಕಲಂ 16ರಲ್ಲಿ ನಿರೀಕ್ಷಕರಾಗಿ ನೇಮಕಗೊಂಡಿರುವ ಪೊಲೀಸ್ ಇಲಾಖೆ ಅಧಿಕಾರಿಗಳು, ಇತರೆ ಅಧಿಕಾರಿಗಳು, ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯಿದೆಯಡಿ ಬಿಡುಗಡೆಗೊಳಿಸಲಾದ ಬಾಲ್ಯ ಹಾಗೂ ಕಿಶೋರಾವಸ್ಥೆಯ ಮಕ್ಕಳಿಗೆ ಪುನರ್ವಸತಿ ಶಾಲೆ ನಡೆಸಬೇಕಿದೆ.
ಆಸಕ್ತಿಯುಳ್ಳ ಸ್ವಯಂ ಸೇವಾಸಂಸ್ಥೆಗಳು ಬೈಲಾ ನೋಂದಣಿ ಪತ್ರ, ಕಳೆದ 3 ವರ್ಷದ ವಾರ್ಷಿಕ ವರದಿ, ಲೆಕ್ಕ ಪರಿಶೋಧನಾ ವರದಿ, ಕಚೇರಿ ವಿಳಾಸ, ಸಿಬ್ಬಂದಿ, ಬಾಲಕಾರ್ಮಿಕರ, ಮಕ್ಕಳ ಕ್ಷೇತ್ರದಲ್ಲಿ ನಡೆಸಿರುವ ಕಾರ್ಯಕ್ರಮಗಳ ದಾಖಲಾತಿ ಸೇರಿದಂತೆ ಇತರ ಅಗತ್ಯ ವಿವರಗಳೊಂದಿಗೆ ಪ್ರಸ್ತಾವನೆ ಸಿದ್ಧಪಡಿಸಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ (ಕೊಠಡಿ ಸಂಖ್ಯೆ 222) ಇಲ್ಲಿಗೆ ಫೆಬ್ರವರಿ 28ರೊಳಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರ ಕಚೇರಿ ದೂ.ಸಂಖ್ಯೆ 08226-222195 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಏ. 21ರಂದು ನವೋದಯ ಪ್ರವೇಶ ಪರೀಕ್ಷೆ

ಚಾಮರಾಜನಗರ, ಫೆ. 15 (- 2018-19ನೇ ಸಾಲಿನಲ್ಲಿ ಜವಹರ್ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶಕ್ಕೆ ಆಯ್ಕೆ ಪರೀಕ್ಷೆಯನ್ನು ಏಪ್ರಿಲ್ 21ರಂದು ನಿಗದಿ ಮಾಡಲಾಗಿದೆ.
ಪ್ರವೇಶ ಪತ್ರವನ್ನು ಪಡೆಯಲು ಹಾಗೂ ಇನ್ನಿತರ ವಿವರಗಳಿಗಾಗಿ ವೆಬ್ ಸೈಟ್ ತಿತಿತಿ.ಟಿvshq.oಡಿg ನೋಡುವಂತೆ ಹೊಂಡರಬಾಳುವಿನ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ಶಿಕ್ಷಕರ ಕಡ್ಡಾಯ ವರ್ಗಾವಣೆ ತಾತ್ಕಾಲಿಕ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಚಾಮರಾಜನಗರ, ಫೆ. 15 - ಸಾರ್ವಜನಿಕ ಶಿಕ್ಷಣ ಇಲಾಖೆಯು 2017-18ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಸಂಬಂಧ ಎ ವಲಯದಲ್ಲಿ 10 ವರ್ಷಗಳ ಸತತ ಸೇವೆ ಸಲ್ಲಿಸಿರುವ ಶಿಕ್ಷಕರುಗಳ ಕಡ್ಡಾಯ ವರ್ಗಾವಣೆ ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಉಪನಿರ್ದೇಶಕರ ಕಚೇರಿಯಲ್ಲಿ ಪ್ರಕಟಿಸಿದೆ.
ಪಟ್ಟಿ ಸಂಬಂಧ ಆಕ್ಷೇಪಣೆಗಳು ಇದ್ದಲ್ಲಿ ಪ್ರೌಢಶಾಲಾ ಶಿಕ್ಷಕರು ಫೆಬ್ರವರಿ 16ರೊಳಗೆ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರು ಫೆಬ್ರವರಿ 17ರೊಳಗೆ ಸಂಬಂಧಿಸಿದ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಫೆ. 18ರಂದು ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ

ಚಾಮರಾಜನಗರ, ಫೆ. 15- ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಏಕಲವ್ಯ ಮಾದರಿ, ಡಾ. ಅಂಬೇಡ್ಕರ್ ವಸತಿ ಶಾಲೆ (ಸಹ ಶಿಕ್ಷಣ), ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಮತ್ತು ಇಂದಿರಾಗಾಂಧಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಏಕಕಾಲದಲ್ಲಿ ರಾಜ್ಯದಾದ್ಯಂತ ಪರೀಕ್ಷೆ ನಡೆಯಲಿದೆ.
ಪ್ರವೇಶ ಪರೀಕ್ಷೆಯನ್ನು ಶಿಕ್ಷಣ ಇಲಾಖೆಯ ಎಸ್‍ಎಸ್‍ಎಲ್‍ಸಿ ಬೋರ್ಡ್‍ನ ಏSಕಿಂಂಅ, ಬೆಂಗಳೂರು ಇವರಿಂದ ಫೆಬ್ರವರಿ 18ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗÀಂಟೆಯವರೆಗೆ ನಡೆಸಲಾಗುವುದು.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಸಂಬಂಧಿಸಿದ ವಸತಿ ಶಾಲೆಯ ಪ್ರಾಂಶುಪಾಲರು ಉಚಿತವಾಗಿ ವಿತರಿಸುವರು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.


ಫೆ. 23, 24ರಂದು ಮೈಸೂರಿನಲ್ಲಿ ಉದ್ಯೋಗ ಮೇಳ : ಹೆಸರು ನೊಂದಾಯಿಸಲು ಸೂಚನೆ

ಚಾಮರಾಜನಗರ, ಫೆ. 15 (ಕರ್ನಾಟಕ ವಾರ್ತೆ):- ಮೈಸೂರಿನ ಜಿಲ್ಲಾಡಳಿತ, ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆ ಹಾಗೂ ಕೌಶಲ್ಯ ಮಿಷನ್ ಇವರ ಸಹಯೋಗದೊಂದಿಗೆ ಪ್ರಾದೇಶಿಕ ಬೃಹತ್ ಉದ್ಯೋಗ ಮೇಳವನ್ನು ಫೆಬ್ರವರಿ 23 ಹಾಗೂ 24ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.
ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ (ಕೊಠಡಿ ಸಂಖ್ಯೆ 210) ಯಲ್ಲಿ ಆಧಾರ್ ಕಾರ್ಡ್, ಇಮೇಲ್ ಐಡಿ, ಮೊಬೈಲ್ ಸಂಖ್ಯೆಯೊಂದಿಗೆ ಅಥವಾ ವೆಬ್ ಸೈಟ್ ತಿತಿತಿ.sಞiಟಟಚಿಟಿಜರಿobಜಿಚಿiಡಿ.ಛಿom ನಲ್ಲಿಯೂ ಹೆಸÀರು ನೊಂದಾಯಿಸಿಕೊಂಡು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ 08226-224430ಗೆ ಕರೆ ಮಾಡಿ ಪಡೆದುಕೊಳ್ಳುವಂತೆ ಜಿಲ್ಲಾ ಉದ್ಯೋಗಾರಿ ಸಿ.ಎಂ. ಉಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ.ವರ್ಗ, ಪಂಗಡದವರಿಗೆ ಹನಿ ನೀರಾವರಿ ಉಪಕರಣ ವಿತರಣೆ: ಅರ್ಜಿ ಆಹ್ವಾನ

ಚಾಮರಾಜನಗರ, ಫೆ. 15 - ನಗರದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2016-17ನೇ ಸಾಲಿನಲ್ಲಿ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ವರ್ಗದವರ ಅಭಿವೃದ್ಧಿ ಕಾರ್ಯಕ್ರಮಗಳಡಿ ಪರಿಶಿಷ್ಟ ವರ್ಗ, ಪಂಗಡದ ಫಲಾನುಭವಿಗಳಿಗೆ ಹನಿ ನೀರಾವರಿ ಘಟಕಗಳನ್ನು ಅಳವಡಿಸುವ ಸಂಬಂಧ 2017-18ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (PಒಏSಙ)ಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಹನಿ ನೀರಾವರಿ ಉಪಕರಣಗಳನ್ನು ವಿತರಿಸಲು ಉದ್ದೇಶಿಸಿದೆ.
ತೋಟಗಾರಿಕೆ ಬೆಳೆಗಳಾದ ಬಾಳೆ, ತರಕಾರಿ, ಮಾವು, ಸಪೋಟ, ತೆಂಗು ಮತ್ತು ಇತರೆ ಬೆಳೆಗಳನ್ನು ಬೆಳೆಯುತ್ತಿರುವ ಹಾಗೂ ನೀರಾವರಿ ಸೌಲಭ್ಯ ಹೊಂದಿರುವ ಪರಿಶಿಷ್ಟ ವರ್ಗ, ಪಂಗಡದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಲಿಖಿತ ಅರ್ಜಿಯ ಜತೆ 2 ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್, ಈ ಹಿಂದೆ ಸಾಲ ಪಡೆಯದಿರುವ ಬಗ್ಗೆ ಎನ್‍ಓಸಿ ಪತ್ರ,  ಜಮೀನು ಹೊಂದಿರುವ ಬಗ್ಗೆ ಆರ್‍ಟಿಸಿ ಪ್ರತಿಗಳೊಂದಿಗೆ ಸಲ್ಲಿಸಬೇಕು.
ಅರ್ಜಿಯನ್ನು ಆಯಾ ತಾಲೂಕಿನ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ (ದೂರವಾಣಿ ಸಂಖ್ಯೆ 08226-226070) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದÀÉ.

ಕೊಳ್ಳೇಗಾಲ ವಿಧಾನ ಸಭಾ ಚುನಾವಣೆ: ದೂರು ಸಲ್ಲಿಕೆಗೆ ಅವಕಾಶ

      ಚಾಮರಾಜನಗರ, ಫೆ. 15 - ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಕೊಳ್ಳೇಗಾಲ (ಮೀಸಲು) ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಮತ್ತು ಸಾರ್ವಜನಿಕ ದೂರು ಅರ್ಜಿ ಸ್ವೀಕೃತಿ ಕೊಠಡಿ ತೆರೆಯಲಾಗಿದೆ.
     ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಚುನಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ದೂರು ಸಲ್ಲಿಸಬೇಕಾದಲ್ಲಿ ಲಿಖಿತ ಹಾಗೂ ದೂರವಾಣಿ ಮೂಲಕ ಕಂಟ್ರೋಲ್ ರೂಂಗೆ ಸಲ್ಲಿಸಬಹುದು. ಅಲ್ಲದೆ ಫೇಸ್‍ಬುಕ್, ಇ-ಮೇಲ್, ವಾಟ್ಸ್ ಅಪ್ ಮೂಲಕವೂ ದೂರು ಸಲ್ಲಿಸಬಹುದಾಗಿದೆ.
     ದೂರವಾಣಿ ಸಂ: 08224-256615 ಇ-ಮೇಲ್ : ಡಿoಞgಟ222@gmಚಿiಟ.ಛಿom  ಫೇಸ್‍ಬುಕ್ ಪೇಜ್ : ಖಔ ಏoಟಟegಚಿಟ ಂssembಟಥಿ ಅoಟಿsಣiಣueಟಿಛಿಥಿ 222, ವಾಟ್ಸ್ ಅಪ್: 8296415135 ಸಂಪರ್ಕಿಸಿ ದೂರು ಸಲ್ಲಿಸಲು ಅವಕಾಶವಿದೆ ಎಂದು ಉಪವಿಭಾಗಾಧಿಕಾರಿ ಫೌಜಿಯಾ ತರನಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


















No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು