ಜಿಲ್ಲೆಗೆ ಕೃಷಿ ಕಾಲೇಜು : ಸಂಸದರಿಂದ ಅಭಿನಂದನೆ
ಚಾಮರಾಜನಗರ, ಫೆ. 16 - ಚಾಮರಾಜನಗರ ಜಿಲ್ಲೆಯಲ್ಲಿ ಕೃಷಿ ಕಾಲೇಜು ಸ್ಥಾಪನೆಗೆ 2018-19ನೇ ಸಾಲಿನ ರಾಜ್ಯ ಬಟೆಜ್‍ನಲ್ಲಿ ಘೋಷಣೆ ಮಾಡಿರುವುದಕ್ಕೆ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಕೃಷಿ ಸಚಿವರಾದ ಕೃಷ್ಣ ಭೈರೇಗೌಡ ಅವರಿಗೆ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಅಭಿನಂದನೆ ಸಲ್ಲಿಸಿದ್ದಾರೆ.ಜಿಲ್ಲೆಯಲ್ಲಿ ಕೃಷಿ ಕಾಲೇಜು ಸ್ಥಾಪನೆಗೆ ಸತತ 3 ವರ್ಷಗಳಿಂದ ಪ್ರಯತ್ನ ಪಟ್ಟ ಫಲವಾಗಿ ಇಂದು ರಾಜ್ಯದ ಬಜೆಟ್‍ನಲ್ಲಿ ಘೋಷಣೆಯಾಗಿದೆ. ಇದಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಕೃಷಿ ಸಚಿವರಾದ ಕೃಷ್ಣ ಭೈರೇಗೌಡ ಅವರಿಗೆ ಜಿಲ್ಲೆಯ ಜನಪ್ರತಿನಿಧಿಗಳು, ರೈತರು ಹಾಗೂ ಜನತೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಲೋಕಸಭಾ ಸದಸ್ಯರಾದ ಧ್ರುವನಾರಾಯಣ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪರ, ರೈತಪರ ಹಾಗೂ ಬಡವರ ಪರವಾಗಿದೆ. ಶಿಕ್ಷಣ ಹಾಗೂ ನೀರಾವರಿ ಕ್ಷೇತ್ರಗಳಿಗೆ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ನಿಗದಿಮಾಡಿದ್ದು ಆದ್ಯತೆ ನೀಡಲಾಗಿದೆ. ಒಟ್ಟಾರೆ ಕರ್ನಾಟಕ ರಾಜ್ಯದ ಸಮಗ್ರ ಬೆಳವಣಿಗೆಗೆ ಪೂರಕವಾಗಿರುವ ಬಜೆಟ್ ಅನ್ನು ಮಂಡಿಸಲಾಗಿದೆ ಎಂದು ಧ್ರುವನಾರಾಯಣ ಅವರು ತಿಳಿಸಿದ್ದಾರೆ.
ಫೆ. 18ರಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಫೆ. 16:- ತಾಲೂಕಿನ ಸಂತೇಮರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಫೆಬ್ರವರಿ 18ರಂದು ನಡೆಯಲಿದೆ.ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹೊನ್ನೂರು, ಸಂತೆಮರಹಳ್ಳಿ, ನವಿಲೂರು, ಆಲ್ದೂರು, ಮಂಗಲ, ಕುದೇರು, ಕೆಂಪÀನಪುರ, ದುಗ್ಗಟ್ಟಿ, ಅಂಬಳೆ, ಚುಂಗಡಿಪುರ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಫೆ. 18ರ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ ಮುಂದೂಡಿಕೆ
ಚಾಮರಾಜನಗರ, ಫೆ. 16 - ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಏಕಲವ್ಯ ಮಾದರಿ, ಡಾ. ಅಂಬೇಡ್ಕರ್ ವಸತಿ ಶಾಲೆ (ಸಹ ಶಿಕ್ಷಣ), ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಮತ್ತು ಇಂದಿರಾಗಾಂಧಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಫೆಬ್ರವರಿ 18ರಂದು ನಿಗದಿಯಾಗಿದ್ದ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ.ಉಚ್ಚ ನ್ಯಾಯಾಲಯವು ಪ್ರವೇಶ ಪರೀಕ್ಷೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಫೆ. 21ರಂದು ಹೆಗ್ಗೊಠಾರದಲ್ಲಿ ಅಂಚೆಸಂತೆ
ಚಾಮರಾಜನಗರ, ಫೆ. 16 ಅಂಚೆ ಇಲಾಖೆಯು ಚಾಮರಾಜನಗರ ತಾಲೂಕಿನ ಹೆಗ್ಗೊಠಾರದಲ್ಲಿ ಫೆಬ್ರವರಿ 21ರಂದು ಅಂಚೆಸಂತೆ ಹಮ್ಮಿಕೊಂಡಿದೆ.ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ ಹಾಗೂ ಇತರೆ ಅಂಚೆ ಜೀವವಿಮೆ, ಅಂಚೆ ಯೋಜನೆಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಸ್ವೀಕರಿಸಲಿದೆ. ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳುವಂತೆ ಅಂಚೆ ಅಧೀಕ್ಷಕರಾದ ಜಿ.ಸಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ಕೋರಿದ್ದಾರೆ.
No comments:
Post a Comment