ಅನುದಾನಿತ, ಅನುದಾನರಹಿತ ಶಾಲೆಗಳಿಗೆ ಆರ್‍ಟಿಇ ಅಡಿ ಪ್ರವೇಶ : ಅರ್ಜಿ ಸ್ವೀಕಾರ
ಚಾಮರಾಜನಗರ, ಫೆ. 20 - ಸಾರ್ವಜನಿಕ ಶಿಕ್ಷಣ ಇಲಾಖೆಯು 2018-19ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ ಆರ್‍ಟಿಇ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇಲಾಖಾ ವೆಬ್ ಸೈಟ್ ನಲ್ಲಿ ವೇಳಾಪಟ್ಟಿ ಪ್ರಕಟಿಸಿದೆ.ಆರ್‍ಟಿಇ ಅಡಿ ಪ್ರವೇಶ ಬಯಸುವ ಅರ್ಹ ಮಕ್ಕಳು ಸಂಬಂಧಿಸಿದ ಪೋಷಕರ ವಾಸಸ್ಥಳದ ವ್ಯಾಪ್ತಿಯಲ್ಲಿ ಬರುವ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಆರ್‍ಟಿಇ ಅರ್ಜಿಯನ್ನು ಸಂಬಂಧಿಸಿದ ಶಿಕ್ಷಣಾಧಿಕಾರಿಗಳ ಕಚೇರಿ, ಅಟಲ್‍ಜೀ ಜನಸ್ನೇಹಿ ಕೇಂದ್ರ ಹಾಗೂ ನೆಮ್ಮದಿ ಕೇಂದ್ರಗಳಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಕಡೆಯ ದಿನಾಂಕ ಮಾರ್ಚ್ 21.
ಹೆಚ್ಚಿನ ಮಾಹಿತಿಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಉಪನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 24ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಫೆ. 20 - ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಫೆಬ್ರವರಿ 24ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 21ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಫೆ. 20 - ಚಾಮರಾಜನಗರ ಪಟ್ಟಣದಲ್ಲಿ ರಸ್ತೆ ಅಗಲೀಕರಣ ಮಾಡಲು ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾಮಗಾರಿ ಫೆಬ್ರವರಿ 21ರಂದು ನಡೆಯಲಿದೆ.ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರಾಮಸಮುದ್ರದ ಹೌಸಿಂಗ್ ಬೋರ್ಡ್, ಕರಿನಂಜನಪುರ, ಬಿ. ರಾಚಯ್ಯ ಜೋಡಿ ರಸ್ತೆ, ರಾಮಸಮುದ್ರ ಚಿಕ್ಕಬೀದಿ, ರಾಮಸಮುದ್ರ ಪೊಲೀಸ್ ಕ್ವಾರ್ಟಸ್ ಹಾಗೂ ಸಂಬಂಧಪಟ್ಟ ಇತರೆ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಫೆ. 21ರಂದು ಹೆಗ್ಗೊಠಾರದಲ್ಲಿ ಅಂಚೆಸಂತೆ
ಚಾಮರಾಜನಗರ, ಫೆ. 20- ಅಂಚೆ ಇಲಾಖೆಯು ಚಾಮರಾಜನಗರ ತಾಲೂಕಿನ ಹೆಗ್ಗೊಠಾರದಲ್ಲಿ ಫೆಬ್ರವರಿ 21ರಂದು ಅಂಚೆಸಂತೆ ಹಮ್ಮಿಕೊಂಡಿದೆ.ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ ಹಾಗೂ ಇತರೆ ಅಂಚೆ ಜೀವವಿಮೆ, ಅಂಚೆ ಯೋಜನೆಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಸ್ವೀಕರಿಸಲಿದೆ. ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳುವಂತೆ ಅಂಚೆ ಅಧೀಕ್ಷಕರಾದ ಜಿ.ಸಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಫೆ. 22ರಂದು ಮಾಂಬಳ್ಳಿಯಲ್ಲಿ ಅಂಚೆಸಂತೆ
ಚಾಮರಾಜನಗರ, ಫೆ. 20 - ಅಂಚೆ ಇಲಾಖೆಯು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮಾಂಬಳ್ಳಿಯಲ್ಲಿ ಫೆಬ್ರವರಿ 22ರಂದು ಅಂಚೆಸಂತೆ ಏರ್ಪಡಿಸಲಾಗಿದೆ.ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ ಹಾಗೂ ಇತರೆ ಅಂಚೆ ಜೀವವಿಮೆ, ಅಂಚೆ ಯೋಜನೆಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಸ್ವೀಕರಿಸಲಿದೆ. ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳುವಂತೆ ಅಂಚೆ ಅಧೀಕ್ಷಕರಾದ ಜಿ.ಸಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ಕೋರಿದ್ದಾರೆ.
No comments:
Post a Comment