ಕೆಪಿಎಸ್‍ಸಿ ಪರೀಕ್ಷೆ: ಅಭ್ಯರ್ಥಿಗಳಿಗೆ ಸೂಚನೆ
ಚಾಮರಾಜನಗರ, ಫೆ. 22 :- ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಫೆಬ್ರವರಿ 25ರಂದು ಪ್ರಥಮ ದರ್ಜೆ ಸಹಾಯಕರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲ್ಲಿದ್ದು ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಆಯೋಗದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಡೌನ್‍ಲೋಡ್ ಮಾಡಿಕೊಂಡ ಪ್ರವೇಶ ಪತ್ರವನ್ನು ಮತ್ತು ಅವರ ಅರ್ಜಿಯೊಂದಿಗಿನ ಅಪ್‍ಲೋಡ್ ಮಾಡಿದ ಆಧಾರ್ ಕಾರ್ಡ್ (ಆಧಾರ್ ಕಾರ್ಡ್ ಹೊಂದಿರುವ ಅಭ್ಯರ್ಥಿಗಳು ಆಧಾರ್‍ಕಾರ್ಡ್ ಪಡೆಯಲು ಸಲ್ಲಿಸಿದ ಅರ್ಜಿಯ ಸ್ವೀಕೃತಿ ಹಾಗೂ ಒಂದು ಗುರುತಿನ ಚೀಟಿ, ಡ್ರೈವಿಂಗ್ ಲೈಸೆನ್ಸ್/ವೋಟರ್ ಐಡಿ, ಇಪಿಐಸಿ/ಪಾಸ್‍ಪೋರ್ಟ್/ಪಾನ್ ಕಾರ್ಡ್/ಸರ್ಕಾರಿ ನೌಕರರ ಐಡಿ) ಪ್ರತಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಇಲ್ಲವಾದಲ್ಲಿ ಪರೀಕ್ಷಾ ಉಪ ಕೇಂದ್ರಕ್ಕೆ ಪ್ರವೇಶವನ್ನು ನೀಡಲಾಗುವುದಿಲ್ಲ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರ ಹಾಗೂ ಅರ್ಜಿಯೊಂದಿಗೆ ಅಪ್‍ಲೋಡ್ ಮಾಡಿದ ಆಧಾರ್ ಕಾರ್ಡ್ (ಆಧಾರ್‍ಕಾರ್ಡ್ ಪಡೆಯಲು ಸಲ್ಲಿಸಿದ ಅರ್ಜಿಯ ಸ್ವೀಕೃತಿ ಹಾಗೂ ಒಂದು ಗುರುತಿನ ಚೀಟಿ) ಮುಖ್ಯ ದ್ವಾರದಲ್ಲಿ ಹಾಜರುಪಡಿಸಿದ ನಂತರವೇ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುವುದು.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಬೆಳಿಗ್ಗೆ 10 ಗಂಟೆಯ ನಂತರ ಮತ್ತು ಮಧ್ಯಾಹ್ನ 2 ಗಂಟೆಯ ನಂತರ ಪರೀಕ್ಷಾ ಕೊಠಡಿಗೆ ಪ್ರವೇಶಕ್ಕೆ ಅವಕಾಶವಿಲ್ಲವೆಂದು ಕಟ್ಟುನಿಟ್ಟಾಗಿ ಆಯೋಗ ತಿಳಿಸಿದೆ. ಪರೀಕ್ಷೆ ಪ್ರಾರಂಭವಾದ 10 ನಿಮಿಷಗಳ ನಂತರ ಬರುವ ಯಾವುದೇ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ ಹಾಗೂ ಪರೀಕ್ಷೆಯ ನಿಗಧಿತ ಪೂರ್ಣ ಅವಧಿ ಮುಗಿಯುವವರೆಗೂ ಯಾವುದೇ ಅಭ್ಯರ್ಥಿಗೆ ಪರೀಕ್ಷಾ ಕೊಠಡಿಯಿಂದ ಹೊರಹೋಗಲು ಅನುಮತಿಸಲಾಗುವುದಿಲ್ಲ. ಎಲ್ಲಾ ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ 30 ನಿಮಿಷಗಳ ಮುಂಚಿತವಾಗಿ ಪರೀಕ್ಷಾ ಕೊಠಡಿಯಲ್ಲಿ ಹಾಜರಿರತಕ್ಕದ್ದು. ಬೆಳಿಗ್ಗೆ 10 ಗಂಟೆಯ ನಂತರ ಮತ್ತು ಮಧ್ಯಾಹ್ನ 2 ಗಂಟೆಯ ನಂತರ ಪ್ರವೇಶವನ್ನು ನಿರಾಕರಿಸಲಾಗುವುದು.
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಮುಖ್ಯ ದ್ವಾರದಲ್ಲಿಯೇ ಮೊಬೈಲ್ ಫೋನ್, ಬ್ಲೂಟೂತ್ ಡಿವೈಸ್, ಡಿಜಿಟಲ್ ವಾಚ್, ಪೇಜರ್, ವೈರ್‍ಲೆಸ್, ಕ್ಯಾಲ್ಕ್ಯೂಲೇಟರ್ ಇತರೆ ಮೊದಲಾದ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು, ಸ್ಲೈಡ್ ರೋಲ್‍ಗಳು, ಮಾರ್ಕರ್‍ಗಳು, ಲಾಂಗ್ ಟೇಬಲ್‍ಗಳು, ವೈಟ್ ಫ್ಲೂಯಿಡ್‍ಗಳು, ಬ್ಲೇಡು, ಎರೇಸರ್ ಇವುಗಳನ್ನು ಪರೀಕ್ಷಾ ಕೇಂದ್ರದ ಆವರಣದೊಳಗೆ ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ. ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಸೂಚನೆಗಳನ್ನು ಪಾಲಿಸದಿದ್ದಲ್ಲಿ, ಅವರ ಅಭ್ಯರ್ಥಿತ್ವವನ್ನು ರದ್ದುಗೊಳಿಸಿ ಆಯೋಗವು ನಡೆಸುವ ಎಲ್ಲಾ ಪರೀಕ್ಷೆಗಳಿಂದ ಡಿಬಾರ್ ಮಾಡಲಾಗುವುದು ಹಾಗೂ ಈ ಬಗ್ಗೆ ಆಯೋಗವು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆಂದು ಎಂದು ಆಯೋಗವು ಎಚ್ಚರಿಕೆ ನೀಡಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆ ಮಗು ಕಾಣೆ: ಸುಳಿವು ನೀಡಲು ಮನವಿ
ಚಾಮರಾಜನಗರ, ಫೆ. 22- ತಾಲೂಕಿನ ಹೆಬ್ಬಸೂರು ಗ್ರಾಮದಿಂದ ಉಮೇಶ್ ಎಂಬುವರ ಪತ್ನಿ ಶೃತಿ ಹಾಗೂ ಮಗಳು ಕೀರ್ತನಾ ಕಾಣೆಯಾಗಿರುವ ಬಗ್ಗೆ ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಕಾಣೆಯಾಗಿರುವವರ ಪತ್ತೆಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
ಶೃತಿ ಅವರ ವಯಸ್ಸು 28 ವರ್ಷ ಇದ್ದು ಸಾಧಾರಣ ಮೈಕಟ್ಟು, ಕೋಲು ಮುಖ ಹೊಂದಿದ್ದು ಕೆಂಪು ಬಣ್ಣದ ಚೂಡಿದಾರ್ (ಕ್ರೀಂ ವಿತ್ ಬ್ಲಾಕ್), ಪಿಂಕ್ ಕಲರ್ ಪ್ಯಾಂಟ್ ಧರಿಸಿರುತ್ತಾರೆ.
ಕೀರ್ತನಾ ವಯಸ್ಸು 8 ವರ್ಷಗಳಾಗಿದ್ದು ತೆಳ್ಳನೆಯ ಶರೀರ, ಕೋಲು ಮುಖ ಹೊಂದಿರುತ್ತಾಳೆ. ಕೆಂಪು ಬಣ್ಣದ ಹಳದಿ ಟಾಪ್ ಬಿಳಿ ಪ್ಯಾಂಟ್ ಧರಿಸಿದ್ದಾಳೆ.
ಈ ಇಬ್ಬರೂ ಕನ್ನಡ ಭಾಷೆ ಮಾತನಾಡಬಲ್ಲವರಾಗಿರುತ್ತಾರೆ. ಇವರ ಸುಳಿವು ಸಿಕ್ಕಲ್ಲಿ ಚಾಮರಾಜನಗರದ ಪೂರ್ವ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕರ ದೂರವಾಣಿ ಸಂಖ್ಯೆ 08226-222058 ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕೆಪಿಎಸ್ಸಿ ಪರೀಕ್ಷೆ : ನಿಷೇದಾಜ್ಞೆ
ಚಾಮರಾಜನಗರ, ಫೆ. 22 ಕರ್ನಾಟಕ ಲೋಕ ಸೇವಾ ಆಯೋಗದ ವತಿಯಿಂದ ಫೆಬ್ರವರಿ 25 ರಂದು ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಚಾಮರಾಜನಗರ ಪಟ್ಟಣದ 17 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮ ಪರೀಕ್ಷೆ ನಡೆಯಲ್ಲಿದ್ದು ಕೇಂದ್ರದ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ರಾಮು ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಹಾಗೂ ಶಾಂತಿ ಸುವ್ಯವಸ್ಥೆಯಿಂದ ಪರೀಕ್ಷೆ ನಡೆಯಲು ಅನುವಾಗುವಂತೆ ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ವಿಧಿಸಿದ್ದಾರೆ. ಅಲ್ಲದೆ 200 ಮೀ. ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮುಚ್ಚಲು ಆದೇಶಿಸಿದ್ದಾರೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ವರ್ಗದವರಿಗೆ ನಿಷೇಧ ಆದೇಶ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಫೆ. 28ಕ್ಕೆ ಗೋಲಕ ಹಣ ಎಣಿಕೆ ಕಾರ್ಯ ಮುಂದೂಡಿಕೆ
ಚಾಮರಾಜನಗರ, ಫೆ. 22- ಶ್ರೀ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಗೋಲಕ ಹಣ ಎಣಿಕೆ ಕಾರ್ಯವನ್ನು ಫೆಬ್ರವರಿ 28ಕ್ಕೆ ಮುಂದೂಡಲಾಗಿದೆ.
ಪರ್ಕಾವಣೆ ಕಾರ್ಯವನ್ನು ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಫೆಬ್ರವರಿ 23 ಕ್ಕೆ ನಿಗಧಿ ಪಡಿಸಲಾಗಿತ್ತು. ಕಾರಣಾಂತರದಿಂದ ಫೆಬ್ರವರಿ 28 ಕ್ಕೆ ಪÀರ್ಕಾವಣೆ ಕಾರ್ಯ ಮುಂದೂಡಲಾಗಿದೆ ಎಂದು ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 26ರಂದು ಚಾ.ನಗರ ಸಭೆ ಆಯವ್ಯಯ ಪೂರ್ವಭಾವಿ ಸಭೆ: ನಾಗರಿಕರಿಗೆ ಆಹ್ವಾನ
ಚಾಮರಾಜನಗರ, ಫೆ. 22 - ಚಾಮರಾಜನಗರ ನಗರಸಭೆಯು 2018-19ನೇ ಸಾಲಿನ ಆರ್ಥಿಕ ವರ್ಷದ ಆಯವ್ಯಯದಲ್ಲಿ ಸಾರ್ವಜನಿಕರಿಗೆ ಅಗತ್ಯವಾಗಿರುವ ಮೂಲ ಸೌಕರ್ಯವನ್ನು ಉತ್ತಮಪಡಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ನೀಡಲು ಫೆಬ್ರವರಿ 26ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆಯು ಸಿ.ಡಿ.ಎಸ್ ಸಮುದಾಯ ಭವನದಲ್ಲಿ ಸಭೆ ಏರ್ಪಡಿಸಿದೆ.
ಈ ಸಭೆಗೆ ನಗರದ ನಾಗರಿಕರು ಹಾಗೂ ನೊಂದಾಯಿತ ಸಂಘ ಸಂಸ್ಥೆಯ ಪ್ರತಿನಿಧಿಗಳು ಭಾಗವಹಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುವಂತೆ ಪೌರಾಯುಕ್ತರಾದ ಫೌಜಿಯಾ ತರನ್ನಮ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಚಾ.ನಗರ : ಫೆ. 23ರಂದು ನಗರಸಭೆ ಸಾಮಾನ್ಯ ಸಭೆ
ಚಾಮರಾಜನಗರ, ಫೆ. 22- ಚಾಮರಾಜನಗರ ನಗರಸಭೆಯ ಸಾಮಾನ್ಯ ಸಭೆಯು ಅಧ್ಯಕ್ಷರಾದ ಶೋಭಾ ಅವರ ಅಧ್ಯಕ್ಷತೆಯಲ್ಲಿ ನಗರಸಭೆ ಕಚೇರಿ ಸಭಾಂಗಣದಲ್ಲಿ ಫೆಬ್ರವರಿ 23ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಫೆ. 24ರಂದು ನಗರದಲ್ಲಿ ಸಂತ ಸೇವಾಲಾಲ್ ಜಯಂತಿ ಆಚರಣೆ ಕಾರ್ಯಕ್ರಮ
ಚಾಮರಾಜನಗರ, ಫೆ. 22 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಫೆಬ್ರವರಿ 24ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಸಮಾರಂಭ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲÁ್ಲ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸÀಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಾಹಿತಿ ಹಾಗೂ ಸುರಾಪುರದ ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣದ ಶಿಕ್ಷಕರಾದ ಜಿ. ಪಳನಿಸ್ವಾಮಿಜಾಗೇರಿ ಅವರು ವಿಶೇಷ ಉಪನ್ಯಾಸ ನೀಡುವರು.
ಹನೂರು ತಾಲೂಕಿನ ದೊಮ್ಮನಗದ್ದೆ ತಾಂಡದ ರಾಜೇಂದ್ರ ಮತ್ತು ತಂಡದವರಿಂದ ವಾಜಾ ಗಾಜಾ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.
No comments:
Post a Comment