ಹಿರಿಯ ಅಧಿಕಾರಿಗಳಿಂದ ಚುನಾವಣಾ ಲಾಂಛನ ಬಿಡುಗಡೆ
ಚಾಮರಾಜನಗರ, ಫೆ. 23 - ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ 2018ರ ಸಂಬಂಧ ಚುನಾವಣಾ ಆಯೋಗದ ವತಿಯಿಂದ ಹೊರತಂದಿರುವ ಲಾಂಛನವನ್ನು ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಇತರೆ ಹಿರಿಯ ಅಧಿಕಾರಿಗಳು ಇಂದು ಬಿಡುಗಡೆ ಮಾಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಸರಳ ಕಾರ್ಯಕ್ರಮದಲ್ಲಿ ಚುನಾವಣೆ ಸಂಬಂಧ ಒಳಗೊಳ್ಳುವ ಸುಗಮ ಮತ್ತು ನೈತಿಕ ಚುನಾವಣೆ ಎಂಬ ಆಶಯವನ್ನು ಬಿಂಬಿಸುವ ಕರ್ನಾಟಕ ವಿಧಾನಸಭಾ ಚುನಾವಣೆ 2018 ಲಾಂಛನವನ್ನು ಬಿಡುಗಡೆ ಮಾಡಲಾಯಿತು.
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಬಿ. ರಾಮು ಅವರು ಮುಕ್ತ, ಪಾರದರ್ಶಕ ಹಾಗೂ ನ್ಯಾಸಮ್ಮತ ಚುನಾವಣೆಗೆ ಪ್ರಕ್ರಿಯೆ ನಡೆದಿದೆ. ಎಲ್ಲರೂ ಪಾಲ್ಗೊಂದÀು ಸುಗಮವಾಗಿ ಹಾಗೂ ನೈತಿಕವಾಗಿ ಚುನಾವಣೆ ನಡೆಸಬೇಕೆಂಬ ಮಹತ್ತರ ಉದ್ದೇಶದಿಂದ ಚುನಾವಣಾ ಆಯೋಗವು ಲಾಂಛನ ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ ಚುನಾವಣಾ ಪ್ರಕ್ರಿಯೆಗೆ ಎಲ್ಲರೂ ಉತ್ಸುಕತೆಯಿಂದ ಪಾಲ್ಗೊಳ್ಳಬೇಕು ಎಂದರು.
ನಿಸ್ಪಕ್ಷಪಾತವಾಗಿ ಚುನಾವಣೆ ನಡೆಸಲು ಎಲ್ಲ ಸಿದ್ಧತೆ ಕಾರ್ಯ ನಡೆದಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಿರ್ವಹಿಸಿದ್ದು ಪಟ್ಟಿ ಪ್ರಕಟಗೊಳ್ಳಲಿದೆ. ಪರಿಷ್ಕರಣೆ ಕಾರ್ಯಕ್ಕೆ ಅವಕಾಶ ನೀಡಲಾಗಿತ್ತು ಎಂದರು.
ಮತದಾರರ ಜಾಗೃತಿ ಅಭಿಯಾನ (ಸ್ವೀಪ್) ಸಮಿತಿಯ ಜಿಲ್ಲಾ ಮುಖ್ಯಸ್ಥರೂ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಚುನಾವಣಾ ಆಯೋಗದ ಆಶಯ ಅನುಸಾರ ಕಾರ್ಯೋನ್ಮುಖರಾಗಿದ್ದೇವೆ. ಚುನಾವಣೆ ಪ್ರಕ್ರಿಯೆಯಲ್ಲಿ ಎಲ್ಲರು ಪಾಲ್ಗೊಳ್ಳಬೇಕಿದೆ. ವಿಶೇಷಚೇತನರು, ಕಾಡಂಚಿನ ಜನರು ಸೇರಿದಂತೆ ಯಾರೊಬ್ಬರೂ ಸಹ ಮತದಾನದಿಂದ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ಎಲ್ಲ ಭಾಗದಲ್ಲೂ ವಿಶೇಷ ಗಮನ ನೀಡಲಾಗಿದೆ ಎಂದರು.
ಯುವ ಮತದಾರರು ಸೇರಿದಂತೆ ಸರ್ವರೂ ಮತದಾನದ ಮಹತ್ವ ಅರಿಯಲು ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ. ಶಾಲಾ ಕಾಲೇಜುಗಳಲ್ಲಿಯೂ ಮತದಾನ ಪ್ರಾಮುಖ್ಯತೆ, ಪಾಲ್ಗೊಳ್ಳುವಿಕೆ ಬಗೆಗಿನ ಜಾಗೃತಿ ಉಂಟುಮಾಡಲಾಗುತ್ತಿದೆ. ಎಲ್ಲರನ್ನೂ ಒಳಗೊಂಡಂತೆ ಚುನಾವಣೆ ಪ್ರಕ್ರಿಯೆಯು ಸುಗಮವಾಗಿ ಹಾಗೂ ನೈತಿಕವಾಗಿ ನಡೆಯಬೇಕೆಂಬ ಉದ್ದೇಶಕ್ಕೆ ಪ್ರತಿಯೊಬ್ಬರ ಸಹಕಾರವು ಅಗತ್ಯವಾಗಿದೆ ಎಂದು ಡಾ. ಕೆ. ಹರೀಶ್ ಕುಮಾರ್ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಮಾತನಾಡಿ ಜಿಲ್ಲೆಯಲ್ಲಿ ಸುಸೂತ್ರವಾಗಿ ಚುನಾವಣೆ ಕಾರ್ಯ ನಡೆಯಲು ಎಲ್ಲರೂ ಕೈಜೋಡಿಸಬೇಕು. ಯಾವುದೇ ದೂರು, ಮಾಹಿತಿಗಳಿದ್ದಲ್ಲಿ ಮುಕ್ತವಾಗಿ ಹಂಚಿಕೊಳ್ಳಬೇಕು. ಈಗಾಗಲೇ ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರ ಬಂದೂಕುಗಳನ್ನು ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವ ಕಾರ್ಯ ಆರಂಭವಾಗಿದೆ. ಈಗಾಗಲೇ 222 ಶಸ್ತ್ರಾಸ್ತ್ರ ಬಂದೂಕುಗಳು ಡಿಪಾಸಿಟ್ ಆಗಿವೆ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಉಪವಿಭಾಗಾಧಿಕಾರಿ ಫËಜಿಯಾ ತರನಂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನೆರೆ ರಾಜ್ಯಗಳಿಗೆ ಕಬ್ಬು ಸಾಗಣೆ ನಿರ್ಬಂಧ
ಚಾಮರಾಜನಗರ, ಫೆ. 23 ಸರ್ಕಾರದ ಆಧೇಶ ಅನುಸಾರ ರಾಜ್ಯದಲ್ಲಿ ಬೆಳೆದಿರುವ ಕಬ್ಬನ್ನು ನೆರೆರಾಜ್ಯಗಳಿಗೆ ಸಾಗಾಣಿಕೆ ಮಾಡುವುದನ್ನು ಜಿಲ್ಲೆಯಲ್ಲೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದ್ದಾರೆ.ಕಳೆದ 3 ವರ್ಷಗಳಿಂದಲೂ ಬರಗಾಲದಿಂದಾಗಿ ಕಬ್ಬು ಬೆಳೆ ವಿಸ್ತೀರ್ಣ ಹಾಗೂ ಉತ್ಪಾದನೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದೆ ಹಾಗೂ ಹೊರರಾಜ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಸಾಗಾಣಿಕೆಯಾಗುತ್ತಿರುವುದರಿಂದ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಕಬ್ಬು ಲಭ್ಯವಾಗುತ್ತಿಲ್ಲ. ಆದ್ದರಿಂದ 2017-18ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಲ್ಲಿ ಬೆಳೆದಿರುವ ಕಬ್ಬನ್ನು ನೆರೆಯ ರಾಜ್ಯಗಳಿಗೆ ಸಾಗಣೆಯಾಗದಂತೆ ನಿರ್ಬಂಧಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಸಂಬಂಧ ಗಡಿಭಾಗದ ಜಿಲ್ಲೆಯಲ್ಲೂ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಸರ್ಕಾರದ ಆದೇಶದ ಅನುಸಾರ ರಾಜ್ಯದಲ್ಲಿ ಬೆಳೆದಿರುವ ಕಬ್ಬನ್ನು ನೆರೆಯ ರಾಜ್ಯಗಳಿಗೆ ಸಾಗಣೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲೆಯಲ್ಲೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೆರೆಯ ರಾಜ್ಯಗಳಿಗೆ ಕಬ್ಬನ್ನು ಸಾಗಾಣಿಕೆ ಮಾಡುವುದನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ನಿರ್ಬಂಧಿಸಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಆದಾಯ ಹೆಚ್ಚಳ ಚಟುವಟಿಕೆಗಳಿಗೆ ಪ್ರೊತ್ಸಾಹಿಸಿ: ಡಾ. ಕೆ. ಹರೀಶ್ ಕುಮಾರ್
ಚಾಮರಾಜನಗರ, ಫೆ. 23 - ಜಾಗತೀಕರಣ ಯಗದ ಪ್ರಸ್ತುತ ಪರಿಸ್ಥಿತಿಯ ಹಿನ್ನಲೆಯಲ್ಲಿ ಕೃಷಿ ಚಟುವಟಿಕೆಗಳಿಂದ ಕೃಷಿಕರ ಆದಾಯ ಹೆಚ್ಚಳವಾಗುವಂತೆ ಮಾಡಬೇಕಾದ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅಭಿಪ್ರಾಯಪಟ್ಟರು.ನಗರದ ಜಿಲ್ಲಾಡಳಿತ ಭವನದ ಕೆ.ಡಿ.ಪಿ ಸಭಾಂಗಣದಲ್ಲಿ ಇಂದು ಕೃಷಿ ಇಲಾಖೆ ಚಾಮರಾಜನಗರ ಹಾಗೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಯ ಸಹಯೋಗದೊಂದಿಗೆ ನಡೆದ ಆತ್ಮ ಯೋಜನೆ ಅನುಷ್ಠಾನ ಪಾಲುದಾರಿಕೆ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಾಗತಿಕರಣದಿಂದಾಗಿ ನಗರಗಳತÀ್ತ ಮುಖ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಪ್ರಸುತ ಸಂದರ್ಭದಲ್ಲಿ ಕೃಷಿಯನ್ನು ಲಾಭದಾಯಕವಾಗಿಸಿ ಕೃಷಿ ಅವಲಂಬಿತರ ಆದಾಯ ಹೆಚ್ಚಿಸಿ ಕೃಷಿ ಚಟುವಟಿಕೆಗಳಲ್ಲಿ ತೊಡಗುವಂತೆ ಮಾಡಬೇಕು ಎಂದು ಹರೀಶ್ ಕುಮಾರ್ ತಿಳಿಸಿದರು.
ಚಾಮರಾಜನಗರ ಜಿಲ್ಲಾಧ್ಯಾಂತ ವಿವಿಧ ಕೃಷಿ ಚಟುವಟಿಕೆಗಳಿಗೆ ಪೂರಕ ವಾತವರಣ ಇದ್ದು, ಕೃಷಿಕ ಸಮುದಾಯ ಸಹಭಾಗಿತ್ವದ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಕಾರ್ಯನುಷ್ಠಾನ ಮಾಡÀಬೇಕಾಗಿದೆ. ಅವರ ಉತ್ಪನ್ನಗಳಿಗೆ ಉತ್ತಮ ಬೆಲೆ ಲಭಿಸುವಂತೆ ಸೌಲಭ್ಯವನ್ನು ಕಲ್ಪಿಸಿಕೊಡಬೇಕಾಗಿದೆ ಎಂದರು.
ರೈತರು ಕೃಷಿಯಲ್ಲಿ ಬದಲಾವಣೆ ಬಯಸಿದಾಗ ಅಧಿಕಾರ ವರ್ಗ ಸಹಕಾರ ನೀಡಿ ರೈತರ ಸಂಕೀರ್ಣ ಸಮಸ್ಯಗಳನ್ನು ಬಗೆಹರಿಸಬೇಕು. ಆ ಮೂಲಕ ಕೃಷಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮಾಡಿ ರೈತರಿಗೆ ಲಾಭ ತಂದು ಕೊಡಬೇಕೆಂದು ಹರೀಶ್ ಕುಮಾರ್ ತಿಳಿಸಿದರು.
ಕಾರ್ಯಗಾರವನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಜಿಲ್ಲಾ ಜಂಟಿ ಕೃಷಿ ನಿದೇಶಕರಾದ ತಿರುಮಲೇಶ್ ಅವರು ಆತ್ಮ ಯೋಜನೆಯನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಅರಣ್ಯ ಕ್ಷೇತ್ರದಲ್ಲಿ ಜಾರಿಗೊಳಿಸಲಾಗುತ್ತಿದೆ ಎಂದರು.
ಬೆಂಗಳೂರಿನ ಎಸ್.ಟಿ.ಯು, ಯು.ಎ.ಎಸ್ ಸಂಯೋಜಕರಾದ ಪ್ರೋ. ಜಿ.ಎಂ. ವರದರಾಜು ಜಿಲ್ಲಾ ಉಪ ಕೃಷಿ ನಿದೇಶಕರಾದ ಜಿ. ಹೆಚ್. ಯೋಗೇಶ್, ಜಿಲ್ಲಾ ಕೆ.ವಿ.ಕೆ ಕಾರ್ಯಕ್ರಮ ಸಂಯೋಜಕರಾದ ಚಂದ್ರಕಲಾ, ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಯದ ದಕ್ಷಿಣ ಸಮಿತಿ ಉಪನಿರ್ದೇಶಕರಾದ ಎಂ.ಎ ನರಸರಾಜು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಫೆ. 24ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಫೆ. 23 - ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಫೆಬ್ರವರಿ 24ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 24ರಂದು ನಗರದಲ್ಲಿ ಸಂತ ಸೇವಾಲಾಲ್ ಜಯಂತಿ ಆಚರಣೆ ಕಾರ್ಯಕ್ರಮ
ಚಾಮರಾಜನಗರ, ಫೆ. 23 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಫೆಬ್ರವರಿ 24ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಸಮಾರಂಭ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲÁ್ಲ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸÀಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಾಹಿತಿ ಹಾಗೂ ಸುರಾಪುರದ ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣದ ಶಿಕ್ಷಕರಾದ ಜಿ. ಪಳನಿಸ್ವಾಮಿಜಾಗೇರಿ ಅವರು ವಿಶೇಷ ಉಪನ್ಯಾಸ ನೀಡುವರು.
ಹನೂರು ತಾಲೂಕಿನ ದೊಮ್ಮನಗದ್ದೆ ತಾಂಡದ ರಾಜೇಂದ್ರ ಮತ್ತು ತಂಡದವರಿಂದ ವಾಜಾ ಗಾಜಾ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಫೆ. 26ರಂದು ನಗರದಲ್ಲಿ ದಲಿತ ವಚನಕಾರರ ಜಯಂತಿ ಆಚರಣೆ
ಚಾಮರಾಜನಗರ, ಫೆ. 23 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ದಲಿತ ವಚನಕಾರರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆಬ್ರವರಿ 26ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಮಹದೇವಪ್ರಸಾದ್ ಸಮಾರಂಭ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ದಲಿತ ವಚನಕಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲÁ್ಲ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸÀಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಆರ್. ಉಮೇಶ್, ಕಾಡಾ ಅಧ್ಯಕ್ಷರಾದ ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಚಿತ್ರದುರ್ಗ ಜಿಲ್ಲೆಯ ಛಲವಾದಿ ಮಠ ಶಿಬಿರದ ಪೀಠಾಧ್ಯಕ್ಷರಾದ ಬಸವನಾಗಿ ದೇವಶರಣರು ವಿಶೇಷ ಉಪನ್ಯಾಸ ನೀಡುವರು.
ಬೀದರ್‍ನ ರಾಷ್ಟ್ರ ಪ್ರಶಸ್ತಿ ಪುರಸ್ಕøತ ಕಲಾವಿದರಾದ ಶಂಭುಲಿಂಗ ವಾಲದೊಡ್ಡಿ ಅವರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಫೆ. 27ರಂದು ನಗರದಲ್ಲಿ ಸರ್ವಜ್ಞ ಜಯಂತಿ
ಚಾಮರಾಜನಗರ, ಫೆ. 23 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆಬ್ರವರಿ 27ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಅವರು ಕಾರ್ಯಕ್ರಮ ಉದ್ಫಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಸಂತ ಕವಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಚನ್ನಲಿಂಗನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯ್ರಾಸಕರಾದ ಶಿವಣ್ಣ ಇಂದುವಾಡಿ ವಿಶೇಷ ಉಪನ್ಯಾಸ ನೀಡುವರು. ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿಯ ಸಂಗೀತ ಶಿಕ್ಷಕರಾದ ವಿದ್ವಾನ್ ಮಹಾಂತಯ್ಯ ವಚನ ಗಾಯನ ನಡೆಸಿಕೊಡುವರು ಎಂದು ಪ್ರಕಟಣೆ ತಿಳಿಸಿದೆ.
ಗುಂಡ್ಲುಪೇಟೆ : ಪ.ಜಾ.ಯವರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಫೆ. 23 - ಗುಂಡ್ಲುಪೇಟೆ ಪುರಸಭೆಯು ಪಟ್ಟಣದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಜನಾಂಗದವರಿಗೆ ಯುಜಿಡಿ ಸಂಪರ್ಕ ಕಲ್ಪಿಸಿಕೊಡಲು ಮತ್ತು ಪೌರಕಾರ್ಮಿಕರ (ಸ್ವಚ್ಚತಾ ಕೆಲಸ ನಿರ್ವಹಿಸುತ್ತಿರುವವರ ಮಕ್ಕಳಿಗೆ) ಓದುತ್ತಿರುವ ಮಕ್ಕಳಿಗೆ ವಿಶೇಷ ವಿದ್ಯಾಭ್ಯಾಸ ಸಹಾಯಧನ ನೀಡಲು ಹಾಗೂ ಪೌರಕಾರ್ಮಿಕರ ಕುಟುಂಬಗಳಿಗೆ ಸೋಲಾರ್ ಲ್ಯಾಟಿನ್ ವಿತರಿಸಲು ಅರ್ಜಿ ಆಹ್ವಾನಿಸಿದೆ.ಸೌಲಭ್ಯ ಪಡೆಯಲು ಇಚ್ಚಿಸುವವರು ಕಚೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ್ 5ರ ಒಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಪುರಸಭೆ ಕಚೇರಿ ಸಂಪರ್ಕಿಸುವಂತೆ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ದ್ವಿತೀಯ ಪಿಯುಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಉಚಿತ ಪ್ರಯಾಣ
ಚಾಮರಾಜನಗರ, ಫೆ. 23 (- ಕರ್ನಾಟಕ ರಾಜ್ಯ ರಸ್ರೆ ಸಾರಿಗೆ ನಿಗಮದ ಚಾಮರಾಜನಗರ ವಿಭಾಗವು ಮಾರ್ಚ್ 1ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವಿದ್ಯಾರ್ಥಿಗಳಿಗೆ ನಿಗಮದ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಿದೆ.ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಮಾರ್ಚ್ 1 ರಿಂದ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹಾಗೂ ವಾಸಸ್ಥಳಕ್ಕೆ ಹಿಂತಿರುಗುವಾಗ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಅಶೋಕ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 24, 25ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಫೆ. 23- ಚಾಮರಾಜನಗರ ಪಟ್ಟಣದಲ್ಲಿ ರಸ್ತೆ ಅಗಲೀಕರಣ ಮಾಡಲು ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾಮಗಾರಿ ಫೆಬ್ರವರಿ 24 ಹಾಗೂ 25ರಂದು ನಡೆಯಲಿದೆ.ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರಾಮಸಮುದ್ರದ ಹೌಸಿಂಗ್ ಬೋರ್ಡ್, ಬಿ. ರಾಚಯ್ಯ ಜೋಡಿ ರಸ್ತೆ, ರಾಮಸಮುದ್ರ ಚಿಕ್ಕಬೀದಿ, ಪೊಲೀಸ್ ಕ್ವಾರ್ಟಸ್ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
No comments:
Post a Comment