Tuesday, 20 February 2018

ಜಿಲ್ಲಾಡಳಿತದ ವತಿಯಿಂದ ಫೆ. 24ರಂದು ಸಂತ ಶ್ರೀ ಸೇವಾಲಾಲ, 26ರಂದು ದಲಿತ ವಚನಕಾರರು, 27ರಂದು ಸರ್ವಜ್ಞ, 28ರಂದು ಛತ್ರಪತಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ (19-02-2018)


ಜಿಲ್ಲಾಡಳಿತದ ವತಿಯಿಂದ ಫೆ. 24ರಂದು ಸಂತ ಶ್ರೀ ಸೇವಾಲಾಲ, 26ರಂದು ದಲಿತ ವಚನಕಾರರು, 27ರಂದು ಸರ್ವಜ್ಞ, 28ರಂದು ಛತ್ರಪತಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ 

ಚಾಮರಾಜನಗರ, ಫೆ. 19 - ಜಿಲ್ಲಾಡಳಿತದ ವತಿಯಿಂದ ಫೆಬ್ರವರಿ 24ರಂದು ಸಂತಶ್ರೀ ಸೇವಾಲಾಲ, ಫೆಬ್ರವರಿ 26ರಂದು ದಲಿತ ವಚನಕಾರರ ಜಯಂತಿ, ಫೆಬ್ರವರಿ 27ರಂದು ಕವಿ ಸರ್ವಜ್ಞ  ಹಾಗೂ ಫೆಬ್ರವರಿ 28ರಂದು ಛತ್ರಪತಿ ಶಿವಾಜಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ವಿವಿಧ ಸಂತರು, ದಾರ್ಶನಿಕರ ಜಯಂತಿ ಆಚರಣೆ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ತಿ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ವಿವರವಾಗಿ ಚರ್ಚಿಸಿ ಜಯಂತಿ ಆಚರಣೆಗೆ ದಿನಾಂಕವನ್ನು ನಿಗದಿ ಮಾಡಲಾಯಿತು.
ಸಭೆಯ ಆರಂಭದಲ್ಲೇ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರು ಮಾತನಾಡಿ ಸಂತರು, ದಾರ್ಶನಿಕರು, ಕವಿಗಳು, ಮಹಾನ್ ಪುರುಷರ ಆದರ್ಶ ಮೌಲ್ಯಗಳನ್ನು ಎಲ್ಲ ಪೀಳಿಗೆಗೂ ಪರಿಚಯಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಈ ಸಂಬಂಧ ಸಲಹೆಗಳನ್ನು ನೀಡಬೇಕೆಂದು ಮನವಿ ಮಾಡಿದರು.
ನಿಗದಿ ಮಾಡಿರುವ ದಿನಾಂಕಗಳಂದು ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ. ಕಾರ್ಯಕ್ರಮ ಆರಂಭಕ್ಕೂ ಮೊದಲು ಗೀತಗಾಯನ, ವಚನ ಗಾಯನದಂತಹ ಕಾರ್ಯಕ್ರಮಗಳು ಸಹ ಏರ್ಪಾಡು ಮಾಡಲಾಗುತ್ತದೆ ಎಂದರು.
ಜಯಂತಿ ಆಚರಣೆ ಕಾರ್ಯಕ್ರಮದಂದು ವಿಶೇಷ ಉಪನ್ಯಾಸವನ್ನು ನೀಡಬೇಕಿದೆ. ಈ ನಿಟ್ಟಿನಲ್ಲಿ ಮುಖಂಡರು ಪ್ರತಿನಿಧಿಗಳು ನೀಡುವ ಸಲಹೆಯನ್ನು ಪರಿಗಣಿಸಲÁಗುತ್ತದೆ. ಅಂತಿಮವಾಗಿ ಒಮ್ಮತದಿಂದ ಉಪನ್ಯಾಸಕರನ್ನು ಆಯ್ಕೆ ಮಾಡಲಾಗುತ್ತದೆ ಎಂದರು.
ಕಾರ್ಯಕ್ರಮ ದಿನಗಳು ಸಮೀಪದಲ್ಲೇ ಇರುವುದರಿಂದ ಆಹ್ವಾನ ಪತ್ರಿಕೆ, ಮುದ್ರಣ ಕಾರ್ಯವನ್ನು ತ್ವರಿತವಾಗಿ ಕೈಗೊಂಡು ಬಳಿಕ ವಿತರಿಸಬೇಕು. ಶಿಷ್ಠಾಚಾರ ಅನುಸಾರ ಎಲ್ಲವೂ ಪಾಲನೆಯಾಗಬೇಕು. ಆಹ್ವಾನ ಪತ್ರಿಕೆಯನ್ನು ಎಲ್ಲ ವರ್ಗದ ಪ್ರತಿನಿಧಿಗಳು, ಮುಖಂಡರಿಗೆ ತಲುಪಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದರು.
ಯಾವುದೇ ಲೋಪವಿಲ್ಲದೆ ಅಚ್ಚುಕಟ್ಟಾಗಿ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಬೇಕು. ಎಲ್ಲ ಸಿದ್ಧತೆಗಳನ್ನು ಆದಷ್ಟು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಕೆ.ಎಂ. ಗಾಯತ್ರಿ ಅವರು ಅಧಿಕಾರಿಗಳಿಗೆ ತಿಳಿಸಿದರು.
ಇದೇವೇಳೆ ಸಭೆಯಲ್ಲಿ ಹಾಜರಿದ್ದ ಸಮುದಾಯದ ಮುಖಂಡರು, ಪ್ರತಿನಿಧಿಗಳು ಕಾರ್ಯಕ್ರಮ ಆಯೋಜನೆ ಸಂಬಂಧ ಸಲಹೆಗಳನ್ನು ನೀಡಿದರು.
ಮುಖಂಡರಾದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಕಲಾ ಬಾಯಿ, ಮುಖಂಡರಾದ ಶಾ. ಮುರಳಿ, ಚಾ.ರಂ. ಶ್ರೀನಿವಾಸಗೌಡ, ವೆಂಕಟರಮಣಪಾಪು, ಆಲೂರು ನಾಗೇಂದ್ರ, ವೆಂಕಟರಾವ್ ಸಾಠೆ, ಮದ್ದೂರು ವಿರೂಪಾಕ್ಷ, ನಾಗೇಶ್, ಇನ್ನಿತರರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಮಹದೇವಯ್ಯ, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಪಿಯು ಕಾಲೇಜು ಪ್ರಾರಂಭಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಚಾಮರಾಜನಗರ, ಫೆ. 19- ಜಿಲ್ಲೆಯಲ್ಲಿ 2018-19ನೇ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಪದವಿಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಚಿಸುವ ಶಿಕ್ಷಣ ಸಂಸ್ಥೆ ಟ್ರಸ್ಟ್‍ಗಳಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಫೆಬ್ರವರಿ 22ರವರೆಗೆ ಕಾಲಾವಧಿ ವಿಸ್ತರಿಸಲಾಗಿದೆ.
ಈ ಹಿಂದೆ ಜನವರಿ 31ರೊಳಗೆ ಹೆಸರು ನೊಂದಾಯಿಸಲು ತಿಳಿಸಲಾಗಿತ್ತು. ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸುವಂತೆ ಕೋರಿಕೆಗಳು ಬಂದ ಹಿನ್ನೆಲೆಯಲ್ಲಿ ಫೆಬ್ರವರಿ 22ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಫೆ. 23, 24ರಂದು ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ : ಹೆಸರು ನೊಂದಾಯಿಸಲು ಸೂಚನೆ

ಚಾಮರಾಜನಗರ, ಫೆ. 19:- ಮೈಸೂರಿನ ಜಿಲ್ಲಾಡಳಿತ, ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆ ಹಾಗೂ ಕೌಶಲ್ಯ ಮಿಷನ್ ಇವರ ಸಹಯೋಗದೊಂದಿಗೆ ಪ್ರಾದೇಶಿಕ ಬೃಹತ್ ಉದ್ಯೋಗ ಮೇಳವನ್ನು ಫೆಬ್ರವರಿ 23 ಹಾಗೂ 24ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.
ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ (ಕೊಠಡಿ ಸಂಖ್ಯೆ 210) ಯಲ್ಲಿ ಆಧಾರ್ ಕಾರ್ಡ್, ಇಮೇಲ್ ಐಡಿ, ಮೊಬೈಲ್ ಸಂಖ್ಯೆಯೊಂದಿಗೆ ಅಥವಾ ವೆಬ್ ಸೈಟ್ ತಿತಿತಿ.sಞiಟಟಚಿಟಿಜರಿobಜಿಚಿiಡಿ.ಛಿom ನಲ್ಲಿಯೂ ಹೆಸÀರು ನೊಂದಾಯಿಸಿಕೊಂಡು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದೆ.
ಹೆಚ್ಚಿನ ಮಾಹಿತಿಯನ್ನು ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ 08226-224430ಗೆ ಕರೆ ಮಾಡಿ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ. 21ರಂದು ವಿದ್ಯುತ್ ದರ ಪರಿಷ್ಕರಣೆ ಕುರಿತು ಸಾರ್ವಜನಿಕ ವಿಚಾರಣೆ

ಚಾಮರಾಜನಗರ, ಫೆ. 19:- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು 2018-19ನೇ ಸಾಲಿಗೆ ವಿದ್ಯುತ್ ದರಗಳ ಪರಿಷ್ಕರಣೆಗಾಗಿ ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗಕ್ಕೆ ಅರ್ಜಿ ಸಲ್ಲಿಸಿದೆ.
ಈ ಹಿನ್ನೆಲೆಯಲ್ಲಿ ಫೆಬ್ರವರಿ 21ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ಆಯೋಗವು ಸಾರ್ವಜನಿಕ ವಿಚಾರಣೆ ನಡೆಸಲಿದೆ. ಆಸಕ್ತರು ಈ ವಿಚಾರಣೆಯಲ್ಲಿ ಭಾಗವಹಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹನೂರು ಉಪಮಾರುಕಟ್ಟೆ ಪ್ರಾಂಗಣದಲ್ಲಿ ಆನ್ ಲೈನ್ ಮೂಲಕ ಅರಿಶಿನ ವ್ಯಾಪಾರ ವಹಿವಾಟು ಆರಂಭ
ಚಾಮರಾಜನಗರ, ಫೆ. 19 - ಕೊಳ್ಳೇಗಾಲ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಹನೂರಿನ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಫೆಬ್ರವರಿ 14 ರಿಂದ ಆನ್ ಲೈನ್  ಮೂಲಕ ಅರಿಶಿನ ವ್ಯಾಪಾರ ವಹಿವಾಟು ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬೆಳೆಗಾರರು ಅರಿಶಿನ ಉತ್ಪನ್ನವನ್ನು ಮಾರುಕಟ್ಟೆ ಪ್ರಾಂಗಣಕ್ಕೆ ತಂದು ಮಾರಾಟ ಮಾಡುವ ಮೂಲಕ ನೂತನ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾದ ಬಿ. ರಾಜಪ್ಪ, ಉಪಾಧ್ಯಕ್ಷರಾದ ಎಸ್. ಶಿವಕುಮಾರ್ ಹಾಗೂ ಕಾರ್ಯದರ್ಶಿ ಡಿ.ಆರ್. ಪುಷ್ಪ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.



ಫೆ. 21 ರಿಂದ 23ರವರೆಗೆ ವಾಹನಗಳ ಸಂಚಾರ ಸಮೀಕ್ಷೆ

ಚಾಮರಾಜನಗರ, ಫೆ. 19 (- ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ಫೆಬ್ರವರಿ 21ರ ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 23ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯಲ್ಲಿ ವಾಹನ ಸಂಚಾರ ಸಮೀಕ್ಷೆ ನಡೆಯಲಿದೆ.
ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಆಯ್ದ ಸ್ಥಳಗಳಲ್ಲಿ ಗಣತಿ ಕೇಂದ್ರಗಳನ್ನು ಸ್ಥಾಪಿಸಿ ವಾಹನ ಸಂಚಾರ ಸಮೀಕ್ಷೆಯನ್ನು ಸತತವಾಗಿ ಎರಡು ದಿನಗಳ ಕಾಲ ನಡೆಸಲಾಗುವುದು.
ಎಲ್ಲ ವಾಹನ ಚಾಲಕರು ಗಣತಿ ಕೇಂದ್ರಗಳ ಬಳಿ ತಮ್ಮ ವಾಹನವನ್ನು ನಿಧಾನವಾಗಿ ಚಲಿಸಿ ಮುಂದೆ ಹೋಗಬೇಕೆಂದು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಇಲಾಖೆ ಅಧೀಕ್ಷಕ ಎಂಜಿನಿಯರ್ ಸಿ. ಸತ್ಯನಾರಾಯಣ ಪ್ರಕಟಣೆಯಲ್ಲಿ ಕೋರಿದ್ದಾರೆ.

ಫೆ. 23ರಂದು ಮಹದೇಶ್ವರ ದೇವಾಲಯದ ಗೋಲಕ ಹಣ ಎಣಿಕೆ

ಚಾಮರಾಜನಗರ, ಫೆ. 19 ( ಕೊಳ್ಳೇಗಾಲ ತಾಲೂಕಿನ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಲಕಗಳ ಹಣ ಎಣಿಕೆ ಕಾರ್ಯವು ಫೆಬ್ರವರಿ 23ರಂದು ಬೆಳಿಗ್ಗೆ ನಡೆಯಲಿದೆ.
ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಿಬ್ಬಂದಿ ಸಹಯೋಗದೊಂದಿಗೆ ಎಣಿಕೆ ಕಾರ್ಯವನ್ನು ನಡೆಸಲಾಗುವುದೆಂದು ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ

ಚಾಮರಾಜನಗರ, ಫೆ. 19 - ಜಿಲ್ಲೆಯ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು  ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ಫೆಬ್ರವರಿ 26ರಂದು ಚಾಮರಾಜನಗರ ಹಾಗೂ 28ರಂದು ಗುಂಡ್ಲುಪೇಟೆ ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು.
ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹದಲ್ಲಿ ದೂರುಗಳನ್ನು ಸ್ವೀಕಾರ ಮಾಡುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಯಳಂದೂರು : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಚಾಮರಾಜನಗರ, ಫೆ. 19  ಯಳಂದೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೊನ್ನೂರು ಹಾಗೂ ಕೆಸ್ತೂರು ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆಯರ (ಇತರೆ) ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಗಣಿಗನೂರು (ಪ.ಪಂ), ಹೊನ್ನೂರು ಹಾಗೂ ದುಗ್ಗಟ್ಟಿ (ಇತರೆ) ಮತ್ತು ಅಂಬಳೆ (ಪ.ಜಾ) ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 17 ಕಡೆಯ ದಿನ. ಹೆಚ್ಚಿನ ವಿವರಗಳಿಗೆ ವೆಬ್ ಸೈಟ್ ತಿತಿತಿ.ಚಿಟಿgಚಿಟಿತಿಚಿಜiಡಿeಛಿಡಿuiಣ.ಞಚಿಡಿ.ಟಿiಛಿ.iಟಿ ನಿಂದ ಪಡೆಯುವಂತೆ ಯಳಂದೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು