ಯಡಕುರಿಯ, ಶಿವನಸಮುದ್ರ ಬಳಿಯ ಸೇತುವೆ ಲೋಕಾರ್ಪಣೆ
ಚಾಮರಾಜನಗರ, ಫೆ. 26 - ರಾಜ್ಯ ಸರ್ಕಾರ ಗುಣಾತ್ಮಕವಾಗಿ ಮೂಲಸೌಕರ್ಯಗಳನ್ನು ಒದಗಿಸಿದ ಪರಿಣಾಮ ಗಮನಾರ್ಹ ಬದಲಾವಣೆಯನ್ನು ಕಾಣಲು ಸಾಧ್ಯವಾಗಿದೆಯೆಂದು ಲೋಕೋಪಯೋಗಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ತಿಳಿಸಿದರು.ರಾಜ್ಯದಲ್ಲಿ 35 ಸಾವಿರ ಕಿ.ಮೀ ರಸ್ತೆ ಹಾಗು ಹಲವಾರು ಸೇತುವೆಗಳನ್ನು ನಿರ್ಮಾಣ ಮಾಡಿದ್ದೇವೆ. ಈ ಎಲ್ಲಾ ಕಾಮಗಾರಿಗಳು ಗುಣಮಟ್ಟದಿಂದ ಕೂಡಿದೆ. ಗುಣಮಟ್ಟದ ಕಾಮಗಾರಿಗಾಗಿ ರಾಷ್ಟ್ರಪ್ರಶಸ್ತಿ ಗೌರವ ಸಹಾ ಲಭಿಸಿದೆ. ಗುಣಾತ್ಮಕ ಮೂಲಸೌಕರ್ಯಗಳನ್ನು ಕಲ್ಪಿಸಿದ್ದರಿಂದ ಹಲವಾರು ಅನುಕೂಲಗಳಾಗಿವೆ ಎಂದು ಸಚಿವರು ತಿಳಿಸಿದರು.
ರಾಜ್ಯ ಸರ್ಕಾರ ಯಡಕುರಿಯದ ಬಹುಕಾಲದ ಬೇಡಿಕೆಯಾದ ಸೇತುವೆ ನಿರ್ಮಾಣವನ್ನು ಅನುಷ್ಠಾನ ಮಾಡಿ ಜನರಿಗೆ ಅನುಕೂಲ ಕಲ್ಪಿಸಿದೆ. ನಮ್ಮದೇ ಆಡಳಿತ ಅವಧಿಯಲ್ಲಿ ಅಡಿಗಲ್ಲು ಹಾಕಿ ಸೇತುವೆ ಪೂರ್ಣಗೊಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದೇವೆ. ಹೀಗೆ ರಾಜ್ಯದಲ್ಲಿ ನಾನಾ ಅಭಿವೃದ್ಧಿ ಕೆಲಸಗಳನ್ನು ಆರಂಭಿಸಿ ಪೂರ್ಣಗೊಳಿಸಿದ್ದೇವೆ ಎಂದರು.
ಜಿಲ್ಲೆಯಲ್ಲಿ ಕೊಳ್ಳೇಗಾಲ, ಹನೂರು ಸಂಪರ್ಕಿಸುವ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಹನೂರಿನಿಂದ ಮಹದೇಶ್ವÀರ ಬೆಟ್ಟ ಸಂಪರ್ಕಿಸುವ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿಯಾಗಲಿದೆ. ಗುಂಡ್ಲುಪೇಟೆ, ಚಾಮರಾಜನಗರ ರಸ್ತೆ ಕಾಮಗಾರಿ ಅಭಿವೃದ್ಧಿ ಸಂಬಂದ ಡಿ.ಪಿ.ಆರ್ ಸಲ್ಲಿಸಲಾಗಿದೆ. ಕೊಳ್ಳೇಗಾಲದಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಯನ್ನು ಮಾರ್ಚ್ 15ರೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಆರ್.ನರೇಂದ್ರ ಅವರು ಬಹಳದಿನಗಳಿಂದ ಜನರ ಬೇಡಿಕೆಯಾಗಿದ್ದ ಸೇತುವೆ ನಿರ್ಮಿಸಿ ಜನರಿಗೆ ಅನುಕೂಲ ಕಲ್ಪಿಸಿರುವುದು ತಮಗೆ ಆತ್ಮ ತೃಪ್ತಿ ತಂದಿದೆ. ತಾವು ಆರಂಭದಲ್ಲೇ ನೀಡಿದ ಭರವಸೆಯಂತೆ ನಿಗಧಿತ ಅವಧಿಯೊಳಗೆ ಸೇತುವೆ ನಿರ್ಮಾಣ ಮಾಡಿದ್ದೇವೆ ಎಂದರು.
ಮುಖ್ಯಮಂತ್ರಿಯವರು ಹನೂರಿಗೆ ಭೇಟಿ ನೀಡಿ ತಾವು ಪ್ರತಿನಿಧಿಸುವ ಕ್ಷೇತ್ರಕ್ಕೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಅನುದಾನ ನೀಡಿದ್ದಾರೆ. ಹನೂರು ಭಾಗದಲ್ಲಿ ಪ್ರಮುಖವಾಗಿ ಬಹುಗ್ರಾಮ ಕುಡಿಯುವ ನೀರು ಯೋಜನೆ, ಕೆರೆಗೆ ನೀರು ತುಂಬಿಸುವ ಯೋಜನೆಗೆ ಅನುಮತಿ ನೀಡಿ ಅಗತ್ಯ ಪ್ರಕ್ರಿಯೆಗೆ ಮುಂದಾಗಿರುವುದು ಅನುಕೂಲವಾಗಿದೆ. ರಸ್ತೆ ಕಾಮಗಾರಿಗಳು ಸಹಾ ನಡೆಯುತ್ತಿವೆ ಎಂದು ನರೇಂದ್ರ ಅವರು ತಿಳಿಸಿದರು.
ಶಾಸಕರಾದ ಎಸ್.ಜಯಣ್ಣ ಮಾತನಾಡಿ ತಾವೂ ಸಹಾ ಈ ಹಿಂದೆ ಪ್ರತಿನಿಧಿಸುತ್ತಿದ್ದ ಕ್ಷೇತ್ರಕ್ಕೆ ಯಡಕುರಿಯ ಸೇರಿತ್ತು. ಇಂದು ಜನರ ಬೇಡಿಕೆ ಈಡೇರಿದೆ. ಈ ಐತಿಹಾಸಿಕ ಸಂದರ್ಭದಲ್ಲಿ ಭಾಗಿಯಾಗುತ್ತಿರುವುದು ವೈಯಕ್ತಿಕವಾಗಿ ಸಂತಸ ತಂದಿದೆ ಎಂದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಯೋಗೇಶ್, ಸದಸ್ಯರಾದ ಜಯಂತಿ, ಶಿವಮ್ಮ ತಾಲ್ಲೋಕು ಪಂಚಾಯಿತಿ ಅಧ್ಯPಕ್ಷರಾದ ಆರ್.ರಾಜು, ಉಪಾಧ್ಯಕ್ಷರಾದ ಲತಾರಾಜಣ್ಣ, ಸದಸ್ಯರಾದ ಎಂ ಅರುಣ್ ಕುಮಾರ್, ಗ್ರಾಮಪಂಚಾಯಿತಿ ಅಧ್ಯಕ್ಷರಾದ ಮಂಜುಳನಂಜುಂಡ ಮೂರ್ತಿ ಮುಖ್ಯ ಇಂಜಿನಿಯರ್ ಆರ್ ಶ್ರೀನಿವಾಸ್, ಆರ್ ಗಣೇಶ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪಿಯುಸಿ ಪರೀಕ್ಷೆ : ಕೇಂದ್ರಗಳ ಸುತ್ತ ನಿಷೇದಾಜ್ಞೆ
ಚಾಮರಾಜನಗರ, ಫೆ. 26 - ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 17ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿಯ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು, ಹನೂರು ಹಾಗೂ ಚಾಮರಾಜನಗರ ತಾಲೂಕಿನಲ್ಲಿ ಮತ್ತು ಹನೂರು ತಾಲೂಕಿನ ರಾಮಾಪುರದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಿಗದಿಯಾಗಿದೆ. ಪರೀಕ್ಷಾ ಸಂದರ್ಭದಲ್ಲಿ ಯವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಹಾಗೂ ಶಾಂತಿ ಸುವ್ಯವಸ್ಥೆಯಿಂದ ಪರೀಕ್ಷೆ ನಡೆಯಲು ಅನುವಾಗುವಂತೆ ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 8 ರಿಂದ ಸಂಜೆ 5.30ರವರೆಗೆ ಮುಚ್ಚಲೂ ಸಹ ಆದೇಶಿಸಿದ್ದಾರೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ವರ್ಗದವರಿಗೆ ನಿಷೇಧ ಆದೇಶ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.ಆಯ-ವ್ಯಯ ದಲ್ಲಿ ಯಾವುದೇ ಸಹಾಯ ಮಾಡದಿರುವ ನೀತಿಯನ್ನು ಖಂಡಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ
ಚಾಮರಾಜನಗರ – ಫೆ,26- ಹಿಂದುಳಿದ ಗಡಿ ಪ್ರದೇಶ, ದಕ್ಷಿಣ ಭಾಗದ ಕೊನೆಯ ಜಿಲ್ಲೆ ಚಾಮರಾಜನಗರ ಅಭಿವೃದ್ದಿಗೆ ರಾಜ್ಯ ಆಯ-ವ್ಯಯ ದಲ್ಲಿ ಯಾವುದೇ ಸಹಾಯ ಮಾಡದಿರುವ ನೀತಿಯನ್ನು ಖಂಡಿಸಿ ಹಾಗೂ ಸಮಗ್ರ ಅಭಿವೃದ್ದಿಗೆ ವಿಶೇಷ ಪ್ಯಾಕೇಜ್ ಕೊಡಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ನಗರದಲ್ಲಿ ಪ್ರತಿಭಟನೆ ನಡೆಸಿದರು.ಇದಕ್ಕೂ ಮೊದಲು ಶ್ರೀ ಚಾಮರಾಜೇಶ್ವರ ಉದ್ಯಾನವನ ಮುಂಭಾಗದಿಂದ ವಾಟಾಳ್ ನಾಗರಾಜ್ ಅವರ ನಾಯಕತ್ವದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು, ಮತ್ತು ಅಭಿಮಾನಿಗಳು, ಮೆರವಣಿಗೆ ಹೊರಟು ತ್ಯಾಗರಾಜ ರಸ್ತೆಯ ಮುಖಾಂತರ ಸಾಗಿ ಶ್ರೀ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿ ಪ್ರತಿಭಟಿಸಿ ತಮಟೆ ಚಳವಳಿ ನಡೆಸಿದರು. ನಂತರ ವಾಟಾಳ್ ನಾಗರಾಜ್ ಅವರು ಕೆಲ ಕಾಲ ರಸ್ತೆಯ ಮೇಲೆ ಕುಳಿತು ಪ್ರತಿಭಟಿಸಿದರು.
ನಂತರ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಾಟಾಳ್ ನಾಗರಾಜ್ ಅವರು ಚಾಮರಾಜನಗರ ದಿಕ್ಕು ಕೆಟ್ಟ ನಗರವಾಗಿದೆ ಯಾವ ದಿಕ್ಕಿಗೆ ಹೋಗಬೇಕು ಎಂಬುವುದು ಗೊತ್ತ್ತಾಗುತ್ತಿಲ್ಲ ನಾಮಫಲಕ ಹಾಕಿಲ್ಲ ರಸ್ತೆಯ ಕಾಮಗಾರಿ ಹೆಸರಿನಲ್ಲಿ ರಸ್ತೆಗಳನ್ನು ಬಂದ್ ಮಾಡಿ ವಾಹನ ಸವಾರರಿಗೆ ಸಾರ್ವಜನಿಕರಿಗೆ ಅನಾನುಕೂಲವಾಗಿದೆ ವೈಜ್ಷಾನಿಕವಾಗಿ ಪ್ರಗತಿ ಕಾರ್ಯ ನಡೆಯುತ್ತಿಲ್ಲ ಎಂದರು. ನಗರದಲ್ಲಿ ಹೇಳುವರು-ಕೇಳುವರು ಇಲ್ಲವಂತಾಗಿದೆ ಜಿಲ್ಲಾ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಗುಡುಗಿದರು.
ರಸ್ತೆ ಮಾಡುವ ನೆಪದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ, ಮಳಿಗೆಗಳು, ಮನೆಗಳನ್ನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಕೊಡದೆ ನೋಯಿಸಿದ್ದಿರಿ ಅವರನ್ನು ಹೆದರಿಸಿ-ಬೆದರಿಸಿ ರೌಡಿಸಂ ಮಾಡಿದ್ದಿರಿ ಇದೇನೋ ಮಿಲಿಟರಿ ಸರ್ಕಾರವೇ ಎಂದು ಪ್ರಶ್ನಿಸಿದ ವಾಟಾಳ್ ಜಿಲ್ಲಾ ಆಡಳಿತ ಸತ್ತು ಹೋಗಿದೆ ಎಂದರು.
ಪೌರಕಾರ್ಮಿಕರಿಗೆ ಕಳೆದ 3ತಿಂಗಳಿಂದ ಸಂಬಳ ನೀಡಿಲ್ಲ ಅವರ ಪರಿಸ್ಥಿತಿ ಚಿಂತಾ ಜನಕವಾಗಿದೆ. ಇನ್ನು ಒಂದು ವಾರದ ಒಳಗೆ ಪೌರಕಾರ್ಮಿಕರಿಗೆ ಸಂಬಳ ಕೊಡದಿದ್ದರೆ ನಗರ ಸಭೆಯ ಮುಂದೆ ಹಾಗೂ ಜಿಲ್ಲಾಧಿಕಾರಿಗಳ ಕಛೇರಿಗೆ ಬೀಗ ಹಾಕಿ ಮುತ್ತಿಗೆ ಹಾಕಲಾಗುವುದು ಎಂದು ವಾಟಾಳ್ ತಿಳಿಸಿದರು.
ಒಳಚರಂಡಿ ಕಾಮಗಾರಿ ಪ್ರಾರಂಭವಾಗಿ 10 ವರ್ಷಗಳು ಆದರೂ ಕಾಮಗಾರಿ ಪೂರ್ಣಗೊಳ್ಳದೆ ಆಮೆ ವೇಗದಲ್ಲಿ ನಡೆಯುತ್ತದೆ. ಇದು ಸರಿಯಾದ ಕ್ರಮವಲ್ಲ ಉಳಿದ ಕಾಮಗಾರಿಗಳನ್ನು ತಕ್ಷಣವೇ ಮುಗಿಸಬೇಕು ಎಂದು ಜಿಲ್ಲಾಧಿಕಾರಿಗಳ ಕಛೇರಿಗೆ ತೆರಲಿ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದೆನೆ ಇಷು ್ಟಆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ತಿಳಿಸಿದ ವಾಟಾಳ್ ಚಾಮರಾಜನಗರ ಜಿಲ್ಲೆಯಾಗಿ 20 ವರ್ಷ ಕಳೆದಿದೆ ತಕ್ಷಣವೇ ಸಮಗ್ರ ಅಭಿವೃದ್ದಿಗೆ ವಿಶೇಷ ಯೋಜನೆ ತಯಾರಿಸಿ ಪ್ಯಾಕೇಜ್ ಕೊಡಬೇಕು ಎಂದು ಕೇಳಿದರು.
ಚಾಮರಾಜನಗರದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಚಾಮರಾಜನಗರದಲ್ಲಿ ವಾಸ್ತವ್ಯ ಮಾಡುತ್ತಿಲ್ಲ ಮೈಸೂರಿನಿಂದ ಬೆಳಿಗ್ಗೆ ಬರುತ್ತಾರೆ ಮಧ್ಯಾಹ್ನ ಅಥವಾ ಸಂಜೆ ಮೈಸೂರಿಗೆ ತೆರಳುತ್ತಾರೆ ನೀವೂ ಏನೋ ಮೈಸೂರಿನ ಅಧಿಕಾರಿಗಳೆ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ ವಾಟಾಳ್ ಅವರು ಜಿಲ್ಲಾ ಆಡಳಿತ ಅಧಿಕಾರಿಗಳನ್ನು ತಮ್ಮ ಹಿಡಿತಕ್ಕೆ ಇಟ್ಟುಕೊಳ್ಳಲು ಜಿಲ್ಲಾ ಆಡಳಿತ ಸಂಪೂರ್ಣ ವಿಫಲವಾಗಿದೆ ಎಮದು ವಾಟಾಳ್ ತಿಳಿಸಿದರು.
ತಾಳವಾಡಿ, ಹೊಸೂರು, ಅಕ್ಕಲಕೋಟೆ, ಅಥಣಿ, ಸೊಲ್ಲಾಪುರ, ಕಾಸರಗುಡು ಸೇರಿದಂತೆ ಹೊರನಾಡು, ಗಡಿನಾಡು, ಹೈದರಾಬಾದ್, ಕರ್ನಾಟಕ, ಉತ್ತರ ಕರ್ನಾಟಕ, ನಂಜುಂಡಪ್ಪ ವರದಿ ಸೇರಿದಂತೆ ಇನ್ನು ಅನೇಕ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಇತ್ತಕಡೆ ಗಮನಹರಿಸದೆ ಸ್ಟಂಟ್ ಚುನಾವಣ ರಾಜಕೀಯ ಮಾಡುತ್ತಿದ್ದಾರೆ ಎಂದು ವಾಟಾಳ್ ಆರೋಪಿಸಿದರು.
ಫೆ. 27ರಂದು ನಗರದಲ್ಲಿ ಸರ್ವಜ್ಞ ಜಯಂತಿ
ಚಾಮರಾಜನಗರ, ಫೆ. 26 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆಬ್ರವರಿ 27ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಅವರು ಕಾರ್ಯಕ್ರಮ ಉದ್ಫಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಸಂತ ಕವಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಚನ್ನಲಿಂಗನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯ್ರಾಸಕರಾದ ಶಿವಣ್ಣ ಇಂದುವಾಡಿ ವಿಶೇಷ ಉಪನ್ಯಾಸ ನೀಡುವರು. ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿಯ ಸಂಗೀತ ಶಿಕ್ಷಕರಾದ ವಿದ್ವಾನ್ ಮಹಾಂತಯ್ಯ ವಚನ ಗಾಯನ ನಡೆಸಿಕೊಡುವರು ಎಂದು ಪ್ರಕಟಣೆ ತಿಳಿಸಿದೆ.
ಫೆ. 28ರಂದು ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮ
ಚಾಮರಾಜನಗರ, ಫೆ. 26 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಜಯಂತಿಯನ್ನು ಫೆಬ್ರವರಿ 28ರಂದು ನಗರದಲ್ಲಿ ಏರ್ಪಡಿಸಲಾಗಿದೆ.ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಕಾರ್ಯಕ್ರಮ ಉದ್ಫಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಅಮಚವಾಡಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯ್ರಾಸಕರಾದ ಸುರೇಶ್ ಎನ್. ಋಗ್ವೇದಿ ವಿಶೇಷ ಉಪನ್ಯಾಸ ನೀಡುವರು. ನಗರದ ಹಿರಿಯ ಕಲಾವಿದರಾದ ವಿದ್ವಾನ್ ಸಿ.ಎಂ. ನರಸಿಂಹಮೂರ್ತಿ ಸುಗಮ ಸಂಗಿತ ಕಾರ್ಯಕ್ರಮ ನಡೆಸಿಕೊಡುವರು ಎಂದು ಪ್ರಕಟಣೆ ತಿಳಿಸಿದೆ.
ಯಳಂದೂರು : ಮಾ. 4ರಂದು ಡಾ.ಬಿ.ಆರ್. ಅಂಬೇಡ್ಕರ್ ಭವನ ಉದ್ಘಾಟನೆ, ಸಾಮೂಹಿಕ ವಿವಾಹ : ಹೆಸರು ನೊಂದಾಯಿಸಿ
ಚಾಮರಾಜನಗರ, ಫೆ. 26:- ಸಮÁಜ ಕಲ್ಯಾಣ ಇಲಾಖೆ ವತಿಯಿಂದ ಯಳಂದೂರು ಪಟ್ಟಣದಲ್ಲಿ ಮಾರ್ಚ್ 4ರಂದು ಡಾ. ಬಿ.ಆರ್. ಅಂಬೇಡ್ಕರ್ ಭವನ ಉದ್ಘಾಟನಾ ಸಮಾರಂಭ ನಡೆಯಲಿದೆ.ಅಂದು ಆಯೋಜಕರಿಂದ ಸಾವiೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಮದುವೆಯಾಗಲು ಇಚ್ಚಿಸುವ ವಧು ವರರು ಅಗತ್ಯ ದಾಖಲಾತಿಗಳೊಂದಿಗೆ ಯಳಂದೂರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮಾರ್ಚ್ 1ರ ಒಳಗೆ ಹೆಸರು ನೊಂದಾಯಿಸಿಕೊಳ್ಳಬೇಕು ಎಂದು ಸಮÁಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಮÁ. 2ರಂದು ಜಿಲ್ಲೆಗೆ ತೆಲಂಗಾಣ ಮಾಜಿ ಲೋಕಸಭಾ ಸದಸ್ಯರ ಭೇಟಿ
ಚಾಮರಾಜನಗರ, ಫೆ. 26 - ತೆಲಂಗಾಣ ಮಾಜಿ ಲೋಕಸಭಾ ಸದಸ್ಯರಾದ ಡಾ. ಆರ್.ಸಿ. ಕೌಂಟಿಯಾ ಅವರು ಮಾರ್ಚ್ 2ರಂದು ಮಧ್ಯಾಹ್ನ 2 ಗಂಟೆಗೆ ಬಂಡೀಪುರಕ್ಕೆ ಆಗಮಿಸಿ ವಾಸ್ತಸ್ಯ ಹೂಡುವರು.ಮಾರ್ಚ್ 3ರಂದು ಬೆಳಿಗ್ಗೆ 10 ಗಂಟೆಗೆ ಬಂಡೀಪುರದಿಂದ ಬೆಂಗಳೂರಿಗೆ ನಿರ್ಗಮಿಸುವರು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಶರಣರ ತತ್ವಗಳಲ್ಲಿ ತಾತ್ವಿಕತೆ ಇದೆ: ಬಸವನಾಗಿ ದೇವಶರಣ ಸ್ವಾಮೀಜಿ
ಚಾಮರಾಜನಗರ, ಫೆ. 26:- 12ನೇ ಶತಮಾನದ ದಲಿತ ವಚನಕಾರರ ಸಿದ್ದಾಂತ ಹಾಗೂ ತತ್ವಗಳಲ್ಲಿ ತಾತ್ವಿಕತೆ ಇದೆ ಎಂದು ಚಿತ್ರದುರ್ಗದ ಛಲವಾದಿಮಠ ಶಿಬಿರದ ಪೀಠಾಧ್ಯಕ್ಷರಾದ ಬಸವನಾಗಿ ದೇವಶರಣ ಸ್ವಾಮೀಜಿ ತಿಳಿಸಿದರು.ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದೊಂದಿಗೆ ನಗರದ ಜೆ. ಹೆಚ್. ಪಟೇಲ್ ಸಭಾಂಗಣದಲ್ಲಿಂದು ದಲಿತ ವಚನಕಾರರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಾತಿ ಶ್ರೇಣಿಕೃತ ವ್ಯವಸ್ಥೆಯಲ್ಲಿ ದಲಿತ ವಚನಕಾರರನ್ನು ಸಮಾಜದಿಂದ ದೂರಮಾಡುವುದು ಸರಿಯಲ್ಲ ಅವರು ಸಮಾಜದ ಅಂಕು ಡೊಂಕುಗಳನ್ನು ಸರಿಪಡಿಸಿ ಸಮಾಜದಲ್ಲಿ ಬದಲಾವಣೆಯ ಕಾರ್ಯ ಮಾಡಿದ್ದಾರೆ. ಅವರುಗಳನ್ನು ಸ್ಮರಿಸುವ, ಗೌರವಿಸುವ ಕೆಲಸವಾಗಬೇಕು. ವಚನಕಾರರ ತತ್ವ ಆದರ್ಶಗಳ ಪಾಲನೆಯಿಂದ ಪ್ರತಿಯೊಬ್ಬರು ನಿಸ್ವಾರ್ಥ ಜೀವನ ನಡೆಸಬಹುದು ಎಂದರು.
ಕಾಯಕಯೋಗಿ ಬಸವಣ್ಣನವರು ಅನುಭವ ಮಂಟಪವನ್ನು ಸ್ಥಾಪಿಸಿ ಮೇಲು-ಕೀಳು, ಸ್ತ್ರೀ-ಪುರುಷ ಎಂಬ ಬೇಧವಿಲ್ಲದೆ ಎಲ್ಲರನ್ನು ಒಳಗೊಂಡು ಸಮಾನತೆಯ ತತ್ವದಡಿ ಲಿಂಗದೀಕ್ಷೆ ನೀಡಿ ಜಾತಿಯ ಗೋಡೆಗಳನ್ನು ಮುರಿದರು. ಆದರೆ ಈ ಲಿಂಗದೀಕ್ಷೆಯನ್ನು ಜಾತಿಯ ಸಂಕೇತವಾಗಿ ಮಾಡಿಕೊಳ್ಳಲಾಗಿದೆ ಎಂದು ಸ್ವಾಮೀಜಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಮಾತನಾಡಿ ದಲಿತ ವಚನಕಾರರು ಜನರನ್ನು ಪ್ರಜಾಪ್ರಭುತ್ವ ಕಲ್ಪನೆಯ ವ್ಯವಸ್ಥೆಯಲ್ಲಿ ನಡೆಯುವಂತೆ ಮಾರ್ಗದರ್ಶನ ಮಾಡುತ್ತಿದ್ದರು. ಅಂದಿನ ಕಾಲದ ಸಮಾಜಿಕ ವ್ಯವಸ್ಥೆಯಲ್ಲಿ ಕನಿಷ್ಠರನ್ನು ಉತ್ತಮರನ್ನಾಗಿ, ನಿಕೃಷ್ಠರನ್ನು ಉತ್ಕøಷ್ಠರನ್ನಾಗಿ ಮಾಡಿ ಎಲ್ಲರನ್ನು ಸಮಾನತೆಯಿಂದ ಗೌರವಿಸಿದರು. ಅ ಕಾರಣಕ್ಕಾಗಿ ಬಸವಣ್ಣನವರು ವಿಶ್ವಗುರುವಾದರು ಎಂದು ಅಭಿಪ್ರಾಯ ಪಟ್ಟರು.
ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷರಾದ ಸದಾಶಿವಮೂರ್ತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಮಹದೇವಯ್ಯ ಇತರರು ಕಾರ್ಯಕ್ರಮದಲ್ಲಿ ಹಜಾರಿದ್ದರು.
No comments:
Post a Comment