ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ
ಚಾಮರಾಜನಗರ, ಮಾ. 16 :- ಜಿಲ್ಲೆಯ ಚಾಮರಾಜನಗರ, ಯಳಂದೂರು, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರು ವ್ಯಾಪ್ತಿಯ ಒಟ್ಟು 44 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯು ಮಾರ್ಚ್ 23 ರಿಂದ ಏಪ್ರಿಲ್ 6ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಸದರಿ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕಾರ್ಯವು ಶಾಂತಿ ಮತ್ತು ಸುವ್ಯವಸ್ಥೆಯಿಂದ ಮತ್ತು ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ವಿಧಿಸಲಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುಚ್ಚುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ನಿಷೇದಾಜ್ಞೆ ಆದೇಶವು ಪರೀಕ್ಷೆ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ವರ್ಗ ಹಾಗೂ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಿಂದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ
ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಗೀತ ಮಹದೇವಪ್ರಸಾದ್ ಮಾತನಾಡಿ ಎಚ್.ಎಸ್. ಮಹದೇವ ಪ್ರಸಾದ್ ಅವರ ಅವಿರತ ಶ್ರಮದಿಂದ ಗುಂಡ್ಲುಪೇಟೆ ತಾಲ್ಲೂಕಿನ 34 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದರು. ಆಲಂಬೂರು ಏತ ಯೋಜನೆಯಡಿ 212 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಂಜನಗೂಡಿನ ತಾಲ್ಲೂಕಿನ 2 ಕೆರೆ, ಚಾಮರಾಜನಗರ ತಾಲ್ಲೂಕಿನ 13 ಕೆರೆಗೆ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ 5 ಕೆರೆಗಳಿಗೆ ನೀರು ತುಂಬಿಸಲಾಗಿದೆ ಎಂದರು.
ಗಾಂಧೀಗ್ರಾಮ ಏತ ಯೋಜನೆಯಡಿ 67.50 ಕೋಟಿ ರೂ. ಕಾಮಗಾರಿ ಕೈಗೊಂಡು 12 ಕೆರೆಗಳಿಗೆÉ ನೀರು ತುಂಬಿಸಲಾಗುತ್ತದೆ. ಬೆಳಚಲವಾಡಿ ಕೆರೆಗೆ ನೀರು ಹರಿಸಲಾಗುತ್ತಿದೆ. ಕೆರೆಗಳಿಗೆ ನೀರು ತಂಬಿಸುವುದರಿಂದ ಸುಮಾರು 40 ಗ್ರಾಮಗಳ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ನೀರು ಲಭ್ಯವಾಗಲಿದೆ. ಅಂರ್ತಜಲ ಹೆಚ್ಚಾಗಿ ಬೋರ್‍ವೆಲ್‍ಗಳು ಸಮಪರ್Àಕವಾಗಿ ಕಾರ್ಯನಿರ್ವಹಿಸಬಲ್ಲವು. ವಿಶೇಷವಾಗಿ ಬೇಸಿಗೆ ಕಾಲದಲ್ಲಿ ನೀರಿನ ಬವಣೆಯನ್ನು ನೀಗಿಸಲು ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದರು.
ಗಾಂಧೀಗ್ರಾಮ ಎರಡನೇ ಹಂತದಲ್ಲಿ ರಾಘವಾಪುರ ಕೆರೆಗೆ ನೀರು ತುಂಬಿಸಿ ಇಲ್ಲಿನ ಗುಂಡ್ಲುಪೇಟೆ ತಾಲ್ಲೂಕಿನ ಹಳ್ಳದ ಮಾದಳ್ಳಿ, ಅಗತಗೌಡನಹಳ್ಳಿ, ಗರಗನಹಳ್ಳಿ ಹಾಗೂ ಮಳವಳ್ಳಿ ಕೆರೆಗೆ ನೀರು ತುಂಬಿಸಲಾಗುವುದು. ಉತ್ತೂರು ಏತ ಯೋಜನೆಗೆ 53 ಕೋಟಿ ಹಾಗೂ ರಾಘವಾಪುರ ಏತ ಯೋಜನೆಗೆ 15 ಕೋಟಿ ರೂ.ಗಳನ್ನು ಮಂಜೂರು ಮಾಡಿಸಲಾಯಿತು. ನುಡಿದಂತೆ ಈ ದಿನ ಬೆಳಚವಾಡಿ ಕೆರೆಗೆ ನೀರು ಹರಿಸಲು ಸಾಧ್ಯವಾಯಿತೆಂದು ಸಚಿವರು ತಿಳಿಸಿದರು.
ಗುಂಡ್ಲುಪೇಟೆ ತಾಲ್ಲೂಕಿನ ಉತ್ತೂರು ಕೆರೆಯಿಂದ ಕುಡಿಯುವ ನೀರಿಗಾಗಿ 11 ಕೆರೆಗಳಿಗೆ ನೀರು ತುಂಬಿಸಲಾಗುವುದು. ಹುರ ಏತ ಯೋಜನೆಯಡಿ ಗುಂಡ್ಲುಪೇಟೆ 7 ಕೆರೆ ಮತ್ತು 9 ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ತಾಂತ್ರಿಕ ಅನುಮೋದನೆಯ ಹಂತದಲ್ಲಿದೆ. ಒಟ್ಟಾರೆ ಜಿಲ್ಲೆಯ ಒಟ್ಟು 64 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಳವಡಿಸಲಾಗಿದೆ ಎಂದು ಸಚಿವರು ವಿವರಿಸಿದರು.
ನೀರಾವರಿ ನಿಗಮ, ಸೆಸ್ಕ್ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಪರಿಶ್ರಮದಿಂದ ಯೋಜನೆ ಕಾಲಮಿತಿಯಲ್ಲಿ ಪೂರ್ಣಗೊಳ್ಳಲು ಸಾಧ್ಯವಾಯಿತು. ಜತೆಗೆ ಪೈಪ್ ಮತ್ತು ವಿದ್ಯುತ್ ಲೈನ್ ಅಳವಡಿಸಲು ಅವಕಾಶ ಮಾಡಿಕೊಟ್ಟ ರೈತರನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಸಚಿವರು ಸ್ಮರಿಸಿದರು.
ಕಾಡಾ ಅಧ್ಯಕ್ಷರಾದ ಎಚ್.ಎಸ್.ನಂಜಪ್ಪ, ಜಿ.ಪಂ ಸದಸ್ಯರಾದ ರತ್ನಮ್ಮ, ಕೆ.ಎಸ್.ಮಹೇಶ್, ಬಿ.ಕೆ.ಬೊಮ್ಮಯ್ಯ, ಪಿ.ಚನ್ನಪ್ಪ, ಮಾಜಿ ಸದಸ್ಯ ಕೆ.ಶಿವಸ್ವಾಮಿ, ಬಿ.ಎಂ.ಮುನಿರಾಜು, ತಾ.ಪಂ ಅಧ್ಯಕ್ಷ ಕೆ.ಎಸ್.ಜಗದೀಶಮೂರ್ತಿ, ಸದಸ್ಯರಾದ ತಾಯಮ್ಮ, ಎಸ್.ಎಸ್.ಮಧುಶಂಕರ್, ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಚೇತನ್ , ಚಾಮುಲ್ ನಿರ್ದೇಶಕ ಕಣ್ಣೇಗಾಲಸ್ವಾಮಿ, ಹಾಪ್‍ಕಾಮ್ಸ್ ಅಧ್ಯಕ್ಷ ಎಚ್.ಎಸ್.ನಂಜುಂಡಸ್ವಾಮಿ, ಎಪಿಎಂಸಿ ಅಧ್ಯಕ್ಷ ಬಿ.ಕೆ.ಶಿವಪ್ಪ, ಕಾವೇರಿ ನೀರಾವರಿ ನಿಗಮದ ಇಇ ಮರಿಸ್ವಾಮಿ, ಎಇಇ ರಾಜೇಂದ್ರಪ್ರಸಾದ್, ಎ.ಇ. ಮಹೇಶ್ ಹಾಜರಿದ್ದರು.
ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಮಾ. 16 - ನಗರದ ಬಿ. ರಾಚಯ್ಯ ಜೋಡಿ ರಸ್ತೆ ಭಾಗಗಳಲ್ಲಿ ರಸ್ತೆ ಅಗಲೀಕರಣ ಮಾಡಲು ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾಮಗಾರಿ ಮಾರ್ಚ್ 17ರಂದು ನಡೆಯಲಿದೆ.ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಭ್ರಮರಾಂಬ ಬಡಾವಣೆ, ಪಚ್ಚಪ್ಪ ವೃತ್ತ, ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾಮರಾಜನಗರ ಮಾರ್ಚ್ 16- ನ್ಯಾಯಾಧೀಶರ ಹುದ್ದೆ ಬಯಸುವವರು ತಾವು ಅದೃಷ್ಟವಂತರು ಎಂದು ತಿಳಿದು ಪ್ರಾಮಾಣಿಕವಾಗಿ ಶ್ರದ್ದೆ ಮತ್ತು ಕಠಿಣ ಪರಿಶ್ರಮದಿಂದ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವಲ್ಲಿ ಸಫಲರಾಗಬೇಕು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಬಸವರಾಜ ತಿಳಿಸಿದರು.
ಈ ಶಿಬಿರವನ್ನು ಆಯೋಜಿಸಿರುವ ಜಿಲ್ಲಾ ವಕೀಲರ ಸಂಘವನ್ನು ಶ್ಲಾಘಿಸಿದ ಅವರು É್ಲ ಉತ್ತಮವಾದ ವಕೀಲರ ಸಂಘ ಇದಾಗಿದೆ ಎಂದು ತಿಳಿಸಿದರು.,
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ವಿನಯ್ ಮಾತನಾಡಿ ಶಿಬಿರಾರ್ಥಿಗಳು ಪರೀಕ್ಷೆಯಲ್ಲಿ ಇಂಗ್ಲೀಷ್ ಭಾಷೆಯ ಅಭ್ಯಾಸವನ್ನು ಮಾಡಿದರೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದೂಶೇಖರ್ ಮಾತನಾಡಿ ನ್ಯಾಯಾಧೀಶರ ಹುದ್ದೆಗೆ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳಿಗೆ ಸಂಘದಿಂದ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಾಗುವುದು. ಈ ಶಿಬಿರದಲ್ಲಿ ಸಂಘದ ಹಿರಿಯ ನುರಿತ ವಕೀಲರು ಹಾಗೂ ನ್ಯಾಯಾಧೀಶರು ತರಬೇತಿ ನೀಡಲಿದ್ದಾರೆ. ಇದರ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ತಿಳಿಸಿದರು.ಸ
ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಪಿ ನಂದೀಶ್, ಎಲ್.ಜೆ.ಭವಾನಿ, ಡಿ.ಕೆ. ಮಧುಸೂದನ್ ಮಾತನಾಡಿದರು.ಪ್ರಧಾನ ಸಿವಿಲ್ ನ್ಯಾಯಾಧೀಶೆ ವಿ.ದೀಪಾ, ಹೆಚ್ಚುವರಿ ಸಿವಿಲ್ ನ್ಯಾಯಧೀಶ ಸಂದೇಶ್ ವಿ.ಭಂಡಾರಿ, ಮುಂತಾದವರು ಹಾಜರಿದ್ದರು.
ಮಾ. 17ರಂದು ತಾಲೂಕು ಮಟ್ಟದ ಕ್ರೀಡಾಕೂಟ
ಚಾಮರಾಜನಗರ, ಮಾ. 16 - ನೆಹರು ಯುವ ಕೇಂದ್ರವು ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು, ಕೆಂಪನಪುರದ ಶ್ರೀ ಮಹರ್ಷಿ ವಾಲ್ಮೀಕಿ ಯುವಕರ ಸಂಘ, ನಗರದ ಸಂಯುಕ್ತ ಯುವಜನ ಸಂಘದ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 17ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಚಾಮರಾಜನಗರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಎಚ್.ವಿ. ಚಂದ್ರು ಕ್ರೀಡಾಕೂಟ ಉದ್ಘಾಟಿಸುವರು. ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಹದೇವಸ್ವಾಮಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ. ಚಲುವಯ್ಯ, ಜಿಲ್ಲಾ ಬಾಲಕಾರ್ಮಿಕ ಕಲ್ಯಾಣ ಇಲಾಖೆಯ ಯೋಜನಾ ನಿರ್ದೇಶಕರಾದ ಎಂ. ಮಹೇಶ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುವರ್ಣ ಆರೋಗ್ಯ ಟ್ರಸ್ಟ್‍ನ ಜಿಲ್ಲಾ ಸಂಯೋಜಕರಾದ ಎಂ. ಪುಟ್ಟೇಗೌಡ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಅರಿವು ಶೈಕ್ಷಣಿಕ ಸಾಲಸೌಲಭ್ಯಕ್ಕೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಮಾ. 16 :- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2018-19ನೇ ಸಾಲಿಗೆ ಸಿಇಟಿ ಪಡೆದು ವಿವಿಧ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಬಯಸುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶೈಕ್ಷಣಿಕ ಸಾಲ ನೀಡುವ ಸಲುವಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಕ್ಕರು, ಪಾರ್ಸಿ ಜನಾಂಗದವರು ಇತರೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಅರ್ಜಿಯನ್ನು ಏಪ್ರಿಲ್ 3ರೊಳಗೆ ಸಲ್ಲಿಸಬೇಕು.
ಪಿಜಿಇಟಿ 2018ರ ರಿಜಿಸ್ಟ್ರೇಷನ್ ನಂಬರ್, ಆಧಾರ್ ಕಾರ್ಡ್ ಸಂಖ್ಯೆ, ಚುನಾವಣಾ ಗುರುತಿನ ಚೀಟಿ, ಆದಾಯ ಹಾಗೂ ಜಾತಿ ಪ್ರಮಾಣ ಪತ್ರ (ವಾರ್ಷಿಕ ಆದಾಯ 6 ಲಕ್ಷ ರೂ.ಗಳ ಮಿತಿಯೊಳಗೆ), ಇಮೇಲ್ ಐಡಿ, ಮೊಬೈಲ್ ಸಂಖ್ಯೆ ವಿವರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರವನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು (ದೂ.ಸಂ.08226-222332) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಬೀಡಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ
ಚಾಮರಾಜನಗರ, ಮಾ. 16 - ಕಾರ್ಮಿಕ ಕಲ್ಯಾಣ ಸಂಸ್ಥೆ ವತಿಯಿಂದ ರಾಜ್ಯದ ಬೀಡಿ ಕಾರ್ಮಿಕರ ಮಕ್ಕಳಿಗೆ 2017-18ನೇ ಸಾಲಿನ ವಿದ್ಯಾರ್ಥಿ ವೇತನ ಹಾಗೂ ಬೀಡಿ ಕಾರ್ಮಿಕರಿಗೆ ಹೆರಿಗೆ ಭತ್ಯೆಯನ್ನು ಬಿಡುಗಡೆ ಮಾಡಿ ಸಂಬಂಧಪಟ್ಟವರ ಖಾತೆಗೆ ಜಮೆ ಮಾಡಲಾಗಿದೆ.ಮೊದಲ ಹಂತವಾಗಿ ಸುಮಾರು 14211 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಅವರವರ ಬ್ಯಾಂಕ್ ಖಾತೆ ಜಮೆ ಮಾಡಲಾಗಿದೆ. ಸಂಬಂಧಪಟ್ಟ ಶಾಲಾಕಾಲೇಜುಗಳಿಗೆ ಇಮೇಲ್ ಮುಖಾಂತರ ಈ ಕುರಿತು ಮಾಹಿತಿ ನೀಡಲಾಗಿದೆ.
ಬೀಡಿ ಕಾರ್ಮಿಕರಿಗೂ ತಲಾ ಒಂದು ಸಾವಿರ ರೂ.ಗಳಂತೆ ಹೆರಿಗೆ ಭತ್ಯೆಯನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ.
ಸಂಬಂಧಪಟ್ಟವರು ಬ್ಯಾಂಕ್ ಖಾತೆಯನ್ನು ಪರಿಶೀಲಿಸಬೇಕು. ನ್ಯೂನತೆಗಳು ಇದ್ದಲ್ಲಿ ಅಥವ ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ರಾಜ್ಯ ಕಾರ್ಮಿಕರ ಕಲ್ಯಾಣ ಸಂಸ್ಥೆ, ಬೆಂಗಳೂರು ಇವರ ದೂರವಾಣಿ ಸಂಖ್ಯೆ 080-23477491 ಹಾಗೂ 080-23471476 ಸಂಪರ್ಕಿಸುವಂತೆ ಕಾರ್ಮಿಕ ಕಲ್ಯಾಣ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment